2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಆಟೋ ಸಂಸ್ಥೆಯು ತನ್ನ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಸಿದ್ದತೆ ನಡೆಸಿದ್ದು, ಹೊಸ ವರ್ಷದ ಆರಂಭದಲ್ಲ ಬಿಡುಗಡೆಯಾಗಲಿರುವ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಜನವರಿ ಕೊನೆಯ ವಾರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಗ್ರಾಹಕರ ಬೇಡಿಕೆಯೆಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಅತ್ಯುತ್ತಮ ಬ್ಯಾಟರಿ ಸೌಲಭ್ಯ ಹೊಂದಲಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಬಜಾಜ್ ಸಹಭಾಗಿತ್ವ ಸಂಸ್ಥೆಯಾದ ಕೆಟಿಎಂ ಬೈಕ್ ಮಾರಾಟ ಮಳಿಗೆಗಳಲ್ಲಿ ಖರೀದಿಗೆ ಅವಕಾಶ ನೀಡಲಿದ್ದು, ಇದರೊಂದಿಗೆ ಮತ್ತೊಂದು ಬಹುನೀರಿಕ್ಷಿತ ಹಸ್ಕ್‌ವರ್ನಾ ಬೈಕ್‌ ಮಾದರಿಗಳನ್ನು ಸಹ ಕೆಟಿಎಂ ಬೈಕ್ ಮಾರಾಟ ಮಳಿಗೆ ಮೂಲಕವೇ ಮಾರಾಟ ಮಾಡಲು ಬಜಾಜ್ ಯೋಜನೆ ರೂಪಿಸಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಕೆಟಿಎಂ ಮತ್ತು ಬಜಾಜ್ ಸಂಸ್ಥೆಗಳು ಭಾರತದಲ್ಲಿ ಸಹಭಾಗಿತ್ವದ ಆಧಾರದ ಮೇಲೆ ಬೈಕ್ ಉತ್ಪಾದನೆ ಮತ್ತು ಮಾರಾಟ ಒಪ್ಪಂದಕ್ಕೆ ಈ ಹಿಂದೆ 2005ರಲ್ಲೇ ಸಹಿ ಹಾಕಿದ್ದು, ಕೆಟಿಎಂ ಬೈಕ್‌ಗಳ ಉತ್ಪಾದನೆಯಲ್ಲಿ ಬಜಾಜ್ ಮಹತ್ವದ ಪಾತ್ರವಹಿಸುತ್ತಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಹೀಗಾಗಿ ಬಜಾಜ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಕೆಟಿಎಂ ಕೂಡಾ ಇದೀಗ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಹಸ್ಕ್‌ವರ್ನಾ ನಿರ್ಮಾಣದ ಸ್ವಾರ್ಟ್‍‍ಪಿಲೆನ್ 250 ಹಸ್ಕ್‌ವರ್ನಾ ಮತ್ತು ವಿಟ್‍‍ಪಿಲೆನ್ 250 ಬೈಕ್ ಕೂಡಾ ಕೆಟಿಎಂ ಮಾರಾಟ ಮಳಿಗೆಗಳಲ್ಲಿ ದೊರೆಯಲಿವೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಇನ್ನು ಗ್ರಾಹಕರ ಬೇಡಿಕೆಯೆಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದ್ದು, ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಬೆಲೆಯಲ್ಲಿ ತುಸು ದುಬಾರಿ ಎನ್ನಿಸಲಿದೆ. ಸದ್ಯಕ್ಕೆ ಬಹಿರಂಗಗೊಂಡಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಕೆಲವು ಸುದ್ದಿ ಮೂಲಗಳ ಪ್ರಕಾರ ಪ್ರೀಮಿಯಂ ಫೀಚರ್ಸ್‌ಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.1.05 ಲಕ್ಷದಿಂದ ರೂ.1.15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ಮೆಟಲ್ ಬಾಡಿ ಪ್ಯಾನೆಲ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಕೀ ಲೆಸ್ ಸ್ಟಾರ್ಟ್, ಮಲ್ಟಿ ಸ್ಪೋಕ್ ವೀಲ್ಹ್‌ಗಳು, ಪ್ರೀಮಿಯಂ ಟಿಪಿಎಫ್ ಯುನಿಟ್‌ನಂತಹ ಹಲವು ಸುಧಾರಿತ ಸೌಲಭ್ಯಗಳನ್ನು ನೀಡಿದ್ದು, ಜೊತೆಗೆ ರಿವರ್ಸ್ ಮೋಡ್ ಸೌಲಭ್ಯವನ್ನು ನೀಡಿರುವುದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚಿಸಲು ಮತ್ತಷ್ಟು ಸಹಕಾರಿಯಾಗಲಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬ್ಯಾಟರಿ ಸಾಮರ್ಥ್ಯ ಮತ್ತು ಮೈಲೇಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಜಾಜ್ ಸಂಸ್ಥೆಯು 4kW ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ ಐಪಿ67 ಪ್ರೇರಣೆಯ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದು, ಪೂರ್ಣ ಪ್ರಮಾಣದ ಚಾರ್ಜಿಂಗ್ ಮಾಡಲು ಕನಿಷ್ಠ 5 ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಿರುವ ಬಜಾಜ್, ಇಕೋ‌ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 75ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 70 ಕಿ.ಮೀ ಗರಿಷ್ಠ ಮೈಲೇಜ್ ಒದಗಿಸಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮತ್ತೊಂದು ವಿಶೇಷ ಅಂದ್ರೆ, ಹೊಸ ಸ್ಕೂಟರ್‌ನಲ್ಲಿ ಕೀ ಲೆಸ್ ಸ್ಟಾರ್ಟ್ ಸೌಲಭ್ಯ ನೀಡಿರುವ ಬಜಾಜ್ ಸಂಸ್ಥೆಯು ಸ್ಕೂಟರ್ ನಿರ್ವಹಣೆಗಾಗಿ ಪ್ರತ್ಯೇತ ಆ್ಯಪ್ ನೀಡಲಿದ್ದು, ಆ್ಯಪ್ ಮೂಲಕ ಹೊಸ ಸ್ಕೂಟರ್‌ನ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ನಿರ್ವಹಣೆ ಮಾಡಬಹುದಾಗಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಸರ್ವೀಸ್ ಮತ್ತು ವಾರಂಟಿ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದ್ದು, ಬಜಾಜ್ ಸಂಸ್ಥೆಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿ ನೀಡಲಿದೆ. ಜೊತೆಗೆ ಪ್ರತಿ 15 ಸಾವಿರ ಕಿ.ಮೀ ಗೆ ಕಡ್ಡಾಯವಾಗಿ ಸರ್ವೀಸ್ ಒದಗಿಸಲಿದ್ದು, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಿದೆ.

2020ರ ಜನವರಿ ಕೊನೆಯಲ್ಲಿ ಖರೀದಿಗೆ ಲಭ್ಯಲಿರಲಿದೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ ಗರಿಷ್ಠ ಸುರಕ್ಷಾ ಭದ್ರತೆಗಳು ಕೂಡಾ ಇರಲಿದ್ದು, ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳಿದ್ದು, ಹೊಸ ಸ್ಕೂಟರಿನ ಬೆಲೆ ಆಧಾರದ ಮೇಲೆ ಮಾರುಕಟ್ಟೆಯಲ್ಲಿ ಈ ಸ್ಕೂಟರ್ ಭವಿಷ್ಯ ನಿರ್ಧಾರವಾಗಲಿದೆ.

Most Read Articles

Kannada
English summary
According to media report, Bajaj is planning to start Chetak EV deliveries from end of next month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X