ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ಸ್ ಇಂಡಿಯಾ ಸಂಸ್ಥೆಯು ತನ್ನ ಜನಪ್ರಿಯ ಆಕ್ಟಿವಾ 125 ಸ್ಕೂಟರ್ ಮಾದರಿಯನ್ನು ಬಿಎಸ್-6 ನಿಯಮಾವಳಿಗೆ ಅನುಗುಣವಾಗಿ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಹೊಸ ಸ್ಕೂಟರ್‌‌ ಮಾದರಿಯು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮವು ಜಾರಿ ಬರುವುದು ಬಹುತೇಕ ಖಚಿತವಾಗಿದ್ದು, ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಹೊಸ ನಿಯಮಕ್ಕೆ ಅನುಗುಣವಾಗಿ ಎಂಜಿನ್ ವಿಭಾಗದಲ್ಲಿ ಭಾರೀ ಬದಲಾವಣೆ ತರುತ್ತಿವೆ. ಹೋಂಡಾ ಕೂಡಾ ಇದೇ ನಿಟ್ಟಿನಲ್ಲಿ ಬೃಹತ್ ಯೋಜನೆ ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ಆಕ್ಟಿವಾ 125 ಮಾದರಿಯನ್ನು ಹೊಸ ನಿಯಮದಂತೆ ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದ್ದು, ಅವಧಿಗೂ ಮುನ್ನವೇ ಬಿಎಸ್-6 ವಾಹನಗಳ ಮಾರಾಟವನ್ನು ಶುರು ಮಾಡಿದೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಬಿಎಸ್-4 ವೈಶಿಷ್ಟ್ಯತೆಯ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆ ಹೊಂದಿರುವ ಬಿಎಸ್-6 ಎಂಜಿನ್ ಪ್ರೇರಿತ ಆಕ್ಟಿವಾ 125 ಮಾದರಿಯು ಫ್ಯೂಲ್ ಇಂಜೆಕ್ಷಡ್ ಯುನಿಟ್ ಹೊಂದಿದ್ದು, ಹೊಸ ಸ್ಕೂಟರ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 67,490ಕ್ಕೆ ನಿಗದಿಪಡಿಸಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಹೊಸ ಆಕ್ಟಿವಾ 125 ಸ್ಕೂಟರ್ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ಡಿಸೈನ್ ಪ್ರೇರಿತ ಫ್ರಂಟ್ ಅಪಾರ್ನ್, ಎಲ್ಇಡಿ ಡಿಆರ್‌ಎಲ್ಎಸ್ ಜೊತೆ ಟರ್ನ್ ಇಂಡಿಕೇಟರ್ ನೀಡಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಹಾಗೆಯೇ ಕ್ರೋಮ್ ಡಿಸೈನ್‌ನಿಂದಾಗಿ ಹೊಸ ಸ್ಕೂಟರಿಗೆ ಮತ್ತಷ್ಟು ಪ್ರೀಮಿಯಂ ವಿನ್ಯಾಸವನ್ನು ಒದಗಿಸಿದ್ದು, ಇದು ಸ್ಕೂಟರ್ ಖರೀದಿದಾರರನ್ನು ಸೆಳೆಯಲಿದೆ. ಇದರೊಂದಿಗೆ ಬಿಎಸ್-6 ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮಾದರಿಯು ಈ ಹಿಂದಿನ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ ಎನ್ನಬಹುದು.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಎಂಜಿನ್ ಸಾಮರ್ಥ್ಯ

ಬಿಎಸ್-6 ಪ್ರೇರಿತ 124-ಸಿಸಿ ಸಿಂಗಲ್ ಸಿಲಿಂಡರ್, ಫ್ಯೂಲ್-ಇಂಜೆಕ್ಷಡ್ ಯುನಿಟ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮಾದರಿಯು 8.4-ಬಿಎಚ್‌ಪಿ ಮತ್ತು 10.54-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಹೊಸ ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಅಂದ್ರೆ ಅದು ಐಡ್ಲಿಂಗ್ ಸ್ಟಾಪ್ ಸಿಸ್ಟಂ ಸೌಲಭ್ಯ. ಹೌದು, ಹೋಂಡಾ ಸಂಸ್ಥೆಯು ಮೊದಲ ಬಾರಿಗೆ ಆಕ್ಟಿವಾ 125 ಸ್ಕೂಟರ್‌ನಲ್ಲಿ ಐಡ್ಲಿಂಗ್ ಸ್ಟಾಪ್ ಸಿಸ್ಟಂ ಬಳಕೆ ಮಾಡಿದ್ದು, ಇದು ಟ್ರಾಫಿಕ್ ದಟ್ಟಣೆಗಳಲ್ಲಿ ಇಂಧನ ವ್ಯರ್ಥವನ್ನು ತಪ್ಪಿಸಲಿದೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಟ್ರಾಫಿಕ್ ಸಿಗ್ನಲ್‌ಗಳಲ್ಲಿ 30 ಸೇಕೆಂಡ್‌ಗಿಂತ ಹೆಚ್ಚು ನಿಲುಗಡೆಯಾದಲ್ಲಿ ಐಡ್ಲಿಂಗ್ ಸ್ಟಾಪ್ ಸಿಸ್ಟಂ ಸೌಲಭ್ಯವು ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಲಿದ್ದು, ಸ್ಕೂಟರ್ ತನ್ನಷ್ಟೇ ತಾನೇ ಬಂದ್ ಆಗುತ್ತೆ. ಇದು ಟ್ರಾಫಿಕ್ ದಟ್ಟಣೆಗಳಲ್ಲಿ ಆಗುವ ಇಂಧನ ವ್ಯರ್ಥ್ಯಕ್ಕೆ ಬ್ರೇಕ್ ಹಾಕಲಿದ್ದು, ಮೈಲೇಜ್ ಪ್ರಮಾಣವನ್ನು ಹೆಚ್ಚಿಸುತ್ತೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಇನ್ನು ಹೊಸ ಆಕ್ಟಿವಾ 125 ಸ್ಕೂಟರ್‌ನಲ್ಲಿ ನೀಡಲಾಗಿರುವ ಮ್ಯಾಟೆ ಫಿನಿಷ್ ಬ್ಲ್ಯಾಕ್ ಅಲಾಯ್ ಚಕ್ರಗಳು, ಹೊರಭಾಗದಲ್ಲಿರುವ ಫ್ಯೂಲ್ ಕ್ಯಾಪ್, ಸೈಲೆಂಟ್ ಸ್ಟಾರ್ಟ್, ಸೈಡ್ ಸ್ಯಾಂಡ್ ಸೆನ್ಸಾರ್, ಎಲ್ಇಡಿ ಲೈಟಿಂಗ್, ಅನಲಾಗ್-ಡಿಜಿಟಲ್ ಕ್ಲಸ್ಟರ್ ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದೆ.

ಆಕರ್ಷಕ ಬೆಲೆಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಹೋಂಡಾ ಆಕ್ಟಿವಾ 125 ಬಿಡುಗಡೆ

ಈ ಮೂಲಕ ಸುಧಾರಿತ ಎಂಜಿನ್‌ನೊಂದಿಗೆ ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸ್ಮಾರ್ಟ್ ಆಗಿರುವ ಆಕ್ಟಿವ್ 125 ಸ್ಕೂಟರ್ ಮಾದರಿಯು ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾಗಿದ್ದು, 125 ಸಿಸಿ ವಿಭಾಗದಲ್ಲಿ ಸದ್ಯ ಹೆಚ್ಚು ಬೇಡಿಕೆ ಹೊಂದಿರುವ ಟಿವಿಎಸ್ ಎನ್‌ಟಾರ್ಕ್ 125, ಸುಜುಕಿ ಆಕ್ಸೆಸ್ 125 ಮತ್ತು ಹೀರೋ ಮ್ಯಾಸ್ಟ್ರೊ ಎಡ್ಜ್ ಸ್ಕೂಟರ್‌‌ಗಳಿಗೆ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Honda Activa 125 BS-VI Launched In India: Priced At Rs 67,490.
Story first published: Wednesday, September 11, 2019, 14:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X