ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ಕಳೆದ ವರ್ಷ ನವೆಂಬರ್‌ನಲ್ಲಿ ಬಿಡುಗಡೆಯಾಗಿರುವ ಜಾವಾ ಹೊಸ ಮೋಟಾರ್‌ಸೈಕಲ್‌ಗಳ ಖರೀದಿಗಾಗಿ ಗ್ರಾಹಕರು ಎದರು ನೋಡುತ್ತಿದ್ದು, ಅಂತೂ ಇಂತೂ ನಾಲ್ಕು ತಿಂಗಳು ನಂತರ ಹೊಸ ಬೈಕ್‌ಗಳು ಗ್ರಾಹಕರ ಕೈ ಸೇರಲು ಸಜ್ಜಾಗುತ್ತಿವೆ. ಹೀಗಿರುವಾಗ ಜಾವಾ ಸಂಸ್ಥೆಯು ಕೈಗೊಂಡಿರುವ ಮಹತ್ವದ ನಿರ್ಧಾರವೊಂದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ಜಾವಾ ಮೋಟಾರ್‌ಸೈಕಲ್ ಸಂಸ್ಥೆಯು ಕಳೆದ 2 ದಶಕಗಳ ನಂತರ ಭಾರತೀಯ ಮಾರುಕಟ್ಟೆಗೆ ಮರಳಿ ಪ್ರವೇಶ ಪಡೆದಿದ್ದು, ಮಹೀಂದ್ರಾ ಸಂಸ್ಥೆಯ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಹೊಸ ಬೈಕ್ ಅನ್ನು ಮರುಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದೆ. ಇದೇ ತಿಂಗಳ ಕೊನೆಯಲ್ಲಿ ಹೊಸ ಬೈಕ್ ವಿತರಣೆ ಆರಂಭವಾಗಲಿದ್ದು, ಅದಕ್ಕೂ ಮುನ್ನ ಬಿಡುಗಡೆಯಾಗಿರುವ ಎರಡು ಹೊಸ ಬೈಕ್‌ಗಳನ್ನು ಹರಾಜು ಮಾಡಲು ನಿರ್ಧರಿಸಿದೆ. ಇದರಿಂದ ಬಂದ ಹಣದಿಂದ ಹುತಾತ್ಮ ಯೋಧರ ಮಕ್ಕಳ ಶಿಕ್ಷಣಕ್ಕಾಗಿ ವಿನಿಯೋಗಿಸಲು ಮುಂದಾಗಿದೆ.

ಜಾವಾ ಸಂಸ್ಥೆಯ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದ್ದು, ದೇಶದ ಭದ್ರತೆಗಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡುತ್ತಿರುವ ಯೋಧರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿರುವ ಜಾವಾ ನಡೆಯನ್ನು ಮೆಚ್ಚಲೇಬೇಕು.

ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ಇನ್ನು ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಯಶಸ್ವಿಯಾಗಿದೆ.

ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಒಟ್ಟು ಮೂರು ಹೊಸ ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್‌ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಪೆರಾಕ್ ಎನ್ನುವ ಕಸ್ಟಮ್ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದೆ. ಹಾಗೆಯೇ ಹೊಸ ಬೈಕ್‌ಗಳ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೆಟ್ರೋ ಜಾವಾ ಮಾದರಿಗೆ ರೂ. 1.64 ಲಕ್ಷ, ಜಾವಾ 42 ಮಾದರಿಗೆ ರೂ. 1.55 ಲಕ್ಷ ಮತ್ತು ಅನಾವರಣ ಮಾಡಲಾದ ಜಾವಾ ಪೆರಾಕ್ ಬೈಕಿಗೆ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.

ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ಎಂಜಿನ್ ಸಾಮರ್ಥ್ಯ

ಜಾವಾ ಮತ್ತು ಜಾವಾ 42 ಬೈಕ್‌ಗಳು 293ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 27ಬಿಹೆಚ್‍ಪಿ ಮತ್ತು 28ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇದರಲ್ಲಿ ಬಾಬರ್ ವಿನ್ಯಾಸದ ಜಾವಾ ಪೆರಾಕ್ ಬೈಕ್ ಮಾದರಿಯು 334ಸಿಸಿ ಎಂಜಿನ್ ಪಡೆದುಕೊಂಡಿದ್ದು, ಬಿಎಸ್ 6 ಎಂಜಿನ್ ಪ್ರೇರಣೆಯೊಂದಿಗೆ 30 ಬಿಎಚ್‌ಪಿ ಮತ್ತು 31 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿರಲಿದೆ.

MOST READ: ಮಾಡಿಫೈ ಬೈಕ್ ಸವಾರರಿಗೆ ಭಿಕ್ಷುಕರ ವೇಷದಲ್ಲಿ ಬಂದು ಶಾಕ್ ಕೊಟ್ಟ ಪೊಲೀಸರು..

ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ರಾಯಲ್ ಎನ್‌‌ಫೀಲ್ಡ್‌ಗೆ ತಳಮಳ..!

ಆಕರ್ಷಕ ಬೆಲೆಗಳು ಮತ್ತು ತಾಂತ್ರಿಕವಾಗಿ ಬಲಿಷ್ಠವಾಗಿರುವ ಜಾವಾ ಬೈಕ್‌ಗಳು ರಾಯಲ್ ಎನ್‌ಫೀಲ್ಡ್ ಸಂಸ್ಥೆಯನ್ನೇ ಗುರಿಯಾಗಿಸಿ ಹೊಸ ಉತ್ಪನ್ನಗಳನ್ನು ಅಭಿವೃದ್ಧಿಗೊಳಿಸುತ್ತಿದ್ದು, ಜಾವಾ ಮತ್ತು ಜಾವಾ 42 ಬೈಕ್‌ಗಳು ಕ್ಲಾಸಿಕ್ 350 ಬೈಕ್‌ಗಳಿಗೆ ಹೆಚ್ಚಿನ ಪೈಪೋಟಿ ನೀಡುತ್ತಿವೆ.

ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ಇದಕ್ಕೆ ಉದಾಹರಣೆ ಅಂದ್ರೆ, ಕಳೆದ ವರ್ಷ ಅಕ್ಟೋಬರ್‌ನಿಂದ ಈ ತನಕ ಬೈಕ್ ಮಾರಾಟದಲ್ಲಿ ಶೇ.10 ರಷ್ಟು ನಷ್ಟ ಅನುಭವಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಜಾವಾ ಬೈಕ್‌ಗಳ ಅಬ್ಬರದ ಮುಂದೆ ಕಂಗಾಲಾಗಿ ಹೋಗಿದೆ.

MOST READ: ಇನ್ಮುಂದೆ ಹೀಗೆಲ್ಲಾ ಮಾಡಿದ್ರೆ ನಿಮ್ಮ ವಾಹನ ನೋಂದಣಿ ರದ್ದಾಗುತ್ತೆ..!

ಹುತಾತ್ಮ ಯೋಧರ ಮಕ್ಕಳಿಗಾಗಿ ಜಾವಾ ಸಂಸ್ಥೆಯಿಂದ ದಿಟ್ಟಹೆಜ್ಜೆ..!

ಈ ಮೂಲಕ ರಾಯಲ್ ಎನ್‌ಫೀಲ್ಡ್ ಸಂಸ್ಥೆಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಜಾವಾ ಸಂಸ್ಥೆಯು ಬೈಕ್ ವಿತರಣೆಗೆ ಚಾಲನೆ ನೀಡುವುದಕ್ಕೂ ಮುನ್ನ ಮತ್ತಷ್ಟು ಬೈಕ್ ಮಾರಾಟ ಮಳಿಗೆಗಳನ್ನು ತೆರೆಯುವ ಇರಾದೆಯಲ್ಲಿದ್ದು, ಆರ್‌ಇ ಬೈಕ್ ಪ್ರಿಯರನ್ನು ತನ್ನತ್ತ ಸೆಳೆಯಲು ಹಲವು ಯೋಜನೆಗಳನ್ನು ರೂಪಿಸಿರುವುದು ಗ್ರಾಹಕರ ಆಕರ್ಷಣೆ ಕಾರಣವಾಗಿದೆ.

Most Read Articles

Kannada
English summary
Jawa Motorcycles Will Be Auctioned Before Deliveries To Support Armed Forces Martyr’s Childrens. Read in Kannada.
Story first published: Monday, March 25, 2019, 18:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X