Just In
- 1 hr ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 13 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 14 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾದ ಹೊಸ ಬಜಾಜ್ ಡಾಮಿನಾರ್ 400 ಬೈಕ್. ಬೆಲೆ ಎಷ್ಟು ಗೊತ್ತಾ.?
ದೇಶಿಯ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಬಜಾಜ್ ಆಟೋ ಸಂಸ್ಥೆಯು ಈ ಹಿಂದೆಯೆ ತಮ್ಮ ಬಜಾಜ್ ಡಾಮಿನಾರ್ ಬೈಕ್ ಅನ್ನು ಬಿಡುಗಡೆಗೊಳಿಸಿ, ಹೆಚ್ಚು ಜನಪ್ರೀಯತೆಯನ್ನು ಪಡೆದುಕೊಂಡಿದೆ. ಈ ಕಾರಣದಿಂದಾಗಿ ಬಜಾಜ್ ಸಂಸ್ಥೆಯು ತಮ್ಮ ಡಾಮಿನಾರ್ ಬೈಕನ್ನು ನವೀಕರಿಸಿ ಮತ್ತೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.
ಬಿಡುಗಡೆಗೊಂಡ ಹೊಸ ಬಜಾಜ್ ಡಾಮಿನಾರ್ ಬೈಕ್ ಬಿಎಸ್-VI ಎಂಜಿನ್ ಅನ್ನು ಪಡೆದುಕೊಂಡಿದ್ದು, ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ಗಳಿಗೆ ಟಾಂಗ್ ನೀಡಲು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಸಿಕ್ಕ ಮಾಹಿತಿಗಳ ಪ್ರಕಾರ ಹೊಸ ಬಜಾಜ್ ಡಾಮಿನಾರ್ 400 ಬೈಕ್ ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 1.73 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ.
ಬುಕ್ಕಿಂಗ್ ಕೂಡಾ ಆರಂಭ
ಬಿಡುಗಡೆಗೂ ಮುನ್ನವೇ ಬಜಾಜ್ ಆಟೋ ಡೀಲರ್ಗಳು ಈ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಪ್ರಾರಂಭಿಸಲಾಗಿದ್ದು, ಹೀಗಾಗಿ ಆಸಕ್ತ ಗ್ರಾಹಕರು ನಿಮ್ಮ ಸಮೀಪದಲ್ಲಿರುವ ಬಜಾಜ್ ಡೀಲರ್ನ ಬಳಿ ರೂ.5000 ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.
ಹೊಸದಾಗಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಬಜಾಜ್ ಡಾಮಿನಾರ್ 400 ಬೈಕ್ಗಳು ವಿನ್ಯಾಸದಲ್ಲಿ ಯಾವುದೇ ಬದಲಾವಣೆಯನ್ನು ಪಡೆಸಿಲ್ಲವಾಗಿದ್ದು, ಈ ಬಾರಿ ಹೊಸ ವೈಷ್ಟ್ಯತೆಗಳು ಮತ್ತು ತಾಂತ್ರಿಕತೆಯಲ್ಲಿ ಬದಲಾವಣೆಯನ್ನು ಪಡೆದುಕೊಂಡಿದೆ. ಈ ಕುರಿತಾದ ಮಾಹಿತಿಯನ್ನು ತಿಳಿಯಲು ಮುಂದಕ್ಕೆ ಓದಿರಿ...
ಹೊಸ ಫೀಚರ್ಸ್
ಪ್ರಸ್ತುತ ಇರುವ ಬೈಕಿನಲ್ಲಿ ನೀಡಲಾದ ಸ್ಕ್ರೀನ್ ಅನ್ನು ಪಡೆದಿರಲಿದ್ದು, ಹೊಸದಾಗಿ ಸೈಡ್ ಸ್ಟಾಂಡ್ ವಾರ್ನಿಂಗ್ ಇಂಡಿಕೇಟರ್ ಅನ್ನು ಪಡೆದುಕೊಳ್ಳಲಿದೆ. ಇಷ್ಟೆ ಅಲ್ಲದೆ ಈ ಬೈಕಿನಲ್ಲಿ ಸೆಕೆಂಡರಿ ಡಿಸ್ಪ್ಲೇ ಕೂಡಾ ಬಳಸಲಾಗಿದ್ದು, ಇದು ಫ್ಯುಯಲ್ ಟ್ಯಾಂಕ್ನ ಮೇಲೆ ಕಾಣಿಸಿಕೊಳ್ಳುತ್ತೆ. ಇದರಲ್ಲಿ ಗೇರ್ ಪೊಸಿಷನ್, ಟ್ರಿಪ್ ಮೀಟರ್ ಮತ್ತು ಟೈಮ್ ತೋರಿಸುತ್ತದೆ.
ಕೇಂದ್ರ ಸರ್ಕಾರದ ಆದೇಶದಂತೆ 2020ರ ಏಪ್ರಿಲ್ 1ರ ನಂತರ ಬಿಡುಗಡೆಯಾಗಲಿರುವ ಎಲ್ಲಾ ವಾಹನಗಳು ಬಿಎಸ್-VI ಎಂಜಿನ್ ಅನ್ನು ಹೊಂದಿರಬೇಕಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಬಿಡಗಡೆಯಾಲಗಿರುವ ಡಾಮಿನಾರ್ ಬೈಕಿನಲ್ಲಿ ಬಿಎಸ್-VI ಎಂಜಿನ್ ಅಳವಡಿಕೆಯು ಬಹುಮುಖ್ಯ ಬದಲಾವಣೆ ಎಂದೇ ಹೇಳಬಹುದು.
ಎಂಜಿನ್ ಸಾಮರ್ಥ್ಯ
ಹೊಸ ಬಜಾಜ್ ಡಾಮಿನಾರ್ 400 ಬೈಕ್ 373ಸಿಸಿ ಸಿಂಗಲ್ ಸಿಲೆಂಡರ್, ಲಿಕ್ವಿಡ್ ಕೂಲ್ಡ್ ಎಂಜಿನ್ ಸಹಾಯದಿಂದ 40 ಬಿಹೆಚ್ಪಿ ಮತ್ತು 34ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಅಂದರೆ ಹಿಂದಿನ ಮಾದರಿಯ ಬೈಕಿಗೆ ಹೋಲಿಸಿದರೆ 6 ಬಿಹೆಚ್ಪಿ ಹೆಚ್ಚಿನದಾಗಿ ಹೊಸ ಬೈಕ್ ಪಡೆದಿದೆ.
ಅಷ್ಟೆ ಅಲ್ಲದೇ ಈ ಬಾರಿಯ ಬಜಾಜ್ ಡಾಮಿನಾರ್ 400 ಬೈಕಿನಲ್ಲಿ ಪ್ರೀಮಿಯಂ ಸೌಲಭ್ಯಗಳನ್ನು ಸಹ ನೀಡಲಾಗಿದ್ದು, ಹೊಸ ಎಕ್ಸಾಸ್ಟ್ ಸಿಸ್ಟಂ ಅನ್ನು ನೀಡಲಾಗಿದೆ. ಈ ಬಾರಿ ಈ ಬೈಕಿನಲ್ಲಿ ಡ್ಯುಯಲ್ ಎಕ್ಸಾಸ್ಟ್ ಪೋರ್ಟ್ಸ್, ಮುಂಭಾಗದಲ್ಲಿ ಅಪ್ಸೈಡ್ ಫ್ರಂಟ್ ಫೋರ್ಕ್ಸ್ ಅನ್ನು ಒದಗಿಸಲಾಗಿದೆ. ಜೊತೆಗೆ ಈ ಹೊಸ ಎಕ್ಸಾಸ್ಟ್ ಹೆಚ್ಚು ಸದ್ದನ್ನು ಕೂಡ ಹೊರಹಾಕುತ್ತಂತೆ.
ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಹೊಸ ಡಾಮಿನಾರ್ 400 ಬೈಕಿನಲ್ಲಿ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಿದ್ದು, ಮುಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 220ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.
ಕನ್ನಡ ಡ್ರೈವ್ಸ್ಪಾರ್ಕ್ ಅಭಿಪ್ರಾಯ
ಬಜಾಜ್ ಸಂಸ್ಥೆಯಲ್ಲಿನ ಜನಪ್ರಿಯ ಡಾಮಿನಾರ್ ಬೈಕ್ ಈ ಬಾರಿ ಹಲವಾರು ಬದಲಾವಣೆಗಳನ್ನು ಪಡೆದು ಇದೀಗ ಬಿಡುಗಡೆಗೊಂಡಿದ್ದು, ಈಗಾಗಲೆ ಮಾರುಕಟ್ಟೆಯಲ್ಲಿರುವ ಕೆಟಿಎಂ ಡ್ಯೂಕ್ 390, ಹೋಂಡಾ ಸಿಬಿ300ಆರ್ ಮತ್ತು ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 350 ಬೈಕ್ಗಳಿಗೆ ಪೈಪೋಟಿ ನೀಡಲಿದೆ.
Source: TimesDrive