ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಗುಣವಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ವಾಹನ ಮಾದರಿಗಳನ್ನು ಉನ್ನತೀಕರಿಸುತ್ತಿದ್ದು, ಹೋಂಡಾ ಮೋಟಾರ್‌ಸೈಕಲ್ ಕೂಡಾ ಬಿಎಸ್-6 ಮಾದರಿಯ ಆಕ್ಟಿವಾ 125 ಸ್ಕೂಟರ್ ಮತ್ತು ಎಸ್‌ಪಿ 125 ಬೈಕ್ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ದಾಖಲೆ ಪ್ರಮಾಣದ ಬೇಡಿಕೆ ಪಡೆದುಕೊಂಡಿದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಬಿಎಸ್-6 ನಿಯಮಾವಳಿಗೆ ಹೊಸ ಆಕ್ಟಿವಾ 125 ಸ್ಕೂಟರ್‌ ಮತ್ತು ಎಸ್‌ಪಿ 125 ಬೈಕ್‌ ಮಾದರಿಯು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ವಾಹನಗಳ ಖರೀದಿಗೆ ಈಗಾಗಲೇ ಸಾವಿರಾರು ಗ್ರಾಹಕರು ಬುಕ್ಕಿಂಗ್ ಮಾಡಿದ್ದಾರೆ. ಇದುವರೆಗೆ ಸುಮಾರು 60 ಸಾವಿರ ಯುನಿಟ್(ನವೆಂಬರ್ ಅಂತ್ಯಕ್ಕೆ) ಬಿಎಸ್-6 ಆವೃತ್ತಿಗಳು ಮಾರಾಟವಾಗಿದ್ದು, ವರ್ಷಾಂತ್ಯಕ್ಕೆ 1 ಲಕ್ಷ ಯುನಿಟ್ ಮಾರಾಟ ಗುರಿಹೊಂದಿದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಬಿಎಸ್-6 ನಿಯಮ ಅನ್ವಯ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಹೊಸ ಎಂಜಿನ್ ವಿಭಾಗದಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಹೋಂಡಾ ಕೂಡಾ ಇದೇ ನಿಟ್ಟಿನಲ್ಲಿ ಬೃಹತ್ ಯೋಜನೆ ಚಾಲನೆ ನೀಡಿರುವುದಲ್ಲದೇ ಮೊದಲ ಹಂತದಲ್ಲಿ ಆಕ್ಟಿವಾ 125 ಮತ್ತು ಎಸ್‌ಪಿ 125 ಬಿಡುಗಡೆ ಮಾಡಿದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಬಿಎಸ್-4 ವೈಶಿಷ್ಟ್ಯತೆಯ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆ ಹೊಂದಿರುವ ಬಿಎಸ್-6 ಎಂಜಿನ್ ಪ್ರೇರಿತ ಆಕ್ಟಿವಾ 125 ಮಾದರಿಯು ಫ್ಯೂಲ್ ಇಂಜೆಕ್ಷಡ್ ಯುನಿಟ್ ಹೊಂದಿದ್ದು, ಹೊಸ ಸ್ಕೂಟರ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 67,490ಕ್ಕೆ ನಿಗದಿಪಡಿಸಲಾಗಿದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಹಾಗೆಯೇ ಎಸ್‌ಪಿ 125 ಬೈಕ್ ಮಾದರಿಯು ಸಹ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಡ್ರಮ್ ಹಾಗೂ ಡಿಸ್ಕ್ ಎಂಬ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರುವ ಎಸ್‍‍ಪಿ 125 ಬೈಕ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.77,100 ಬೆಲೆ ಪಡೆದುಕೊಂಡಿದೆ. ಎಸ್‌ಪಿ 125 ಬೈಕಿನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 7,500 ಆರ್‌ಪಿಎಂನಲ್ಲಿ 10.7 ಬಿಹೆಚ್‌ಪಿ ಪವರ್ ಹಾಗೂ 9,000 ಆರ್‌ಪಿಎಂನಲ್ಲಿ 10.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಇನ್ನು ಆಕ್ಟಿವಾ 125 ಸ್ಕೂಟರ್ ವಿನ್ಯಾಸದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಹೊಸ ಡಿಸೈನ್ ಪ್ರೇರಿತ ಫ್ರಂಟ್ ಅಪಾರ್ನ್, ಎಲ್ಇಡಿ ಡಿಆರ್‌ಎಲ್ಎಸ್ ಜೊತೆ ಟರ್ನ್ ಇಂಡಿಕೇಟರ್ ನೀಡಲಾಗಿದೆ. ಹಾಗೆಯೇ ಕ್ರೋಮ್ ಡಿಸೈನ್‌ನಿಂದಾಗಿ ಹೊಸ ಸ್ಕೂಟರಿಗೆ ಮತ್ತಷ್ಟು ಪ್ರೀಮಿಯಂ ವಿನ್ಯಾಸವನ್ನು ಒದಗಿಸಿದ್ದು, ಇದು ಸ್ಕೂಟರ್ ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಇದರೊಂದಿಗೆ ಬಿಎಸ್-6 ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮತ್ತು ಎಸ್‌ಪಿ 125 ಬೈಕ್ ಮಾದರಿಯು ಈ ಹಿಂದಿನ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಎಂಜಿನ್ ಪರ್ಫಾಮೆನ್ಸ್‌ನೊಂದಿಗೆ ಇಂಧನ ಕಾರ್ಯಕ್ಷಮತೆಯಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ ಎನ್ನಬಹುದು.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಆಕ್ಟಿವಾ 125 ಸ್ಕೂಟರ್ ಮಾದರಿಯು ಬಿಎಸ್-6 ಪ್ರೇರಿತ 124-ಸಿಸಿ ಸಿಂಗಲ್ ಸಿಲಿಂಡರ್, ಫ್ಯೂಲ್-ಇಂಜೆಕ್ಷಡ್ ಯುನಿಟ್ ಹೊಂದಿರುವ ಆಕ್ಟಿವಾ 125 ಸ್ಕೂಟರ್ ಮಾದರಿಯು 8.4-ಬಿಎಚ್‌ಪಿ ಮತ್ತು 10.54-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಹೊಸ ಎಂಜಿನ್ ಹೊಂದಿರುವ ಆಕ್ಟಿವಾ 125 ಸ್ಕೂಟರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಅಂದ್ರೆ ಅದು ಐಡ್ಲಿಂಗ್ ಸ್ಟಾಪ್ ಸಿಸ್ಟಂ ಸೌಲಭ್ಯ. ಹೌದು, ಹೋಂಡಾ ಸಂಸ್ಥೆಯು ಮೊದಲ ಬಾರಿಗೆ ಆಕ್ಟಿವಾ 125 ಸ್ಕೂಟರ್‌ನಲ್ಲಿ ಐಡ್ಲಿಂಗ್ ಸ್ಟಾಪ್ ಸಿಸ್ಟಂ ಬಳಕೆ ಮಾಡಿದ್ದು, ಇದು ಟ್ರಾಫಿಕ್ ದಟ್ಟಣೆಗಳಲ್ಲಿ ಇಂಧನ ವ್ಯರ್ಥವನ್ನು ತಪ್ಪಿಸಲಿದೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ಟ್ರಾಫಿಕ್ ಸಿಗ್ನಲ್‌ಗಳಲ್ಲಿ 30 ಸೇಕೆಂಡ್‌ಗಿಂತ ಹೆಚ್ಚು ನಿಲುಗಡೆಯಾದಲ್ಲಿ ಐಡ್ಲಿಂಗ್ ಸ್ಟಾಪ್ ಸಿಸ್ಟಂ ಸೌಲಭ್ಯವು ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಲಿದ್ದು, ಸ್ಕೂಟರ್ ತನ್ನಷ್ಟೇ ತಾನೇ ಬಂದ್ ಆಗುತ್ತೆ. ಇದು ಟ್ರಾಫಿಕ್ ದಟ್ಟಣೆಗಳಲ್ಲಿ ಆಗುವ ಇಂಧನ ವ್ಯರ್ಥವಾಗುವುದಕ್ಕೆ ಬ್ರೇಕ್ ಹಾಕಲಿದ್ದು, ಮೈಲೇಜ್ ಪ್ರಮಾಣವನ್ನು ಹೆಚ್ಚಿಸುತ್ತೆ.

ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ದ್ವಿಚಕ್ರ ವಾಹನ ಮಾರಾಟದಲ್ಲಿ ಹೋಂಡಾ ಹೊಸ ಮೈಲಿಗಲ್ಲು

ವಿಶೇಷ ಅಂದ್ರೆ, ಹೊಸ ಆಕ್ಟಿವಾ 125 ಸ್ಕೂಟರ್‌ನಲ್ಲಿ ನೀಡಲಾಗಿರುವ ಮ್ಯಾಟೆ ಫಿನಿಷ್ ಬ್ಲ್ಯಾಕ್ ಅಲಾಯ್ ಚಕ್ರಗಳು, ಹೊರಭಾಗದಲ್ಲಿರುವ ಫ್ಯೂಲ್ ಕ್ಯಾಪ್, ಸೈಲೆಂಟ್ ಸ್ಟಾರ್ಟ್, ಸೈಡ್ ಸ್ಯಾಂಡ್ ಸೆನ್ಸಾರ್, ಎಲ್ಇಡಿ ಲೈಟಿಂಗ್, ಅನಲಾಗ್-ಡಿಜಿಟಲ್ ಕ್ಲಸ್ಟರ್ ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದೆ.

Most Read Articles

Kannada
English summary
Honda Activa and Shine SP 125 BS-6 sales cross 60,000 units. Read more in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X