Just In
- 50 min ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 1 hr ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 2 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 2 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಯಲ್ ಎನ್ಫೀಲ್ಡ್ 650 ಟ್ವಿನ್ ಬೈಕ್ಗಳ ಮಾರಾಟದಲ್ಲಿ ಹೊಸ ದಾಖಲೆ
ನವೆಂಬರ್ 14, 2019ರಂದು ರಾಯಲ್ ಎನ್ಫೀಲ್ಡ್ ಸಂಸ್ಥೆಯು ತಮ್ಮ ಸಂಸ್ಥಯಕ್ಲೆ ಅತೀ ಹೆಚ್ಚು ಸಮರ್ಥ್ಯವನ್ನು ಹೊಂದಿರುವ ಕಾಂಟಿನೆಂಟಲ್ ಜಿಟಿ 650 ಮತ್ತು ಇಂಟರ್ಸೆಪ್ಟರ್ 650 ಬೈಕ್ಗಳನ್ನು ಬಿಡಗಡೆ ಮಾಡಲಾಗಿದ್ದು, ಆರ್ಇ ಇಂಟರ್ಸೆಪ್ಟರ್ 650 ಬೈಕ್ ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 2.50 ಲಕ್ಷ ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್ ರೂ. 2.66 ಲಕ್ಷದ ಬೆಲೆಯಲ್ಲಿ ಮಾರಾಟವಾಗುತ್ತಿದೆ.
ನವೆಂಬರ್ 2018 ರಿಂದ ಜೂನ್ 2019ರ ವರೆಗು ರಾಯಲ್ ಎನ್ಫೀಲ್ಡ್ 60 ಟ್ವಿನ್ ಬೈಕ್ಗಳು ಧಾಖಲೆಯ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಸುಮಾರು 7 ತಿಂಗಳ ಗಡುವಿನಲ್ಲಿ 11000ಕ್ಕು ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಿದೆ ಎಂದು ಹೇಳಲಾಗಿದೆ. ಬೆಲೆಯಲ್ಲಿ ಕೆಟಿಎಂಡ್ಯೂಕ್ 390, ಕವಾಸಕಿ ನಿಂಜ 300, ಅಪಚೆ ಆರ್ಆರ್ 310 ಮತ್ತು ಯಮಾಹಾ ಆರ್3 ಎಂಬ ಕಡಿಮೆ ಸಾಮರ್ಥ್ಯದ ಬೈಕ್ಗಳಿಗೆ ಪೈಪೋಟಿ ನೀಡುತ್ತಿದೆ.
ಅಧಿಕ ಸಾಮರ್ಥ್ಯ, ಆಕರ್ಷಕ ವಿನ್ಯಾಸ ಮತ್ತು ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿರುವ ರಾಯಲ್ ಎನ್ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಮತ್ತು ಇಂಟರ್ಸೆಪ್ಟರ್ 650 ಬೈಕ್ಗಳು, ಸಂಸ್ಥೆಯಲ್ಲಿಯೆ ಅತಿ ಹೆಚ್ಚು ಮಾರಾಟವಾಗುತ್ತಿರುವ ಬೈಕ್ಗಳು ಎಂಬ ಖ್ಯಾತಿಯನ್ನು ಸಹ ಪಡೆದುಕೊಂಡಿದೆ.
ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನಗಳ ಸರಣಿಯಲ್ಲಿ ಈ ಎರಡೂ ಬೈಕ್ಗಳು ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎರಡೂ ಬೈಕ್ಗಳು ಆಧುನಿಕ ಕ್ಲಾಸಿಕ್ ನೋಟವನ್ನು ಪಡೆದುಕೊಂಡಿದೆ. ಕಾಂಟಿನೆಂಟಲ್ ಜಿಟಿ 650 ಕೆಫ್ ರೇಸರ್ ವಿನ್ಯಾಸವನ್ನು ಆಧರಿಸಿದರೆ ಇನ್ನು ಇಂಟರ್ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ.
ಬೈಕ್ಗಳ ವಿನ್ಯಾಸ
ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 60ರ ದಶಕದ ಇಂಟರ್ಸೆಪ್ಟರ್ನಿಂದ ಪ್ರೇರಣೆಯನ್ನು ಹೊಂದಿದ್ದು, ಬ್ರಿಟಿಷ್ ರೋಡ್ಸ್ಟರ್ ಮಾದರಿಯ ನೋಟವನ್ನು ಪಡೆದುಕೊಂಡಿದೆ. ಇನ್ನು ಇಂಟರ್ಸೆಪ್ಟರ್ 650 ಬೈಕ್ ಕ್ಲೀನ್-ಲೈನ್, ಕ್ಲಾಸಿಕ್ ಟಿಯರ್ಡ್ರಾಪ್ ಆಕಾರದ ಫ್ಯುಯಲ್ ಟ್ಯಾಂಕ್ ಮತ್ತು ಡೈಮಂಡ್-ಕ್ವಿಲ್ಟ್-ಪ್ಯಾಟರ್ನ್ಡ್ ಟ್ವಿನ್ ಸೀಟ್ಗಳನ್ನು ನೀಡಲಾಗಿದೆ.
ಕೇಫ್ ರೇಸರ್ ವಿನ್ಯಾಸವನ್ನು ಪಡೆದುಕೊಂಡಿರುವ ರಾಯಲ್ ಎನ್ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ 1950ರ ದಶಕದಲ್ಲಿನ ಕೆಫ್ ರೇಸರ್ ವಿನ್ಯಾಸವನ್ನು ಆಧರಿಸಿದ್ದು, ಕೆತ್ತಲಾದ ಫ್ಯುಯಲ್ ಟ್ಯಾಂಕ್, ತೂಕದ ನಿಲುವು, ರಿಯರ್-ಫೂಟ್ ಪೆಗ್ಸ್ ಮತ್ತು ಹ್ಯಾಂಡಲ್ಬಾರ್ನ ಮೇಲೆ ಕ್ಲಿಪ್ ಅನ್ನು ಒದಗಿಸಲಾಗಿದೆ.
ಎಂಜಿನ್ ವೈಶಿಷ್ಟ್ಯತೆ
ರಾಯಲ್ ಎನ್ಫೀಲ್ಡ್ 650 ಟ್ವಿನ್ ಬೈಕ್ಗಳು ಹೊಸ 649ಸಿಸಿ ಏರ್ ಕೂಲ್ಡ್, ಪ್ಯಾರಲಲ್ ಟ್ವಿನ್ ಎಂಜಿನ್ ಸಹಾಯದಿಂದ 47ಬಿಹೆಚ್ಪಿ ಮತ್ತು 52ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಎರಡು ಬೈಕ್ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್ ಶಾಕ್ ಅಬ್ಸಾರ್ಬರ್ ಅನ್ನು ಒದಗಿಸಲಾಗಿದೆ. 650 ಟ್ವಿನ್ ಬೈಕ್ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್ ಮತ್ತು ಪಿರೆಲ್ಲಿ ಪ್ಯಾಂಥಂ ಸ್ಪೋರ್ಟ್ಕಾಂಪ್ ಟೈರ್ಗಳನ್ನು ಅಳವಡಿಸಲಾಗಿದೆ.
ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್ಫೀಲ್ಡ್ 650 ಟ್ವಿನ್ ಬೈಕ್ಗಳಲ್ಲಿ ಬೈಬ್ರೆ (ಬೈ ಬ್ರೆಂಬೊ) ಸಂಸ್ಥೆಯಿಂದ ಪಡೆದ 320ಎಂಎಂ ಮತ್ತು 240ಎಂಎಂನ ಡಿಸ್ಕ್ ಬ್ರೇಕ್ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
ಬಣ್ಣಗಳು
ರಾಯಲ್ ಎನ್ಫೀಲ್ಡ್ 650 ಟ್ವಿನ್ ಬೈಕ್ಗಳು ವಿವಿಧ ಮತ್ತು ಆಕರ್ಷಕ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಇಂಟರ್ಸೆಪ್ಟರ್ 650 - ಮಾರ್ಕ್ ತ್ರೀ, ಗ್ಲಿಟ್ಟರ್ & ಡಸ್ಟ್, ಆರೆಂಜ್ ಕ್ರಶ್, ರ್ಯಾವಿಶಿಂಗ್ ರೆಡ್, ಸಿಲ್ವರ್ ಸ್ಪೆಕ್ಟ್ರಾ ಮತ್ತು ಬೇಕರ್ ಎಕ್ಸ್ಪ್ರೆಸ್ ಎಂಬ 7 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಇನ್ನು ರಾಯಲ್ ಎನ್ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ - ಬ್ಲಾಕ್ ಮ್ಯಾಜಿಕ್, ವೆಂಚುರ ಬ್ಲೂ, ಮಿಸ್ಟರ್ ಕ್ಲೀನ್, ಡಾ.ಮೈಹೆಂ ಮತ್ತು ಐಸ್ ಕ್ವೀನ್ ಎಂಬ 5 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.