Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಿವೋಲ್ಟ್ ನಿರ್ಮಾಣದ ಬಹುನೀರಿಕ್ಷಿತ ಆರ್‌ವಿ300, ಆರ್‌ವಿ400 ಎಲೆಕ್ಟ್ರಿಕ್ ಬೈಕ್‌ಗಳು ಬಿಡುಗಡೆ
ಪುಣೆ ಮೂಲದ ರಿವೋಲ್ಟ್ ಎಲೆಕ್ಟ್ರಿಕ್ ವಾಹನ ನಿರ್ಮಾಣ ಸಂಸ್ಥೆಯು ದೇಶದಲ್ಲೇ ಮೊದಲ ಬಾರಿಗೆ ಎಲೆಕ್ಟ್ರಿಕ್ ಬೈಕ್‌ಗಳನ್ನು ಅಭಿವೃದ್ದಿಪಡಿಸಿ ಬಿಡುಗಡೆ ಮಾಡಿದ್ದು, ಗ್ರಾಹಕರ ಬೇಡಿಕೆಯಂತೆ ಆಕರ್ಷಕ ಬೆಲೆಗಳಲ್ಲಿ ಅತ್ಯುತ್ತಮ ಮೈಲೇಜ್ ಪ್ರೇರಿತ ಆರ್‌ವಿ300 ಮತ್ತು ಆರ್‌ವಿ400 ಬೈಕ್‌ಗಳನ್ನು ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಎಸ್‌ಟಿಯಲ್ಲಿ ಇಳಿಕೆ, ತೆರಿಗೆ ವಿನಾಯ್ತಿ ಮತ್ತು ಸಬ್ಸಡಿ ಯೋಜನೆಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಆಕರ್ಷಕ ಎಲೆಕ್ಟ್ರಿಕ್ ಬೈಕ್ ಉತ್ಪನ್ನಗಳೊಂದಿಗೆ ಅದೃಷ್ಟ ಪರೀಕ್ಷೆಗಿಳಿದಿರುವ ರಿವೋಲ್ಟ್ ಸಂಸ್ಥೆಯು ಮೊದಲ ಪ್ರಯತ್ನದಲ್ಲೇ ವಿನೂತನ ಮಾದರಿಯ ಎಲೆಕ್ಟ್ರಿಕ್ ಬೈಕ್‌ಗಳನ್ನು ಅಭಿವೃದ್ಧಿಪಡಿಸಿದೆ.

ರಿವೋಲ್ಟ್ ಸಂಸ್ಥೆಯು ಒಟ್ಟು ಮೂರು ಬೈಕ್‌ಗಳನ್ನು ಬಿಡುಗಡೆ ಮಾಡಿದ್ದು, ಗ್ರಾಹಕರು ತಮ್ಮ ಆದ್ಯತೆ ಮೇರೆಗೆ ಆರ್‌ವಿ300 ಹಾಗೂ ಆರ್‌ವಿ400 ಬೈಕಿನಲ್ಲಿ ಬೆಸ್ ಮತ್ತು ಪ್ರೀಮಿಯಂ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಮತ್ತೊಂದು ವಿಶೇಷ ಅಂದರೆ ರಿವೋಲ್ಟ್ ಸಂಸ್ಥೆಯು ಹೊಸ ಎಲೆಕ್ಟ್ರಿಕ್ ಬೈಕ್‌ಗಳನ್ನು ತಿಂಗಳು ಇಎಂಐ ಆಧಾರದ ಮೇಲೆ ಬಿಡುಗಡೆ ಮಾಡಿದ್ದು, 37 ತಿಂಗಳ ಅವಧಿಗೆ ಆರಂಭಿಕವಾಗಿ ರೂ.2999(ಆರ್‌ವಿ300), ರೂ.3499(ಆರ್‌ವಿ400 ಬೆಸ್) ಮತ್ತು ರೂ.3999(ಆರ್‌ವಿ400 ಪ್ರೀಮಿಯಂ) ದರ ನಿಗದಿ ಮಾಡಿದೆ.

ಎಲೆಕ್ಟ್ರಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ಸಂಬಂಧ ದರ ನಿಗದಿಯಲ್ಲಿ ಗ್ರಾಹಕರನ್ನು ಆಕರ್ಷಿಸಲು ಮುಂದಾಗಿರುವ ರಿವೋಲ್ಟ್ ಸಂಸ್ಥೆಯು ಪೂರ್ಣ ಪ್ರಮಾಣದ ದರ ನಿಗದಿ ಮಾಡದೇ ಇಎಂಐ ಆಯ್ಕೆಯನ್ನು ಪರಿಚಯಿಸಿದ್ದು, ಆಧುನಿಕ ತಂತ್ರಜ್ಞಾನ ಸೌಲಭ್ಯಗಳನ್ನು ಜೋಡಣೆ ಹೊಂದಿರುವ ಆರ್‌ವಿ300 ಹಾಗೂ ಆರ್‌ವಿ400 ಬೈಕ್‌ಗಳು ಪ್ರೀಮಿಯಂ ವೈಶಿಷ್ಟ್ಯತೆಗಳೊಂದಿಗೆ ಉತ್ತಮ ಮೈಲೇಜ್ ಹೊಂದಿವೆ.

ಆರ್‌ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಹಾಗೆಯೇ ಆರ್‌ವಿ400 ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ 156ಕಿ.ಮಿ ಮೈಲೇಜ್ ನೀಡುತ್ತವೆ ಎಂದು ರಿವೋಲ್ಟ್ ಸಂಸ್ಥೆಯು ಅಧಿಕೃತವಾಗಿ ಹೇಳಿಕೊಂಡಿದೆ.

ಇದರೊಂದಿಗೆ ಹೊಸ ಬೈಕ್‌ಗಳಲ್ಲಿ ಸಿಟಿ, ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಜೀಯೋ ಫೆನ್ಸಿಂಗ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟರ್ನ್ ಬೈ ಟರ್ನ್ ನೆವಿಗೆಷನ್, ರಿಯಲ್ ಟೈಮ್ ವೆಹಿಕಲ್ ಮತ್ತು ಬ್ಯಾಟರಿ ನಿರ್ವಹಣಾ ಸೌಲಭ್ಯಗಳು ಕೂಡಾ ರಿವೋಲ್ಟ್ ಹೊಸ ಬೈಕಿನಲ್ಲಿವೆ.

ಬೈಕಿನ ತಾಂತ್ರಿಕ ಸೌಲಭ್ಯಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಆ್ಯಪ್ ಕೂಡಾ ನೀಡಲಾಗಿದ್ದು, ಆ್ಯಪ್ ಮೂಲಕವೇ ಹೊಸ ಬೈಕಿನ ವೇಗ, ಶಬ್ದ, ಬ್ಯಾಟರಿ ಲಭ್ಯತೆ ಸೇರಿದಂತೆ ಸಂಪೂರ್ಣ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.

ಆರ್‌ವಿ300 ಹಾಗೂ ಆರ್‌ವಿ400 ಬೈಕ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಮತ್ತೊಂದು ವಿಶೇಷ ಸೌಲಭ್ಯ ನೀಡಿರುವ ರಿವೋಲ್ಟ್ ಸಂಸ್ಥೆಯು, ಮನೆಯಲ್ಲಿಯೇ ಚಾರ್ಜಿಂಗ್ ಮಾಡಿಕೊಳ್ಳಲು ಮಾತ್ರವಲ್ಲದೇ, ತೆಗೆದು ಹಾಕಬಹುದಾದ ಬ್ಯಾಟರಿ ಜೊತೆಗೆ ಬ್ಯಾಟರಿ ಸ್ಟೆಷನ್ ಮೂಲಕ ನಿಮ್ಮ ಅಗತ್ಯ ಸ್ಥಳಗಳಿಗೆ ಬ್ಯಾಟರಿ ಸೇವೆಗಳನ್ನು ನೀಡಲಿದೆ.

ಒಟ್ಟಿನಲ್ಲಿ ಸಾಮಾನ್ಯ ಬೈಕ್‌ಗಳಿಂತ ವಿಶೇಷ ಎನ್ನಿಸಲಿರುವ ರಿವೋಲ್ಟ್ ಆರ್‌ವಿ300 ಹಾಗೂ ಆರ್‌ವಿ400 ಬೈಕ್‌ಗಳು ಅತಿ ಕಡಿಮೆ ನಿರ್ವಹಣಾ ವೆಚ್ಚದಿಂದಾಗಿ ಭಾರೀ ಬೇಡಿಕೆ ಪಡೆಯುವ ಗುಣಲಕ್ಷಣಗಳನ್ನು ಹೊಂದಿದ್ದು, ಮೊದಲ ಹಂತವಾಗಿ ಪುಣೆ ಮತ್ತು ದೆಹಲಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಾಗಿರುವ ಹೊಸ ಬೈಕ್‌ಗಳು ವರ್ಷಾಂತ್ಯಕ್ಕೆ ದೇಶದ ಪ್ರಮುಖ ನಗರಗಳಲ್ಲಿ ಖರೀದಿಗೆ ಲಭ್ಯವಿರುವುದಾಗಿ ರಿವೋಲ್ಟ್ ಭರವಸೆ ನೀಡಿದೆ.