Just In
- 33 min ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 1 hr ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 1 hr ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 1 hr ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
Don't Miss!
- Movies ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
150 ಕಿ.ಮೀ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಬೈಕ್ ಬಿಡುಗಡೆ ಮಾಡಲಿದೆ ಒಕಿನಾವ
ಕೈಗೆಟುಕುವ ಬೆಲೆಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಅಭಿವೃದ್ದಿಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಒಕಿನಾವ ಸಂಸ್ಥೆಯು ಮುಂದಿನ ಕೆಲವೇ ದಿನಗಳಲ್ಲಿ ಹೆಚ್ಚಿನ ಮಟ್ಟದ ಮೈಲೇಜ್ ಪ್ರೇರಿತ ಬೈಕ್ ಮಾದರಿಯೊಂದನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಯೋಜನೆಗಾಗಿ ಭಾರೀ ಪ್ರಮಾಣದ ಹೂಡಿಕೆಗೂ ಈಗಾಗಲೇ ಚಾಲನೆ ನೀಡಿದೆ.
ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಮಾರಾಟದ ಮೇಲೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದತ್ತ ಮುಖ ಮಾಡುತ್ತಿವೆ. ಕೇಂದ್ರ ಸರ್ಕಾರವು ಸಹ ಈ ನಿಟ್ಟಿನಲ್ಲಿ ಇವಿ ವಾಹನಗಳ ಉತ್ಪಾದನೆಯನ್ನು ಹೆಚ್ಚಿಸಲು ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಭಾಗವಾಗಿ ಒಕಿನಾವ ಸಂಸ್ಥೆಯು ತನ್ನ ಉದ್ಯಮ ಕ್ಷೇತ್ರದ ವಿಸ್ತರಣೆಗೆ ಯೋಜನೆ ರೂಪಿಸಿದೆ.
ಸದ್ಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಒಕಿನಾವ ಸಂಸ್ಥೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗಾಗಿ ಸಿದ್ದವಾಗುತ್ತಿದೆ. ಹೀಗಾಗಿ ಪ್ರಸ್ತುತ ಕಾರ್ಯಚರಣೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸುತ್ತಿದ್ದು, ಇದಕ್ಕಾಗಿ ಬರೋಬ್ಬರಿ ರೂ.200 ಬಂಡವಾಳ ಹೂಡಿಕೆ ಮಾಡಿದೆ.
2015ರಲ್ಲಿ ಮೊದಲ ಬಾರಿಗೆ ಆರಂಭಗೊಂಡ ಒಕಿನವಾ ಸಂಸ್ಥೆಯು ಸದ್ಯ ರಾಜಸ್ತಾನದ ಆಳ್ವಾರ್ನಲ್ಲಿ ಒಂದು ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕವನ್ನು ಹೊಂದಿದ್ದು, ಈ ಘಟಕದಲ್ಲಿ ವಾರ್ಷಿಕವಾಗಿ 5 ಲಕ್ಷ ಸ್ಕೂಟರ್ ಉತ್ಪಾದನೆ ಮಾಡಿ ದೇಶಿಯ ಮಾರುಕಟ್ಟೆಯಲ್ಲಿ ಅಷ್ಟೇ ಅಲ್ಲದೇ ವಿದೇಶಿ ಮಾರುಕಟ್ಟೆಗಳಿಗೂ ರಫ್ತು ಮಾಡುತ್ತಿದೆ.
ಇದೀಗ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಭರ್ಜರಿ ಸಬ್ಸಡಿ ಘೋಷಣೆ ಮಾಡಿರುವ ಪರಿಣಾಮ ಎಲೆಕ್ಟ್ರಿಕ್ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಸುಗ್ಗಿಕಾಲ ಶುರುವಾಗಿದೆ. ಹೀಗಾಗಿಯೇ ಒಕಿನವಾ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಸಾಮಾನ್ಯ ಮಾದರಿಯ ವಾಹನ ಉತ್ಪಾದನೆಗಿಂತ ಹೆಚ್ಚು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಗಮನಹರಿಸಿರುವುದಲ್ಲದೇ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಗ್ರಾಹಕರನ್ನ ಸೆಳೆಯಲು ಕಡಿಮೆ ಬೆಲೆಯಲ್ಲಿ ಉತ್ತಮ ಮೈಲೇಜ್ ಪ್ರೇರಿತ ವಾಹನಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.
ಇದರಲ್ಲಿ ಒಕಿನವಾ ಈಗಾಗಲೇ ವಿವಿಧ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪರಿಚಯಿಸಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕೇಂದ್ರ ಸರ್ಕಾರವು ಘೋಷಣೆ ಮಾಡಿದ ಫೇಮ್ 2 ಯೋಜನೆಗೆ ಅರ್ಹವಾಗಿರುವುದು ಒಕಿನವಾ ಸಂಸ್ಥೆಗೆ ಮತ್ತಷ್ಟು ಬಲಬಂದಿದೆ.
ಫೇಮ್ 2 ಯೋಜನೆಗೆ ಅರ್ಹವಾಗಲು ಎಲೆಕ್ಟ್ರಿಕ್ ವಾಹನಗಳು ಕಡ್ಡಾಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯವನ್ನು ಹೊಂದಿರಬೇಕಿದ್ದು, ಹೊಸ ಯೋಜನೆಗೆ ಅರ್ಹವಾಗಲು ಬೇಕಿದ್ದ ಎಲ್ಲಾ ಅಂಶಗಳು ಪಡೆದುಕೊಂಡಿದ್ದ ಒಕಿನವಾ ಸಂಸ್ಥೆಯು ಫೇಮ್ 2 ಸಬ್ಸಡಿ ಯೋಜನೆಗೆ ಯಾವುದೇ ಅಡೆತಡೆಯಿಲ್ಲದೇ ಆಯ್ಕೆಗೊಂಡಿದೆ.
MOST READ: ನಂಬರ್ ಪ್ಲೇಟ್ ಇಲ್ಲದೇ ವಾಹನ ಚಾಲನೆ ಮಾಡುವ ಸವಾರರೇ ಎಚ್ಚರ..!
ಫೇಮ್ 2 ಯೋಜನೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ರೂ.26 ಸಾವಿರ ಸಬ್ಸಡಿ ದೊರೆಯಲಿದ್ದು, ಇದು ಸ್ಕೂಟರ್ ಮಾರಾಟವನ್ನು ಹೆಚ್ಚಿಸಲು ಸಾಕಷ್ಟು ಸಹಕಾರಿಯಾಗಿದೆ.
ಇದರಿಂದ ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಸ್ಕೂಟರ್ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಯೋಜಿಸಿರುವ ಒಕಿನವಾ ಸಂಸ್ಥೆಯು 2020ರ ಮಾರ್ಚ್ ಅಂತ್ಯಕ್ಕೆ ಸ್ಕೂಟರ್ ಉತ್ಪಾದನಾ ಸಾಮರ್ಥ್ಯವನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸುವ ಗುರಿಹೊಂದಿದೆ.
MOST READ: 5 ಲಕ್ಷದೊಳಗೆ ದೊರೆಯುವ ಟಾಪ್ ಕಾರ್ಗಳು
ಹಾಗೆಯೇ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಳಿಗೆಗಳ ಹೆಚ್ಚಿಸಲು ದೇಶದ ಪ್ರಮುಖ 200 ನಗರಗಳಲ್ಲಿ ಹೊಸದಾಗಿ 350 ಡೀಲರ್ಶಿಪ್ ಆರಂಭಿಸುತ್ತಿದ್ದು, ಎರಡನೇ ಮತ್ತು ಮೂರನೇ ದರ್ಜೆ ನಗರಗಳಲ್ಲೂ 2020ರ ಅಂತ್ಯಕ್ಕೆ ಒಕಿನಾವ ಸ್ಕೂಟರ್ಗಳು ಖರೀದಿ ಲಭ್ಯವಾಗಲಿವೆ.
ಇನ್ನು ಒಕಿನವಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಪ್ರೈಸ್, ಪ್ರೈಸ್ಪ್ರೊ, ಐ-ಪ್ರೈಸ್ ಪ್ಲಸ್, ರಿಡ್ಜ್, ರಿಡ್ಜ್ ಪ್ಲಸ್, ರಿಡ್ಜ್ 30 ಮತ್ತು ಆರ್ಡೈಸ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದ್ದು, ಅಥೆರ್ ಎನರ್ಜಿ ಸಂಸ್ಥೆಯ ಎಸ್ 340 ಮತ್ತು ಎಸ್ 450 ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ಪ್ರತಿಸ್ಪರ್ಧಿಯಾಗಿ ಪ್ರತಿ ಚಾರ್ಜ್ಗೆ 120ರಿಂದ 180 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ ಬ್ಯಾಟರಿಯನ್ನು ಒದಗಿಸಲಾಗುತ್ತಿದೆ. ಇದರಲ್ಲಿ ಇದೀಗ ಹೊಸ ಬೈಕ್ ಮಾದರಿಯು ರೂ.90 ಸಾವಿರ ಬೆಲೆಯೊಳಗೆ 150 ಕಿ.ಮೀ ಮೈಲೇಜ್ ಪ್ರೇರಣೆಯೊಂದಿಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.