ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆಯೂ ಜೋರಾಗಿದ್ದು, ಈ ನಿಟ್ಟಿನಲ್ಲಿ ಹೀರೋ ಮೊಟೋಕಾರ್ಪ್ ಸಂಸ್ಥೆಯು ಸಹ ಬೃಹತ್ ಬಂಡವಾಳದೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮವನ್ನು ವಿಸ್ತರಣೆಗೆ ಮುಂದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಸದ್ಯ ಆಟೋ ಉದ್ಯಮದಲ್ಲಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಸಾಂಪ್ರದಾಯಿಕ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಪ್ರೇರಿತ ವಾಹನಗಳ ಜೊತೆಗೆ ಭವಿಷ್ಯದಲ್ಲಿ ಹೆಚ್ಚು ಸದ್ದು ಮಾಡಲಿರುವ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೂ ಹೆಚ್ಚಿನ ಗಮನಹರಿಸಿವೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಕಡಿಮೆ ಬೆಲೆಯಲ್ಲಿ ಉತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಚಾಲನೆ ನೀಡಿದ್ದು, ಇನ್ನು ಕೆಲವು ವಾಹನ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ಮಾರಾಟನ್ನು ಈಗಾಗಲೇ ಆರಂಭಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಹೀರೋ ಮೊಟೋಕಾರ್ಪ್ ಸಂಸ್ಥೆಯು ಸಹ ಈಗಾಗಲೇ ಎರಡು ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡುತ್ತಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರ ಉದ್ಯಮ ವಿಸ್ತರಣೆ ಯೋಜನೆಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಪ್ರಸ್ತುತ ಮಾರುಕಟ್ಟೆಯಲ್ಲಿ ಹೀರೋ ಸಂಸ್ಥೆಯು ತನ್ನ ಪೆಟ್ರೋಲ್ ಎಂಜಿನ್ ಬೈಕ್ ಮಾರಾಟ ಮಳಿಗೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಮುಂದಿನ ಕೆಲವೇ ದಿನಗಳ ಅವಧಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟಕ್ಕಾಗಿಯೇ ಪ್ರತ್ಯೇಕವಾಗಿ ದೇಶಾದ್ಯಂತ 15 ಹೊಸ ಡೀಲರ್ಸ್‌ಗಳಿಗೆ ಚಾಲನೆ ನೀಡುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಜೊತೆಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟಕ್ಕೆ ಪೂರಕವಾಗಿ ದೇಶದ ಪ್ರಮುಖ ನಗರಗಳಲ್ಲಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲು ಸಹ ಯೋಜನೆ ರೂಪಿಸಿರುವ ಹೀರೋ ಸಂಸ್ಥೆಯು, ಟಚ್ ಪಾಯಿಂಟ್‌ಗಳ ಮೂಲಕ ಗ್ರಾಹಕರನ್ನು ಸೆಳೆಯಲಿದೆ. ಹಾಗೆಯೇ ಟಚ್ ಪಾಯಿಂಟ್‌ಗಳ ಮೂಲಕ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡಿಭಾಗಗಳು ಮತ್ತು ಸರ್ವಿಸ್ ನೀಡಲು ನಿರ್ಧರಿಸಿರುವ ಹೀರೋ ಸಂಸ್ಥೆಯು ಇದಕ್ಕಾಗಿ ಸಾವಿರಾರು ನುರಿತ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಈ ಮೂಲಕ ಪೆಟ್ರೋಲ್ ಬೈಕ್ ಮಾರಾಟದಲ್ಲಿನ ನಂ.1 ಸ್ಥಾನವನ್ನು ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲೂ ಸದ್ದು ಮಾಡಲು ಮುಂದಾಗಿರುವ ಹೀರೋ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪರಿಚಯಿಸುವ ಇರಾದೆಯಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಇದಲ್ಲದೇ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಉತ್ತೇಜಿಸಲು ಫೇಮ್ 2 ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳಿಗೆ ಅಷ್ಟೇ ಅಲ್ಲದೇ ಗ್ರಾಹಕರಿಗೆ ಭರ್ಜರಿ ಸಬ್ಸಡಿ ದೊರೆಯಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಸಬ್ಸಡಿ ಯೋಜನೆ ಮೂಲಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು 3 ವರ್ಷಗಳ ಅವಧಿಗಾಗಿ ರೂ.10 ಸಾವಿರ ಕೋಟಿ ಮೀಸಲು ಇರಿಸಿರುವ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕೂ ಸಬ್ಸಡಿ ನೀಡುತ್ತಿದೆ.

MOST READ: ಎರಡೂವರೆ ಟನ್ ತೂಕದ ಸ್ಕಾರ್ಪಿಯೋ ಕಾರನ್ನು ಸಲೀಸಾಗಿ ಎಳೆದ ಆರ್15 ಬೈಕ್..!

ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟಕ್ಕಾಗಿ 1,500 ಟಚ್ ಪಾಯಿಂಟ್‌ಗಳನ್ನು ತೆರೆಯಲಿದೆ ಹೀರೋ

ಹೀಗಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಕೇಂದ್ರ ಸರ್ಕಾರದ ಸಬ್ಸಡಿ ಯೋಜನೆಯಡಿ ಭರ್ಜರಿ ಲಾಭದೊಂದಿಗೆ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವ ತವಕದಲ್ಲಿದ್ದು, 2022ರ ವೇಳೆಗೆ ದೇಶಾದ್ಯಂತ ಶೇ.25ರಷ್ಟು ವಾಹನಗಳು ಎಲೆಕ್ಟ್ರಿಕ್ ಎಂಜಿನ್ ಪ್ರೇರಣೆ ಹೊಂದಿರಲಿವೆ.

Most Read Articles

Kannada
English summary
Hero Electric Reveals Expansion Plans — Additional 1500 Touch Points. Read in Kannada.
Story first published: Thursday, May 30, 2019, 11:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X