Just In
- 9 hrs ago
31 ಟನ್ ಸರಕು ಸಾಗಾಣಿಕೆ ಸಾಮರ್ಥ್ಯದ ಟಾಟಾ ಹೊಸ ಸಿಗ್ನಾ 3118.ಟಿ ಟ್ರಕ್ ಬಿಡುಗಡೆ
- 11 hrs ago
ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್ವ್ಯಾಗನ್ ಟಿಗ್ವಾನ್ ಎಸ್ಯುವಿ
- 11 hrs ago
ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2021ರ ರೆನಾಲ್ಟ್ ಟ್ರೈಬರ್ ಮಿನಿ ಎಂಪಿವಿ
- 12 hrs ago
ಮಾರ್ಚ್ ತಿಂಗಳಿನಲ್ಲಿ ದಟ್ಸನ್ ಕಾರುಗಳ ಮೇಲೆ ಲಭ್ಯವಿರುವ ರಿಯಾಯಿತಿಗಳಿವು
Don't Miss!
- Movies
ಅಪ್ಪ-ಅಮ್ಮನ ಆತ್ಮಹತ್ಯೆ ಬಗ್ಗೆ ರಘು ಗೌಡ ಮಾತು
- Sports
ಐಪಿಎಲ್ ಕುರಿತ ಹೇಳಿಕೆಗೆ ಕ್ಷಮೆಯಾಚಿಸಿದ ವೇಗಿ ಡೇಲ್ ಸ್ಟೇನ್
- News
ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಶೇ.81ರಷ್ಟು ಪರಿಣಾಮಕಾರಿ
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Finance
ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇಂಡಿಯಾ ಬೈಕ್ ವೀಕ್‌ನಲ್ಲಿ ಅನಾವರಣಗೊಂಡ ಕೆಟಿಎಂ 390 ಅಡ್ವೆಂಚರ್
ಪ್ರವಾಸಿಗರ ಸ್ವರ್ಗ ಗೋವಾದಲ್ಲಿ 2019ರ ಇಂಡಿಯಾ ಬೈಕ್ ವೀಕ್‌ಗೆ ಭರ್ಜರಿ ಚಾಲನೆ ದೊರೆತಿದ್ದು, ಕೆಟಿಎಂ ಸಂಸ್ಥೆಯು ತನ್ನ ಆಫ್ ರೋಡ್ ಬೈಕ್ ಮಾದರಿಯಾದ 390 ಅಡ್ವೆಂಚರ್ ಬೈಕ್ ಆವೃತ್ತಿಯನ್ನು ಅನಾವರಣಗೊಳಿಸಿದೆ.

ವಿಶ್ವದಲ್ಲೇ ಪ್ರಮುಖ ಮೋಟಾರ್ ಸೈಕಲ್ ಪ್ರದರ್ಶನಗಳಲ್ಲಿ ಒಂದಾಗಿರುವ ಇಂಡಿಯಾ ಬೈಕ್ ವೀಕ್ ಸಾಕಷ್ಟು ಪ್ರಸಿದ್ದಿ ಹೊಂದಿದ್ದು, ದೇಶ-ವಿದೇಶಿಗಳಿಂದ ಸಾವಿರಾರು ಬೈಕ್ ಪ್ರೇಮಿಗಳು ಇಲ್ಲಿ ಭಾಗಿಯಾಗಿರುತ್ತಾರೆ. ಇದೇ ವೇಳೆ ಕೆಟಿಎಂ ಸಂಸ್ಥೆಯು ತನ್ನ ಬಹುನೀರಿಕ್ಷಿತ 390 ಅಡ್ವೆಂಚರ್ ಆವೃತ್ತಿಯನ್ನು ಪ್ರದರ್ಶನಗೊಳಿಸಿದ್ದು, ಆಫ್ ರೋಡ್ ಬೈಕ್ ಪ್ರೇಮಿಗಳ ಗಮನಸೆಳೆಯಿತು. ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ 390 ಅಡ್ವೆಂಚರ್ ಬೈಕ್ ಮಾದರಿಯು ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸುಳಿವು ನೀಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಸೂಪರ್ ಬೈಕ್‌ಗಳನ್ನು ಮಾರಾಟ ಮಾಡುವ ಕೆಟಿಎಂ ಸಂಸ್ಥೆಯು ಭಾರತದಲ್ಲೂ ವಿವಿಧ ನಮೂನೆಯ ಬೈಕ್ ಆವೃತ್ತಿಗಳನ್ನು ಮಾರಾಟ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ಅಡ್ವೆಂಚರ್ ಆವೃತ್ತಿಗಳ ಮಾರಾಟವನ್ನು ಆರಂಭಿಸುತ್ತಿದೆ.

ಕೆಟಿಎಂ ಬಿಡುಗಡೆ ಮಾಡಲು ನಿರ್ಧರಿಸಿರುವ 390 ಅಡ್ವೆಂಚರ್ ಬೈಕ್‌ಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ 1290 ಸೂಪರ್ ಅಡ್ವೆಂಚರ್ ಬೈಕ್ ಹೋಲಿಕೆಯನ್ನೇ ಪಡೆದುಕೊಂಡಿದ್ದು, ರಾಯಲ್ ಎನ್‌ಫೀಲ್ಡ್ ಸಂಸ್ಥೆಯ ಹಿಮಾಲಯನ್ ಬೈಕಿಗೆ ಪ್ರತಿಸ್ಪರ್ಧಿಯಾಗಿ ಈ ಬೈಕ್ ಮಾರಾಟಗೊಳ್ಳಲಿದೆ.

ಎಂಜಿನ್ ಸಾಮರ್ಥ್ಯ
ಬಿಡುಗಡೆಗೆ ಸಜ್ಜಾಗಿರುವ ಕೆಟಿಎಂ 390 ಬೈಕ್ ಮಾದರಿಯು ಬಿಎಸ್-6 ವೈಶಿಷ್ಟ್ಯತೆಯ 373-ಸಿಸಿ ಲಿಕ್ವಿಡ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರಲಿದ್ದು, ಬೆಸ್ಟ್ ಪರ್ಫಾಮೆನ್ಸ್ ಮಾದರಿಯಾಗಿ 44-ಬಿಎಚ್‌ಪಿ ಮತ್ತು 37-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.
ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್ ಅಳವಡಿಕೆ ಹೊಂದಿರುವ 390 ಅಡ್ವೆಂಚರ್ ಬೈಕ್ ಮಾದರಿಯು, ಸುಧಾರಿತ ವಿನ್ಯಾಸಗಳಾದ ಟಿಪಿಎಫ್ ಇನ್ಟ್ರುಮೆಂಟ್ ಡಿಸ್‌ಪ್ಲೇ, ಲಾಂಗ್ ಟ್ರಾವೆಲ್ ಫ್ರಂಟ್ ಮತ್ತು ರಿಯರ್ ಸಸ್ಷೆನ್ ಜೋಡಣೆ ಹೊಂದಿರಲಿವೆ.

ಹಾಗೆಯೇ ಹೊಸ ಬೈಕ್ ಮುಂಭಾಗದಲ್ಲಿ 100/90-19 ಇಂಚಿನ ಟೈರ್, ಹಿಂಭಾಗದಲ್ಲಿ 130/80-17 ಇಂಚಿನ ಟೈರ್ ಹೊಂದಿದ್ದು, 14.5-ಲೀಟರ್ ಇಂಧನ ಟ್ಯಾಂಕ್, 1,430-ಎಂಎಂ ಲಾಂಗ್ ವೀಲ್ಹ್ ಬೆಸ್‌ನೊಂದಿಗೆ 158 ಕೆಜಿ ತೂಕ ಪಡೆದುಕೊಂಡಿದೆ.

ಇವುಗಳಲ್ಲದೇ ಬೈಕಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಡಿಸ್ಕ್ ಬ್ರೇಕ್, ಸ್ಲಿಪ್ಪರ್ ಕ್ಲಚ್, ರೈಡ್ ಬೈ ವೈರ್ ಟೆಕ್ನಾಲಜಿ ಮತ್ತು ಪರ್ಫಾಮೆನ್ಸ್‌ಗೆ ಸಹಕಾರಿಯಾಗಬಲ್ಲ ಡ್ಯುಯಲ್-ಸ್ಪೋಟ್ ಟೈರ್ ಮಾದರಿಗಳನ್ನು ಬಳಕೆ ಮಾಡಿರುವುದು ಬೈಕ್ ಕಾರ್ಯಕ್ಷಮತೆಗೆ ಮತ್ತಷ್ಟು ಬಲಬಂದಿದೆ.

ಇದರ ಹೊರತಲಾಗಿಯೂ ಹೊಸ ಬೈಕಿನಲ್ಲಿ ಜೋಡಿಸಲಾಗಿರುವ ಕೆಲವು ಪ್ರಮುಖ ತಾಂತ್ರಿಕ ಅಂಶಗಳ ಕುರಿತು ಯಾವುದೇ ಮಾಹಿತಿ ಹಂಚಿಕೊಳ್ಳದ ಕೆಟಿಎಂ ಸಂಸ್ಥೆಯು ಅಧಿಕೃತ ಬಿಡುಗಡೆಯ ವೇಳೆ ಸಂಪೂರ್ಣ ತಾಂತ್ರಿಕ ಅಂಶಗಳನ್ನು ಬಹಿರಂಗಪಡಿಸಿದಲಿದೆ.

ಬಿಡುಗಡೆಯ ಅವಧಿ ಮತ್ತು ಬೆಲೆಗಳು (ಅಂದಾಜು)
2020ರ ಜನವರಿ ಮಧ್ಯಂತರದಲ್ಲಿ ಬಿಡುಗಡೆಯಾಗಲಿರುವ 390 ಅಡ್ವೆಂಚರ್ ಬೈಕ್ ಮಾದರಿಯು ದೆಹಲಿ ಎಕ್ಸ್‌ಶೋರಂ ಪ್ರಕಾರ ರೂ. 2.30 ಲಕ್ಷದಿಂದ ರೂ. 2.50 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹಲವಾರು ಸುಧಾರಿತ ತಂತ್ರಜ್ಞಾನ ಸೌಲಭ್ಯಗಳ ಪ್ರೇರಣೆಯಿಂದಾಗಿ ತುಸು ದುಬಾರಿ ಎನ್ನಿಸಲಿದೆ.

ಹೀಗಾಗಿ ಕೆಟಿಎಂ 390 ಅಡ್ವೆಂಚರ್ ಬೈಕ್‌ಗಳು ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಗೊಂಡಿದ್ದೆ ಆದಲ್ಲಿ ಮಾರುಕಟ್ಟೆಯಲ್ಲಿ ಸದ್ಯ ಜನಪ್ರಿಯವಾಗಿರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮತ್ತು ಇತ್ತೀಚೆಗಷ್ಟೆ ಬಿಡುಗಡೆಯಾದ ಎಂಟ್ರಿ ಲೆವಲ್ ಬಿಎಂಡಬ್ಲ್ಯು ಜಿ310 ಜಿಎಸ್ ಬೈಕ್ ಮಾದರಿಗೂ ಇದು ತೀವ್ರ ಪೈಪೋಟಿ ನೀಡಲಿದೆ.