ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ರಾಯಲ್ ಎನ್‍ಫೀಲ್ಡ್ ತನ್ನ ಮೊದಲ 650 ಸಿಸಿ ಬೈಕ್‍‍ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಒಂದು ವರ್ಷಗಳ ಹಿಂದೆ ಬಿಡುಗಡೆಗೊಳಿಸಿತ್ತು. ಅಂದಿನಿಂದ ಚೆನ್ನೈ ಮೂಲದ ಕಂಪನಿಯ ಈ ಎರಡು 650 ಸಿಸಿ ಟ್ವಿನ್ ಬೈಕ್‍‍ಗಳು ದೇಶಿಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿವೆ.

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ಕಂಪನಿಯು 2019ರ ಸೆಪ್ಟೆಂಬರ್ ತಿಂಗಳಲ್ಲಿ ಇಂಟರ್‍‍ಸೆಪ್ಟರ್‍ 650 ಮತ್ತು ಕಾಂಟಿನೆಂಟಲ್ 650 ಬೈಕ್‍‍ಗಳ, 1,856 ಯುನಿ‍‍‍ಟ್‍ಗಳನ್ನು ಬುಕ್ಕಿಂಗ್ ಅನ್ನು ನೋಂದಾಯಿಸಿದೆ. ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಈ ಎರಡೂ ಬೈಕ್‍‍ಗಳು ಇದೀಗ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಪ್ರೀಮಿಯಂ ಬೈಕ್‍‍ಗಳೆಂಬ ಹೆಗ್ಗಳಿಕೆಯನ್ನು ಪಡೆದಿವೆ.

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು ಮಾರಾಟದಲ್ಲಿ ಕೆಟಿಎಂ ಡ್ಯೂಕ್ 390, ಬಜಾಜ್ ಡೊಮಿನಾರ್ 400, ಕವಾಸಕಿ ನಿಂಜಾ 300 ಮತ್ತು ಟಿವಿಎಸ್ ಅಪಾಚೆ ಆರ್‍ಆರ್ 310 ಬೈಕ್‍‍ಗಳನ್ನು ಹಿಂದಿಕ್ಕಿವೆ. ಚೆನ್ನೈ ಮೂಲದ ಬೈಕ್‍ ತಯಾರಕ ಕಂಪನಿಯು 650 ಟ್ವಿನ್ ಬೈಕು‍ಗಳ 1,856 ಯು‍‍ನಿ‍ಟ್‍ಗಳನ್ನು ಮಾರಾಟ ಮಾಡಿದೆ.

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ಈ ಸಂಖ್ಯೆಯು ಪ್ರತಿಸ್ಪರ್ಧಿ ಬೈಕುಗಳ ಮಾರಾಟಕ್ಕೆ ಹೋಲಿಸಿದರೆ ಗಮನಾರ್ಹವಾಗಿ ಹೆಚ್ಚಾಗಿದೆ. ಕೆ‍ಟಿಎಂ ಡ್ಯೂಕ್ ಮತ್ತು ಆರ್‍‍ಸಿ 390 ಬೈಕ್‍‍ಗಳು ಒಟ್ಟಾಗಿ 398 ಯು‍‍ನಿ‍ಟ್‍ಗಳಷ್ಟು ಮಾರಾಟವಾಗಿವೆ. ಬಜಾಜ್ ಡೊಮಿನಾರ್ 400 ಬೈಕಿನ 828 ಯು‍‍ನಿ‍‍ಟ್‍ಗಳು ಮಾರಾಟವಾಗಿವೆ ಮತ್ತು ಟಿ‍ವಿಎಸ್ ಅಪಾಚೆ ಆರ್‍ಆರ್ 310 ಬೈಕಿನ 300 ಯು‍ನಿ‍ಟ್‍ಗಳು ಮಾರಾಟವಾಗಿವೆ. ಕವಾಸಕಿ ನಿಂಜಾ 300, ಹೋಂಡಾ ಸಿಬಿ 300 ಆರ್ ಮತ್ತು ಯಮಹಾ ವೈ‍ಎಫ್‍ಜಿಡ್ ಆರ್ 3 ಬೈಕ್‍‍ಗಳು ಸಹ ಇದೇ ಅವಧಿಯಲ್ಲಿ ಕ್ರಮವಾಗಿ 119, 96 ಮತ್ತು 32 ಯು‍ನಿ‍ಟ್‍ಗಳು ಮಾರಾಟವಾಗಿವೆ.

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ರಾಯಲ್ ಎನ್‍‍ಫೀಲ್ಡ್ 650 ಟ್ವಿನ್ ಮಿಡ್ ಸೆಗ್‍‍ಮೆಂಟ್‍‍ನಲ್ಲಿ ಪ್ರಾಬಲ್ಯವನ್ನು ಹೊಂದಿದೆ. ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಸಹ ಉನ್ನತ ಸೆಗ್‍‍ಮೆಂಟ್‍ಗಳಾದ ಹಾರ್ಲೆ-ಡೇವಿಡ್ಸನ್ ಸ್ಟ್ರೀಟ್ ರೊಡ್ ಮತ್ತು ಸ್ಟ್ರೀಟ್ 750 ಬೈಕುಗಳಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತಿವೆ.

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ಇಂಟರ್‍‍ಸೆಪ್ಟೆರ್ 650 ಮತ್ತು ಕಾಂಟಿ‍ನೆಂಟಲ್ ಜಿಟಿ 650 ಎಂಬ ಎರಡು ಟ್ವಿನ್ ಬೈಕ್‍‍ಗಳು 649 ಸಿಸಿ ಪ್ಯಾರೆಲಲ್-ಟ್ವಿನ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 48 ಬಿ‍ಹೆಚ್‍ಪಿ ಪವರ್ ಮತ್ತು 52 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್‍‍ನೊಂದಿಗೆ ಸ್ಟ್ಯಾಂಡರ್ಡ್ ಅಸಿಸ್ಟ್ ಕ್ಲಚ್‍‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍‍ಗಳಲ್ಲಿ ಮುಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿವೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿ‍ನೆಂಟಲ್ ಜಿಟಿ 650 ಬೈಕುಗಳ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ಕ್ರಮವಾಗಿ ರೂ.2.51 ಲಕ್ಷ ಮತ್ತು ರೂ.2.71 ಲಕ್ಷಗಳಾಗಿದೆ. ಈ ಎರಡೂ ಬೈಕ್‍ಗಳು ಆಧುನಿಕ ಕ್ಲಾಸಿಕ್ ಲುಕ್ ಅನ್ನು ಹೊಂದಿವೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ಎರಡು ಬೈಕ್‍ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ 110 ಎಂಎಂ ಟ್ವಿನ್ ಕಾಯಿಲ್-ಕವರ್, 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್‍‍ಗಳನ್ನು ಹೊಂದಿವೆ. ರಾಯಲ್ ಎನ್‍‍ಫೀಲ್ಡ್, 650 ಸಿಸಿ ಬೈಕ್‍‍ಗಳಲ್ಲಿ ಸಣ್ಣ ಬದಲಾವಣೆಗಳನ್ನು ತಂದಿದೆ. ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಟಲ್ ಜಿಟಿ 650 ಬೈಕ್‍‍ಗಳ ಹೆಡ್‍‍ಲೈ‍ಟ್‍‍ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಇದೇ ಹೆಚ್ಚು ಮಾರಾಟವಾಗುತ್ತಿರುವ ಪ್ರೀಮಿಯಂ ಬೈಕ್

ರಾಯಲ್ ಎನ್‍ಫೀಲ್ಡ್ 650 ಟ್ಚಿನ್ ಬೈಕ್‍‍ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಪ್ರೀಮಿಯಂ ಬೈಕ್‍‍ಗಳಾಗಿವೆ. ಎರಡೂ ಬೈಕ್‍‍ಗಳು 300-400 ಸಿಸಿ ವಿಭಾಗದ ಬೈಕ್‍ಗಳಿಗೂ ಪೈಪೋಟಿಯನ್ನು ನೀಡುತ್ತಿವೆ. ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‍ಫೀಲ್ಡ್ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.

More from DriveSpark

Article Published On: Monday, November 4, 2019, 15:03 [IST]
English summary
Royal Enfield 650-Twin Sales: Becomes The Best-Selling Premium Motorcycles In The Country - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+