ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹಿಮಾಲಯನ್ ಬಿಎಸ್-6 ಮಾದರಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ರಾಯಲ್ ಎನ್‍‍ಫೀಲ್ಡ್ ಈಗಾಗಾಲೇ 2019ರ ಇಐಸಿಎಂಎನಲ್ಲಿ ಅನಾವರಣಗೊಳಿಸಿದ ಮೂರು ಬಣ್ಣಗಳ ಆಯ್ಕೆಯ ಹಿಮಾಲಯನ್‍ ಬೈಕ್‍‍ಗಳನ್ನು ನವೀಕರಿಸಿ ಭಾರತದಲ್ಲಿ ಬಿಡುಗಡೆಗೊಳಿಸಲಾಗುತ್ತದೆ.

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ಇದರೊಂದಿಗೆ ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈ‍‍‍ಟ್‍ಗಳನ್ನು ಹೊಂದಿರಲಿದೆ. ಸ್ವಿಚ್‍‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಬಹುದು.

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ಹೊಸ ಹಿಮಾಲಯನ್ ಬೈಕ್ ರಾಕ್ ರೆಡ್, ಲೇಕ್ ಬ್ಲೂ ಮತ್ತು ಗ್ರೇವೆಲ್ ಗ್ರೇ ಎಂಬ ಮೂರು ವಿಶೆಷ ಬಣ್ಣಗಳಲ್ಲಿ ಬಿಡಗಡೆಯಾಗಲಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್‍ಯಾಕ್‍‍ನ ಮೇಲಿರುವ ರಾಕ್ ರೆಡ್ ಅಸೆಂಟ್‍‍‍ನೊಂದಿಗಿರುವ ಕಪ್ಪು ಬಣ್ಣವನ್ನು ಹೊಂದಿರಲಿದೆ.

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ಕೆಲವು ಭಾಗಗಳಿಗೆ ಕ್ರೋಮ್ ಬಣ್ಣವನ್ನು ಸಹ ನೀಡಲಾಗಿದೆ. ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್‍‍ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ.

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ಹಿಮಾಲಯನ್ ಬಿಎಸ್-6 ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅಳವಡಿಸಲಾಗುವುದು. ಈ ಎಂಜಿನ್ 24.5 ಬಿ‍‍ಹೆಚ್‍‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗುವುದು.

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಅಡ್ವೆಂಚರ್ ಟೂರರ್ ಬೈಕಿನಲ್ಲಿ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಂಗಳಿವೆ. ಇವುಗಳೊಂದಿಗೆ ಮುಂಭಾಗದಲ್ಲಿ 41 ಎಂಎಂನ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊಶಾಕ್‍‍ಗಳಿವೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍‍ಗಳಿವೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ರಾಯಲ್ ಎನ್‌ಫೀಲ್ಡ್ ಕಂಪನಿಯ ಹಿಮಾಲಯನ್ ಬೈಕ್ ತನ್ನ ಸೆಗ್‍‍ಮೆಂಟಿನಲ್ಲಿ ಉತ್ತಮವಾದ ಅಡ್ವೆಂಚರ್ ಟೂರರ್ ಬೈಕ್ ಆಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.81 ಲಕ್ಷಗಳಾಗಿದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಹೊಸ ಫೀಚರ್ಸ್‍‍ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಆರ್‍ಇ ಹಿಮಾಲಯನ್ ಬೈಕ್

ಈ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿ‍ಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ. ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್‍ನಲ್ಲಿ ಸ್ವಿಚ್‍‍ಬೇಲ್ ಎಬಿಎಸ್‍ ಮತ್ತು ಹಜಾರ್ಡ್ ಲೈ‍‍ಟ್‍‍ಗಳನ್ನುಅಳವಡಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಹೊಸ ಬಿಎಸ್-6 ಹಿಮಾಲಿಯನ್ ಮಾದರಿಗೆ ರೂ.10 ಸಾವಿರದಿಂದ 15 ಸಾವಿರದವರೆಗೆ ದರ ಹೆಚ್ಚಿರಬಹುದು ಎಂಬ ನಿರೀಕ್ಷೆಗಳಿವೆ.

Most Read Articles

Kannada
English summary
BS6 Royal Enfield Himalayan To Get These 2 New Features - Read in Kannada
Story first published: Thursday, November 28, 2019, 18:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X