ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಟ್ರಾಫಿಕ್ ಪೊಲೀಸರು
ದೇಶಾದ್ಯಂತ ದಿನಂಪ್ರತಿ ಸಾವಿರಾರು ವಾಹನಗಳು ರಸ್ತೆಗಿಳಿಯುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಸಾರಿಗೆ ನಿಯಮಗಳ ಉಲ್ಲಂಘನೆ ಪ್ರಕರಣಗಳು ಕೂಡಾ ಹೆಚ್ಚುತ್ತಲೇ ಇವೆ. ಅದರಲ್ಲೂ ಹೆಲ್ಮೆಟ್ ಇಲ್ಲದ ಬೈಕ್ ಸವಾರಿಯನ್ನು ಸಂಪೂರ್ಣವಾಗಿ ತಗ್ಗಿಸುವ ಉದ್ದೇಶದಿಂದ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ.

ಅಪಘಾತ ಸಂದರ್ಭದಲ್ಲಿ ಬೈಕ್ ಸವಾರರಿಗೆ ಸುರಕ್ಷತೆ ಸಿಗಲಿ ಎನ್ನುವ ಉದ್ದೇಶದಿಂದ ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡುವಂತೆ ದೇಶದ ಪ್ರತಿ ನಗರದಲ್ಲೂ ಸೂಕ್ತ ಕ್ರಮ ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು, ಹೆಲ್ಮೆಟ್ ಬಳಕೆ ಮಾಡದ ಸವಾರರನ್ನು ಹಿಡಿದು ದಂಡ ವಸೂಲಿ ಮಾಡುತ್ತಿದ್ದಾರೆ. ಆದರೂ ಕೂಡಾ ಹೆಲ್ಮೆಟ್ ಇಲ್ಲದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿರುವ ಟ್ರಾಫಿಕ್ ಪೊಲೀಸರು ನಿಯಮ ಉಲ್ಲಂಘಿಸುವ ಬೈಕ್ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಬಹುತೇಕ ಬೈಕ್ ಸವಾರರು ಸಾವಿರಾರು ಕೊಟ್ಟು ಬೈಕ್ ಖರೀದಿ ಮಾಡಿದರೂ ಸಹ ಒಂದು ಉತ್ತಮವಾದ ಹೆಲ್ಮೆಟ್ ಖರೀದಿಸಲು ಹಿಂದೇಟು ಹಾಕುತ್ತಾರೆ. ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುವ ಅಗ್ಗದ ಬೆಲೆಯ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನ ಖರೀದಿಸುತ್ತಾರೆ.

ಆದ್ರೆ ಅಪಘಾತಗಳ ಸಂದರ್ಭದಲ್ಲಿ ಇದರಿಂದ ಪ್ರಾಣ ಉಳಿಯುವ ಬದಲು ಪ್ರಾಣಕ್ಕೆ ಮತ್ತಷ್ಟು ಸಂಚಕಾರ ತರಲಿವೆ ಎಂಬುವುದು ಗೊತ್ತಿದ್ದರೂ ಸಹ ಅಗ್ಗದ ಬೆಲೆಯ ಹೆಲ್ಮೆಟ್‌ಗಳೇ ಹೆಚ್ಚು ಮಾರಾಟವಾಗುತ್ತಿದ್ದು, ಇಂತಹ ಪ್ರವೃತ್ತಿಯನ್ನು ತಪ್ಪಿಸಲು ಗುಜರಾತಿನ ರಾಜಕೋಟ್ ಪೊಲೀಸರು ಹೊಸ ರೂಲ್ಸ್ ಜಾರಿಗೆ ತಂದಿದ್ದಾರೆ.

ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರಿಗೆ ಡೀಲರ್ಸ್‌ಗಳೇ ಉಚಿತವಾಗಿ ಉತ್ತಮ ಗುಣಮಟ್ಟದ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ವಿತರಣೆ ಮಾಡುವಂತೆ ಸೂಚನೆ ನೀಡಲಾಗಿದ್ದು, ನಿಯಮ ಪಾಲಿಸದ ಡೀಲರ್ಸ್ ವಿರುದ್ಧ ಸೂಕ್ತ ಕೈಗೊಳ್ಳುವುದಾಗಿದೆ ರಾಜಕೋಟ್ ಎಸ್‌ಪಿ ಮನೋಜ್ ಅಗರವಾಲ್ ಅವರು ಖಡಕ್ ಆಗಿಯೇ ವಾರ್ನ್ ಮಾಡಿದ್ದಾರೆ.

ಹಾಗೆಯೇ ಹೆಲ್ಮೆಟ್ ಬಳಕೆ ಮಾಡದ ದ್ವಿಚಕ್ರ ವಾಹನ ಸವಾರರ ವಿರುದ್ದವು ಸೂಕ್ತ ಕ್ರಮ ಕೈಗೊಳ್ಳಲು ಪ್ರತ್ಯೇಕ ತಂಡ ರಚಿಸಿ ವಿಶೇಷ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದ್ದು, ಸಾರಿಗೆ ನಿಯಮಗಳನ್ನು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿ 2018-19ರ ಆರ್ಥಿಕ ವರ್ಷದ ಅವಧಿಯಲ್ಲಿ ಬರೋಬ್ಬರಿ 1.35 ಇ-ಚಲನ್‌ಗಳನ್ನು ನೀಡಲಾಗಿದೆ.

ಇನ್ನು ನಕಲಿ ಹೆಲ್ಮೆಟ್ ಬಳಸಬೇಡಿ ಎಂದು ಎಷ್ಟೇ ಮನವಿ ಮಾಡಿದ್ರು ಬಹುತೇಕ ಬೈಕ್ ಸವಾರರು ಮಾತ್ರ ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಗ್ಗದ ಬೆಲೆಗೆ ಲಭ್ಯವಿರುವ ಹೆಲ್ಮೆಟ್‌ಗಳನ್ನೇ ಬಳಕೆ ಮಾಡುತ್ತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ.
MOST READ: ರಾಂಗ್ ಸೈಡ್‌ನಲ್ಲಿ ಬಂದ ಕಾರು ಚಾಲಕನಿಗೆ ಬೆವರಿಳಿಸಿದ ಬೈಕ್ ರೈಡರ್..!

ಇದರಿಂದ ವಿಭಿನ್ನ ರೀತಿಯಲ್ಲಿ ಕಾರ್ಯಾಚರಣೆ ಕೈಗೊಂಡಿರುವ ದೆಹಲಿ ಪೊಲೀಸರು ನಕಲಿ ಹೆಲ್ಮೆಟ್ ಧರಿಸುವ ಬೈಕ್ ಸವಾರರಿಗೆ ಸ್ಥಳದಲ್ಲೇ ದಂಡ ವಿಧಿಸಿ ಐಎಸ್ಐನಿಂದ ಅನುಮೋದನೆಗೊಂಡಿರುವ ಹೆಲ್ಮೆಟ್‌ಗಳನ್ನು ವಿತರಣೆ ಮಾಡುತ್ತಿದ್ದು, ಈ ವೇಳೆ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರ ಹೆಲ್ಮೆಟ್ ಅನ್ನು ಒಡೆದು ಹಾಕಿ ಕಳಪೆ ಹೆಲ್ಮೆಟ್ ಅಸಲಿಯತ್ತನ್ನು ಬಹಿರಂಗಗೊಳಿಸಿದ್ದರು.

ಯಾಕೆಂದ್ರೆ ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳುವ ಆ ಮಹಿಳೆ ರಸ್ತೆ ಬದಿ ಸಿಗುವ ಹೆಲ್ಮೆಟ್ ಧರಿಸಿದ್ದಳು. ಹೀಗಾಗಿ ಹೆಲ್ಮೆಟ್ ಅನ್ನು ನೆಲಕ್ಕೆ ಬಿಳಿಸಿ ಒಡೆದು ಹಾಕಿದ ಪೊಲೀಸರು ಇನ್ಮುಂದೆ ಇಂಥಹ ಹೆಲ್ಮೆಟ್‌ಗಳನ್ನು ಯಾವುದೇ ಕಾರಣಕ್ಕೂ ಬಳಸಬೇಡಿ ಮನವಿ ಮಾಡಿದ್ರು.
MOST READ: ಅಪಘಾತದಲ್ಲಿ ಹ್ಯಾರಿಯರ್ ಕಾರು ಪುಡಿಪುಡಿಯಾದ್ರು ಪ್ರಯಾಣಿಕರಿಗೆ ಏನೂ ಆಗಲಿಲ್ಲ..!

ಜೊತೆಗೆ ಕಳಪೆ ಗುಣಮಟ್ಟದ ಹೆಲ್ಮೆಟ್ ವಿರುದ್ಧ ಜಾಗೃತಿ ಅಭಿಯಾನ ಕೈಗೊಂಡಿರುವ ದೆಹಲಿ ಪೊಲೀಸರು ಜನರಿಗೆ ಅರಿವು ಮೂಡಿಸುವುದಷ್ಟೇ ಅಲ್ಲ, ಉಚಿತವಾಗಿ ಐಎಸ್ಐ ಮುದ್ರಿತ ಹೆಲ್ಮೆಟ್‌ಗಳನ್ನು ವಿತರಣೆ ಮಾಡುತ್ತಿರುವುದು ವಿಶೇಷವಾಗಿತ್ತು.
Source: TOI


Click it and Unblock the Notifications








