ಕೇಂದ್ರದಿಂದ ಹೊಸ ಯೋಜನೆ ಜಾರಿ- ಒಕಿನಾವ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳಲ್ಲಿ ಇಳಿಕೆ
ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಮತ್ತು ಖರೀದಿಸುವ ಗ್ರಾಹಕರಿಗೂ ಕೂಡಾ ವಿವಿಧ ಹೊಸ ಯೋಜನೆಗಳನ್ನು ಘೋಷಿಸಿದೆ. ಇದರಲ್ಲಿ ಪ್ರಮುಖವಾಗಿ ಜಿಎಸ್‌ಟಿ ದರ ಇಳಿಕೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ವರದಾನವಾಗಿದ್ದು, ಒಕಿನವಾ ಸೇರಿದಂತೆ ಬಹುತೇಕ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿದೆ.

ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮಾರಾಟದ ಮೇಲೆ ಹೆಚ್ಚಿನ ಮಟ್ಟದ ಸೆಸ್ ಸೇರಿದಂತೆ ದುಬಾರಿ ನೋಂದಣಿ ಶುಲ್ಕ ವಿಧಿಸುತ್ತಿರುವ ಕೇಂದ್ರ ಸರ್ಕಾರವು ಅದಕ್ಕೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕ್ರಮಕೈಗೊಳ್ಳುತ್ತಿದೆ. ಈ ಹಿಂದೆ ಫೇಮ್ ಯೋಜನೆಯ ಮೂಲಕ ಸಬ್ಸಡಿ ಯೋಜನೆಯನ್ನು ಘೋಷಿಸಿದ್ದ ಕೇಂದ್ರವು ಈ ಬಾರಿ ಜಿಎಸ್‌ಟಿ ಪ್ರಮಾಣದಲ್ಲಿ ಭಾರೀ ಕಡಿತ ಮಾಡಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳ ಮೇಲೆ ಈ ಹಿಂದೆ ವಿಧಿಸಲಾಗುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು ನೀತಿ ಆಯೋಗದ ಶಿಫಾರಸ್ಸು ಮೇರೆಗೆ ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಲಾಗಿದ್ದು, ಇದು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಕ್ ವಾಹನ ಖರೀದಿದಾರರಿಗೂ ಸಾಕಷ್ಟು ಸಹಕಾರಿಯಾಗಲಿದೆ.

ಕೇಂದ್ರ ಸರ್ಕಾರದ ಹೊಸ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಜಿಎಸ್‌ಟಿ ದರ ಕಡಿತ ಯೋಜನೆಯನ್ನು ಅಗಸ್ಟ್ 1ರಿಂದಲೇ ಅಧಿಕೃತವಾಗಿ ಜಾರಿಗೊಳಿಸಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿರುವ ಆಟೋ ಉದ್ಯಮದಲ್ಲಿ ಹೊಸ ಬದಲಾವಣೆಗೆ ಮುನ್ನಡಿ ಬರೆದಿದೆ.

ಹೊಸ ಆದೇಶದ ಅನ್ವಯ ತನ್ನ ಪ್ರಮುಖ ಮಾದರಿಗಳ ಬೆಲೆಯನ್ನು ರೂ.2,500ರಿಂದ ಗರಿಷ್ಠ ರೂ.8,600 ತನಕ ಬೆಲೆ ಇಳಿಕೆ ಮಾಡಲಾಗಿದೆ. ಇದರಲ್ಲಿ ಲೀಡ್ ಆ್ಯಸಿಡ್ ಬ್ಯಾಟರಿ ಪ್ರೇರಿತ ಎಲೆಕ್ಟ್ರಿಕ್ ಸ್ಕೂಟರ್‌ಗಳು ರೂ.2,500 ರಿಂದ ರೂ.4,700 ಬೆಲೆ ಇಳಿಕೆ ಹೊಂದಿದ್ದರೆ ಲೀ-ಅಯಾನ್ ಬ್ಯಾಟರಿ ಸೌಲಭ್ಯವನ್ನು ಹೊಂದಿರುವ ಎಲೆಕ್ಟ್ರಿಕ್ ಸ್ಕೂಟರ್‌ಗಳು ರೂ.3,400ರಿಂದ ರೂ.8,600 ಬೆಲೆ ಇಳಿಕೆ ಮಾಡಿರುವುದಾಗಿ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ.

ಸದ್ಯ ಒಕಿನಾವ ಸಂಸ್ಥೆಯು ಪ್ರೈಸ್, ಪ್ರೈಸ್ ಪ್ರೊ, ಐ-ಪ್ರೈಸ್ ಪ್ಲಸ್, ರಿಡ್ಜ್, ರಿಡ್ಜ್ ಪ್ಲಸ್, ರಿಡ್ಜ್ 30 ಮತ್ತು ಆರ್‌ಡೈಸ್ ಎನ್ನುವ ವಿವಿಧ ನಮೂನೆಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಈ ಹಿಂದೆ ಇದ್ದ ಬೆಲೆಗಿಂತ ಇದೀಗ ರೂ.2,500ರಿಂದ ಗರಿಷ್ಠ ರೂ.8,600 ತನಕ ಬೆಲೆ ಇಳಿಕೆಯಾಗಿದೆ.

ಇನ್ನು ಹೊಸ ಆದೇಶದಿಂದಾಗಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ಇದಕ್ಕೆ ಹರ್ಷ ವ್ಯಕ್ತಪಡಿಸಿವೆ. ಯಾಕೆಂದ್ರೆ ಹೊಸ ಯೋಜನೆಯಿಂದಾಗಿ ಎಲೆಕ್ಟ್ರಿಕ್ ವಾಹನ ಬೆಲೆ ಕಡಿಮೆಯಾಗಿ ಮಾರಾಟ ಪ್ರಮಾಣವು ಹೆಚ್ಚಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲೆ ಗ್ರಿನ್ ಸೆಸ್ ಹೆಚ್ಚಾಗುವುದರಿಂದ ಎಲೆಕ್ಟ್ರಿಕ್ ವಾಹನಗಳಿಗೂ ಇದು ಪೂರಕವಾಗಿದೆ.

ಇವಿ ಖರೀದಿ ಮೇಲೆ ತೆರಿಗೆ ವಿನಾಯ್ತಿ..!
ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ಸಹ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.
MOST READ: ಹತ್ತು ಸಾವಿರಕ್ಕೆ ಎಲೆಕ್ಟ್ರಿಕ್ ಬೈಕ್ ತಯಾರಿಸಿದ ಮೆಕಾನಿಕ್!

ಈ ಹಿಂದೆ 2018ರಲ್ಲಿ ಘೋಷಣೆ ಮಾಡಲಾಗಿರುವ ಫೇಮ್ 2 ಯೋಜನೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಬೆಳವಣಿಗಾಗಿ ರೂ. 10 ಸಾವಿರ ಕೋಟಿ ಮೀಸಲು ಇರಿಸಲಾಗಿದ್ದು, 2018-19, 2019-20 ಮತ್ತು 2020-21ರ ಆರ್ಥಿಕ ವರ್ಷದ ಅವಧಿಗಾಗಿ ಈ ಮೀಸಲು ಹಣವನ್ನು ಖರ್ಚು ಮಾಡಲು ನಿರ್ಧರಿಸಲಾಗಿದೆ.
MOST READ: ಆರ್‌ಇ ಥಂಡರ್‌ಬರ್ಡ್ 350 ಪ್ರತಿಸ್ಪರ್ಧಿ ಟಿವಿಎಸ್ ಝೆಪ್ಲಿನ್ ಬಿಡುಗಡೆಗೆ ರೆಡಿ

ಫೇಮ್ 2 ಯೋಜನೆ ಅಡಿ ಸಬ್ಸಡಿ ಸೇರಿದಂತೆ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಹೆಚ್ಚಿನ ಮಟ್ಟದಲ್ಲಿ ಹಣ ವಿನಿಯೋಗ ಮಾಡಲಾಗುತ್ತಿದ್ದು, ಇದೀಗ ಜಿಟಿಎಸ್ ತಗ್ಗಿಸಿರುವುದು ಇವಿ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಇದು ಮತ್ತಷ್ಟು ಸಹಕಾರಿಯಾಗಿಲಿದೆ.


Click it and Unblock the Notifications








