ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಜಾವಾ ಮೋಟಾರ್‌ಸೈಕಲ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಪೆರಾಕ್ ಬಾಬರ್ ಸ್ಟೈಲ್ ಬೈಕ್ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಹೊಸ ಬೈಕ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,95,500 ಬೆಲೆ ಪಡೆದುಕೊಂಡಿದೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಬಿಡುಗಡೆಗೂ ಮುನ್ನವೇ ಬೈಕ್ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಜಾವಾ ಹೊಚ್ಚ ಹೊಸ ಬೈಕ್‌ಗಳನ್ನು ಜಾವಾ ಮತ್ತು ಕ್ಲಾಸಿಕ್ ಲೆಜೆಂಡ್ ಸಂಸ್ಥೆಗಳು ಜಂಟಿಯಾಗಿ ಕಳೆದ ವರ್ಷ ನವೆಂಬರ್‌ನಲ್ಲಿ ಬಿಡುಗಡೆಗೊಳಿಸಿದ್ದವು. ಈ ವೇಳೆ ಪ್ರದರ್ಶನಗೊಂಡಿದ್ದ ಪೆರಾಕ್ ಬೈಕ್ ಮಾದರಿಯು ಇದೀಗ ಅಂತಿಮವಾಗಿ ಗ್ರಾಹಕರ ಕೈಸೇರಲು ಸಿದ್ದವಾಗಿದ್ದು, 2020ರ ಜನವರಿ ಮೊದಲ ವಾರದಲ್ಲಿ ಹೊಸ ಬೈಕ್ ಖರೀದಿಗೆ ಆನ್‌ಲೈನ್ ಬುಕ್ಕಿಂಗ್ ಪ್ರಾರಂಭಮಾಡುವುದಾಗಿ ಜಾವಾ ಸಂಸ್ಥೆಯು ಹೇಳಿಕೊಂಡಿದೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

1940ರ ಅವಧಿಯಲ್ಲಿನ ಬಾಬರ್ ಸ್ಟೈಲ್ ಬೈಕ್ ವಿನ್ಯಾಸವನ್ನು ಹೊತ್ತುಬಂದಿರುವ ಪೆರಾಕ್ ಬೈಕ್ ಮಾದರಿಯು ವಿಶೇಷ ಬಾಡಿ ಶೈಲಿಯೊಂದಿಗೆ ಭಾರತದಲ್ಲಿರುವ ಇತರೆ ಎಲ್ಲಾ ಬೈಕ್ ಮಾದರಿಗಳಿಂತಲೂ ಉದ್ದವಾದ ವೀಲ್ಹ್ ಬೆಸ್ ಹೊಂದಿರುವ ಮೊದಲ ಬೈಕ್ ಇದಾಗಿದೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಪೆರಾಕ್ ಬೈಕ್ ಮಾದರಿಯು 2020ರ ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಸಾರ ಅಭಿವೃದ್ದಿ ಹೊಂದಿದ್ದು, 334-ಸಿಸಿ ಎಂಜಿನ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 30-ಬಿಎಚ್‌ಪಿ ಮತ್ತು 31-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಪೆರಾಕ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ. ಮತ್ತೊಂದು ವಿಶೇಷ ಅಂದ್ರೆ, ಪೆರಾಕ್ ಮಾದರಿಯು ಕ್ಲಾಸಿಕ್ ಲೆಜೆಂಡ್ ಕಂಪನಿಯಿಂದಲೇ ಮಾಡಿಫೈಗೊಂಡ ಬೈಕ್ ಆವೃತ್ತಿಯಾಗಲಿದ್ದು, ಡ್ಯುಯಲ್ ಚಾನೆಲ್ ಎಬಿಎಸ್, ಎರಡು ಬದಿಯ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್, ರೌಂಡ್ ಹೆಡ್‌ಲ್ಯಾಂಪ್, ಡ್ಯಯಲ್ ಎಕ್ಸಾಸ್ಟ್ ಫೀಚರ್ಸ್‌ಗಳು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿವೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಈ ಮೂಲಕ ದುಬಾರಿ ಬೆಲೆಯ ಹಾರ್ಲೆ ಡೇವಿಡ್ಸನ್ ಬೈಕ್ ರೈಡಿಂಗ್ ಅನುಭವ ನೀಡುವ ಪೆರಾಕ್ ಬೈಕ್‌ಗಳು ಯುವ ಸಮುದಾಯದ ನೆಚ್ಚಿನ ಬೈಕ್ ಮಾದರಿಯಾಗುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಕ್ಲಾಸಿಕ್ 350 ಮಾತ್ರವಲ್ಲದೇ ಇತ್ತೀಚೆಗೆ ಬಿಡುಗಡೆಯಾಗಲಿರುವ ಬೆನೆಲ್ಲಿ ಇಂಪೀರಿಯಲ್ 400 ಬೈಕಿಗೂ ಇದು ಪೈಪೋಟಿ ನೀಡಲಿದೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಇನ್ನು ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಯಶಸ್ವಿಯಾಗಿದೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಸದ್ಯಕ್ಕೆ ಮೂರು ಹೊಸ ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್‌ಗಳು ಈಗಾಗಲೇ ಮಾರಾಟವಾಗುತ್ತಿದೆ. ಇದೀಗ ಬಿಡುಗಡೆಯಾಗಿರುವ ಪೆರಾಕ್ ಕಸ್ಟಮ್ ಬೈಕ್ ಮಾದರಿಯು ಕೂಡಾ 2020ರ ಫೆಬ್ರುವರಿ ಅಥವಾ ಏಪ್ರಿಲ್‌ಗೆ ರಸ್ತೆಗಿಳಿಯಲಿವೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಜಾವಾ ಕ್ಲಾಸಿಕ್ ಬೈಕ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.64 ಲಕ್ಷಕ್ಕೆ ಮತ್ತು ಜಾವಾ 42 ಮಾದರಿಯು ರೂ. 1.55 ಲಕ್ಷಕ್ಕೆ ಖರೀದಿಗೆ ಲಭ್ಯವಿದ್ದು, ಎರಡು ಬೈಕ್‌ಗಳಲ್ಲೂ 293-ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದೊಂದಿಗೆ 27-ಬಿಹೆಚ್‍ಪಿ ಮತ್ತು 28-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿವೆ.

ಬಹುನೀರಿಕ್ಷಿತ ಪೆರಾಕ್ ಮೋಟಾರ್‌ಸೈಕಲ್ ಬಿಡುಗಡೆ ಮಾಡಿದ ಜಾವಾ

ಆದರೆ ಜಾವಾ ಹೊಸ ಬೈಕ್‌ಗಳಿಗೆ ಭಾರೀ ಬೇಡಿಕೆಯಿದ್ದರೂ ಸಹ ಬೇಡಿಕೆಗೆ ತಕ್ಕಂತೆ ನಿಗದಿತ ಅವಧಿಯಲ್ಲಿ ಬೈಕ್ ಉತ್ಪಾದನೆ ಮತ್ತು ವಿತರಣೆಯನ್ನು ವಿಳಂಬ ಮಾಡುತ್ತಿರುವ ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಹಲವಾರು ಭಾರೀ ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಇದೀಗ ಬಿಡುಗಡೆಯಾಗಿರುವ ಪೆರಾಕ್ ಬೈಕಿನ ಬೇಡಿಕೆಯನ್ನು ಯಾವ ರೀತಿ ಪೂರೈಕೆ ಮಾಡಲಿದೆ ಎನ್ನುವುದೇ ಕುತೂಹಲಕ್ಕೆ ಕಾರಣವಾಗಿದೆ.

More from DriveSpark

Article Published On: Friday, November 15, 2019, 17:17 [IST]
English summary
Jawa Perak motorcycle launched in India at Rs 1.94 lakh, ex-showroom (Delhi). The Jawa Peral is the third motorcycle from the brand in the Indian market, after the Jawa and Jawa 42 offerings.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+