ಅಂತೂ ಇಂತೂ ನಾಲ್ಕು ತಿಂಗಳ ನಂತರ ಗ್ರಾಹಕರ ಸೇರುತ್ತಿವೆ ಜಾವಾ ಹೊಸ ಬೈಕ್

ಕಳೆದ ನವೆಂಬರ್‌ನಲ್ಲಿ ಬಿಡುಗಡೆಯಾಗಿರುವ ಜಾವಾ ಹೊಸ ಮೋಟಾರ್‌ಸೈಕಲ್‌ಗಳ ಖರೀದಿಗಾಗಿ ಗ್ರಾಹಕರು ಎದರು ನೋಡುತ್ತಿದ್ದು, ಅಂತೂ ಇಂತೂ ನಾಲ್ಕು ತಿಂಗಳು ನಂತರ ಹೊಸ ಬೈಕ್‌ಗಳು ಗ್ರಾಹಕರ ಕೈ ಸೇರಲು ಸಜ್ಜಾಗುತ್ತಿವೆ. ಈ ಬಗ್ಗೆ ಜಾವಾ ಸಂಸ್ಥೆಯೇ ಅಧಿಕೃತ ಮಾಹಿತಿ ನೀಡಿದ್ದು, ಮಾರ್ಚ್ 3ನೇ ವಾರ ಇಲ್ಲವೇ 4ನೇ ವಾರದಲ್ಲಿ ಬೈಕ್ ವಿತರಣೆ ಆರಂಭವಾಗಲಿದೆ ಎಂದಿದೆ.

ಅಂತೂ ಇಂತೂ ನಾಲ್ಕು ತಿಂಗಳ ನಂತರ ಗ್ರಾಹಕರ ಸೇರುತ್ತಿದೆ ಜಾವಾ ಹೊಸ ಬೈಕ್

ಸದ್ಯ ಜಾವಾ ಬೈಕ್ ಖರೀದಿಗಾಗಿ ಲಕ್ಷಾಂತರ ಗ್ರಾಹಕರು ರೂ.5 ಸಾವಿರ ನೀಡಿ ಬುಕ್ಕಿಂಗ್ ಮಾಡಿ ಹೊಸ ಬೈಕ್ ಖರೀದಿಗಾಗಿ ಕಾಯ್ದುಕುಳಿತಿದ್ದು, ಮುಂದಿನ ಸೆಪ್ಟೆಂಬರ್ ಅವಧಿಯ ತನಕವು ಬುಕ್ಕಿಂಗ್ ಪ್ರಕ್ರಿಯೆಯು ಭರ್ತಿಯಾಗಿದೆ. ಹೀಗಾಗಿ ಮೊದಲ ಬಾರಿಗೆ ಬುಕ್ಕಿಂಗ್ ಮಾಡಿದ ಕೆಲವೇ ಗ್ರಾಹಕರಿಗೆ ಇದೀಗ ಹೊಸ ಬೈಕ್ ವಿತರಣೆಯಾಗುತ್ತಿದ್ದು, ಪೂರ್ಣ ಪ್ರಮಾಣದ ವಿತರಣೆಗೆ ಇನ್ನು ಐದರಿಂದ ಆರು ತಿಂಗಳ ಕಾಲ ಕಾಯಲೇಬೇಕಾದ ಅನಿವಾರ್ಯತೆಗಳಿವೆ.

ಅಂತೂ ಇಂತೂ ನಾಲ್ಕು ತಿಂಗಳ ನಂತರ ಗ್ರಾಹಕರ ಸೇರುತ್ತಿದೆ ಜಾವಾ ಹೊಸ ಬೈಕ್

ಇನ್ನು ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಯಶಸ್ವಿಯಾಗಿದೆ.

ಅಂತೂ ಇಂತೂ ನಾಲ್ಕು ತಿಂಗಳ ನಂತರ ಗ್ರಾಹಕರ ಸೇರುತ್ತಿದೆ ಜಾವಾ ಹೊಸ ಬೈಕ್

ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಒಟ್ಟು ಮೂರು ಹೊಸ ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್‌ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಪೆರಾಕ್ ಎನ್ನುವ ಕಸ್ಟಮ್ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದೆ. ಇನ್ನು ಹೊಸ ಬೈಕ್‌ಗಳ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೆಟ್ರೋ ಜಾವಾ ಮಾದರಿಗೆ ರೂ. 1.64 ಲಕ್ಷ, ಜಾವಾ 42 ಮಾದರಿಗೆ ರೂ. 1.55 ಲಕ್ಷ ಮತ್ತು ಅನಾವರಣ ಮಾಡಲಾದ ಜಾವಾ ಪೆರಾಕ್ ಬೈಕಿಗೆ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.

ಅಂತೂ ಇಂತೂ ನಾಲ್ಕು ತಿಂಗಳ ನಂತರ ಗ್ರಾಹಕರ ಸೇರುತ್ತಿದೆ ಜಾವಾ ಹೊಸ ಬೈಕ್

ಎಂಜಿನ್ ಸಾಮರ್ಥ್ಯ

ಜಾವಾ ಮತ್ತು ಜಾವಾ 42 ಬೈಕ್‌ಗಳು 293ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 27ಬಿಹೆಚ್‍ಪಿ ಮತ್ತು 28ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇದರಲ್ಲಿ ಬಾಬರ್ ವಿನ್ಯಾಸದ ಜಾವಾ ಪೆರಾಕ್ ಬೈಕ್ ಮಾದರಿಯು 334ಸಿಸಿ ಎಂಜಿನ್ ಪಡೆದುಕೊಂಡಿದ್ದು, ಬಿಎಸ್ 6 ಎಂಜಿನ್ ಪ್ರೇರಣೆಯೊಂದಿಗೆ 30 ಬಿಎಚ್‌ಪಿ ಮತ್ತು 31 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿರಲಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಅಂತೂ ಇಂತೂ ನಾಲ್ಕು ತಿಂಗಳ ನಂತರ ಗ್ರಾಹಕರ ಸೇರುತ್ತಿದೆ ಜಾವಾ ಹೊಸ ಬೈಕ್

ಈ ಮೂಲಕ ರಾಯಲ್ ಎನ್‌ಫೀಲ್ಡ್ ಸಂಸ್ಥೆಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಜಾವಾ ಸಂಸ್ಥೆಯು ಬೈಕ್ ವಿತರಣೆಗೆ ಚಾಲನೆ ನೀಡುವುದಕ್ಕೂ ಮುನ್ನ ಮತ್ತಷ್ಟು ಬೈಕ್ ಮಾರಾಟ ಮಳಿಗೆಗಳನ್ನು ತೆರೆಯುವ ಇರಾದೆಯಲ್ಲಿದ್ದು, ಆರ್‌ಇ ಬೈಕ್ ಪ್ರಿಯರನ್ನು ತನ್ನತ್ತ ಸೆಳೆಯಲು ಹಲವು ಯೋಜನೆಗಳನ್ನು ರೂಪಿಸಿರುವುದು ಗ್ರಾಹಕರ ಆಕರ್ಷಣೆ ಕಾರಣವಾಗಿದೆ.

More from DriveSpark

Article Published On: Wednesday, March 13, 2019, 10:56 [IST]
English summary
Jawa deliveries official announcement. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+