ಪರ್ಫಾಮೆನ್ಸ್ ಪ್ರಿಯರನ್ನು ರಂಜಿಸಲು ಸಜ್ಜಾದ ಹೀರೋ ಎಕ್ಸ್‌ಪಲ್ಸ್ 200

ಹೀರೋ ಮೊಟೊಕಾರ್ಪ್ ಸಂಸ್ಥೆಯು ತನ್ನ ಮೊದಲ ಅಡ್ವೆಂಚರ್ ಬೈಕ್ ಮಾದರಿಯಾದ ಎಕ್ಸ್‌ಪಲ್ಸ್ 200 ಬೈಕ್ ಮಾದರಿಯನ್ನು ಮುಂಬರುವ ಜೂನ್ ಅಥವಾ ಜುಲೈ ಹೊತ್ತಿಗೆ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಬೈಕಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ಅಂತಿಮ ಹಂತದ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಪರ್ಫಾಮೆನ್ಸ್ ಪ್ರಿಯರನ್ನು ರಂಜಿಸಲು ಸಜ್ಜಾದ ಹೀರೋ ಎಕ್ಸ್‌ಪಲ್ಸ್ 200

ಇಮ್‌ಪಲ್ಸ್ 150 ಬೈಕ್ ಪ್ರೇರಣೆಯೊಂದಿಗೆ ಸಿದ್ದವಾಗಿರುವ ಎಕ್ಸ್‌ಪಲ್ಸ್ 200 ಬೈಕ್‌ಗಳು ಆಪ್ ರೋಡ್ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುತ್ತಿದ್ದು, ಹೊಸ ಬೈಕಿನ ಬೆಲೆಗಳನ್ನ ಹೊರತು ಪಡಿಸಿ ಬಹುತೇಕ ತಾಂತ್ರಿಕ ಅಂಶಗಳ ಕುರಿತಾದ ಮಾಹಿತಿಯನ್ನ ಹೀರೋ ಸಂಸ್ಥೆಯು ಈಗಾಗಲೇ ಬಿಟ್ಟುಕೊಟ್ಟಿದೆ. ಹೀಗಾಗಿ ಬೈಕಿನ ಬೆಲೆಗಳ ಮೇಲೆ ಎಕ್ಸ್‌ಪಲ್ಸ್ 200 ಬೈಕಿನ ಜನಪ್ರಿಯತೆ ನಿರ್ಧಾರವಾಗಲಿದೆ ಎನ್ನಬಹುದು.

ಸದ್ಯ ಮಾರುಕಟ್ಟೆಯಲ್ಲಿರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಹೊರತುಪಡಿಸಿ ಯಾವುದೇ ಬೈಕ್ ಮಾದಿರಯು ಕಡಿಮೆ ಬೆಲೆಯಲ್ಲಿ ಲಭ್ಯವಿಲ್ಲದ ಹಿನ್ನೆಲೆ ಹೀರೋ ಎಕ್ಸ್‌ಪಲ್ಸ್ 200 ಭಾರೀ ಜನಪ್ರಿಯತೆ ಪಡೆಯಲಿದ್ದು, ಬೈಕಿನ ಬೆಲೆಯನ್ನು ರೂ.1.05 ಲಕ್ಷದಿಂದ ರೂ.1.15 ಲಕ್ಷದೊಳಗೆ ನಿರ್ಧರಿಸುವ ಸಾಧ್ಯತೆಗಳಿವೆ.

ಪರ್ಫಾಮೆನ್ಸ್ ಪ್ರಿಯರನ್ನು ರಂಜಿಸಲು ಸಜ್ಜಾದ ಹೀರೋ ಎಕ್ಸ್‌ಪಲ್ಸ್ 200

ಇನ್ನು ಹೀರೋ ಎಕ್ಸ್‌ಪಲ್ಸ್ 200 ಫುಲ್ ಎಲ್ಇಡಿ ಹೆಡ್ ಲೈಟ್, ಲಗೆಜ್ ರಾಕ್, ಧೀರ್ಘ ಕಾಲದ ಸವಾರಿಗೆ ಅನೂಕಲವಾಗುವಂತಹ ನಾಕಲ್ ಗಾರ್ಡ್ಸ್ ಹೊಂದಿದ್ದು, ವಿಂಡ್ ಶೀಲ್ಡ್ ಅನ್ನು ಬಳಸಲಾಗಿದೆ. ಜೊತೆಗೆ ಎಕ್ಸ್‌ಪಲ್ಸ್ ಸೆಗ್ಮೆಂಟ್ ನಲ್ಲಿ ಮೊದಲ ಬಾರಿಗೆ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸಿಸ್ಟಮ್ ಪಡೆದ ಮೊದಲ ಬೈಕ್ ಇದಾಗಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಪರ್ಫಾಮೆನ್ಸ್ ಪ್ರಿಯರನ್ನು ರಂಜಿಸಲು ಸಜ್ಜಾದ ಹೀರೋ ಎಕ್ಸ್‌ಪಲ್ಸ್ 200

ಬೈಕಿನಲ್ಲಿ ಹೆಚ್ಚಿನ ಸಾಮರ್ಥ್ಯ ಮತ್ತು ಚುರುಕುತನವನ್ನು ನೀಡುವ ಹೆಚ್ಚಿನ ಟೆನ್ಸೈಲ್ ಡೈಮೆಂಡ್ ಫ್ರೇಮ್ ಅನ್ನು ಆಧರಿಸಿದ್ದು, ಈ ಬೈಕಿನ ಎಂಜಿನ್ ಮತ್ತು ಇಂಧನ ಕಾರ್ಯಕ್ಷಮತೆ ಕಾಪಾಡಲು ಅಲ್ಯುಮಿನಿಯಂ ಸ್ಕಿಡ್ ಪ್ಲೇಟ್ ಅನ್ನು ಕೂಡ ಬಳಸಲಾಗಿದೆ. ಇದು ಆಫ್ ಸ್ವೆಫ್ಟ್ ಎಕ್ಸಾಸ್ಟ್ ವಾಟರ್ ವೇಡಿಂಗ್ ಸಾಮರ್ಥ್ಯವನ್ನು ತಗ್ಗಿಸಲು ಸಹಕಾರಿಯಾಗಲಿದೆ.

ಎಕ್ಸ್‌ಪಲ್ಸ್ 200 ಎಂಜಿನ್ ಸಾಮರ್ಥ್ಯ

ಹೊಸ ಬೈಕಿನಲ್ಲಿ 200-ಸಿಸಿ ಏರ್ ಕೂಲ್ಡ್, ಫ್ಯುಯಲ್ಇಂಜೆಕ್ಟೆಡ್ ಎಂಜಿನ್ ಒದಗಿಸಲಾಗಿದ್ದು, 5-ಸ್ಪೀಡ್ ಗೇರ್ ಬಾಕ್ಸ್ ಸೇರಿಸಲಾಗಿದೆ. ಇದು 18.1-ಬಿಹೆಚ್ ಪಿ ಮತ್ತು 17.2-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಒಟ್ಟಾರೆ ಈ ಬೈಕಿನ ಡಿಸೈನ್ ಸರಳವಾಗಿದ್ದು, ಧೀರ್ಘ ಪ್ರಮಾಣದ ಸಸ್ಪೆಷನ್ ಸೆಟಪ್ ಅನ್ನು ಪಡೆದಿದೆ.

ಪರ್ಫಾಮೆನ್ಸ್ ಪ್ರಿಯರನ್ನು ರಂಜಿಸಲು ಸಜ್ಜಾದ ಹೀರೋ ಎಕ್ಸ್‌ಪಲ್ಸ್ 200

ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಸಸ್ಪೆಷನ್ ಡ್ಯೂಟಿಗೆ 190-ಎಮ್ಎಮ್ ಪ್ರಮಾಣ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು 170-ಎಂಎಂ ಪ್ರಮಾಣದ ಹತ್ತು ಹಂತದ ಹೊಂದಾಣಿಕೆಯ ಗ್ಯಾಸ್-ಚಾರ್ಜ್ಡ್ ಮೋನೋಶಾಕ್ ಸಸ್ಪೆಷನ್ ಜೋಡಣೆ ಹೊಂದಿದೆ.

MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಇದಲ್ಲದೇ ಈ ಬೈಕಿನ ಮುಂಭಾಗದಲ್ಲಿ 21 ಇಂಚಿನ ಚಕ್ರಗಳನ್ನು ಒದಗಿಸಲಾಗಿದ್ದು, ಮುಂಭಾಗದ 18 ಇಂಚಿನ ಚಕ್ರಗಳನ್ನು ಹೊಂದಿದೆ. ಜೊತೆಗೆ ಆಪ್ ರೋಡಿಂಗ್‌ಗೆ ಸಹಕಾರಿಯಾಗಲು 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ನೀಡುತ್ತದೆ.

ಪರ್ಫಾಮೆನ್ಸ್ ಪ್ರಿಯರನ್ನು ರಂಜಿಸಲು ಸಜ್ಜಾದ ಹೀರೋ ಎಕ್ಸ್‌ಪಲ್ಸ್ 200

ಒಟ್ಟಿನಲ್ಲಿ ಎಕ್ಸ್‌ಪಲ್ಸ್ 200 ಬೈಕ್ ಮಾದರಿಗಳು ಥ್ರಿಲ್ಲಿಂಗ್ ರೈಡಿಂಗ್ ಅನುಭವಕ್ಕೆ ಹೇಳಿ ಮಾಡಿಸಿದ ಬೈಕ್ ಆವೃತ್ತಿಯಾಗಿದ್ದು, ದುಬಾರಿಯ ಬೆಲೆಯ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಆವೃತ್ತಿಗಳಿಗೆ ತೀವ್ರ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Image Courtesy: Impulse riders coimbatore / Facebook

Most Read Articles

Kannada
English summary
Production-spec Hero XPulse 200 Leaked Ahead Of Launch — Get Ready To Hit The Dirt. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X