2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

2019ರ ಅವಧಿಯಲ್ಲಿ ವಿವಿಧ ಬೈಕ್ ಉತ್ಪಾದನಾ ಸಂಸ್ಥೆಗಳು ಹಲವು ಹೊಸ ವಿನ್ಯಾಸದ ಬೈಕ್ ಮಾದರಿಗಳನ್ನು ಬಿಡುಗಡೆಗೊಳಿಸಿದ್ದು, ಮೊದಲ ಬಾರಿಗೆ ಎಲೆಕ್ಟ್ರಿಕ್ ಬೈಕ್ ಮಾದರಿಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಭಾರತದಲ್ಲಿ 15ಕ್ಕೂ ಬೈಕ್ ಉತ್ಪಾದನಾ ಸಂಸ್ಥೆಗಳು ತಮ್ಮ ವಿವಿಧ ಮಾದರಿಯ ಬೈಕ್ ಆವೃತ್ತಿಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತವೆ. ಇವುಗಳಲ್ಲಿ ಕೆಲವು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾದಲ್ಲಿ ಇನ್ನು ಕೆಲವು ಬೈಕ್ ಮಾದರಿಗಳು ಬೇಡಿಕೆಯಲ್ಲಿ ಹಿನ್ನಡೆ ಅನುಭವಿಸಿವೆ. ಹಾಗಾದ್ರೆ 2019ರಲ್ಲಿ ಬಿಡುಗಡೆಯಾದ ಬೈಕ್ ಯಾವವು? ಅವುಗಳ ವಿಶೇಷತೆ ಏನು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಯಮಹಾ ಎಂಟಿ15

ವರ್ಷದ ಆರಂಭದಲ್ಲೇ ಬಿಡುಗಡೆಯಾದ ಎಂಟಿ15 ಬೈಕ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ವೈಜೆಡ್ಎಫ್-ಆರ್15 ಬೈಕಿಗಿಂತಲೂ ಅತ್ಯುತ್ತಮ ಪರ್ಫಾಮೆನ್ಸ್ ಆವೃತ್ತಿಯಾಗಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.1.36ಲಕ್ಷಕ್ಕೆ ನಿಗದಿಗೊಳಿಸಲಾಗಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ಈ ಬೈಕ್ ಅನ್ನು ವಿಶೇಷವಾಗಿ ಸಿದ್ದಗೊಳಿಸಲಾಗಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

'ದ ಡಾರ್ಕ್ ಸೈಡ್ ಆಫ್ ಜಪಾನ್' ಮಾದರಿಯ ಹೆಡ್‌ಲ್ಯಾಂಪ್ ಸೌಲಭ್ಯವು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿದ್ದು, ಲಿಕ್ಟಿಡ್ ಕೂಲ್ಡ್ 155 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ ವೆರಿವೆಬಲ್ ವೆವ್ ಟಿಮಿಂಗ್(ವಿವಿಟಿ) ತಂತ್ರಜ್ಞಾನ ಪ್ರೇರಣೆ ಹೊಂದಿದೆ. ಈ ಮೂಲಕ 19.3-ಬಿಎಚ್‌ಪಿ ಮತ್ತು 14.7-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ರಿಯರ್ ವೀಲ್ಹ್ ಸ್ಲಿಪ್ಲರ್ ಕ್ಲಚ್ ಸೌಲಭ್ಯ ಪಡೆದಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಕೆಟಿಎಂ ಆರ್‌ಸಿ 125

ದೇಶಿಯ ಮಾರುಕಟ್ಟೆಯಲ್ಲಿನ ಪರ್ಫಾರ್ಮೆನ್ಸ್ ಬೈಕ್‍ ಮಾರಾಟದಲ್ಲಿ ಜನಪ್ರಿಯತೆಯನ್ನು ಪಡೆಯುತ್ತಿರುವ ಕೆಟಿಎಂ ಸಂಸ್ಥೆಯು ಆರ್‌ಸಿ 125 ಆವೃತ್ತಿಯನ್ನು ಕಳೆದ ಜೂನ್‌ನಲ್ಲಿ ಬಿಡುಗಡೆ ಮಾಡಿತ್ತು. ದೆಹಲಿಯ ಎಕ್ಸ್ ಶೋರೂಂ ಪ್ರಕಾರ ಈ ಬೈಕ್ ಬೆಲೆಯನ್ನು ರೂ. 1.48 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಆರ್‌ಸಿ 200 ಮಾದರಿಯಲ್ಲೇ ಚಾರ್ಸಿ, ಸಸ್ಷೆನ್ ಈ ಬೈಕಿನಲ್ಲಿದೆ. ಈ ಮೂಲಕ ಸ್ಪೋಟಿ ಲುಕ್ ಹೆಚ್ಚಿಸುವುದರ ಜೊತೆಗೆ ಎಂಜಿನ್ ರಕ್ಷಣೆಗಾಗಿ ಸ್ವಿಂಗ್ ಆರ್ಮ್ ಸೌಲಭ್ಯವನ್ನು ಜೋಡಿಸಲಾಗಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಎಂಟ್ರಿ ಲೆವಲ್ ಪರ್ಫಾರ್ಮೆನ್ಸ್ ಪ್ರಿಯರನ್ನು ಆಕರ್ಷಿಸಲು ಕೆಟಿಎಂ ಆರ್‍‍ಸಿ 125 ಬೈಕಿನಲ್ಲಿ 124ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಜೋಡಿಸಲಾಗಿದ್ದು, 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ 14.3 ಬಿಹೆಚ್‍ಪಿ ಮತ್ತು 12 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಹೋಂಡಾ ಸಿಬಿ300ಆರ್

2019ರ ಆರಂಭದಲ್ಲಿ ಬಿಡುಗಡೆಯಾದ ಮೊದಲ ಹೊಸ ಬೈಕ್ ಮಾದರಿಗಳಲ್ಲಿ ಸಿಬಿ300ಆರ್ ಕೂಡಾ ಒಂದಾಗಿದೆ. ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ. 2.41 ಲಕ್ಷ ಬೆಲೆ ನಿಗದಿ ಮಾಡಲಾಗಿದ್ದು, ಈ ಬೈಕ್ ಹೋಂಡಾ ಸಂಸ್ಥೆಯ ಮೊದಲ 300ಸಿಸಿ ಮೋಟಾರ್‍‍ಸೈಕಲ್ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

286ಸಿಸಿ ಲಿಕ್ವಿಡ್ ಕೂಲ್ಡ್, ಫ್ಯೂಲ್ ಇಂಜೆಕ್ಷೆಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರುವ ಸಿಬಿ300ಆರ್ ಬೈಕ್‌ ಮಾದರಿಯು 31.4-ಬಿಎಚ್‌ಪಿ ಮತ್ತು 27.5-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಸಿಂಗಲ್ ಪೀಸ್ ಹ್ಯಾಂಡಲ್ ಬಾರ್‌ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್ ಪಡೆದಿದೆ. ವಿಶೇಷ ಅಂದ್ರೆ ಈ ಬೈಕ್ ಮಾದರಿಯು ಆಯ್ದ ಹೋಂಡಾ ಶೋರೂಂಗಳಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುತ್ತದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಹೀರೋ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ

ದೇಶದ ಜನಪ್ರಿಯ ಬೈಕ್ ಉತ್ಪಾದನಾ ಸಂಸ್ಥೆಯಾದ ಹೀರೋ ಮೊಟೊಕಾರ್ಪ್ ತನ್ನ ಜನಪ್ರಿಯ ಅಡ್ವೆಂಚರ್ ಆವೃತ್ತಿಗಳಾದ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಬೈಕ್‌ಗಳನ್ನು ಕಳೆದ ಮೇ 1ರಂದು ಬಿಡುಗಡೆ ಮಾಡಿತ್ತು. ಹೊಸ ಬೈಕ್‌ಗಳ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.94 ಸಾವಿರದಿಂದ ಟಾಪ್ ಎಂಡ್ ಮಾದರಿಯು ರೂ.1.05 ಲಕ್ಷ ಬೆಲೆ ಪಡೆದುಕೊಂಡಿವೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಹೊಸ ಎಕ್ಸ್‌ಪಲ್ಸ್ 200 ಮತ್ತು ಎಕ್ಸ್‌ಪಲ್ಸ್ 200ಟಿ ಮಾದರಿಗಳು 199.6 ಸಿಸಿ ಸಿಂಗಲ್ ಸಿಲಿಂಡರ್, ಏರ್ ಕೂಲ್ಡ್ ಎಂಜಿನ್ ಸಾಮರ್ಥ್ಯವನ್ನು ಹೊಂದಿದ್ದು, 5-ಸ್ಪೀಡ್ ಮ್ಯನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 18.4-ಬಿಎಚ್‌ಪಿ ಮತ್ತು 17.1-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಅಡ್ವೆಂಚರ್ ಮತ್ತು ಟೂರರ್ ವಿಭಾಗದಲ್ಲಿನ ಬೇಡಿಕೆಯೆಂತೆ ಗರಿಷ್ಠ ಮಟ್ಟದ ವೈಶಿಷ್ಟ್ಯತೆಗಳನ್ನು ಹೊಂದಿರುವ ಹೊಸ ಬೈಕ್‌ಗಳು ಡ್ಯುಯಲ್ ಪರ್ಪಸ್ ಟೈರ್, 21-ಇಂಚಿನ ಫ್ರಂಟ್ ವೀಲ್ಹ್, 18-ಇಂಚಿನ ರಿಯರ್ ವೀಲ್ಹ್ ಸೌಲಭ್ಯ ಪಡೆದಿದ್ದು, ಫುಲ್ ಎಲ್‌ಇಡಿ ರೌಂಡ್ ಹೆಡ್‌ಲ್ಯಾಂಪ್, ಸಿಂಗಲ್ ಪೀಸ್ ಸೀಟ್, ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಗೇರ್ ಇಂಡಿಕೇಟರ್ ಗಮನಸೆಳೆಯುತ್ತವೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಸುಜುಕಿ ಜಿಕ್ಸರ್ ಎಸ್ಎಫ್ 150 ಮತ್ತು ಜಿಕ್ಸರ್ ಎಸ್ಎಫ್ 250

2018ರಲ್ಲಿ ಜಿಕ್ಸರ್ 150 ಸರಣಿಯನ್ನು ಪರಿಚಯಿಸಿದ್ದ ಸುಜುಕಿ ಮೋಟಾರ್‌ಸೈಕಲ್ ಸಂಸ್ಥೆಯು ಕಳೆದ ಜೂನ್‌ನಲ್ಲಿ ಜಿಕ್ಸರ್ ಎಸ್ಎಫ್ 150 ಮತ್ತು ಜಿಕ್ಸರ್ ಎಸ್ಎಫ್ 250 ಮಾದರಿಯನ್ನು ಬಿಡುಗಡೆ ಮಾಡಿತ್ತು. ಹೊಸ ಬೈಕ್‌ಗಳು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ಜಿಕ್ಸರ್ ಎಸ್ಎಫ್ ಮಾದರಿಯು ರೂ. 1,09,870 ಮತ್ತು ಜಿಕ್ಸರ್ ಎಸ್ಎಫ್ 250 ಮಾದರಿಯು ರೂ. 1,70,655 ಬೆಲೆ ಪಡೆದುಕೊಂಡಿವೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

2019ರ ಹೊಸ ಸುಜುಕಿ ಜಿಕ್ಸರ್ ಎಸ್ಎಫ್ 150 ಬೈಕ್ ಮಾದರಿಯು 154.9ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದೊಂದಿಗೆ 14.1-ಬಿಹೆಚ್‍ಪಿ ಮತ್ತು 14-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಹೊಸ ಎಂಜಿನ್ ಮಾದರಿಯನ್ನು 5-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಇನ್ನು ಸುಜುಕಿ ಜಿಕ್ಸರ್ ಎಸ್ಎಫ್ 250 ಬೈಕ್ ಮಾದರಿಯು 249ಸಿಸಿ ಆಯಿಲ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದೊಂದಿಗೆ 26.5-ಬಿಹೆಚ್‍ಪಿ ಮತ್ತು 22.6-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿ ಹೊಂದಿದ್ದು, ಹೊಸ ಬೈಕ್ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ರಿವೋಲ್ಟ್ ಎಲೆಕ್ಟ್ರಿಕ್ ಬೈಕ್

ಕೈಗೆಟುಕುವ ಬೆಲೆ ಮತ್ತು ಅತ್ಯುತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್‌ಗಳು ಗ್ರಾಹಕರ ಆಕರ್ಷಣೆಗೆ ಕಾರಣವಾಗಿವೆ. ಆರ್‌ವಿ300 ಮತ್ತು ಆರ್‌ವಿ400 ಎನ್ನುವ ಎರಡು ಎಲೆಕ್ಟ್ರಿಕ್ ಬೈಕ್‌ಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಿರುವ ರಿವೋಲ್ಟ್ ಸಂಸ್ಥೆಯು ಆರ್‍‍‍ವಿ 300 ಬೈಕಿಗೆ ರೂ.84,999 ಹಾಗೂ ಆರ್‍‍ವಿ 400 ಪ್ರೀಮಿಯಂ ಬೈಕಿಗೆ ರೂ.98,999 ದರ ನಿಗದಿಪಡಿಸಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಆರ್‌ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಬೆನೆಲ್ಲಿ ಇಂಪೀರಿಯಲ್ 400

ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿಗೆ ಪೈಪೋಟಿಯಾಗಿ ಬೆನೆಲ್ಲಿ ಸಂಸ್ಥೆಯು ಇಂಪೀರಿಯಲ್ 400 ಬೈಕ್ ಬಿಡುಗಡೆ ಮಾಡಿದ್ದು, ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಹೊಸ ಬೈಕ್ ಮಾರಾಟದಲ್ಲಿ ಉತ್ತಮ ಪ್ರಕ್ರಿಯೆ ದೊರೆತಿದೆ. ಹೊಸ ಇಂಪೀರಿಯಲ್ ಬೈಕ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.69 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳೊಂದಿಗೆ ಕ್ಲಾಸಿಕ್ ಬೈಕ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಇಂಪೀರಿಯಲ್ 400 ಬೈಕ್ ಮಾದರಿಯು 374 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಜೋಡಣೆ ಪಡೆದುಕೊಂಡಿದ್ದು, ಫೈವ್ ಸ್ಪೀಡ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 20.7-ಬಿಎಚ್‌ಪಿ ಮತ್ತು 29-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದೆ. ಹೊಸ ಬೈಕಿನ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೊಫಿಕ್ ಫೋಕ್ಸ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಶಾಕ್ ಅಬ್ಸಾರ್ವರ್ ನೀಡಲಾಗಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಜಾವಾ ಪೆರಾಕ್

2018ರಲ್ಲಿ ಅನಾವರಣಗೊಳಿಸಲಾಗಿದ್ದ ಪೆರಾಕ್ ಬಾಬರ್ ಸ್ಟೈಲ್ ಬೈಕ್ ಮಾದರಿಯು ಕಳೆದ ನವೆಂಬರ್ ಅವಧಿಯಲ್ಲಿ ಬಿಡುಗಡೆಗೊಂಡಿದ್ದು, ಹೊಸ ಬೈಕ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,95,500 ಬೆಲೆ ಪಡೆದುಕೊಂಡಿದೆ. 1940ರ ಅವಧಿಯಲ್ಲಿನ ಬಾಬರ್ ಸ್ಟೈಲ್ ಬೈಕ್ ವಿನ್ಯಾಸವನ್ನು ಹೊತ್ತುಬಂದಿರುವ ಪೆರಾಕ್ ಬೈಕ್ ಮಾದರಿಯು ವಿಶೇಷ ಬಾಡಿ ಶೈಲಿಯೊಂದಿಗೆ ಭಾರತದಲ್ಲಿರುವ ಇತರೆ ಎಲ್ಲಾ ಬೈಕ್ ಮಾದರಿಗಳಿಂತಲೂ ಉದ್ದವಾದ ವೀಲ್ಹ್ ಬೆಸ್ ಹೊಂದಿರುವ ಮೊದಲ ಬೈಕ್ ಇದಾಗಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಪೆರಾಕ್ ಬೈಕ್ ಮಾದರಿಯು 2020ರ ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಸಾರ ಅಭಿವೃದ್ದಿ ಹೊಂದಿದ್ದು, 334-ಸಿಸಿ ಎಂಜಿನ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 30-ಬಿಎಚ್‌ಪಿ ಮತ್ತು 31-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಪೆರಾಕ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಹೊಸ ಬೈಕ್ ವಿತರಣೆಯು ಶೀಘ್ರದಲ್ಲೇ ಆರಂಭವಾಗಲಿದೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಬಜಾಜ್ ಸಿಟಿ110

ಕಳೆದ ಜುಲೈನಲ್ಲಿ ಬಜಾಜ್ ಆಟೋ ಸಂಸ್ಥೆಯು ಮಾರುಕಟ್ಟೆಯ ಬೇಡಿಕೆ ಅನುಸಾರವಾಗಿ ತನ್ನ ಜನಪ್ರಿಯ ಬೈಕ್ ಆವೃತ್ತಿಯಾಗಿರುವ ಸಿಟಿ100 ಎಂಟ್ರಿ ಲೆವೆಲ್ ಮಾದರಿಯಲ್ಲಿ ಹೊಚ್ಚ ಹೊಸ ಸಿಟಿ110 ಆವೃತ್ತಿಯೊಂದನ್ನು ಬಿಡುಗಡೆ ಮಾಡಿತ್ತು. ಕಿಕ್ ಸ್ಟಾರ್ಟ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್ ಮಾದರಿಯಲ್ಲಿ ಹೊಸ ಸಿಟಿ110 ಬೈಕ್ ಮಾದರಿಯು ಖರೀದಿಗೆ ಲಭ್ಯವಿರಲಿದ್ದು, ಡಿಸ್ಕವರ್ ಮತ್ತು ಪ್ಲ್ಯಾಟಿನಾ ಬೈಕ್ ಮಾದರಿಗಳಿಗಾಗಿ ಅಭಿವೃದ್ಧಿಪಡಿಸಲಾದ ಹೊಸ ಎಂಜಿನ್ ಮಾದರಿಯನ್ನೇ ಸಿಟಿ110 ಬೈಕ್‌ನಲ್ಲಿ ಜೋಡಿಸಲಾಗಿದೆಯೆಂತೆ.

2019ರ ಅವಧಿಯಲ್ಲಿ ಬಿಡುಗಡೆಯಾದ ಟಾಪ್ 10 ಬೈಕ್‌ಗಳಿವು...

ಕಿಕ್ ಸ್ಟಾರ್ಟ್ ಸಿಟಿ 110 ಮಾದರಿಯು ರೂ.33,997 ಕ್ಕೆ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್ ಮಾದರಿಯು ರೂ. 44,352 ಕ್ಕೆ ಖರೀದಿಸಬಹುದಾಗಿದ್ದು, ಎಂಟ್ರಿ ಲೆವಲ್ ಬೈಕ್ ಮಾದರಿಗಳಲ್ಲೇ ಇದು ಅತಿ ಕಡಿಮೆ ಬೆಲೆ ಎಂದರೆ ತಪ್ಪಾಗುವುದಿಲ್ಲ.

Most Read Articles

Kannada
English summary
New bike Launches In 2019: Here Are The Best New bike Models Introduced In India This Year.
Story first published: Wednesday, December 25, 2019, 19:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X