2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಮಾಣವು ಹೆಚ್ಚಳವಾಗುತ್ತಿದೆ. ಹೀಗಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನ ಅಭಿವೃದ್ದಿ ಮತ್ತು ಮಾರಾಟದತ್ತ ಯೋಜನೆ ರೂಪಿಸುತ್ತಿದ್ದು, ರಿವೋಲ್ಟ್ ಕೂಡಾ ಎಲೆಕ್ಟ್ರಿಕ್ ಬೈಕ್ ಮಾರಾಟದಲ್ಲಿ ಮಹತ್ವದ ಮುನ್ನಡೆ ಸಾಧಿಸುತ್ತಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಕಳೆದ ತಿಂಗಳ ಹಿಂದಷ್ಟೇ ಮಾರುಕಟ್ಟೆಗೆ ಪ್ರವೇಶಿಸಿರುವ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್‌ಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಂಡಿದ್ದು, 2019ರ ಡಿಸೆಂಬರ್ ತನಕ ಹೊಸ ಬೈಕ್ ಖರೀದಿಗೆ ಬುಕ್ಕಿಂಗ್ ಹರಿದುಬಂದಿದೆ. ಹೀಗಾಗಿ ಡಿಸೆಂಬರ್ ತನಕ ಬುಕ್ಕಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ರಿವೋಲ್ಟ್ ಸಂಸ್ಥೆಯು ಬುಕ್ಕಿಂಗ್ ಆಧಾರದ ಮೇಲೆ ಬೈಕ್ ವಿತರಣೆ ಆರಂಭಿಸಿದ್ದು, ಆಕರ್ಷಕ ಬೆಲೆ, ಅತ್ಯುತ್ತಮ ಫೀಚರ್ಸ್ ಹಾಗೂ ಗಮನಸೆಳೆಯುವ ಮೈಲೇಜ್ ಪ್ರಮಾಣವು ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಪುಣೆ ಮೂಲದ ರಿವೋಲ್ಟ್ ಸಂಸ್ಥೆಯು ಆರ್‌ವಿ300 ಮತ್ತು ಆರ್‌ವಿ400 ಎನ್ನುವ ಎರಡು ಎಲೆಕ್ಟ್ರಿಕ್ ಬೈಕ್‌ಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಿದ್ದು, ಸದ್ಯ ಪುಣೆ ಮತ್ತು ದೆಹಲಿಯಲ್ಲಿ ಮಾತ್ರವೇ ಹೊಸ ಎಲೆಕ್ಟ್ರಿಕ್ ಬೈಕ್‌ಗಳ ವಿತರಣೆಗೆ ಚಾಲನೆ ನೀಡಿರುವ ರಿವೋಲ್ಟ್ ಮುಂಬರುವ ಕೆಲವೇ ದಿನಗಳಲ್ಲಿ ದೇಶದ ಇತರೆ ಪ್ರಮುಖ ನಗರಗಳಲ್ಲೂ ಮಾರಾಟ ಜಾಲ ತೆರೆಯುವ ಸೂಚನೆ ನೀಡಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಎಸ್‌ಟಿಯಲ್ಲಿ ಇಳಿಕೆ, ತೆರಿಗೆ ವಿನಾಯ್ತಿ ಮತ್ತು ಸಬ್ಸಡಿ ಯೋಜನೆಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಇದರಲ್ಲಿ ರಿವೋಲ್ಟ್ ಹೊಸ ಎಲೆಕ್ಟ್ರಿಕ್ ಬೈಕ್‌‌ಗಳನ್ನು ಪ್ರಮುಖವಾಗಿದ್ದು, ಹೊಸ ಬೈಕ್‌ಗಳನ್ನು ತಿಂಗಳು ಇಎಂಐ ಆಧಾರದ ಮೇಲೆ ಬಿಡುಗಡೆ ಮಾಡಿದೆ. 37 ತಿಂಗಳ ಅವಧಿಗೆ ಆರಂಭಿಕವಾಗಿ ರೂ.2999(ಆರ್‌ವಿ300), ರೂ.3499(ಆರ್‌ವಿ400 ಬೆಸ್) ಮತ್ತು ರೂ.3999(ಆರ್‌ವಿ400 ಪ್ರೀಮಿಯಂ) ದರ ನಿಗದಿ ಮಾಡಿದೆ. ಇದರೊಂದಿಗೆ ಇಎಂಐ ಬೇಡ ಎನ್ನುವ ಗ್ರಾಹಕರಿಗೆ ಒಂದೇ ಹಂತದಲ್ಲಿ ದರ ಪಾವತಿಸುವ ಸೌಲಭ್ಯ ಕೂಡಾ ಇದ್ದು, ಎಕ್ಸ್‌ಶೋರೂಂ ಪ್ರಕಾರ ಆರ್‍‍‍ವಿ 300 ಬೈಕಿಗೆ ರೂ.84,999 ಹಾಗೂ ಆರ್‍‍ವಿ 400 ಪ್ರೀಮಿಯಂ ಬೈಕಿಗೆ ರೂ.98,999 ದರ ನಿಗದಿಪಡಿಸಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಹೀಗಾಗಿ ಗ್ರಾಹಕರು ತಮ್ಮಅನುಕೂಲಕ್ಕೆ ತಕ್ಕಂತೆ ಇಎಂಐ ಅಥವಾ ಪೂರ್ಣ ಪ್ರಮಾಣದ ದರ ಪಾವತಿ ಆಯ್ಕೆ ಆಯ್ದುಕೊಳ್ಳಬಹುದಾಗಿದ್ದು, ಇದು ಇದು ಇತರೆ ಆಟೋ ಉತ್ಪಾದನಾ ಸಂಸ್ಥೆಗಳಿಂತ ವಿಭಿನ್ನ ಸೌಲಭ್ಯವಾಗಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಬ್ಯಾಟರಿ ವೈಶಿಷ್ಟ್ಯತೆ ಮತ್ತು ಮೈಲೇಜ್

ಆರ್‌ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಹಾಗೆಯೇ ಆರ್‌ವಿ400 ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ 156ಕಿ.ಮಿ ಮೈಲೇಜ್ ನೀಡುತ್ತವೆ ಎಂದು ರಿವೋಲ್ಟ್ ಸಂಸ್ಥೆಯು ಅಧಿಕೃತವಾಗಿ ಹೇಳಿಕೊಂಡಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಬೈಕ್ ತಾಂತ್ರಿಕ ಸೌಲಭ್ಯಗಳು ಇದರೊಂದಿಗೆ ಹೊಸ ಬೈಕ್‌ಗಳಲ್ಲಿ ಸಿಟಿ, ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಜೀಯೋ ಫೆನ್ಸಿಂಗ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟರ್ನ್ ಬೈ ಟರ್ನ್ ನೆವಿಗೆಷನ್, ರಿಯಲ್ ಟೈಮ್ ವೆಹಿಕಲ್ ಮತ್ತು ಬ್ಯಾಟರಿ ನಿರ್ವಹಣಾ ಸೌಲಭ್ಯಗಳು ಕೂಡಾ ರಿವೋಲ್ಟ್ ಹೊಸ ಬೈಕಿನಲ್ಲಿವೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಬೈಕಿನ ತಾಂತ್ರಿಕ ಸೌಲಭ್ಯಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಆ್ಯಪ್ ಕೂಡಾ ನೀಡಲಾಗಿದ್ದು, ಆ್ಯಪ್ ಮೂಲಕವೇ ಹೊಸ ಬೈಕಿನ ವೇಗ, ಶಬ್ದ, ಬ್ಯಾಟರಿ ಲಭ್ಯತೆ ಸೇರಿದಂತೆ ಸಂಪೂರ್ಣ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.

2019ರ ಡಿಸೆಂಬರ್‌ ತನಕ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಸೋಲ್ಡೌಟ್​..!

ಆರ್‌ವಿ300 ಹಾಗೂ ಆರ್‌ವಿ400 ಬೈಕ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಮತ್ತೊಂದು ವಿಶೇಷ ಸೌಲಭ್ಯ ನೀಡಿರುವ ರಿವೋಲ್ಟ್ ಸಂಸ್ಥೆಯು, ಮನೆಯಲ್ಲಿಯೇ ಚಾರ್ಜಿಂಗ್ ಮಾಡಿಕೊಳ್ಳಲು ಮಾತ್ರವಲ್ಲದೇ, ತೆಗೆದು ಹಾಕಬಹುದಾದ ಬ್ಯಾಟರಿ ಜೊತೆಗೆ ಬ್ಯಾಟರಿ ಸ್ಟೆಷನ್ ಮೂಲಕ ನಿಮ್ಮ ಅಗತ್ಯ ಸ್ಥಳಗಳಿಗೆ ಬ್ಯಾಟರಿ ಸೇವೆಗಳನ್ನು ನೀಡಲಿದೆ.

Most Read Articles

Kannada
English summary
Revolt RV300, RV400, & RV400 Premium Sold Out Till Years End. Read in Kannada.
Story first published: Thursday, October 24, 2019, 18:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X