ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಹೀರೋ ಸಂಸ್ಥೆಯು ತನ್ನ ಬೈಕ್ ಉತ್ಪನ್ನಗಳ ಮಾರಾಟ ವಿಭಾಗದಲ್ಲಿ ಬಹುದೊಡ್ಡ ಬದಲಾವಣೆ ತಂದಿದ್ದು, ಇದೇ ಮೊದಲ ಬಾರಿಗೆ ಅಡ್ವೆಂಚರ್ ಆವೃತ್ತಿಗಳ ಜೊತೆಗೆ ಪ್ರೀಮಿಯಂ ಆವೃತ್ತಿಗಳ ಮೇಲೂ ಹೆಚ್ಚಿನ ಆಸಕ್ತಿ ತೊರುತ್ತಿದೆ. ನಿನ್ನೆಯಷ್ಟೇ ಬಿಡುಗಡೆಯಾದ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಎನ್ನುವ ಮತ್ತೊಂದು ಹೊಸ ಬೈಕ್ ಆವೃತ್ತಿಯನ್ನು ಬಿಡುಗಡೆಗೊಳಿಸಲಾಗಿದೆ.

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಕಮ್ಯುಟರ್ ಬೈಕ್ ವಿಭಾಗದಲ್ಲಿ ಈಗಾಗಲೇ ಜಾಗತಿಕವಾಗಿ ಹೆಸರುವಾಸಿಯಾಗಿರುವ ಹೀರೋ ಮೊಟೊಕಾರ್ಪ್ ಸಂಸ್ಥೆಯು ಇಮ್‌ಪಲ್ಸ್ 150 ಬೈಕ್ ಪ್ರೇರಣೆಯೊಂದಿಗೆ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಅಡ್ವೆಂಚರ್ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದು, ಇದರ ಜೊತೆಯಲ್ಲೇ ಎಕ್ಸ್‌ಟ್ರಿಮ್ 200ಆರ್ ಮಾದರಿಗಿಂತ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯ ಮತ್ತು ಪ್ರೀಮಿಯಂ ವೈಶಿಷ್ಟ್ಯತೆ ಹೊಂದಿರುವ ಎಕ್ಸ್‌ಟ್ರಿಮ್ 200ಎಸ್ ಮಾದರಿಯನ್ನು ಬಿಡುಗಡೆ ಮಾಡಲಾಗಿದೆ.

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಎಕ್ಸ್‌ಟ್ರಿಮ್ 200ಎಸ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ 98,500 ಬೆಲೆ ಹೊಂದಿದ್ದು, ಎಕ್ಸ್‌ಟ್ರಿಮ್ 200ಆರ್ ಮಾದರಿಯಲ್ಲೇ 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 199.6-ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಪ್ರೇರಣೆಯಿಂದ 18.1-ಬಿಎಚ್‌ಪಿ ಮತ್ತು 17.1-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಸ್ಪೋರ್ಟಿ ವೈಶಿಷ್ಟ್ಯತೆಗಳಿಂದಾಗಿ ಕರಿಜ್ಮಾ ಬೈಕ್ ನೆನಪಿಸುವ ಹೊಸ ಎಕ್ಸ್‌ಟ್ರಿಮ್ 200ಎಸ್ ಮಾದರಿಯು ಫುಲ್ ಎಲ್‌ಇಡಿ ಹೆಡ್‌ಲ್ಯಾಂಪ್, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ವಿಭಜಿತ ಆಸನ, ಸ್ಪೋರ್ಟಿ ಎಕ್ಸಾಸ್ಟ್ ಮತ್ತು ಬ್ಲೂಟೂಥ್ ಸಂಪರ್ಕದೊಂದಿಗೆ ಕಾಲ್ ನೋಟಿಫೀಕೆಶನ್, ಸರ್ವಿಸ್ ರಿಮೆಂಡರ್, ಟರ್ನ್ ಬೈ ಟರ್ನ್ ನೇವಿಗೇಷನ್ ಸೌಲಭ್ಯವನ್ನು ಪಡೆಯಬಹುದಾಗಿದೆ.

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಹಾಗೆಯೇ ಹೊಸ ಬೈಕಿನಲ್ಲಿ 37-ಎಂಎಂ ಮುಂಭಾಗದ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 7 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಮೊನೊಶಾರ್ಕ್ ಸೌಲಭ್ಯವನ್ನು ಒದಗಿಸಲಾಗಿದ್ದು, 17-ಇಂಚಿನ ಅಲಾಯ್ ಚಕ್ರಗಳು, ಸಿಂಗಲ್ ಚಾನೆಲ್ ಎಬಿಎಸ್ ಮತ್ತು ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಒದಗಿಸಲಾಗಿದೆ.

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಇನ್ನು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲು ಹೀರೋ ಸಂಸ್ಥೆಯು ದೇಶದಲ್ಲಿ ಇದೇ ಮೊದಲ ಬಾರಿಗೆ ಪೂರ್ಣಪ್ರಮಾಣದ ಅಡ್ವೆಂಚರ್ ಬೈಕ್ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದು, ಎಕ್ಸ್‌ಪಲ್ಸ್ 200 ಮಾದರಿಯು ಅಡ್ವೆಂಚರ್ ವೈಶಿಷ್ಟ್ಯತೆಗಳನ್ನು ಹೊಂದಿದ್ದರೆ ಎಕ್ಸ್‌ಪಲ್ಸ್ 200ಟಿ ಮಾದರಿಯು ಟೂರರ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿ ಹೊಂದಿದೆ.

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಎಂಜಿನ್ ಸಾಮರ್ಥ್ಯ

ಹೊಸ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಮಾದರಿಗಳು 199.6 ಸಿಸಿ ಸಿಂಗಲ್ ಸಿಲಿಂಡರ್, ಏರ್ ಕೂಲ್ಡ್ ಎಂಜಿನ್ ಸಾಮರ್ಥ್ಯವನ್ನು ಹೊಂದಿದ್ದು, 5-ಸ್ಪೀಡ್ ಮ್ಯನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 18.4-ಬಿಎಚ್‌ಪಿ ಮತ್ತು 17.1-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.

MOST READ: ಡ್ಯೂಕ್ 125 ನಂತರ ಆರ್‌ಸಿ 125 ಬಿಡುಗಡೆಗೆ ಸಜ್ಜಾದ ಕೆಟಿಎಂ..!

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಅಡ್ವೆಂಚರ್ ಮತ್ತು ಟೂರರ್ ವಿಭಾಗದಲ್ಲಿನ ಬೇಡಿಕೆಯೆಂತೆ ಗರಿಷ್ಠ ಮಟ್ಟದ ವೈಶಿಷ್ಟ್ಯತೆಗಳನ್ನು ಹೊಂದಿರುವ ಹೊಸ ಬೈಕ್‌ಗಳು ಡ್ಯುಯಲ್ ಪರ್ಪಸ್ ಟೈರ್, 21-ಇಂಚಿನ ಫ್ರಂಟ್ ವೀಲ್ಹ್, 18-ಇಂಚಿನ ರಿಯರ್ ವೀಲ್ಹ್ ಸೌಲಭ್ಯ ಪಡೆದಿದ್ದು, ಫುಲ್ ಎಲ್‌ಇಡಿ ರೌಂಡ್ ಹೆಡ್‌ಲ್ಯಾಂಪ್, ಸಿಂಗಲ್ ಪೀಸ್ ಸೀಟ್, ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಗೇರ್ ಇಂಡಿಕೇಟರ್ ಗಮನಸೆಳೆಯುತ್ತವೆ.

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಹಾಗೆಯೇ ಹೊಸ ಬೈಕ್‌ಗಳಲ್ಲಿ ಸರ್ವಿಸ್ ರಿಮೆಂಡರ್, ಟರ್ನ್ ಬೈ ಟರ್ನ್ ನ್ಯಾವಿಗೇಷನ್, ಕಾಲ್ ಅಲರ್ಟ್, ಬ್ಲೂಟೂಥ್ ಕನೆಕ್ಟಿವಿಟಿ ಸೌಲಭ್ಯವಿದ್ದು, ಬೈಕ್ ಸವಾರರ ಸುರಕ್ಷತೆಗಾಗಿ ಸಿಂಗಲ್ ಚಾನೆಲ್ ಎಬಿಎಸ್, ಕನ್ವೆಷನಲ್ ಎಕ್ಸಾಸ್ಟ್, ಸಣ್ಣದಾದ ವೀಂಡ್ ಸ್ಕೀನ್, ಎರಡು ಬದಿ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್ ಮತ್ತು ಲಾಂಗ್ ಟ್ರಾವೆಲ್ ಸಸ್ಪೆಷನ್ ಅಳವಡಿಸಲಾಗಿದೆ.

MOST READ: ಹೆಲ್ಮೆಟ್‌ಗೂ ಬಂತೂ ವೈಪರ್, ಐಡಿಯಾ ಸೂಪರ್ರೋ ಸೂಪರ್..!

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಜೊತೆ ಎಕ್ಸ್‌ಟ್ರಿಮ್ 200ಎಸ್ ಬಿಡುಗಡೆ

ಈ ಮೂಲಕ ಅಡ್ವೆಂಚರ್ ಪ್ರಿಯರ ಬೇಡಿಕೆಯನ್ನು ಅತಿ ಕಡಿಮೆ ಬೆಲೆಯಲ್ಲಿ ಪೂರೈಸಲು ಯತ್ನಿಸಿರುವ ಹೀರೋ ಸಂಸ್ಥೆಯು, ಎಕ್ಸ್‌ಪಲ್ಸ್ 200 ಬೈಕ್ ಮಾದರಿಯನ್ನು 5 ವಿವಿಧ ಬಣ್ಣಗಳಲ್ಲಿ ಮತ್ತು ಎಕ್ಸ್‌ಪಲ್ಸ್ 200ಟಿ ಮಾದರಿಯನ್ನು 4 ಬಣ್ಣಗಳಲ್ಲಿ ಪರಿಚಯಿಸಿದೆ.

More from DriveSpark

Article Published On: Thursday, May 2, 2019, 11:28 [IST]
English summary
Hero Xtreme 200S Launched In India At Rs 98,500. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+