Just In
- 28 min ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 1 hr ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 2 hrs ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 3 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
Don't Miss!
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾದ ಬೆನೆಲ್ಲಿ ಇಂಪೀರಿಯಲ್ 400
ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕಿಗೆ ಪೈಪೋಟಿಯಾಗಿ ಬೆನೆಲ್ಲಿ ಸಂಸ್ಥೆಯು ಇಂಪೀರಿಯಲ್ 400 ಬೈಕ್ ಬಿಡುಗಡೆ ಮಾಡಿದ್ದು, ಬಿಡುಗಡೆಯಾದ ಕೆಲವೇ ಒಂದೂವರೆ ತಿಂಗಳಿನಲ್ಲಿ ಹೊಸ ಬೈಕ್ ಮಾರಾಟದಲ್ಲಿ ಉತ್ತಮ ಪ್ರಕ್ರಿಯೆ ದೊರೆತಿದೆ.
ಬೆನೆಲ್ಲಿ ಇಂಪೀರಿಯರ್ 400 ಬೈಕ್ ಮಾದರಿಯು ರಾಯಲ್ ಎನ್ಫೀಲ್ಡ್ ನಿರ್ಮಾಣದ ಕ್ಲಾಸಿಕ್ 350 ಬೈಕಿಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಿದ್ದು, ಇದುವರೆಗೆ 4 ಸಾವಿರ ಯುನಿಟ್ಗಳಿಗೆ ಬೇಡಿಕೆ ಬಂದಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಬೆನೆಲ್ಲಿ ಸಂಸ್ಥೆಯು ಮುಂದಿನ ಆರು ತಿಂಗಳ ಕಾಲಾವಧಿಗೆ ಪ್ರತಿ ತಿಂಗಳು ಸರಾಸರಿಯಾಗಿ 10 ಸಾವಿರ ಬೈಕ್ಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.
ಸದ್ಯ ದೇಶಾದ್ಯಂತ ಕೆಲವೇ ಆಯ್ದ ನಗರಗಳಲ್ಲಿ ಮಾತ್ರವೇ ಮಾರಾಟ ಜಾಲ ಹೊಂದಿರುವ ಬೆನೆಲ್ಲಿ ಸಂಸ್ಥೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆಯಲ್ಲಿದ್ದು, ಹೊಸ ಬೈಕ್ ಉತ್ಪಾದನೆ ಮತ್ತು ಮಾರಾಟ ಜಾಲ ವಿಸ್ತರಣೆಗಾಗಿ ಬೃಹತ್ ಬಂಡವಾಳ ಹೂಡಿಕೆ ಮಾಡಿದೆ.
ಇನ್ನು ಹೊಸ ಇಂಪೀರಿಯಲ್ ಬೈಕ್ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 1.69 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳೊಂದಿಗೆ ಕ್ಲಾಸಿಕ್ ಬೈಕ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕ್ಲಾಸಿಕ್ ಮಾದರಿಯ ಬೈಕ್ಗಳಲ್ಲೇ ವಿಶೇಷ ಡಿಸೈನ್ ಹೊಂದಿರುವ ಇಂಪೀರಿಯಲ್ 400 ಬೈಕ್ಗಳು 1950ರ ಅವಧಿಯಲ್ಲಿ ಜನಪ್ರಿಯತೆ ಹೊಂದಿದ್ದ ಬೆನೆಲ್ಲಿ ಮೊಟೊ ಬಿ ಬೈಕ್ ಪ್ರೇರಣೆಯೊಂದಿಗೆ ನಿರ್ಮಾಣ ಮಾಡಲಾಗಿದ್ದು, ಆಕರ್ಷಕ ಬೆಲೆಗಳೊಂದಿಗೆ ಗ್ರಾಹಕರ ಸೆಳೆಯುವ ವಿಶ್ವಾಸದಲ್ಲಿದೆ. ಕ್ರೋಮ್ ಸೌಲಭ್ಯ ಹೊಂದಿರುವ ರೌಂಡ್ ಹೆಡ್ಲ್ಯಾಂಪ್, ಟೈಲ್ ಲೈಟ್ಸ್, ಟರ್ನ್ ಇಂಡಿಕೇಟರ್ ಮತ್ತು ಲಿವರ್ಸ್ ಜೊತೆಗೆ ಸ್ಪೋಕ್ ವೀಲ್ಹ್, ಟ್ವಿನ್ ಪಾಡ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಪ್ಲಿಟ್ ಸೀಟ್, ರೆಟ್ರೋ ಸ್ಟೈಲ್ ಫ್ಯೂಲ್ ಟ್ಯಾಂಕ್ ಫೀಚರ್ಸ್ ಪಡೆದುಕೊಂಡಿದೆ.
ಎಂಜಿನ್ ಸಾಮರ್ಥ್ಯ
ಇಂಪೀರಿಯಲ್ 400 ಬೈಕ್ ಮಾದರಿಯು 374 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಜೋಡಣೆ ಪಡೆದುಕೊಂಡಿದ್ದು, ಫೈವ್ ಸ್ಪೀಡ್ ಗೇರ್ಬಾಕ್ಸ್ ಸೌಲಭ್ಯದೊಂದಿಗೆ 20.7-ಬಿಎಚ್ಪಿ ಮತ್ತು 29-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದೆ. ಹೊಸ ಬೈಕಿನ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೊಫಿಕ್ ಫೋಕ್ಸ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಶಾಕ್ ಅಬ್ಸಾರ್ವರ್ ನೀಡಲಾಗಿದೆ.
ಹಾಗೆಯೇ ಹೊಸ ಬೈಕಿನಲ್ಲಿ ರೈಡರ್ ಸುರಕ್ಷೆತೆಗಾಗಿ ಮುಂಭಾಗದ ಚಕ್ರದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದ ಚಕ್ರದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ನೀಡಲಾಗಿದ್ದು, ಸ್ಟ್ಯಾಂಡರ್ಡ್ ಆಗಿ ಡ್ಯುಯಲ್ ಚಾನೆಲ್ ಎಬಿಎಸ್ ಸೌಲಭ್ಯವನ್ನು ಜೋಡಿಸಲಾಗಿದೆ.
MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?
ಇಂಪೀರಿಯಲ್ 400 ಬೈಕ್ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ರೆಡ್, ಸಿಲ್ವರ್ ಮತ್ತು ಬ್ಲ್ಯಾಕ್ ಬಣ್ಣಗಳನ್ನು ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬಣ್ಣದ ಆಯ್ಕೆ ನೀಡಲಿದೆ ಎನ್ನಲಾಗಿದೆ.
MOST READ: ದುಬಾರಿ ಕಾರಿನ ಟ್ಯಾಕ್ಸ್ ಉಳಿಸಲು ಈತ ಮಾಡಿದ್ದೇನು ಗೊತ್ತಾ?
ಸರ್ವೀಸ್ ಮತ್ತು ವಾರಂಟಿ
ಬೈಕ್ ಮಾರಾಟದ ನಂತರದ ಸೇವೆಗಳ ಕುರಿತಾಗಿ ಗ್ರಾಹಕರ ಅಸಮಾಧಾನವನ್ನು ಅರಿತಿರುವ ಬೆನೆಲ್ಲಿ ಸಂಸ್ಥೆಯು ಈ ಬಾರಿ ಇಂಪೀರಿಯರ್ 400 ಬಿಡುಗಡೆಯೊಂದಿಗೆ ಹಲವಾರು ಜನಪ್ರಿಯ ಸಂಸ್ಥೆಗಳೊಂದಿಗೆ ಕೈಜೋಡಿಸಿದ್ದು, ಬೆಸ್ಟ್ ಇನ್ ಕ್ಲಾಸ್ ಸರ್ವೀಸ್ ಮಾದರಿಯಾದ 3 ವರ್ಷ ಅಥವಾ ಅನ್ಲಿಮಿಟೆಡ್ ಕಿ.ಮೀ ವಾರಂಟಿ ಆಫರ್ ನೀಡಿದೆ.
MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?
ಈ ಮೂಲಕ ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿರುವ ಇಂಪೀರಿಯಲ್ 400 ಬೈಕ್ ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಬೈಕ್ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾದರೆ ಬೆನೆಲ್ಲಿ ಸಂಸ್ಥೆಯು ಭಾರತೀಯ ಮಾರುಕಟ್ಟೆಗಾಗಿ ಮತ್ತಷ್ಟು ಹೊಸ ಮಾದರಿಯ ಕ್ಲಾಸಿಕ್ ಬೈಕ್ ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.