ಬೆನೆಲ್ಲಿ ಇಂಪೀರಿಯಲ್ 400 ಬೈಕಿಗೆ ಭರ್ಜರಿ ಬೇಡಿಕೆ- ರಾಯಲ್ ಎನ್‌ಫೀಲ್ಡ್‌ಗೆ ಶುರುವಾಯ್ತು ತಳಮಳ..!
ಭಾರತೀಯ ಮಾರುಕಟ್ಟೆಯಲ್ಲಿ ಬಹುದಿನಗಳಿಂದಲೂ ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಅಗ್ರಸ್ಥಾನ ಹೊಂದಿರುವ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಜನಪ್ರಿಯ ಕ್ಲಾಸಿಕ್ 350 ಬೈಕಿಗೆ ಪೈಪೋಟಿಯಾಗಿ ಬೆನೆಲ್ಲಿ ಸಂಸ್ಥೆಯು ಇಂಪೀರಿಯಲ್ 400 ಬೈಕ್ ಬಿಡುಗಡೆ ಮಾಡಿದ್ದು, ಬಿಡುಗಡೆಯಾದ ಕೇವಲ ಒಂದೇ ವಾರದಲ್ಲಿ ಹೊಸ ಬೈಕ್ ಮಾರಾಟಕ್ಕೆ ಉತ್ತಮ ಪ್ರಕ್ರಿಯೆ ದೊರೆತಿದೆ.

ಹೆಚ್ಚು ಪ್ರಚಾರವಿಲ್ಲದೇ ಬಿಡುಗಡೆಯಾಗಿರುವ ಬೆನೆಲ್ಲಿ ಇಂಪೀರಿಯರ್ 400 ಬೈಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಕ್ಲಾಸಿಕ್ 350 ಬೈಕಿಗಿಂತಲೂ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಿದ್ದು, ಇದುವರೆಗೆ 1,200 ಯುನಿಟ್‌ಗಳಿಗೆ ಬೇಡಿಕೆ ಬಂದಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿರುವ ಬೆನೆಲ್ಲಿ ಸಂಸ್ಥೆಯು ಮುಂದಿನ ಆರು ತಿಂಗಳ ಕಾಲಾವಧಿಗೆ ಪ್ರತಿ ತಿಂಗಳು ಸರಾಸರಿಯಾಗಿ 10 ಸಾವಿರ ಬೈಕ್‌ಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.

ಸದ್ಯ ದೇಶಾದ್ಯಂತ ಕೆಲವೇ ನಗರಗಳಲ್ಲಿ ಮಾರಾಟ ಜಾಲ ಹೊಂದಿರುವ ಬೆನೆಲ್ಲಿ ಸಂಸ್ಥೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆಯಲ್ಲಿದ್ದು, ಹೊಸ ಬೈಕ್ ಉತ್ಪಾದನೆ ಮತ್ತು ಮಾರಾಟ ಜಾಲ ವಿಸ್ತರಣೆಗಾಗಿ ಬೃಹತ್ ಬಂಡವಾಳ ಹೂಡಿಕೆ ಮಾಡಿದೆ.

ಇನ್ನು ದೀಪಾವಳಿ ಉತ್ಸವದಂದೇ ಮೊದಲ ಬ್ಯಾಚ್ ಬೈಕ್‌ಗಳನ್ನು ವಿತರಣೆ ಮಾಡಿರುವ ಬೆನೆಲ್ಲಿ ಸಂಸ್ಥೆಯು ಹೊಸ ಬೈಕಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.69 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕ್ಲಾಸಿಕ್ ಮಾದರಿಯ ಬೈಕ್‌ಗಳಲ್ಲೇ ವಿಶೇಷ ಡಿಸೈನ್ ಹೊಂದಿರುವ ಇಂಪೀರಿಯಲ್ 400 ಬೈಕ್‌ಗಳು 1950ರ ಅವಧಿಯಲ್ಲಿ ಜನಪ್ರಿಯತೆ ಹೊಂದಿದ್ದ ಬೆನೆಲ್ಲಿ ಮೊಟೊ ಬಿ ಬೈಕ್ ಪ್ರೇರಣೆಯೊಂದಿಗೆ ನಿರ್ಮಾಣ ಮಾಡಲಾಗಿದ್ದು, ಆಕರ್ಷಕ ಬೆಲೆಗಳೊಂದಿಗೆ ಗ್ರಾಹಕರ ಸೆಳೆಯುವ ವಿಶ್ವಾಸದಲ್ಲಿದೆ. ಕ್ರೋಮ್ ಸೌಲಭ್ಯ ಹೊಂದಿರುವ ರೌಂಡ್ ಹೆಡ್‌ಲ್ಯಾಂಪ್, ಟೈಲ್ ಲೈಟ್ಸ್, ಟರ್ನ್ ಇಂಡಿಕೇಟರ್ ಮತ್ತು ಲಿವರ್ಸ್ ಜೊತೆಗೆ ಸ್ಪೋಕ್ ವೀಲ್ಹ್, ಟ್ವಿನ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಪ್ಲಿಟ್ ಸೀಟ್, ರೆಟ್ರೋ ಸ್ಟೈಲ್ ಫ್ಯೂಲ್ ಟ್ಯಾಂಕ್ ಫೀಚರ್ಸ್ ಪಡೆದುಕೊಂಡಿದೆ.

ಎಂಜಿನ್ ಸಾಮರ್ಥ್ಯ
ಇಂಪೀರಿಯಲ್ 400 ಬೈಕ್ ಮಾದರಿಯು 374 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಜೋಡಣೆ ಪಡೆದುಕೊಂಡಿದ್ದು, ಫೈವ್ ಸ್ಪೀಡ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 20.7-ಬಿಎಚ್‌ಪಿ ಮತ್ತು 29-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದೆ. ಹೊಸ ಬೈಕಿನ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೊಫಿಕ್ ಫೋಕ್ಸ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಶಾಕ್ ಅಬ್ಸಾರ್ವರ್ ನೀಡಲಾಗಿದೆ.

ಹಾಗೆಯೇ ಹೊಸ ಬೈಕಿನಲ್ಲಿ ರೈಡರ್ ಸುರಕ್ಷೆತೆಗಾಗಿ ಮುಂಭಾಗದ ಚಕ್ರದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದ ಚಕ್ರದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ನೀಡಲಾಗಿದ್ದು, ಸ್ಟ್ಯಾಂಡರ್ಡ್ ಆಗಿ ಡ್ಯುಯಲ್ ಚಾನೆಲ್ ಎಬಿಎಸ್ ಸೌಲಭ್ಯವನ್ನು ಜೋಡಿಸಲಾಗಿದೆ.
MOST READ: ಪ್ರೀಮಿಯಂ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಒಕಿನಾವ ಲೈಟ್ ಎಲೆಕ್ಟ್ರಿಕ್ ಸ್ಕೂಟರ್

ಇಂಪೀರಿಯಲ್ 400 ಬೈಕ್ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ರೆಡ್, ಸಿಲ್ವರ್ ಮತ್ತು ಬ್ಲ್ಯಾಕ್ ಬಣ್ಣಗಳನ್ನು ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಬಣ್ಣದ ಆಯ್ಕೆ ನೀಡಲಿದೆ ಎನ್ನಲಾಗಿದೆ.
MOST READ: ಹೆಲ್ಮೆಟ್ ಹಾಕಿಲ್ಲವೆಂದು ಟ್ರ್ಯಾಕ್ಟರ್ ಚಾಲಕನಿಗೆ ದಂಡ ಹಾಕಿದ ಟ್ರಾಫಿಕ್ ಪೊಲೀಸರು..!

ಸರ್ವೀಸ್ ಮತ್ತು ವಾರಂಟಿ
ಬೈಕ್ ಮಾರಾಟದ ನಂತರದ ಸೇವೆಗಳ ಕುರಿತಾಗಿ ಗ್ರಾಹಕರ ಅಸಮಾಧಾನವನ್ನು ಅರಿತಿರುವ ಬೆನೆಲ್ಲಿ ಸಂಸ್ಥೆಯು ಈ ಬಾರಿ ಇಂಪೀರಿಯರ್ 400 ಬಿಡುಗಡೆಯೊಂದಿಗೆ ಹಲವಾರು ಜನಪ್ರಿಯ ಸಂಸ್ಥೆಗಳೊಂದಿಗೆ ಕೈಜೋಡಿಸಿದ್ದು, ಬೆಸ್ಟ್ ಇನ್ ಕ್ಲಾಸ್ ಸರ್ವೀಸ್ ಮಾದರಿಯಾದ 3 ವರ್ಷ ಅಥವಾ ಅನ್‌ಲಿಮಿಟೆಡ್ ಕಿ.ಮೀ ವಾರಂಟಿ ಆಫರ್ ನೀಡಿದೆ.
MOST READ: ಸ್ಟಾರ್ ನಟಿಗೆ ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಈ ಮೂಲಕ ಕ್ಲಾಸಿಕ್ ಬೈಕ್ ಪ್ರಿಯರನ್ನು ಸೆಳೆಯುತ್ತಿರುವ ಇಂಪೀರಿಯಲ್ 400 ಬೈಕ್ ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಬೈಕ್ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾದರೆ ಬೆನೆಲ್ಲಿ ಸಂಸ್ಥೆಯು ಭಾರತೀಯ ಮಾರುಕಟ್ಟೆಗಾಗಿ ಮತ್ತಷ್ಟು ಹೊಸ ಮಾದರಿಯ ಕ್ಲಾಸಿಕ್ ಬೈಕ್ ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.


Click it and Unblock the Notifications








