Just In
- 17 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎಲೆಕ್ಟ್ರಿಕ್ ಬೈಕ್ ವಿತರಣೆಯನ್ನು ಹೆಚ್ಚಿಸಿದ ರಿವೋಲ್ಟ್
ಕೈಗೆಟುಕುವ ಬೆಲೆ ಮತ್ತು ಅತ್ಯುತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿರುವ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್‌ಗಳು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ದೆಹಲಿ ನಂತರ ಇದೀಗ ಹೊಸ ಬೈಕ್‌ಗಳನ್ನು ಪುಣೆಯಲ್ಲೂ ವಿತರಣೆ ಮಾಡಲಾಗುತ್ತಿದೆ.

ಪುಣೆ ಮೂಲದ ರಿವೋಲ್ಟ್ ಸಂಸ್ಥೆಯು ಸದ್ಯ ಪುಣೆ ಮತ್ತು ದೆಹಲಿಯಲ್ಲಿ ಮಾತ್ರವೇ ಹೊಸ ಎಲೆಕ್ಟ್ರಿಕ್ ಬೈಕ್‌ಗಳ ವಿತರಣೆಗೆ ಚಾಲನೆ ನೀಡಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ದೇಶದ ಇತರೆ ಪ್ರಮುಖ ನಗರಗಳಲ್ಲೂ ಮಾರಾಟ ಜಾಲ ತೆರೆಯುವ ಸೂಚನೆ ನೀಡಿದೆ. ರಿವೋಲ್ಟ್ ಸಂಸ್ಥೆಯು ಮೊದಲ ಪ್ರಯತ್ನದಲ್ಲೇ ವಿನೂತನ ಮಾದರಿಯ ಆರ್‌ವಿ300 ಮತ್ತು ಆರ್‌ವಿ400 ಎನ್ನುವ ಎರಡು ಎಲೆಕ್ಟ್ರಿಕ್ ಬೈಕ್‌ಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಿದ್ದು, ಬೈಕ್ ಬೆಲೆಗಳು ಇದೀಗ ಪ್ರಮುಖ ಆಕರ್ಷಣೆಯಾಗಿದೆ.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಎಸ್‌ಟಿಯಲ್ಲಿ ಇಳಿಕೆ, ತೆರಿಗೆ ವಿನಾಯ್ತಿ ಮತ್ತು ಸಬ್ಸಡಿ ಯೋಜನೆಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಇದರಲ್ಲಿ ರಿವೋಲ್ಟ್ ಹೊಸ ಎಲೆಕ್ಟ್ರಿಕ್ ಬೈಕ್‌ಗಳನ್ನು ಪ್ರಮುಖವಾಗಿದ್ದು, ಹೊಸ ಬೈಕ್‌ಗಳನ್ನು ತಿಂಗಳು ಇಎಂಐ ಆಧಾರದ ಮೇಲೆ ಬಿಡುಗಡೆ ಮಾಡಿದೆ. 37 ತಿಂಗಳ ಅವಧಿಗೆ ಆರಂಭಿಕವಾಗಿ ರೂ.2999(ಆರ್‌ವಿ300), ರೂ.3499(ಆರ್‌ವಿ400 ಬೆಸ್) ಮತ್ತು ರೂ.3999(ಆರ್‌ವಿ400 ಪ್ರೀಮಿಯಂ) ದರ ನಿಗದಿ ಮಾಡಿದೆ.

ಇದರೊಂದಿಗೆ ಇಎಂಐ ಬೇಡ ಎನ್ನುವ ಗ್ರಾಹಕರಿಗೆ ಒಂದೇ ಹಂತದಲ್ಲಿ ದರ ಪಾವತಿಸುವ ಸೌಲಭ್ಯ ಕೂಡಾ ಇದ್ದು, ಎಕ್ಸ್‌ಶೋರೂಂ ಪ್ರಕಾರ ಆರ್‍ವಿ 300 ಬೈಕಿಗೆ ರೂ.84,999 ಹಾಗೂ ಆರ್‍ವಿ 400 ಪ್ರೀಮಿಯಂ ಬೈಕಿಗೆ ರೂ.98,999 ದರ ನಿಗದಿಪಡಿಸಿದೆ. ಹೀಗಾಗಿ ಗ್ರಾಹಕರು ತಮ್ಮಅನುಕೂಲಕ್ಕೆ ತಕ್ಕಂತೆ ಇಎಂಐ ಅಥವಾ ಪೂರ್ಣ ಪ್ರಮಾಣದ ದರ ಪಾವತಿ ಆಯ್ಕೆ ಆಯ್ದುಕೊಳ್ಳಬಹುದಾಗಿದ್ದು, ಇದು ಇದು ಇತರೆ ಆಟೋ ಉತ್ಪಾದನಾ ಸಂಸ್ಥೆಗಳಿಂತ ವಿಭಿನ್ನ ಸೌಲಭ್ಯವಾಗಿದೆ.

ಬ್ಯಾಟರಿ ವೈಶಿಷ್ಟ್ಯತೆ ಮತ್ತು ಮೈಲೇಜ್
ಆರ್‌ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಹಾಗೆಯೇ ಆರ್‌ವಿ400 ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ 156ಕಿ.ಮಿ ಮೈಲೇಜ್ ನೀಡುತ್ತವೆ ಎಂದು ರಿವೋಲ್ಟ್ ಸಂಸ್ಥೆಯು ಅಧಿಕೃತವಾಗಿ ಹೇಳಿಕೊಂಡಿದೆ.

ಬೈಕ್ ತಾಂತ್ರಿಕ ಸೌಲಭ್ಯಗಳು ಇದರೊಂದಿಗೆ ಹೊಸ ಬೈಕ್‌ಗಳಲ್ಲಿ ಸಿಟಿ, ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಜೀಯೋ ಫೆನ್ಸಿಂಗ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟರ್ನ್ ಬೈ ಟರ್ನ್ ನೆವಿಗೆಷನ್, ರಿಯಲ್ ಟೈಮ್ ವೆಹಿಕಲ್ ಮತ್ತು ಬ್ಯಾಟರಿ ನಿರ್ವಹಣಾ ಸೌಲಭ್ಯಗಳು ಕೂಡಾ ರಿವೋಲ್ಟ್ ಹೊಸ ಬೈಕಿನಲ್ಲಿವೆ.

ಬೈಕಿನ ತಾಂತ್ರಿಕ ಸೌಲಭ್ಯಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಆ್ಯಪ್ ಕೂಡಾ ನೀಡಲಾಗಿದ್ದು, ಆ್ಯಪ್ ಮೂಲಕವೇ ಹೊಸ ಬೈಕಿನ ವೇಗ, ಶಬ್ದ, ಬ್ಯಾಟರಿ ಲಭ್ಯತೆ ಸೇರಿದಂತೆ ಸಂಪೂರ್ಣ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.

ಆರ್ವಿ300 ಹಾಗೂ ಆರ್‌ವಿ400 ಬೈಕ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಮತ್ತೊಂದು ವಿಶೇಷ ಸೌಲಭ್ಯ ನೀಡಿರುವ ರಿವೋಲ್ಟ್ ಸಂಸ್ಥೆಯು, ಮನೆಯಲ್ಲಿಯೇ ಚಾರ್ಜಿಂಗ್ ಮಾಡಿಕೊಳ್ಳಲು ಮಾತ್ರವಲ್ಲದೇ, ತೆಗೆದು ಹಾಕಬಹುದಾದ ಬ್ಯಾಟರಿ ಜೊತೆಗೆ ಬ್ಯಾಟರಿ ಸ್ಟೆಷನ್ ಮೂಲಕ ನಿಮ್ಮ ಅಗತ್ಯ ಸ್ಥಳಗಳಿಗೆ ಬ್ಯಾಟರಿ ಸೇವೆಗಳನ್ನು ನೀಡಲಿದೆ.