Just In
- 3 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 6 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 6 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 8 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies "ಭೂಮಿ ತಾಯಿಯನ್ನು ಉಳಿಸಿಕೊಳ್ಳಬೇಕು" ಎಂದು ಕರೆ ನೀಡಿದ ಕಿರುತೆರೆ ನಟಿ ಶ್ವೇತಾ ಪ್ರಸಾದ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2020ರ ಆರಂಭದಲ್ಲಿ ಬಿಡುಗಡೆಯಾಗಲಿದೆ ಕೆಟಿಎಂ 390 ಅಡ್ವೆಂಚರ್
ಮಧ್ಯಮ ಗಾತ್ರದ ಪ್ರೀಮಿಯಂ ಬೈಕ್ ಮಾರಾಟದಲ್ಲಿ ಈಗಾಗಲೇ ಮುಂಚೂಣಿ ಸಾಧಿಸಿರುವ ಕೆಟಿಎಂ ಸಂಸ್ಥೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಬೈಕ್ ಉತ್ಪನ್ನಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, ಡ್ಯೂಕ್ 125, ಆರ್ಸಿ 125 ಮತ್ತು ಡ್ಯೂಕ್ 790 ನಂತರ ಇದೀಗ 390 ಅಡ್ವೆಂಚರ್ ಬೈಕ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
ಕೆಟಿಎಂ ಸಂಸ್ಥೆಯು ಕಳೆದ ವಾರವಷ್ಟೇ ತನ್ನ ಜನಪ್ರಿಯ ಡ್ಯೂಕ್ 790 ಸೂಪರ್ ಆವೃತ್ತಿಯನ್ನು ಬಿಡುಗಡೆಗೊಳಿಸಿದ್ದು, ಇದೀಗ ಭಾರತದಲ್ಲಿ ಬಿಡುಗಡೆಗೊಳ್ಳಲಿರುವ 390 ಅಡ್ವೆಂಚರ್ ಬೈಕಿನ ಎಂಜಿನ್ ಕಾರ್ಯಕ್ಷಮತೆ ಕುರಿತು ವಿವಿಧ ಹಂತದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸಿರುವುದಲ್ಲದೇ ಇದೇ ವರ್ಷಾಂತ್ಯದಲ್ಲಿ ನಡೆಯಲಿರುವ ಇಟಲಿಯ ಇಐಸಿಎಂಐ ಆಟೋ ಮೇಳದಲ್ಲಿ ಪ್ರದರ್ಶನಗೊಳಿಸಿದ ನಂತರವಷ್ಟೇ ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ಸುಳಿವು ನೀಡಿದೆ.
ಕೆಟಿಎಂ ಬಿಡುಗಡೆ ಮಾಡಲು ನಿರ್ಧರಿಸಿರುವ 390 ಅಡ್ವೆಂಚರ್ ಬೈಕ್ಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ 1290 ಸೂಪರ್ ಅಡ್ವೆಂಚರ್ ಬೈಕ್ ಹೋಲಿಕೆಯನ್ನೇ ಪಡೆದುಕೊಂಡಿದ್ದು, ರಾಯಲ್ ಎನ್ಫೀಲ್ಡ್ ಸಂಸ್ಥೆಯ ಹಿಮಾಲಯನ್ ಬೈಕಿಗೆ ಪ್ರತಿಸ್ಪರ್ಧಿಯಾಗಿ ಈ ಬೈಕ್ ಮಾರಾಟಗೊಳ್ಳಲಿದೆ.
ಎಂಜಿನ್ ಸಾಮರ್ಥ್ಯ
ಬಿಡುಗಡೆಗೆ ಸಜ್ಜಾಗಿರುವ ಕೆಟಿಎಂ 390 ಬೈಕ್ ಮಾದರಿಯು ಬಿಎಸ್-6 ವೈಶಿಷ್ಟ್ಯತೆಯ 373ಸಿಸಿ ಲಿಕ್ವಿಡ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರಲಿದ್ದು, ಬೆಸ್ಟ್ ಪರ್ಫಾಮೆನ್ಸ್ ಮಾದರಿಯಾಗಿ 43-ಬಿಎಚ್ಪಿ ಮತ್ತು 37-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.
ಜೊತೆಗೆ 6-ಸ್ಪೀಡ್ ಗೇರ್ಬಾಕ್ಸ್ ಅಳವಡಿಕೆ ಹೊಂದಿರುವ 390 ಅಡ್ವೆಂಚರ್ ಬೈಕ್ ಮಾದರಿಯು, ಸುಧಾರಿತ ವಿನ್ಯಾಸಗಳಾದ ಟಿಪಿಎಫ್ ಇನ್ಟ್ರುಮೆಂಟ್ ಡಿಸ್ಪ್ಲೇ, ಲಾಂಗ್ ಟ್ರಾವೆಲ್ ಫ್ರಂಟ್ ಮತ್ತು ರಿಯರ್ ಸಸ್ಷೆನ್ ಜೋಡಣೆ ಹೊಂದಿರಲಿವೆ. ಇದರ ಹೊರತಲಾಗಿ ಕೆಲವು ಮುಖ್ಯ ತಾಂತ್ರಿಕ ಅಂಶಗಳನ್ನು ಗೌಪ್ಯವಾಗಿ ಇಡಲಾಗಿದ್ದು, ಬಿಡುಗಡೆಯ ಹೊತ್ತಿಗೆ ಮತ್ತಷ್ಟು ಮಾಹಿತಿ ಸಿಗಲಿದೆ.
ಇವುಗಳಲ್ಲದೇ ಬೈಕಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಡಿಸ್ಕ್ ಬ್ರೇಕ್, ಸ್ಲಿಪ್ಪರ್ ಕ್ಲಚ್, ರೈಡ್ ಬೈ ವೈರ್ ಟೆಕ್ನಾಲಜಿ ಮತ್ತು ಪರ್ಫಾಮೆನ್ಸ್ಗೆ ಸಹಕಾರಿಯಾಗಬಲ್ಲ ಡ್ಯುಯಲ್-ಸ್ಪೋಟ್ ಟೈರ್ ಮಾದರಿಗಳನ್ನು ಬಳಕೆ ಮಾಡಿರುವುದು ಸ್ಪಾಟ್ ಟೆಸ್ಟಿಂಗ್ನಲ್ಲಿ ಬಹಿರಂಗವಾಗಿದೆ.
ಬಿಡುಗಡೆಯ ಅವಧಿ ಮತ್ತು ಬೆಲೆಗಳು (ಅಂದಾಜು)
2019ರ ಡಿಸೆಂಬರ್ನಲ್ಲಿ ನಡೆಯಲಿರುವ ಇಟಲಿ ಆಟೋ ಮೇಳದಲ್ಲಿ ಭಾಗಿಯಾದ ನಂತರವಷ್ಟೇ 2020ರ ಆರಂಭದಲ್ಲಿ 390 ಅಡ್ವೆಂಚರ್ ಬೈಕ್ಗಳನ್ನು ಬಿಡುಗಡೆಗೊಳಿಸಲು ಯೋಜಿಸಿರುವ ಕೆಟಿಎಂ ಸಂಸ್ಥೆಯು ಹೊಸ ಬೈಕಿನ ಬೆಲೆಯನ್ನು ಎಕ್ಸ್ಶೋರಂ ಪ್ರಕಾರ ರೂ. 2.30 ಲಕ್ಷದಿಂದ ರೂ. 2.50 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.
MOST READ: ವಾಹನ ಚಾಲಕರೇ ಇತ್ತ ಗಮನಿಸಿ- ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್..!
ಹೀಗಾಗಿ ಕೆಟಿಎಂ 390 ಅಡ್ವೆಂಚರ್ ಬೈಕ್ಗಳು ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಗೊಂಡಿದ್ದೆ ಆದಲ್ಲಿ ಮಾರುಕಟ್ಟೆಯಲ್ಲಿ ಸದ್ಯ ಜನಪ್ರಿಯವಾಗಿರುವ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮತ್ತು ಇತ್ತೀಚೆಗಷ್ಟೆ ಬಿಡುಗಡೆಯಾದ ಎಂಟ್ರಿ ಲೆವಲ್ ಬಿಎಂಡಬ್ಲ್ಯು ಜಿ310 ಜಿಎಸ್ ಬೈಕ್ಗಳಿಗೆ ತೀವ್ರ ಪೈಪೋಟಿ ನೀಡಲಿದೆ.
MOST READ: ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಮಾರುತಿ ಸುಜುಕಿ ಎಸ್-ಪ್ರೆಸ್ಸೊ
ಡ್ರೈವ್ಸ್ಪಾರ್ಕ್ ಅಭಿಪ್ರಾಯ
ದೇಶಿಯ ಮಾರುಕಟ್ಟೆಯಲ್ಲಿ ಅಡ್ವೆಂಚರ್ ಆವೃತ್ತಿಗಳಿಗೆ ವಿಶೇಷ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ಕೆಟಿಎಂ ಸಂಸ್ಥೆಯು ತನ್ನ ಬಹುನೀರಿಕ್ಷಿತ 390 ಅಡ್ವೆಂಚರ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ. ನಿಗದಿತ ಅವಧಿಯಲ್ಲಿ ಬಿಡುಗಡೆಗೊಂಡಲ್ಲಿ ಹೊಸ ಬೈಕ್ಗಳು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಠಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.