Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಎರಡು ಬಣ್ಣಗಳಲ್ಲಿ ಲಭ್ಯವಿರಲಿದೆ ಬಜಾಜ್ ಡಾಮಿನಾರ್ 400 ಬೈಕ್
ಬಜಾಜ್ ಆಟೋ ಸಂಸ್ಥೆಯು ಇತ್ತೀಚೆಗೆ ಹಲವಾರು ಬದಲಾವಣೇಗಳೊಂದಿಗೆ ತಮ್ಮ ಡಾಮಿನಾರ್ 400 ಬೈಕ್ ಅನ್ನು ಬಿಡುಗಡೆಗೊಳಿಸಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 1.74 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಬಿಡುಗಡೆಗೊಂಡಾಗ ಕೇವಲ ಗ್ರೀನ್ ಮತ್ತು ಕಪ್ಪು ಎಂಬ ಎರಡು ಬಣ್ಣಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿತ್ತು.

ಇದೀಗ ಬಜಾಜ್ ಸಂಸ್ಥೆಯು ಬಿಡುಗಡೆ ಮಾದಿರುವ ಹೊಸ ಟಿವಿಸಿ ಜಾಹಿರಾತಿನಲ್ಲಿ ಬಜಾಜ್ ಡಾಮಿನಾರ್ 400 ಬೈಕ್ ಮತ್ತೆರಡು ಬಣ್ಣಗಳಲ್ಲಿ ಲಭ್ಯವಿರಲಿದೆ ಎಂಬ ಸುಳಿವನ್ನು ನೀಡಿದೆ. ಅಂದರೇ ಜಾಹಿರಾತಿನ ಪ್ರಕಾರ ಬಜಾಜ್ ಡಾಮಿನಾರ್ 400 ಬೈಕ್‍ಗಳು ಗ್ಲಾಸಿ ರೆಡ್ ಮತ್ತು ಸಿಲ್ವರ್ ಬಣ್ಣಗಳಲ್ಲಿ ಲಭ್ಯವಿರಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತಾದ ಮಾಹಿತಿಯನ್ನು ಬಜಾಜ್ ಸಂಸ್ಥೆಯು ಇನ್ನು ಬಹಿರಂಗಪಡಿಸಲಿಲ್ಲ.

ಬುಕ್ಕಿಂಗ್ ಕೂಡಾ ಆರಂಭ
ಬಿಡುಗಡೆಗೂ ಮುನ್ನವೇ ಬಜಾಜ್ ಆಟೋ ಡೀಲರ್‍ಗಳು ಈ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಪ್ರಾರಂಭಿಸಲಾಗಿದ್ದು, ಹೀಗಾಗಿ ಆಸಕ್ತ ಗ್ರಾಹಕರು ನಿಮ್ಮ ಸಮೀಪದಲ್ಲಿರುವ ಬಜಾಜ್ ಡೀಲರ್‍ನ ಬಳಿ ರೂ.5000 ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಅಲ್ಲದೆಯೆ ಈ ಬೈಕಿನ ವಿತರಣೆಯನ್ನು ಸಹ ಡೀಲರ್‍ಗಳು ಪ್ರಾರಂಭಿಸಿದ್ದಾರೆ.

ಹೊಸದಾಗಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಬಜಾಜ್ ಡಾಮಿನಾರ್ 400 ಬೈಕ್‍ಗಳು ವಿನ್ಯಾಸದಲ್ಲಿ ಯಾವುದೇ ಬದಲಾವಣೆಯನ್ನು ಪಡೆಸಿಲ್ಲವಾಗಿದ್ದು, ಈ ಬಾರಿ ಹೊಸ ವೈಷ್ಟ್ಯತೆಗಳು ಮತ್ತು ತಾಂತ್ರಿಕತೆಯಲ್ಲಿ ಬದಲಾವಣೆಯನ್ನು ಪಡೆದುಕೊಂಡಿದೆ. ಈ ಕುರಿತಾದ ಮಾಹಿತಿಯನ್ನು ತಿಳಿಯಲು ಮುಂದಕ್ಕೆ ಓದಿರಿ...

ಹೊಸ ಫೀಚರ್ಸ್
ಪ್ರಸ್ತುತ ಇರುವ ಬೈಕಿನಲ್ಲಿ ನೀಡಲಾದ ಸ್ಕ್ರೀನ್ ಅನ್ನು ಪಡೆದಿರಲಿದ್ದು, ಹೊಸದಾಗಿ ಸೈಡ್ ಸ್ಟಾಂಡ್ ವಾರ್ನಿಂಗ್ ಇಂಡಿಕೇಟರ್ ಅನ್ನು ಪಡೆದುಕೊಳ್ಳಲಿದೆ. ಇಷ್ಟೆ ಅಲ್ಲದೆ ಈ ಬೈಕಿನಲ್ಲಿ ಸೆಕೆಂಡರಿ ಡಿಸ್ಪ್ಲೇ ಕೂಡಾ ಬಳಸಲಾಗಿದ್ದು, ಇದು ಫ್ಯುಯಲ್ ಟ್ಯಾಂಕ್‍ನ ಮೇಲೆ ಕಾಣಿಸಿಕೊಳ್ಳುತ್ತೆ. ಇದರಲ್ಲಿ ಗೇರ್ ಪೊಸಿಷನ್, ಟ್ರಿಪ್ ಮೀಟರ್ ಮತ್ತು ಟೈಮ್ ತೋರಿಸುತ್ತದೆ.

ಕೇಂದ್ರ ಸರ್ಕಾರದ ಆದೇಶದಂತೆ 2020ರ ಏಪ್ರಿಲ್ 1ರ ನಂತರ ಬಿಡುಗಡೆಯಾಗಲಿರುವ ಎಲ್ಲಾ ವಾಹನಗಳು ಬಿಎಸ್-VI ಎಂಜಿನ್ ಅನ್ನು ಹೊಂದಿರಬೇಕಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಬಿಡಗಡೆಯಾಲಗಿರುವ ಡಾಮಿನಾರ್ ಬೈಕಿನಲ್ಲಿ ಬಿಎಸ್-VI ಎಂಜಿನ್ ಅಳವಡಿಕೆಯು ಬಹುಮುಖ್ಯ ಬದಲಾವಣೆ ಎಂದೇ ಹೇಳಬಹುದು.

ಎಂಜಿನ್ ಸಾಮರ್ಥ್ಯ
ಹೊಸ ಬಜಾಜ್ ಡಾಮಿನಾರ್ 400 ಬೈಕ್ 373ಸಿಸಿ ಸಿಂಗಲ್ ಸಿಲೆಂಡರ್, ಲಿಕ್ವಿಡ್ ಕೂಲ್ಡ್ ಎಂಜಿನ್ ಸಹಾಯದಿಂದ 40 ಬಿಹೆಚ್‍ಪಿ ಮತ್ತು 34ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಅಂದರೆ ಹಿಂದಿನ ಮಾದರಿಯ ಬೈಕಿಗೆ ಹೋಲಿಸಿದರೆ 6 ಬಿಹೆಚ್‍ಪಿ ಹೆಚ್ಚಿನದಾಗಿ ಹೊಸ ಬೈಕ್ ಪಡೆದಿದೆ.
ಅಷ್ಟೆ ಅಲ್ಲದೇ ಈ ಬಾರಿಯ ಬಜಾಜ್ ಡಾಮಿನಾರ್ 400 ಬೈಕಿನಲ್ಲಿ ಪ್ರೀಮಿಯಂ ಸೌಲಭ್ಯಗಳನ್ನು ಸಹ ನೀಡಲಾಗಿದ್ದು, ಹೊಸ ಎಕ್ಸಾಸ್ಟ್ ಸಿಸ್ಟಂ ಅನ್ನು ನೀಡಲಾಗಿದೆ. ಈ ಬಾರಿ ಈ ಬೈಕಿನಲ್ಲಿ ಡ್ಯುಯಲ್ ಎಕ್ಸಾಸ್ಟ್ ಪೋರ್ಟ್ಸ್, ಮುಂಭಾಗದಲ್ಲಿ ಅಪ್‍ಸೈಡ್ ಫ್ರಂಟ್ ಫೋರ್ಕ್ಸ್ ಅನ್ನು ಒದಗಿಸಲಾಗಿದೆ. ಜೊತೆಗೆ ಈ ಹೊಸ ಎಕ್ಸಾಸ್ಟ್ ಹೆಚ್ಚು ಸದ್ದನ್ನು ಕೂಡ ಹೊರಹಾಕುತ್ತಂತೆ.

ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಹೊಸ ಡಾಮಿನಾರ್ 400 ಬೈಕಿನಲ್ಲಿ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಿದ್ದು, ಮುಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 220ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಕನ್ನಡ ಡ್ರೈವ್‍ಸ್ಪಾರ್ಕ್ ಅಭಿಪ್ರಾಯ
ಬಜಾಜ್ ಸಂಸ್ಥೆಯಲ್ಲಿನ ಜನಪ್ರಿಯ ಡಾಮಿನಾರ್ ಬೈಕ್ ಈ ಬಾರಿ ಹಲವಾರು ಬದಲಾವಣೆಗಳನ್ನು ಪಡೆದು ಇದೀಗ ಬಿಡುಗಡೆಗೊಂಡಿದ್ದು, ಈಗಾಗಲೆ ಮಾರುಕಟ್ಟೆಯಲ್ಲಿರುವ ಕೆಟಿಎಂ ಡ್ಯೂಕ್ 390, ಹೋಂಡಾ ಸಿಬಿ300ಆರ್ ಮತ್ತು ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್‍ಗಳಿಗೆ ಪೈಪೋಟಿ ನೀಡಲಿದೆ.