Just In
- 3 min ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 6 min ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 1 hr ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
- 3 hrs ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
Don't Miss!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲೆಕ್ಟ್ರಿಕ್ ಸ್ಕೂಟರ್ಗೆ ಹೆಚ್ಚಿದ ಬೇಡಿಕೆ- ಹೊಸ ಯೋಜನೆಗೆ ರೂ.200 ಕೋಟಿ ಹೂಡಿಕೆ ಮಾಡಲಿದೆ ಒಕಿನಾವ..!
ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಒಕಿನಾವ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಹೊಸ ಯೋಜನೆಗಳಿಗಾಗಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆಗೆ ಮುಂದಾಗಿದೆ.
ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಮಾರಾಟದ ಮೇಲೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದತ್ತ ಮುಖ ಮಾಡುತ್ತಿವೆ. ಕೇಂದ್ರ ಸರ್ಕಾರವು ಸಹ ಈ ನಿಟ್ಟಿನಲ್ಲಿ ಇವಿ ವಾಹನಗಳ ಉತ್ಪಾದನೆಯನ್ನು ಹೆಚ್ಚಿಸಲು ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಭಾಗವಾಗಿ ಒಕಿನಾವ ಸಂಸ್ಥೆಯು ತನ್ನ ಉದ್ಯಮ ಕ್ಷೇತ್ರದ ವಿಸ್ತರಣೆಗೆ ಯೋಜನೆ ರೂಪಿಸಿದೆ.
ಸದ್ಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಒಕಿನಾವ ಸಂಸ್ಥೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗಾಗಿ ಸಿದ್ದವಾಗುತ್ತಿದೆ. ಹೀಗಾಗಿ ಪ್ರಸ್ತುತ ಕಾರ್ಯಚರಣೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸುತ್ತಿದ್ದು, ಇದಕ್ಕಾಗಿ ಬರೋಬ್ಬರಿ ರೂ.200 ಬಂಡವಾಳ ಹೂಡಿಕೆ ಮಾಡಿದೆ.
2015ರಲ್ಲಿ ಮೊದಲ ಬಾರಿಗೆ ಆರಂಭಗೊಂಡ ಒಕಿನವಾ ಸಂಸ್ಥೆಯು ಸದ್ಯ ರಾಜಸ್ತಾನದ ಆಳ್ವಾರ್ನಲ್ಲಿ ಒಂದು ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕವನ್ನು ಹೊಂದಿದ್ದು, ಈ ಘಟಕದಲ್ಲಿ ವಾರ್ಷಿಕವಾಗಿ 5 ಲಕ್ಷ ಸ್ಕೂಟರ್ ಉತ್ಪಾದನೆ ಮಾಡಿ ದೇಶಿಯ ಮಾರುಕಟ್ಟೆಯಲ್ಲಿ ಅಷ್ಟೇ ಅಲ್ಲದೇ ವಿದೇಶಿ ಮಾರುಕಟ್ಟೆಗಳಿಗೂ ರಫ್ತು ಮಾಡುತ್ತಿದೆ.
ಇದೀಗ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಭರ್ಜರಿ ಸಬ್ಸಡಿ ಘೋಷಣೆ ಮಾಡಿರುವ ಪರಿಣಾಮ ಎಲೆಕ್ಟ್ರಿಕ್ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಸುಗ್ಗಿಕಾಲ ಶುರುವಾಗಿದೆ. ಹೀಗಾಗಿಯೇ ಒಕಿನವಾ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಸಾಮಾನ್ಯ ಮಾದರಿಯ ವಾಹನ ಉತ್ಪಾದನೆಗಿಂತ ಹೆಚ್ಚು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಗಮನಹರಿಸಿರುವುದಲ್ಲದೇ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಗ್ರಾಹಕರನ್ನ ಸೆಳೆಯಲು ಕಡಿಮೆ ಬೆಲೆಯಲ್ಲಿ ಉತ್ತಮ ಮೈಲೇಜ್ ಪ್ರೇರಿತ ವಾಹನಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.
ಇದರಲ್ಲಿ ಒಕಿನವಾ ಈಗಾಗಲೇ ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪರಿಚಯಿಸಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕೇಂದ್ರ ಸರ್ಕಾರವು ಘೋಷಣೆ ಮಾಡಿದ ಫೇಮ್ 2 ಯೋಜನೆಗೆ ಅರ್ಹವಾಗಿರುವುದು ಒಕಿನವಾ ಸಂಸ್ಥೆಗೆ ಮತ್ತಷ್ಟು ಬಲಬಂದಿದೆ.
ಫೇಮ್ 2 ಯೋಜನೆಗೆ ಅರ್ಹವಾಗಲು ಎಲೆಕ್ಟ್ರಿಕ್ ವಾಹನಗಳು ಕಡ್ಡಾಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯವನ್ನು ಹೊಂದಿರಬೇಕಿದ್ದು, ಹೊಸ ಯೋಜನೆಗೆ ಅರ್ಹವಾಗಲು ಬೇಕಿದ್ದ ಎಲ್ಲಾ ಅಂಶಗಳು ಪಡೆದುಕೊಂಡಿದ್ದ ಒಕಿನವಾ ಸಂಸ್ಥೆಯು ಫೇಮ್ 2 ಸಬ್ಸಡಿ ಯೋಜನೆಗೆ ಯಾವುದೇ ಅಡೆತಡೆಯಿಲ್ಲದೇ ಆಯ್ಕೆಗೊಂಡಿದೆ.
MOST READ:ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!
ಫೇಮ್ 2 ಯೋಜನೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ರೂ.26 ಸಾವಿರ ಸಬ್ಸಡಿ ದೊರೆಯಲಿದ್ದು, ಇದು ಸ್ಕೂಟರ್ ಮಾರಾಟವನ್ನು ಹೆಚ್ಚಿಸಲು ಸಾಕಷ್ಟು ಸಹಕಾರಿಯಾಗಿದೆ.
MOST READ:ದೋಷಪೂರಿತ ಸ್ಕೂಟರ್ ಮಾರಾಟ ಮಾಡಿದ ಡೀಲರ್ಗೆ ಬಿತ್ತು ದಂಡ..!
ಇದರಿಂದ ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಸ್ಕೂಟರ್ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಯೋಜಿಸಿರುವ ಒಕಿನವಾ ಸಂಸ್ಥೆಯು 2020ರ ಮಾರ್ಚ್ ಅಂತ್ಯಕ್ಕೆ ಸ್ಕೂಟರ್ ಉತ್ಪಾದನಾ ಸಾಮರ್ಥ್ಯವನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸುವ ಗುರಿಹೊಂದಿದೆ.
MOST READ: ಟರ್ಬನ್ ಬಣ್ಣಕ್ಕೆ ತಕ್ಕಂತೆ ಮತ್ತೆ ಮೂರು ಹೊಸ ರೋಲ್ಸ್ ರಾಯ್ಸ್ ಕಾರು ಖರೀದಿಸಿದ ಭಾರತೀಯ ಉದ್ಯಮಿ
ಹಾಗೆಯೇ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಳಿಗೆಗಳ ಹೆಚ್ಚಿಸಲು ದೇಶದ ಪ್ರಮುಖ 200 ನಗರಗಳಲ್ಲಿ ಹೊಸದಾಗಿ 350 ಡೀಲರ್ಶಿಪ್ ಆರಂಭಿಸುತ್ತಿದ್ದು, ಎರಡನೇ ಮತ್ತು ಮೂರನೇ ದರ್ಜೆ ನಗರಗಳಲ್ಲೂ 2020ರ ಅಂತ್ಯಕ್ಕೆ ಒಕಿನಾವ ಸ್ಕೂಟರ್ಗಳು ಖರೀದಿ ಲಭ್ಯವಾಗಲಿವೆ.
ಇನ್ನು ಒಕಿನವಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಪ್ರೈಸ್, ಪ್ರೈಸ್ಪ್ರೊ, ಐ-ಪ್ರೈಸ್ ಪ್ಲಸ್, ರಿಡ್ಜ್, ರಿಡ್ಜ್ ಪ್ಲಸ್, ರಿಡ್ಜ್ 30 ಮತ್ತು ಆರ್ಡೈಸ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದ್ದು, ಅಥೆರ್ ಎನರ್ಜಿ ಸಂಸ್ಥೆಯ ಎಸ್ 340 ಮತ್ತು ಎಸ್ 450 ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ಪ್ರತಿಸ್ಪರ್ಧಿಯಾಗಿ ಪ್ರತಿ ಚಾರ್ಜ್ಗೆ 120ರಿಂದ 180 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ ಬ್ಯಾಟರಿಯನ್ನು ಒದಗಿಸಲಾಗುತ್ತಿದೆ.