Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 4 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 5 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೆಲ್ಮೆಟ್ ಇಲ್ಲದ ಬೈಕ್ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಜಾರಿಗೆ ತಂದ ಬೆಂಗಳೂರು ಪೊಲೀಸರು..!
ದುಬಾರಿ ದಂಡಗಳನ್ನು ಒಳಗೊಂಡ ಹೊಸ ಸಂಚಾರಿ ನಿಯಮ ಜಾರಿ ನಂತರ ಕಡಿಮೆಯಾಗಬೇಕಿದ್ದ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆಯು ಮತ್ತಷ್ಟು ಹೆಚ್ಚಳವಾಗುತ್ತಿದ್ದು, ಕಡ್ಡಾಯ ಹೆಲ್ಮೆಟ್ ಬಳಕೆಗಾಗಿ ಮತ್ತಷ್ಟು ಹೊಸ ಕ್ರಮಗಳನ್ನು ಜಾರಿಗೆ ತರಲಾಗಿದೆ.

ಹೊಸ ಮೋಟಾರ್ ವೆಹಿಕಲ್ ಕಾಯ್ದೆ ಜಾರಿಗೆ ಬಂದ ನಂತರ ವಾಹನ ಸವಾರರನ್ನು ತೀವ್ರ ತಪಾಸಣೆ ಮಾಡುತ್ತಿರುವ ಟ್ರಾಫಿಕ್ ಪೊಲೀಸರು ನಿಯಮ ಉಲ್ಲಂಘಿಸುವ ವಾಹನ ಸವಾರರಿಂದ ಭರ್ಜರಿ ದಂಡ ವಸೂಲಿ ಮಾಡುತ್ತಿದ್ದಾರೆ. ಹೀಗಿರುವಾಗ ಕೆಲವು ವಾಹನ ಸವಾರರು ಮಾತ್ರ ಹೊಸ ರೂಲ್ಸ್‌ಗೂ ಡೋಂಟ್ ಕೇರ್ ಎನ್ನುವಂತೆ ಪದೇ ಪದೇ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೇ ಇದ್ದು, ಹೆಲ್ಮೆಟ್ ಕಡ್ಡಾಯ ಬಳಕೆಗೆ ಬೆಂಗಳೂರು ಪೊಲೀಸರು ಹೊಸ ನಿಯಮವೊಂದನ್ನು ಕಡ್ಡಾಯವಾಗಿ ಜಾರಿಗೆ ತಂದಿದ್ದಾರೆ.

ಬೈಕ್ ಸವಾರರಿಗೆ ಹೆಲ್ಮೆಟ್ ಬಳಕೆಯು ಜೀವ ರಕ್ಷಕವಾಗಿದ್ದರೂ ಕೆಲವು ಬೈಕ್ ಸವಾರರು ಮಾತ್ರ ಹೆಲ್ಮೆಟ್ ಬಳಕೆ ಅವಶ್ಯಕತೆಯೇ ಇಲ್ಲ ಎನ್ನುವಂತಹ ಮನಸ್ಥಿತಿ ಹೊಂದಿದ್ದು, ಅಪಘಾತಗಳ ವೇಳೆ ಅದೆಷ್ಟೋ ಸವಾರರು ಜೀವ ಕಳೆದುಕೊಂಡಿದ್ದಾರೆ.

ಹೀಗಾಗಿ ಬೈಕ್ ಸವಾರರು ಕಡ್ಡಾಯ ಹೆಲ್ಮೆಟ್ ಬಳಕೆಗೆ ಹೊಸ ಸಂಚಾರಿ ನಿಯಮದಲ್ಲಿ ಭರ್ಜರಿ ದಂಡಗಳ ಹೊರತಾಗಿಯೂ ಹೆಲ್ಮೆಟ್ ಬಳಕೆಯನ್ನು ಕಟ್ಟುನಿಟ್ಟಾಗಿ ಕಡ್ಡಾಯಗೊಳಿಸುತ್ತಿರುವ ಬೆಂಗಳೂರು ಪೊಲೀಸರು ನೋ ಹೆಲ್ಮೆಟ್, ನೋ ಪೆಟ್ರೋಲ್ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಪೆಟ್ರೋಲ್ ಬಂಕ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಪೆಟ್ರೋಲ್ ಬಂಕ್‌ಗಳಿಗೆ ಬರುವ ದ್ವಿಚಕ್ರ ಸವಾರರು ಹೆಲ್ಮೆಟ್ ಬಳಕೆ ಮಾಡಿದ್ದರೆ ಮಾತ್ರವೇ ಇಂಧನ ಹಾಕುವಂತೆ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದ್ದು, ಪೆಟ್ರೋಲ್ ಬಂಕ್ ಮಾಲೀಕರು ಕೂಡಾ ಬೈಕ್ ಸವಾರರಿಗೆ ಕಡ್ಡಾಯ ಹೆಲ್ಮೆಟ್ ಬಳಕೆ ಮಾಡಿದಲ್ಲಿ ಮಾತ್ರ ಪೆಟ್ರೋಲ್ ಎನ್ನುವಂತಹ ಫಲಕಗಳನ್ನು ಹಾಕುತ್ತಿದ್ದಾರೆ. ಇದರಿಂದ ಬೈಕ್ ಸವಾರರು ಒಂದು ವೇಳೆ ಹೆಲ್ಮೆಟ್ ಹಾಕದೆ ಪೊಲೀಸರಿಂದ ತಪ್ಪಿಸಿಕೊಂಡರೂ ಸಹ ಪೆಟ್ರೋಲ್ ಇಲ್ಲದೇ ಪರದಾಡುವಂತಹ ಪರಿಸ್ಥಿತಿ ಎದುರಿಸಬೇಕಾಗುತ್ತೆ.

ಇನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೋಟಾರ್ ಕಾಯ್ದೆ ಅನುಷ್ಠಾನದ ನಂತರ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ ವಾಹನ ಸವಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲಾಗುತ್ತಿದ್ದು, ಬೆಂಗಳೂರು ನಗರವೊಂದರಲ್ಲೇ ಬರೋಬ್ಬರಿ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳಿಂದ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಹೊಸ ಮೋಟಾರ್ ಕಾಯ್ದೆ ಜಾರಿಗೆ ಬಂದ ಕ್ಷಣದಿಂದಲೇ ಫೀಲ್ಡ್‌ಗೆ ಇಳಿದಿರುವ ಟ್ರಾಫಿಕ್ ಪೊಲೀಸರು ಹೊಸ ಕಾಯ್ದೆ ಅಡಿ ದಂಡವಿಧಿಸುತ್ತಿದ್ದು, ಕೇವಲ ನಾಲ್ಕೈದು ದಿನಗಳ ಅವಧಿಯಲ್ಲಿ ಲಕ್ಷ ಲಕ್ಷ ದಂಡ ವಸೂಲಿ ಮಾಡಿದ್ದಾರೆ.
MOST READ: ದಂಡದಿಂದ ತಪ್ಪಿಸಿಕೊಳ್ಳಲು ವಾಹನ ಸವಾರರಿಗೆ ಹೊಸ ಮಾರ್ಗ ಸೂಚಿಸಿದ ಬೆಂಗಳೂರು ಪೊಲೀಸರು..!

ಭರ್ಜರಿ ದಂಡಗಳ ಹೊರತಾಗಿಯೂ ವಿವಿಧ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಂದ ಸುಮಾರು ರೂ.60 ಲಕ್ಷಕ್ಕೂ ಹೆಚ್ಚು ದಂಡ ವಸೂಲಿ ಮಾಡಲಾಗಿದ್ದು, ಪದೇ ಪದೇ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ವಾಹನ ಸವಾರರು ಹೊಸ ದಂಡದ ಮೊತ್ತ ನೋಡಿ ಶಾಕ್ ಆಗಿದ್ದಾರೆ.
MOST READ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಈ ಸ್ಕೂಟರ್ ಮಾಲೀಕ ಮಾಡಿದ್ದೇನು ಗೊತ್ತಾ?

ಮೋಟಾರ್ ವೆಹಿಕಲ್ ಕಾಯ್ದೆಗೆ ಕೆಲವು ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರವು ಪ್ರಸ್ತುತ ಇರುವ ದಂಡಗಳ ಮೊತ್ತದಲ್ಲಿ ಭಾರೀ ಪ್ರಮಾಣದ ಹೆಚ್ಚಳ ಮಾಡಲಾಗಿದ್ದು, ಇದರಲ್ಲಿ ಕೆಲವು ಪ್ರಕರಣಗಳ ಮೇಲೆ ಗರಿಷ್ಠ ಪ್ರಮಾಣದ ದಂಡಗಳನ್ನು ವಿಧಿಸಲಾಗಿದೆ.
MOST READ: ಹೆಲ್ಮೆಟ್ ಹಾಕದ ಸಬ್ ಇನ್ಸ್‌ಪೆಕ್ಟರ್‌ಗೆ ಸರಿಯಾಗಿಯೇ ಪಾಠ ಕಲಿಸಿದ ಕಾನ್‌ಸ್ಟೆಬಲ್

ಹೀಗಾಗಿ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸುವಂತಹ ಪರಿಸ್ಥಿತಿ ಎದುರಾಗಿದ್ದು, ಕೆಲವು ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ರೂ.70 ಸಾವಿರದಿಂದ ರೂ. 80 ಸಾವಿರದಷ್ಟು ದಂಡ ವಿಧಿಸಿರುವ ಬಗ್ಗೆ ವರದಿಗಳಾಗಿವೆ.

ಅಧಿಕೃತವಾಗಿ ಚಾಲನಾ ಪರವಾನಿಗೆ ಪಡೆಯದೇ ವಾಹನಗಳನ್ನು ಚಾಲನೆ ಮಾಡುವ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಲೆಸೆನ್ಸ್ ಹೊಂದದೇ ವಾಹನ ಚಾಲನೆಗೆ ಮುಂದಾದರೆ ರೂ.5 ಸಾವಿರ ದಂಡ ವಿಧಿಸಲಾಗುತ್ತಿದ್ದು, ಅಪ್ರಾಪ್ತರ ಕೈಗೆ ವಾಹನಗಳನ್ನು ನೀಡುವ ಪೋಷಕರಿಗೂ ಭರ್ಜರಿ ದಂಡವನ್ನು ವಿಧಿಸಲಾಗುತ್ತಿದೆ.

ಹಾಗೆಯೇ ಹೆಲ್ಮೆಟ್ ರಹಿತ ಬೈಕ್ ಸವಾರಿ, ತ್ರಿಬಲ್ ರೈಡಿಂಗ್, ಕಾನೂನು ಬಾಹಿರವಾಗಿ ವಾಹನಗಳನ್ನು ಮಾಡಿಫೈ ಮಾಡುವುದು, ಚಾಲನೆ ವೇಳೆ ಇಯರ್ ಫೋನ್ ಬಳಕೆ ಮತ್ತು ಫುಟ್‌ಪಾತ್‌ಗಳ ಮೇಲೆ ವಾಹನಗಳ ಚಾಲನೆ ಸೇರಿದಂತೆ ವಿವಿಧ ಮಾದರಿಯ ಸಂಚಾರಿ ನಿಯಮ ಉಲ್ಲಂಘನೆಗಳ ವಿರುದ್ಧ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತಿದ್ದು, ಯಾವುದೇ ಕಾರಣಕ್ಕೂ ನೀವು ಕೂಡಾ ಸಂಚಾರಿ ನಿಯಮಗಳನ್ನು ಮೀರಿ ದಂಡಕ್ಕೆ ಗುರಿಯಾಗಬೇಡಿ.