ಇನ್ನು ಹೆಚ್ಚಳವಾಗುತ್ತಿರುವ ಜಾವಾ ಬೈಕ್‍ಗಳ ಕಾಯುವಿಕೆಯ ಅವಧಿ - ಎಷ್ಟು ತಿಂಗಳು ಕಾಯಬೇಕು ಗೊತ್ತಾ.?
ಅದು ನವೆಂಬರ್ 15, 2019 ದಶಕಗಳ ಹಿಂದೆ ಮೋಟಾರ್‍ಸೈಕಲ್ ವಿಭಾಗದಲ್ಲಿ ಹೆಚ್ಚಿನ ಜನಪ್ರೀಯತೆಯನ್ನು ಪಡೆದಿದ್ದ ಜಾವಾ ಬೈಕ್‍ಗಳು ಮತ್ತೆ ದೇಶಿಯ ಮರುಕಟ್ಟೆಗೆ ಎಂಟ್ರಿ ಕೊಟ್ಟಿತ್ತು. ಅಂದಿನಿಂಡಲೂ ಈ ಬೈಕಿನ ದರ್ಬಾರನ್ನು ಕಂಡ ಹಲವಾರು ಮಂದಿ ಈ ಬೈಕಿನ ಬಿಡುಗಡೆಗಾಗಿಯೇ ಕಾಯುತ್ತಿದ್ದರೆ. ಒಟ್ಟಿನಲ್ಲಿ ಗ್ರಾಹಕರ ಬೇಡಿಕೆಯಂಟೆ ಜಾವಾ ಮೋಟಾರ್‍ಸೈಕಲ್ಸ್ ಸಂಸ್ಥೆಯು ಮತ್ತೆ ಮಾರುಕಟ್ಟೆಗೆ ರೀ ಎಂಟ್ರಿ ಕೊಟ್ಟಿತ್ತು.

ಸಧ್ಯ ಮಾರುಕಟ್ಟೆಯಲ್ಲಿರುವ ರಾಯಲ್ ಎನ್‍ಫೀಲ್ಡ್ ಸಂಸ್ಥೆಯಲ್ಲಿರುವ 350ಸಿಸಿ ಬೈಕ್‍ಗಳಿಗೆ ಟಕ್ಕರ್ ನೀಡುತ್ತಿರುವ ಜಾವಾ ಮತ್ತು ಜಾವಾ 42 ಬೈಕ್‍ಗಳ ಬೇಡಿಕೆಯು ಹೆಚ್ಚುತ್ತಿದ್ದು, ಬುಕ್ಕಿಂಗ್ ಮಾಡಿಕೊಂಡ ಕೆಲ ಗ್ರಾಹಕರು ಈ ಬೈಕಿನ ಕಾಯುವಿಕೆಯ ಅವಧಿಯನ್ನು ಕೇಳಿ ಬುಕ್ಕಿಂಗ್ ಅನ್ನು ಸಹ ಕ್ಯಾನ್ಸಲ್ ಮಾಡಿಕೊಳ್ಳುತ್ತಿದ್ದಾರೆ. ಏಕಂದರೆ ಬೈಕ್ ದೇಖೋ ವರದಿಗಳ ಪ್ರಕಾರ ಸುಮಾರು 10ತಿಂಗಳ ವರೆಗು ಈ ಬೈಕ್‍ಗಳ ಕಾಯುವಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಜಾವಾ ಮತ್ತು ಜಾವಾ 42 ಬೈಕ್‍ಗಳ ಕಾಯುವಿಕೆಯ ಅವಧಿ
ನವದೆಹಲಿ - 8 ತಿಂಗಳು
ಬೆಂಗಳೂರು - 8 ತಿಂಗಳು
ಮುಂಬೈ - 7 ತಿಂಗಳು
ಹೈದೆರಾಬಾದ್ - 9 ತಿಂಗಳು
ಪೂಣೆ - 10 ತಿಂಗಳು
ಚೆನ್ನೈ - 9 ತಿಂಗಳು
ಕೋಲ್ಕತ್ತಾ - 7 ತಿಂಗಳು

ಬುಕ್ಕಿಂಗ್ ಮಾದಿಕೊಂಡ ಗ್ರಾಹಕರು ಸುಮಾರು 8 ರಿಂದ 10 ತಿಂಗಳ ವರೆಗೂ ಕಾಯಲೇಬೇಕಿದ್ದು, ನಿಮ್ಮ ಕೈಗೆ 2020ರ ಫೆಬ್ರುವರಿಯಲ್ಲಿ ದೊರಯಬಹುದು ಎಂದು ಊಹಿಸಲಾಗುತ್ತಿದೆ. ಇಷ್ಟರಲ್ಲಿ ಅಪ್ಡೇಟೆಡ್ ರಾಯಲ್ ಎನ್‍ಫೀಲ್ಡ್ 350 ಬೈಕ್ ಬಿಡುಗಡೆಗೊಳಿಸುವ ಯೋಜನೆಯಲ್ಲಿ ಆರ್‍ಇ ಸಂಸ್ಥೆ ಇದೆ. ಮತ್ತೆ ಜಾವಾ ಸಂಸ್ಥೆಯು ಜೂನ್ ತಿಂಗಳ ಕೊನೆಯ ವಾರದಿಂದ ತಮ್ಮ ಡ್ಯುಯಲ್ ಚಾನಲ್ ಎಬಿಎಸ್ ಆಧಾರಿತ ಜಾವಾ ಬೈಕ್‍ಗಳ ವಿತರಣೆಯನ್ನು ಶುರು ಮಾಡಿತ್ತು.

ಇನ್ನು ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಯಶಸ್ವಿಯಾಗಿದೆ.

ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಒಟ್ಟು ಮೂರು ಹೊಸ ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್‌ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಪೆರಾಕ್ ಎನ್ನುವ ಕಸ್ಟಮ್ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದೆ.

ಇನ್ನು ಹೊಸ ಬೈಕ್‌ಗಳ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೆಟ್ರೋ ಜಾವಾ ಮಾದರಿಗೆ ರೂ. 1.64 ಲಕ್ಷ, ಜಾವಾ 42 ಮಾದರಿಗೆ ರೂ. 1.55 ಲಕ್ಷ ಮತ್ತು ಅನಾವರಣ ಮಾಡಲಾದ ಜಾವಾ ಪೆರಾಕ್ ಬೈಕಿಗೆ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.

ಎಂಜಿನ್ ಸಾಮರ್ಥ್ಯ
ಜಾವಾ ಮತ್ತು ಜಾವಾ 42 ಬೈಕ್‌ಗಳು 293ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 27ಬಿಹೆಚ್‍ಪಿ ಮತ್ತು 28ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಇದರಲ್ಲಿ ಬಾಬರ್ ವಿನ್ಯಾಸದ ಜಾವಾ ಪೆರಾಕ್ ಬೈಕ್ ಮಾದರಿಯು 334ಸಿಸಿ ಎಂಜಿನ್ ಪಡೆದುಕೊಂಡಿದ್ದು, ಬಿಎಸ್ 6 ಎಂಜಿನ್ ಪ್ರೇರಣೆಯೊಂದಿಗೆ 30 ಬಿಎಚ್‌ಪಿ ಮತ್ತು 31 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿರಲಿದೆ. ಇದು ಜಾವಾ ಸಂಸ್ಥೆಯಿಂದಲೇ ಮಾಡಿಫೈಗೊಂಡ ಮೊದಲ ಬೈಕ್ ಮಾದರಿಯಾಗಿದ್ದು, ಇದೇ ವರ್ಷ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.

ಈ ಮೂಲಕ ರಾಯಲ್ ಎನ್‌ಫೀಲ್ಡ್ ಸಂಸ್ಥೆಗೆ ಭರ್ಜರಿ ಪೈಪೋಟಿ ನೀಡಲು ಸಜ್ಜಾಗಿರುವ ಜಾವಾ ಸಂಸ್ಥೆಯು ಬೈಕ್ ವಿತರಣೆಯೊಂದಿಗೆ ಮತ್ತಷ್ಟು ಬೈಕ್ ಮಾರಾಟ ಮಳಿಗೆಗಳನ್ನು ತೆರೆಯುವ ಇರಾದೆಯಲ್ಲಿದ್ದು, ಆರ್‌ಇ ಬೈಕ್ ಪ್ರಿಯರನ್ನು ತನ್ನತ್ತ ಸೆಳೆಯಲು ಹಲವು ಯೋಜನೆಗಳನ್ನು ರೂಪಿಸಿದೆ.

ಲಭ್ಯವಿರುವ ಬಣ್ಣಗಳು
ಜಾವಾ ಬಿಡುಗಡೆಗೊಳಿಸಿದ ಈ ಎರಡೂ ಬೈಕ್‍ಗಳು ಆಕರ್ಷಕ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. ಜಾವಾ ಬೈಕ್ - ಜಾವಾ ಬ್ಲಾಕ್, ಜಾವಾ ಮರೂನ್ ಮತ್ತು ಜಾವಾ ಗ್ರೇ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ. ಇನ್ನು ಜಾವಾ 42 ಬೈಕ್ ಹಾಲಿಸ್ ಟೀಲ್, ಗ್ಲಾಕ್ಟಿಕ್ ಗ್ರೀನ್, ಸ್ಟಾರ್‍ಲೈಟ್ ಬ್ಲೂ, ಲುಮೊಸ್ ಲೈಮ್, ನೆಬ್ಯುಲಾ ಬ್ಲೂ ಮತ್ತು ಕೊಮೆಟ್ ರೆಡ್ ಎಂಬ ಆರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.


Click it and Unblock the Notifications