ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಗುಣವಾಗಿ ಹೊಸ ಎಂಜಿನ್ ಪ್ರೇರಿತ ಆಕ್ಟಿವಾ 125 ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಿರುವ ಹೋಂಡಾ ಸಂಸ್ಥೆಯು ಅತಿ ಕಡಿಮೆ ಅವಧಿಯಲ್ಲಿ ಭಾರೀ ಪ್ರಮಾಣದ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗೆ ಹೊಸ ಆಕ್ಟಿವಾ 125 ಸ್ಕೂಟರ್‌‌ ಮಾದರಿಯು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಸ್ಕೂಟರ್ ಖರೀದಿಗೆ ಈಗಾಗಲೇ ಸಾವಿರಾರು ಗ್ರಾಹಕರು ಬುಕ್ಕಿಂಗ್ ಮಾಡಿದ್ದಾರೆ. ಅಕ್ಟೋಬರ್ 2ರಿಂದ ಹೊಸ ಸ್ಕೂಟರ್ ವಿತರಣೆಗೆ ಚಾಲನೆ ನೀಡಿದ್ದ ಹೋಂಡಾ ಸಂಸ್ಥೆಯು ಇದುವರೆಗೆ 25 ಸಾವಿರ ಸ್ಕೂಟರ್‌ಗಳನ್ನು ಮಾರಾಟ ಮಾಡಿದ್ದು, ವರ್ಷಾಂತ್ಯಕ್ಕೆ 1 ಲಕ್ಷ ಸ್ಕೂಟರ್ ಮಾರಾಟ ಗುರಿಹೊಂದಿದೆ.

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಬಿಎಸ್-6 ನಿಯಮ ಅನ್ವಯ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಹೊಸ ಎಂಜಿನ್ ವಿಭಾಗದಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಹೋಂಡಾ ಕೂಡಾ ಇದೇ ನಿಟ್ಟಿನಲ್ಲಿ ಬೃಹತ್ ಯೋಜನೆ ಚಾಲನೆ ನೀಡಿರುವುದಲ್ಲದೇ ಮೊದಲ ಹಂತದಲ್ಲಿ ಆಕ್ಟಿವಾ 125 ಬಿಡುಗಡೆ ಮಾಡಿದೆ.

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಬಿಎಸ್-4 ವೈಶಿಷ್ಟ್ಯತೆಯ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆ ಹೊಂದಿರುವ ಬಿಎಸ್-6 ಎಂಜಿನ್ ಪ್ರೇರಿತ ಆಕ್ಟಿವಾ 125 ಮಾದರಿಯು ಫ್ಯೂಲ್ ಇಂಜೆಕ್ಷಡ್ ಯುನಿಟ್ ಹೊಂದಿದ್ದು, ಹೊಸ ಸ್ಕೂಟರ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 67,490ಕ್ಕೆ ನಿಗದಿಪಡಿಸಲಾಗಿದೆ.

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಹೊಸ ಆಕ್ಟಿವಾ 125 ಸ್ಕೂಟರ್ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ಡಿಸೈನ್ ಪ್ರೇರಿತ ಫ್ರಂಟ್ ಅಪಾರ್ನ್, ಎಲ್ಇಡಿ ಡಿಆರ್‌ಎಲ್ಎಸ್ ಜೊತೆ ಟರ್ನ್ ಇಂಡಿಕೇಟರ್ ನೀಡಲಾಗಿದೆ. ಹಾಗೆಯೇ ಕ್ರೋಮ್ ಡಿಸೈನ್‌ನಿಂದಾಗಿ ಹೊಸ ಸ್ಕೂಟರಿಗೆ ಮತ್ತಷ್ಟು ಪ್ರೀಮಿಯಂ ವಿನ್ಯಾಸವನ್ನು ಒದಗಿಸಿದ್ದು, ಇದು ಸ್ಕೂಟರ್ ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಇದರೊಂದಿಗೆ ಬಿಎಸ್-6 ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮಾದರಿಯು ಈ ಹಿಂದಿನ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ ಎನ್ನಬಹುದು.

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಎಂಜಿನ್ ಸಾಮರ್ಥ್ಯ

ಬಿಎಸ್-6 ಪ್ರೇರಿತ 124-ಸಿಸಿ ಸಿಂಗಲ್ ಸಿಲಿಂಡರ್, ಫ್ಯೂಲ್-ಇಂಜೆಕ್ಷಡ್ ಯುನಿಟ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮಾದರಿಯು 8.4-ಬಿಎಚ್‌ಪಿ ಮತ್ತು 10.54-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

MOST READ: ಹೊಸ ಬದಲಾವಣೆಯೊಂದಿಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಹೊಸ ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಅಂದ್ರೆ ಅದು ಐಡ್ಲಿಂಗ್ ಸ್ಟಾಪ್ ಸಿಸ್ಟಂ ಸೌಲಭ್ಯ. ಹೌದು, ಹೋಂಡಾ ಸಂಸ್ಥೆಯು ಮೊದಲ ಬಾರಿಗೆ ಆಕ್ಟಿವಾ 125 ಸ್ಕೂಟರ್‌ನಲ್ಲಿ ಐಡ್ಲಿಂಗ್ ಸ್ಟಾಪ್ ಸಿಸ್ಟಂ ಬಳಕೆ ಮಾಡಿದ್ದು, ಇದು ಟ್ರಾಫಿಕ್ ದಟ್ಟಣೆಗಳಲ್ಲಿ ಇಂಧನ ವ್ಯರ್ಥವನ್ನು ತಪ್ಪಿಸಲಿದೆ.

MOST READ: ನಟಿ ಊರ್ವಶಿ ರೌಟೇಲಾ ದುಬಾರಿ ಬೈಕ್ ಖರೀದಿಸಿದ್ದು ಯಾರಿಗಾಗಿ ಗೊತ್ತಾ?

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಟ್ರಾಫಿಕ್ ಸಿಗ್ನಲ್‌ಗಳಲ್ಲಿ 30 ಸೇಕೆಂಡ್‌ಗಿಂತ ಹೆಚ್ಚು ನಿಲುಗಡೆಯಾದಲ್ಲಿ ಐಡ್ಲಿಂಗ್ ಸ್ಟಾಪ್ ಸಿಸ್ಟಂ ಸೌಲಭ್ಯವು ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಲಿದ್ದು, ಸ್ಕೂಟರ್ ತನ್ನಷ್ಟೇ ತಾನೇ ಬಂದ್ ಆಗುತ್ತೆ. ಇದು ಟ್ರಾಫಿಕ್ ದಟ್ಟಣೆಗಳಲ್ಲಿ ಆಗುವ ಇಂಧನ ವ್ಯರ್ಥವಾಗುವುದಕ್ಕೆ ಬ್ರೇಕ್ ಹಾಕಲಿದ್ದು, ಮೈಲೇಜ್ ಪ್ರಮಾಣವನ್ನು ಹೆಚ್ಚಿಸುತ್ತೆ.

MOST READ: ಅಧಿಕ ಮೈಲೇಜ್ ಪ್ರೇರಿತ ಹೈಬ್ರಿಡ್ ಎಂಜಿನ್ ಪಡೆಯಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ

ಬಿಎಸ್-6 ಆಕ್ಟಿವಾ 125 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಹೊಸ ದಾಖಲೆ

ಇನ್ನು ಹೊಸ ಆಕ್ಟಿವಾ 125 ಸ್ಕೂಟರ್‌ನಲ್ಲಿ ನೀಡಲಾಗಿರುವ ಮ್ಯಾಟೆ ಫಿನಿಷ್ ಬ್ಲ್ಯಾಕ್ ಅಲಾಯ್ ಚಕ್ರಗಳು, ಹೊರಭಾಗದಲ್ಲಿರುವ ಫ್ಯೂಲ್ ಕ್ಯಾಪ್, ಸೈಲೆಂಟ್ ಸ್ಟಾರ್ಟ್, ಸೈಡ್ ಸ್ಯಾಂಡ್ ಸೆನ್ಸಾರ್, ಎಲ್ಇಡಿ ಲೈಟಿಂಗ್, ಅನಲಾಗ್-ಡಿಜಿಟಲ್ ಕ್ಲಸ್ಟರ್ ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದೆ.

Article Published On: Friday, November 15, 2019, 14:09 [IST]
English summary
BS-VI Honda Activa 125 sales cross 25,000 units. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+