ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಆಟೋ ಉದ್ಯಮದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆ ಸೃಷ್ಠಿಯಾಗಿದ್ದು, ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಸಾಮಾನ್ಯ ಆವೃತ್ತಿಗಳನ್ನು ಎಲೆಕ್ಟಿಕ್ ವರ್ಷನ್‌ಗಳಲ್ಲಿ ಬಿಡುಗಡೆ ಮಾಡುತ್ತಿವೆ. ಹೀಗಾಗಿ ಡುಕಾಟಿ ಸಂಸ್ಥೆಯು ಸಹ ಗ್ರಾಹಕರ ಬೇಡಿಕೆಯೆಂತೆ ವಿನೂತನ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪರಿಚಯಿಸಲು ಸಿದ್ದವಾಗಿದ್ದು, ವಿನೂತನ ಇವಿ ಸ್ಕೂಟರ್ ಬೆಲೆಯನ್ನು ಬಹಿರಂಗ ಪಡಿಸಿದೆ.

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಇಟಾಲಿಯನ್ ಬ್ರಾಂಡ್ ವಾಹನಗಳಲ್ಲಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಡುಕಾಟಿ ಸಂಸ್ಥೆಯು ಸದ್ಯ ಸೂಪರ್ ಬೈಕ್ ಆವೃತ್ತಿಯಲ್ಲಿ ಭಾರೀ ಬೇಡಿಕೆ ಹೊಂದಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚಿನ ಗಮನಹರಿಸುತ್ತಿದೆ. ಇದಕ್ಕಾಗಿ ಚೀನಿ ಮೂಲದ ವಿ ಮೊಟೊ ಜೊತೆಗೂಡಿರುವ ಡುಕಾಟಿ ಸಂಸ್ಥೆಯು ಮುಂದಿನ ಕೆಲವೇ ದಿನಗಳಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೊರತರುತ್ತಿದೆ.

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ವಿ ಮೊಟೊ ಸಂಸ್ಥೆಯು ಈಗಾಗಲೇ ಚೀನಿ ಮತ್ತು ತೈವಾನ್ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸಿದ್ದು, ಇದೀಗ ಡುಕಾಟಿ ಸಂಸ್ಥೆಯೊಂದಿಗೆ ಕೈ ಜೋಡಿಸಿರುವುದು ವಿ ಮೊಟೊ ಸಂಸ್ಥೆಯು ಕುಕ್ಸ್ ಎನ್ನುವ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಅನಾವರಣಗೊಳಿಸಿದೆ.

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ವಿನೂತನ ತಂತ್ರಜ್ಞಾನದೊಂದಿಗೆ ಅಭಿವೃದ್ಧಿ ಹೊಂದಿರುವ ಡುಕಾಟಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ವಿ ಮೊಟೊ ಸಂಸ್ಥೆಯು ಅಭಿವೃದ್ಧಿಗೊಳಿಸಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಎಲೆಕ್ಟ್ರಿಕ್ ಸ್ಕೂಟರ್‌ಗಳಿಂತಲೂ ಅತ್ಯುತ್ತಮವಾಗಿದೆ.

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಇನ್ನು ಡುಕಾಟಿ ಮತ್ತು ವಿ ಮೊಟೊ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳ್ಳವಲಿರುವ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತು ಬರಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಸ್ಕೂಟರ್‌ಗಳಿಂತಲೂ ಕಡಿಮೆ ವೇಗ ಮತ್ತು ಸಾಮಾನ್ಯ ಮೈಲೇಜ್ ಹೊಂದಿದ್ದರೂ ಸಹ ಅತ್ಯಾಧುನಿಕ ಬಿಡಿಭಾಗಗಳ ಬಳಕೆಯಿಂದಾಗಿ ತುಸು ದುಬಾರಿ ಎನ್ನಿಸಲಿವೆ.

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಸದ್ಯ ಚೀನಿ ಮಾರುಕಟ್ಟೆಯಲ್ಲಿ ಮಾರಾಟಕ್ಕಿರುವ ವಿ ಮೊಟೊ ಸೂಪರ್ ಸಾಕೊ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಾಷ್ ಹಬ್ ಮೋಟಾರ್ ಸಹಾಯದೊಂದಿಗೆ ಪ್ರತಿ ಚಾರ್ಜ್‌ಗೆ 75ಕಿ.ಮಿ ಮೈಲೇಜ್ ರೇಂಜ್‌ನೊಂದಿಗೆ ಕೈಗೆಟುಕುವ ಬೆಲೆಗಳಲ್ಲಿ ಲಭ್ಯವಿವೆ.

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಅದೇ ರೀತಿಯಾಗಿ ಡುಕಾಟಿ ಕುಕ್ಸ್ ಎಲೆಕ್ಟ್ರಿಕ್ ಸ್ಕೂಟರ್ 60 ವೊಲ್ಟ್, 30 ಎಹೆಚ್ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಗಂಟೆಗೆ 45ಕಿ.ಮಿ ಗರಿಷ್ಠ ವೇಗ ಪಡೆದುಕೊಳ್ಳಲಿದ್ದು, ಈ ಮೂಲಕ ಪ್ರತಿ ಚಾರ್ಜ್‌ಗೆ 75 ಕಿ.ಮೀ ಮೈಲೇಜ್ ಹೊಂದಿದ್ದರೂ ಬೆಲೆಯಲ್ಲಿ ಮಾತ್ರ ದುಬಾರಿಯಾಗಿದೆ.

MOST READ: ಎರಡೂವರೆ ಟನ್ ತೂಕದ ಸ್ಕಾರ್ಪಿಯೋ ಕಾರನ್ನು ಸಲೀಸಾಗಿ ಎಳೆದ ಆರ್15 ಬೈಕ್..!

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಮಾಹಿತಿಗಳ ಪ್ರಕಾರ ಡುಕಾಟಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ರೂ. 2 ಲಕ್ಷ ಬೆಲೆ ಹೊಂದಿರಲಿದೆ ಎನ್ನಲಾಗಿದ್ದು, ಹೊಸ ಸ್ಕೂಟರ್‌ನಲ್ಲಿ ಕೀ ಲೆಸ್ ಎಂಟ್ರಿ ಸಿಸ್ಟಂ, ಮೊಷನ್ ಆಕ್ಟಿವೆಟೆಡ್ ಥೆಪ್ಟ್ ಅಲಾಂ ಸಿಸ್ಟಂ ಮತ್ತು ಫಾಸ್ಟ್ ಚಾರ್ಜಿಂಗ್ ಅಡಾಪ್ಟರ್ ಹೊಂದಿರುವುದು ಈ ಸ್ಕೂಟರಿನ ಪ್ರಮುಖ ಆಕರ್ಷಣೆಯಾಗಿರಲಿದೆ.

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಇದರ ಜೊತೆಗೆ ಸ್ಮಾರ್ಟ್‌ಫೋನ್ ಇಟ್ರಾಗೇಶನ್, ಫ್ರಂಟ್ ಕ್ಯಾಮೆರಾ, ಎಲ್‌ಸಿಡಿ ಇನ್‌ಸ್ಟುಮೆಂಟ್ ಕ್ಲಸ್ಟರ್, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಅಬ್ಸೋರ್ಬ್‌ ಜೋಡಿಸಲಾಗಿದ್ದು, ಎರಡು ಬದಿ ಚಕ್ರದಲ್ಲೂ 180-ಎಂಎಂ ಡಿಸ್ಕ್ ಬ್ರೇಕ್ ಸೌಲಭ್ಯವನ್ನು ಜೋಡಿಸಲಾಗಿದೆ.

MOST READ: ಬಿಸಿಲ ಧಗೆಯಿಂದ ತಪ್ಪಿಸಿಕೊಳ್ಳಲು ಐಷಾರಾಮಿ ಕಾರಿಗೆ ಸೆಗಣಿ ಮೆತ್ತಿದ ಅಸಾಮಿ..!

ಡುಕಾಟಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮಾಹಿತಿ ಬಹಿರಂಗ

ಹೀಗಾಗಿ ಸ್ಕೂಟರ್‌ಗಳ ಬೆಲೆಯು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಹೈ ಸ್ಪೀಡ್ ಮತ್ತು ಉತ್ತಮ ಮೈಲೇಜ್ ರೇಂಜ್ ಹೊಂದಿರುವ ಸ್ಕೂಟರ್‌ಗಳಿಂತಲೂ ದುಬಾರಿ ಎನ್ನಿಸಲಿದ್ದು, ಹೊಸ ಸ್ಕೂಟರ್ ಮಾದರಿಯು ಭಾರತದಲ್ಲಿ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರವಷ್ಟೇ ಬಿಡುಗಡೆಯಾಗುವ ಸಾಧ್ಯತೆಗಳಿವೆ.

More from DriveSpark

Article Published On: Wednesday, May 22, 2019, 14:00 [IST]
English summary
Ducati Unveils first Electric Scooter CUx. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+