Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೇ ತಿಂಗಳಿನಲ್ಲಿ ಮಾರಾಟವಾದ ಹೋಂಡಾ ಸಿಬಿ300ಆರ್ ಬೈಕ್ ಎಷ್ಟು ಗೊತ್ತಾ.?
ಹೋಂಡಾ ಸಂಸ್ಥೆಯು ತಮ್ಮ ಹೊಸ ಸಿಬಿ300ಆರ್ ಬೈಕ್ ಅನ್ನು ಇದೇ ವರ್ಷದ ಫೆಬ್ರುವರಿ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆಯುತ್ತಿದೆ. ಈ ಬಿಡುಗಡೆಯ ಅವಧಿಯಲ್ಲಿ ಸಂಸ್ಥೆಯು ಮೂರು ತಿಂಗಳಿಗೆ ಆಗುವಷ್ಟು ಬುಕ್ಕಿಂಗ್ ಪಡೆದಿರುವುದಾಗಿ ಹೇಳಿಕೊಂಡಿತ್ತು.

ಸಂಸ್ಥೆಯು ಹೋಂಡಾ ಸಿಬಿ300ಆರ್ ಬೈಕ್ ಬಿಡುಗಡೆಗೊಂಡಾಗಿನಿಂದಲೂ ಒಟ್ಟಾರೆಯಾಗಿ ಎಷ್ಟು ಬೈಕ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು ಬಹಿರಂಗಪಡಿಸಲಿಲ್ಲವಾದರೂ, 3 ತಿಂಗಳಿಗೆ ಆಗುವಷ್ಟು ಬುಕ್ಕಿಂಗ್ ಪಡೆದಿರುವುದಾಗಿ ಮತ್ತು ಈ ಬೈಕಿನ ಉತ್ಪಾದನೆಯ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವುದಾಗಿ ಹೇಳಿಕೊಂಡಿತ್ತು. ಆದರೆ ರಶ್‍ಲೇನ್ ವರದಿಯ ಪ್ರಕಾರ ಏಪ್ರಿಲ್-ಮೇ ತಿಂಗಳಿನಲ್ಲಿ ಸುಮಾರು 130ಕ್ಕು ಹೆಚ್ಚಿನ ಸಂಖ್ಯೆಯಲ್ಲಿ ಈ ಬೈಕ್‍ಗಳು ಮಾರಾಟಗೊಂಡಿದೆ ಎನ್ನಲಾಗಿದೆ.

ಈ ಬೈಕ್ ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 2.41 ಲಕ್ಷದ ಬೆಲೆಯನ್ನ ನಿಗದಿ ಮಾಡಲಾಗಿದೆ. ಈ ಬೈಕ್ ಹೋಂಡಾ ಸಂಸ್ಥೆಯ ಮೊದಲ 300ಸಿಸಿ ಮೋಟಾರ್‍ಸೈಕಲ್ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ.
ಬಿಡುಗಡೆಗೊಂಡು ಸುಮಾರು 2 ತಿಂಗಳುಗಳ ನಂತರ ಹೋಂಡಾ ಡೀಲರ್‍ಗಳು ಈ ಬೈಕಿನ ವಿತರಣೆಯನ್ನು ಶುರು ಮಾಡಲಾಗಿದ್ದು, ಇಷ್ಟೆ ಅಲ್ಲದೇ ದುಬಾರಿ ಬೆಲೆಯ ನಿಯೋ ಸ್ಪೋಟ್ ಬೈಕ್ ಪ್ರೇರಣೆಯೊಂದಿಗೆ ಅಭಿವೃದ್ದಿ ಹೊಂದಿರುವ ಸಿಬಿ300ಆರ್ ಬೈಕ್ ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭಗೊಂಡಿದ್ದು, ಭಾರತದಲ್ಲಿರುವ ಕೆಲವೇ ಕೆಲವು ಹೋಂಡಾ ಡೀಲರ್ಸ್ ಬಳಿ ಸಿಬಿ300ಆರ್ ಬೈಕ್ ಖರೀದಿಗಾಗಿ ರೂ. 5,000 ಮುಂಗಡವಾಗಿ ನೀಡಿ ಬುಕ್ಕಿಂಗ್ ಮಾಡಬಹುದಾಗಿದೆ.

ಎಂಟ್ರಿ ಲೆವಲ್ ಪರ್ಫಾಮೆನ್ಸ್ ಬೈಕ್ ಖರೀದಿ ಮಾಡುವ ಗ್ರಾಹಕರಿಗೆ ಇದೊಂದು ಉತ್ತಮ ಆಯ್ಕೆಯಾಗುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, 250ಸಿಸಿ ಮೇಲ್ಪಟ್ಟ ಬೈಕ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯೇ ಈ ಹೊಸ ಬೈಕ್ ಪರಿಚಯಿಸುತ್ತಿರುವ ಪ್ರಮುಖ ಕಾರಣವಾಗಿದೆ.

ಹೋಂಡಾ ಸಿಬಿ 300ಆರ್ ಬೈಕ್ ಸ್ಪೋರ್ಟಿ ವಿನ್ಯಾಸವನ್ನು ಪಡೆದುಕೊಂಡಿದೆ. ಈ ಬೈಕಿನಲ್ಲಿ ರೆಟ್ರೋ ಮಾದರಿಯ ವೃತ್ತಾಕಾರದ ಎಲ್ಇಡಿ ಹೆಡ್‍ಲ್ಯಾಂಪ್ಸ್, ಪೆಟಲ್ ಡಿಸ್ಕ್ ಬ್ರೇಕ್ಸ್, 5 ಟ್ವಿನ್ ಸ್ಪೋಕ್ ಅಲಾಯ್ ವ್ಹೀಲ್ಸ್ ಮತ್ತು ಆಕ್ರಮಣಕಾರಿ ವಿನ್ಯಾಸವನ್ನು ಪಡೆದಿರುವ ಪ್ಯುಯಲ್ ಟ್ಯಾಂಕ್ ಅನ್ನು ನೀಡಲಾಗಿದೆ.

ಈ ಬೈಕ್ ಸೆಗ್ಮೆಂಟ್‍ನಲ್ಲಿ ಅತೀ ಕಡಿಮೆ ತೂಕವನ್ನು ಹೊಂದಿರುವ ಬೈಕ್ ಇದಾಗಿದ್ದು, ಹೋಂಡಾ ಸಿಬಿ 300ಆರ್ ಬೈಕ್ ಸುಮಾರು 143 ಕಿಲೋಗ್ರಾಂನ ತೂಕವನ್ನು ಹೊಂದಿದೆ. ಇಷ್ಟೆ ಅಲ್ಲದೇ ಈ ಬೈಕಿನ ಹಿಂಭಾಗದಲ್ಲಿ ಸಾಧಾರಣವಾದ ಟೈಲ್ ಲ್ಯಾಂಪ್ಸ್ ಮತ್ತು ಟರ್ನ್ ಇಂಡಿಕೇಟರ್ ಸೇಟಪ್ ಅನ್ನು ಒದಗಿಸಲಾಗಿದೆ.

ಎಂಜಿನ್ ಸಾಮರ್ಥ್ಯ
286ಸಿಸಿ ಲಿಕ್ವಿಡ್ ಕೂಲ್ಡ್, ಫ್ಯೂಲ್ ಇಂಜೆಕ್ಷೆಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂಂದಿರುವ ಸಿಬಿ300ಆರ್ ಬೈಕ್‌ಗಳು 31.4-ಬಿಎಚ್‌ಪಿ ಮತ್ತು 27.5-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಸಿಂಗಲ್ ಪೀಸ್ ಹ್ಯಾಂಡಲ್ ಬಾರ್‌ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್ ಪಡೆದಿದೆ.

ಜೊತೆಗೆ ಸುರಕ್ಷೆತೆಗಾಗಿ ಎಬಿಎಸ್ ಟೆಕ್ನಾಲಜಿ ಪಡೆದಿರುವ ಸಿಬಿ300ಆರ್ ಬೈಕ್‌ಗಳು ಮುಂಭಾಗದಲ್ಲಿ 41ಎಂಎಂ ಅಪ್ ಸೈಡ್ ಡೌನ್ ಫೋಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ ಶಾರ್ಕ್ ಸಸ್ಷೆನ್ ಜೋಡಣೆಯಿದ್ದು, ರೆಟ್ರೋ ಡಿಸೈನ್‌ನೊಂದಿಗೆ ಮಾರ್ಡನ್ ಟೆಕ್ನಾಲಜಿ ಪ್ರೇರಣೆ ಹೊಂದಿದೆ.

ಆಕರ್ಷಕವಾದ ವಿನ್ಯಾಸವನ್ನು ಪಡೆದುಕೊಂಡಿರುವ ಹೊಸ ಹೋಂಡಾ ಸಿಬಿ 300ಆರ್ ಬೈಕ್‍ಗಳು ಈಗಾಗಲೆ ಮಾರಾಟಗೊಳ್ಳುತ್ತಿರುವ ಕೆಟಿಎಂ ಡ್ಯೂಕ್ 3390, ಕವಾಸಕಿ ನಿಂಜಾ 400 ಮತ್ತು ಯಮಹಾ ಜೆಡ್ಎಫ್-ಆರ್3 ಬೈಕ್‍ಗಳಿಗೆ ಟಾಂಗ್ ನೀಡಲಿದೆ.