Just In
- 5 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಕ್ಲಾಸಿಕ್ ಬೈಕ್ಗಳಿಗೆ ವಿನೂತನ ಆಕ್ಸ್ಸರಿಸ್ ಬಿಡುಗಡೆ ಮಾಡಿದ ಜಾವಾ
2018ರ ನವೆಂಬರ್ನಲ್ಲಿ ಬಿಡುಗಡೆಯಾಗಿದ್ದ ಜಾವಾ ಹೊಸ ಮೋಟಾರ್ಸೈಕಲ್ಗಳು ಬರೋಬ್ಬರಿ ಆರು ತಿಂಗಳು ನಂತರ ಗ್ರಾಹಕರ ಕೈಸೇರುತ್ತಿದ್ದು, ಜಾವಾ ಸಂಸ್ಥೆಯು ತನ್ನ ಜನಪ್ರಿಯ ಕ್ಲಾಸಿಕ್ ಜಾವಾ ಮತ್ತು ಜಾವಾ 42 ಬೈಕ್ ಮಾದರಿಗಳಿಗಾಗಿ ಗ್ರಾಹಕರ ಬೇಡಿಕೆ ಅನ್ವಯ ವಿನೂತನ ಆಕ್ಸ್ಸರಿಸ್ಗಳನ್ನು ಬಿಡುಗಡೆ ಮಾಡಿದೆ.
ಜಾವಾ ಬೈಕ್ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಯಶಸ್ವಿಯಾಗಿದೆ.
ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಒಟ್ಟು ಮೂರು ಹೊಸ ಬೈಕ್ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಪೆರಾಕ್ ಎನ್ನುವ ಕಸ್ಟಮ್ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದೆ.
ಇನ್ನು ಹೊಸ ಬೈಕ್ಗಳ ಬೆಲೆಯನ್ನು ದೆಹಲಿ ಎಕ್ಸ್ಶೋರೂಂ ಪ್ರಕಾರ ರೆಟ್ರೋ ಜಾವಾ ಮಾದರಿಗೆ ರೂ. 1.64 ಲಕ್ಷ, ಜಾವಾ 42 ಮಾದರಿಗೆ ರೂ. 1.55 ಲಕ್ಷ ಮತ್ತು ಅನಾವರಣ ಮಾಡಲಾದ ಜಾವಾ ಪೆರಾಕ್ ಬೈಕಿಗೆ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ. ಇದರ ಹೊರತಲಾಗಿ ಗ್ರಾಹಕರು ತಮ್ಮ ಹೊಸ ಬೈಕ್ಗಳಿಗೆ ಹೆಚ್ಚುವರಿ ದರ ಪಾವತಿಸಿ ಬೇಡಿಕೆ ಅನ್ವಯ ಆಕ್ಸ್ಸರಿಸ್ ಪಡೆದುಕೊಳ್ಳಬಹುದಾಗಿದೆ.
ಜಾವಾ ಮತ್ತು ಜಾವಾ 42 ಬೈಕ್ ಆಕ್ಸ್ಸರಿಸ್ ಮತ್ತು ಬೆಲೆಗಳು
ಆಕ್ಸ್ಸರಿಸ್ಗಳು | ಬೆಲೆಗಳು |
ಸ್ಟ್ಯಾಂಡರ್ಡ್ ಗ್ರಾಬ್ ರೈಲ್ | ರೂ. 399 |
ಲಗೇಜ್ ರಾಕ್ | ರೂ. 599 |
ದ ಗಾರ್ಡಿಯನ್ ಹಾಲೋ(ಗ್ರಾಬ್ರೈಲ್) | ರೂ. 749 |
ಮ್ಯಾಟೆ ಸೀಟ್ ಸ್ಪಾಯ್ಲರ್ | ರೂ. 999 |
ಬ್ಲ್ಯಾಕ್ ರೆಸ್ಟ್ | ರೂ. 999 |
ಬಾರ್ ಅಂಡ್ ಮೀರರ್ | ರೂ. 1,499 |
ಕ್ರ್ಯಾಶ್ ಗಾರ್ಡ್ ಮ್ಯಾಟೆ | ರೂ. 1,499 |
ಕ್ರ್ಯಾಶ್ ಗಾರ್ಡ್ ಕ್ರೋಮ್ | ರೂ. 1,599 |
ರೈಡಿಂಗ್ ಸಾಮಗ್ರಿಗಳು ಮತ್ತು ಬೆಲೆಗಳು
ರೈಡಿಂಗ್ ಸಾಮಗ್ರಿಗಳು | ಬೆಲೆಗಳು |
ಸೀಸನ್ 1 ಟಿ-ಶರ್ಟ್ |
ರೂ.
899
|
ಕೊನೊರಾ
ಹೆಲ್ಮೆಟ್
ಜೊತೆ
ವಿಜರ್
|
ರೂ.
2,349
|
ಹಾಲೊ
ಹೆಲ್ಮೆಟ್
ಜೊತೆ
ವಿಜರ್
|
ರೂ.
2,349
|
ಗ್ರಿಟಿ
ಗಾಂಟ್ಲೆಟ್
ಗ್ಲೋಲ್ಸ್
|
ರೂ.
2,499
|
ಅರ್ಬನ್
ಎನ್ಡ್ಯೂರ್
ಸ್ಟೆಲ್ತ್
ಜಾಕೆಟ್
|
ರೂ.
7,499
|
ಎಂಜಿನ್ ಸಾಮರ್ಥ್ಯ
ಜಾವಾ ಮತ್ತು ಜಾವಾ 42 ಬೈಕ್ಗಳು 293ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 27ಬಿಹೆಚ್ಪಿ ಮತ್ತು 28ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಇದರಲ್ಲಿ ಬಾಬ್ಬರ್ ವಿನ್ಯಾಸದ ಜಾವಾ ಪೆರಾಕ್ ಬೈಕ್ ಮಾದರಿಯು 334ಸಿಸಿ ಎಂಜಿನ್ ಪಡೆದುಕೊಂಡಿದ್ದು, ಬಿಎಸ್ 6 ಎಂಜಿನ್ ಪ್ರೇರಣೆಯೊಂದಿಗೆ 30 ಬಿಎಚ್ಪಿ ಮತ್ತು 31 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿರಲಿದೆ. ಇದು ಜಾವಾ ಸಂಸ್ಥೆಯಿಂದಲೇ ಮಾಡಿಫೈಗೊಂಡ ಮೊದಲ ಬೈಕ್ ಮಾದರಿಯಾಗಿದ್ದು, ಇದೇ ವರ್ಷ ಸೆಪ್ಟೆಂಬರ್ ಅಥವಾ ಅಕ್ಟೋಬರ್ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
MOST READ: ಕಾರು ಖರೀದಿಸಲು ಬಂದ ಮಹಿಳೆ ಮಾಡಿದ ಎಡವಟ್ಟಿನಿಂದ ಡೀಲರ್ಸ್ ಕಕ್ಕಾಬಿಕ್ಕಿ
ಈ ಮೂಲಕ ರಾಯಲ್ ಎನ್ಫೀಲ್ಡ್ ಸಂಸ್ಥೆಗೆ ಭರ್ಜರಿ ಪೈಪೋಟಿ ನೀಡಲು ಸಜ್ಜಾಗಿರುವ ಜಾವಾ ಸಂಸ್ಥೆಯು ಬೈಕ್ ವಿತರಣೆಯೊಂದಿಗೆ ಮತ್ತಷ್ಟು ಬೈಕ್ ಮಾರಾಟ ಮಳಿಗೆಗಳನ್ನು ತೆರೆಯುವ ಇರಾದೆಯಲ್ಲಿದ್ದು, ಆರ್ಇ ಬೈಕ್ ಪ್ರಿಯರನ್ನು ತನ್ನತ್ತ ಸೆಳೆಯಲು ಹಲವು ಯೋಜನೆಗಳನ್ನು ರೂಪಿಸಿದೆ.