ಕೇರಳದಲ್ಲೂ ಇನ್ಮುಂದೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ

ಕೇರಳ ರಾಜ್ಯದ ಸಾರಿಗೆ ಇಲಾಖೆಯು, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಹಿಂಬದಿ ಸವಾರರೂ ಸೇರಿದಂತೆ ಎಲ್ಲಾ ಸವಾರರು ಎಲ್ಲಾ ಸಮಯದಲ್ಲೂ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಕೇರಳ ರಾಜ್ಯ ಸಾರಿಗೆ ಆಯುಕ್ತ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನಾಲ್ಕು ಚಕ್ರ ವಾಹನಗಳ ಚಾಲಕರು ಹಾಗೂ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವುದನ್ನು ಕಡ್ಡಾಯಗೊಳಿಸುವಂತೆಯೂ ಸಹ ಸೂಚಿಸಲಾಗಿದೆ.

ಕೇರಳದಲ್ಲೂ ಇನ್ಮುಂದೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ

ರಾಜ್ಯ ಸಾರಿಗೆ ಆಯುಕ್ತರಿಗೆ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಬರೆದಿರುವ ಪತ್ರದಲ್ಲಿ ಸಾರಿಗೆ ಪ್ರಧಾನ ಕಾರ್ಯದರ್ಶಿ ಕೆ ಆರ್ ಜ್ಯೋತಿಲಾಲ್‍‍ರವರು ರಾಜ್ಯದಲ್ಲಿ ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ನಿಯಮಗಳನ್ನು ಸಂಪೂರ್ಣವಾಗಿ ಜಾರಿಗೆ ತರಲಾಗಿಲ್ಲ ಎಂದು ಹೇಳಿದ್ದಾರೆ. ಜ್ಯೋತಿಲಾಲ್‍‍ರವರು ಮಾತನಾಡಿ, ಮೇಲಿನ ನಿಯಮಗಳನ್ನು ಉಲ್ಲಂಘಿಸುವವರಿಗೆ ಯಾವುದೇ ವಿಮಾ ಕಂಪನಿಯು ಯಾವುದೇ ರೀತಿಯ ಪರಿಹಾರವನ್ನು ನೀಡಲು ಸಾಧ್ಯವಾಗುವುದಿಲ್ಲ, ಏಕೆಂದರೆ ಇವು ರಸ್ತೆಯ ನಿಯಮಗಳ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಹೇಳಿದರು.

ಕೇರಳದಲ್ಲೂ ಇನ್ಮುಂದೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ

ಮೋಟಾರು ವಾಹನಗಳ ಇಲಾಖೆ ಹಾಗೂ ಪೊಲೀಸರು, ನಿಯಮ ಉಲ್ಲಂಘನೆ ಹಾಗೂ ಸ್ಲಿಪ್ ಅಪ್‌ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪ್ರಧಾನ ಕಾರ್ಯದರ್ಶಿಗಳು ಸೂಚಿಸಿದ್ದಾರೆ. ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಒಳಗೊಂಡ ರಸ್ತೆ ಅಪಘಾತಗಳು ರಾಜ್ಯದಲ್ಲಿ ಅಪಾಯಕಾರಿ ಮಟ್ಟದಲ್ಲಿ ಹೆಚ್ಚುತ್ತಿರುವ ಕಾರಣ ಈ ಸೂಚನೆಗಳನ್ನು ನೀಡಲಾಗಿದೆ. 2018ರಲ್ಲಿ 868 ಕಾರು ಪ್ರಯಾಣಿಕರು ಹಾಗೂ ಬೈಕಿನಲ್ಲಿ ಚಲಿಸುತ್ತಿದ್ದ 1,382 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕೇರಳದಲ್ಲೂ ಇನ್ಮುಂದೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ

ಒಟ್ಟು 4,303 ಸಾವು, 45,458 ಗಾಯ ಹಾಗೂ 40,181 ರಸ್ತೆ ಅಪಘಾತಗಳು ವರದಿಯಾಗಿವೆ. ಸಾರಿಗೆ ಇಲಾಖೆಯಿಂದ ಬಂದಿರುವ ಹೊಸ ನಿರ್ದೇಶನವು, ಯಾವುದೇ ರೀತಿಯ ಸಂಚಾರ ಉಲ್ಲಂಘನೆಗೆ ಮೋಟಾರು ವಾಹನ ಇಲಾಖೆ ಹಾಗೂ ಸ್ಥಳೀಯ ಪೊಲೀಸರನ್ನು ಜವಾಬ್ದಾರರನ್ನಾಗಿ ಮಾಡಲಿದೆ. ಈ ನಿರ್ದೇಶನವನ್ನು 2015ರಲ್ಲಿ ಕೇರಳ ಹೈಕೋರ್ಟ್ ನೀಡಿದ ಸೂಚನೆಯ ಮೇರೆಗೆ ಹೊರಡಿಸಲಾಗಿದೆ. ಕೇರಳ ಹೈಕೋರ್ಟ್‍‍ನ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲಾಗಿತ್ತು.

ಕೇರಳದಲ್ಲೂ ಇನ್ಮುಂದೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಈ ಮೇಲ್ಮನವಿಯನ್ನು ಕೇರಳ ರಾಜ್ಯ ಸರ್ಕಾರವು ಬಸಿಲ್ ಅಟ್ಟಿಪೆಟ್ಟಿ ಎಂಬ ಸಾಮಾಜಿಕ ಕಾರ್ಯಕರ್ತರ ಅರ್ಜಿಯ ವಿರುದ್ಧ ಸಲ್ಲಿಸಿತ್ತು. ಇವರು ತಮ್ಮ ಅರ್ಜಿಯಲ್ಲಿ ದ್ವಿಚಕ್ರ ವಾಹನದಲ್ಲಿ ಚಲಿಸುವ ಇಬ್ಬರೂ ಸವಾರರಿಗೂ ಮೋಟಾರ್ ವೆಹಿಕಲ್ ಆಕ್ಟ್ 1988ರ ಪ್ರಕಾರ ಕಡ್ಡಾಯವಾಗಿ ಹೆಲ್ಮೆಟ್‍‍‍ಗಳನ್ನು ಬಳಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ್ದ ಕೇರಳ ಹೈಕೋರ್ಟ್ ದ್ವಿಚಕ್ರವಾಹನಗಳ ಸವಾರರು ಹಾಗೂ ಹಿಂಬದಿ ಸವಾರರು ಹೆಲ್ಮೆಟ್ ಧರಿಸಬೇಕೆಂದು ಹಾಗೂ ನಾಲ್ಕು ಚಕ್ರದ ವಾಹನದಲ್ಲಿರುವ ಎಲ್ಲಾ ಪ್ರಯಾಣಿಕರು ಸೀಟ್ ಬೆಲ್ಟ್‌ಗಳನ್ನು ಧರಿಸಬೇಕೆಂದು ಆದೇಶ ನೀಡಿತ್ತು.

ಕೇರಳದಲ್ಲೂ ಇನ್ಮುಂದೆ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ

ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 129 ಪ್ರಕಾರ ದ್ವಿಚಕ್ರ ವಾಹನದಲ್ಲಿ ಚಲಿಸುವ ಇಬ್ಬರೂ ಹೆಲ್ಮೆಟ್ ಧರಿಸಬೇಕಾಗುತ್ತದೆ. ಈ ಕಾನೂನು ದೇಶಾದ್ಯಂತ ಅನ್ವಯಿಸುತ್ತದೆ. ಕೇರಳ ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವುದು ಖುಷಿಯ ಸಂಗತಿಯಾದರೂ ಈ ಯೋಜನೆಯನ್ನು ಎಷ್ಟರ ಮಟ್ಟಿಗೆ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂಬ ಬಗ್ಗೆ ಯಾವುದೇ ಉತ್ತರವಿಲ್ಲ. ಆದರೆ ಈ ನಿರ್ದೇಶನದಲ್ಲಿ ತಿಳಿಸಿರುವಂತೆ ವಿಮಾ ಕಂಪನಿಗಳು ಯಾವುದೇ ಪರಿಹಾರವನ್ನು ನೀಡುವುದಿಲ್ಲ ಎಂಬ ಕಾರಣಕ್ಕಾಗಿಯಾದರೂ ಪ್ರಯಾಣಿಕರು ಈ ನಿಯಮಗಳನ್ನು ಪಾಲಿಸುವ ಸಾಧ್ಯತೆಗಳಿವೆ. ಕಾದು ನೋಡೋಣ.

More from DriveSpark

Article Published On: Wednesday, July 10, 2019, 12:20 [IST]
English summary
God's Own Country Enforces Helmet Rules For Pillion Riders — Too Many Lives At Stake - Read in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+