ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಬಿಡುಗಡೆಗೂ ಮುನ್ನವೇ ಬೈಕ್ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಜಾವಾ ಹೊಚ್ಚ ಹೊಸ ಬೈಕ್‌ಗಳನ್ನು ಜಾವಾ ಮತ್ತು ಕ್ಲಾಸಿಕ್ ಲೆಜೆಂಡ್ ಸಂಸ್ಥೆಗಳು ಜಂಟಿಯಾಗಿ ಕಳೆದ ವರ್ಷ ನವೆಂಬರ್‌ನಲ್ಲಿ ಬಿಡುಗಡೆಗೊಳಿಸಿದ್ದು, ಈ ವೇಳೆ ಪ್ರದರ್ಶನಗೊಂಡಿದ್ದ ಪೆರಾಕ್ ಬೈಕ್ ಮಾದರಿಯು ಇದೀಗ ಅಂತಿಮವಾಗಿ ಗ್ರಾಹಕರ ಕೈಸೇರಲು ಸಿದ್ದವಾಗುತ್ತಿದೆ.

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಯಶಸ್ವಿಯಾಗಿದೆ.

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಸದ್ಯಕ್ಕೆ ಮೂರು ಹೊಸ ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್‌ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಪೆರಾಕ್ ಎನ್ನುವ ಕಸ್ಟಮ್ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು.

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಇದೀಗ ಅಂತಿಮವಾಗಿ ಬರೋಬ್ಬರಿ 1 ವರ್ಷದ ನಂತರ ಪೆರಾಕ್ ಬೈಕ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿರುವ ಜಾವಾ ಸಂಸ್ಥೆಯು ಇದೇ ತಿಂಗಳು 15ರಂದು ಅಧಿಕೃತ ಮಾರಾಟಕ್ಕೆ ಚಾಲನೆ ನೀಡುವುದಾಗಿ ಹೇಳಿಕೊಂಡಿದ್ದು, ಬೈಕ್ ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ.

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಜಾವಾ ಪೆರಾಕ್ ಬೈಕ್ ಬೆಲೆಯನ್ನು ಈಗಾಗಲೇ ಬಹಿರಂಗಪಡಿಸಲಾಗಿದ್ದುೃ, ದೆಹಲಿ ಎಕ್ಸ್‌ಶೋರೂಂ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ಆಗಿರುವ ತಾಂತ್ರಿಕ ಬದಲಾವಣೆಗಳು ಮತ್ತು ಉತ್ಪಾದನಾ ವೆಚ್ಚದಲ್ಲಿನ ಬದಲಾವಣೆಯಿಂದಾಗಿ ಬೈಕ್ ಬೆಲೆಯಲ್ಲಿ ತುಸು ದುಬಾರಿಯಾಗುವ ಸಾಧ್ಯತೆಗಳಿವೆ. ಜೊತೆಗೆ ಹೊಸ ಬೈಕ್ ಮಾದರಿಯು 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಬಿಡುಗಡೆಯಾಗಲಿದೆ.

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಎಂಜಿನ್ ಸಾಮರ್ಥ್ಯ

ಪೆರಾಕ್ ಬೈಕ್ ಮಾದರಿಯು ಬಿಎಸ್-6 ಪ್ರೇರಣೆಯ 334-ಸಿಸಿ ಎಂಜಿನ್ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದುಕೊಂಡಿದ್ದು, 30-ಬಿಎಚ್‌ಪಿ ಮತ್ತು 31-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿರಲಿದೆ.

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಪೆರಾಕ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಮತ್ತೊಂದು ವಿಶೇಷ ಅಂದ್ರೆ, ಪೆರಾಕ್ ಮಾದರಿಯು ಕ್ಲಾಸಿಕ್ ಲೆಜೆಂಡ್ ಕಂಪನಿಯಿಂದಲೇ ಮಾಡಿಫೈಗೊಂಡ ಬೈಕ್ ಆವೃತ್ತಿಯಾಗಲಿದ್ದು, ಡ್ಯುಯಲ್ ಚಾನೆಲ್ ಎಬಿಎಸ್, ಎರಡು ಬದಿಯ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್, ರೌಂಡ್ ಹೆಡ್‌ಲ್ಯಾಂಪ್, ಡ್ಯಯಲ್ ಎಕ್ಸಾಸ್ಟ್ ಫೀಚರ್ಸ್‌ಗಳು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿವೆ.

MOST READ: ಬೈಕುಗಳಲ್ಲಿ ಡೀಸೆಲ್ ಎಂಜಿನ್ ಏಕೆ ಬಳಸಲ್ಲ ಗೊತ್ತಾ?

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಇನ್ನು ಸದ್ಯ ಮಾರುಕಟ್ಟೆಯಲ್ಲಿ ಜಾವಾ ಕ್ಲಾಸಿಕ್ ಬೈಕ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1.64 ಲಕ್ಷಕ್ಕೆ ಮತ್ತು ಜಾವಾ 42 ಮಾದರಿಯು ರೂ. 1.55 ಲಕ್ಷಕ್ಕೆ ಮಾರಾಟವಾಗುತ್ತಿದ್ದು, ಎರಡು ಬೈಕ್‌ಗಳು 293-ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದೊಂದಿಗೆ 27-ಬಿಹೆಚ್‍ಪಿ ಮತ್ತು 28-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿವೆ.

MOST READ: ರಸ್ತೆ ಮಧ್ಯದಲ್ಲೇ ಕೈಕೊಟ್ಟ 4 ಕೋಟಿ ಬೆಲೆಯ ಹೊಸ ಕಾರು..!

ಜಾವಾ ಬಹುನೀರಿಕ್ಷಿತ ಪೆರಾಕ್ ಬೈಕ್ ಬಿಡುಗಡೆ ಮಾಹಿತಿ ಬಹಿರಂಗ

ಆದರೆ ಹೊಸ ಬೈಕ್‌ಗಳಿಗೆ ಭಾರೀ ಬೇಡಿಕೆಯಿದ್ದರೂ ಸಹ ಬೇಡಿಕೆಗೆ ತಕ್ಕಂತೆ ನಿಗದಿತ ಅವಧಿಯಲ್ಲಿ ಬೈಕ್ ಉತ್ಪಾದನೆ ಮತ್ತು ವಿತರಣೆಯನ್ನು ವಿಳಂಬ ಮಾಡುತ್ತಿರುವ ಕ್ಲಾಸಿಕ್ ಲೆಜೆಂಡ್ ಸಂಸ್ಥೆಯು ಗ್ರಾಹಕರ ಅಸಮಾಧಾನಕ್ಕೂ ಕಾರಣವಾಗಿದ್ದು, ಇದೀಗ ಬಿಡುಗಡೆಗೆ ಸಿದ್ದವಾಗಿರುವ ಪೆರಾಕ್ ಬೈಕಿನ ಬೇಡಿಕೆಯನ್ನು ಯಾವ ರೀತಿ ಪೂರೈಕೆ ಮಾಡಲಿದೆ ಎನ್ನುವುದೇ ಕುತೂಹಲಕ್ಕೆ ಕಾರಣವಾಗಿದೆ.

Most Read Articles

Kannada
English summary
Jawa has sent media invitation and revealed the launch of new Perak motorcycle on 15th November.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X