ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ತನ್ನ ಕ್ಲಾಸಿಕ್ ಶೈಲಿ ಮತ್ತು ಉತ್ತಮ ಗುಣಮಟ್ಟದ ಎಂಜಿನ್‍ನಿಂದ ಜನಪ್ರಿಯತೆಯನ್ನು ಪಡೆದಿರುವ ರಾಯಲ್ ಎನ್‍ಫೀಲ್ಡ್ ಸಂಸ್ಥೆಯು ನವೆಂಬರ್ 14, 2018ರಂದು ತಮ್ಮ ಹೊಸ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಎಂಬ ಎರಡು ಬೈಕ್‍ಗಳನ್ನು ಬಿಡುಗಡೆ ಮಾಡಲಾಗಿತ್ತು. ಆರ್‍ಇ ವಾಹನಗಳ ಪಟ್ಟಿಯಲ್ಲಿ ಈ ಬೈಕ್‍ಗಳು ಹೆಚ್ಚಿನ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದೀಗ ಮಾರುಕಟ್ಟೆಯಲ್ಲಿ ಹೆಚ್ಚಿನ ಮಟ್ಟದ ಬೇಡಿಕೆಯನ್ನು ಪಡೆಯುತ್ತಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಹೌದು, ಬಿಡುಗಡೆಗೊಂಡು ಸುಮಾರು 6 ತಿಂಗಳಾದರೂ ಸಹ ಈ ಬೈಕ್‍ಗಳ ಬೇಡಿಕೆಯು ಹೆಚ್ಚುತ್ತಿದೆಯೆ ಹೊರತು ಕಡಿಮೆಯಂತೂ ಆಗಲಿಲ್ಲ. ಏಕೆಂದರೆ ಪ್ರತೀ ತಿಂಗಳು ಸುಮಾರು 1500 ಯೂನಿಟ್ ಬೈಕ್‍ಗಳು ಮಾರಾಟವಾಗುತ್ತಿದ್ದು, ಎಪ್ರಿಲ್ 2019ರಲ್ಲಿ ಸುಮಾರು 2000 ಯೂನಿಟ್ 650 ಟ್ವಿನ್ ಬೈಕ್‍ಗಳು ಮಾರಾಟವಾಗಿದೆ. ಹೀಗಾಗಿ ಬೇಡಿಕೆಯ ಅನುಸಾರ ರಾಯಲ್ ಎನ್‍ಫೀಲ್ಡ್ ಸಂಸ್ಥೆಯು ಈ ಬೈಕ್‍ಗಳ ವಿರತಣೆಯ ಸಮಯವನ್ನು ಸಹ ಸುಮಾರು 3 ರಿಂದ 4 ತಿಂಗಳವರೆಗೆ ಏರಿಸಲಾಗಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 2.65 ಲಕ್ಷ ಮತ್ತು ಇಂಟರ್‍‍ಸೆಪ್ಟರ್ 650 ಬೈಕ್ ರೂ. 2.57 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಬುಕ್ಕಿಂಗ್ ಮಾಡಿಕೊಂಡ ಬೈಕ್ ನಿಮ್ಮ ಕೈ ತಲುಪ ಬೇಕಾದರೆ ಸುಮಾರು 4 ರಿಂದ 5 ತಿಂಗಳ ಸಮಯ ಬೇಕಾಗುತ್ತದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನಗಳ ಸರಣಿಯಲ್ಲಿ ಈ ಎರಡೂ ಬೈಕ್‍‍ಗಳು ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎರಡೂ ಬೈಕ್‍ಗಳು ಆಧುನಿಕ ಕ್ಲಾಸಿಕ್ ನೋಟವನ್ನು ಪಡೆದುಕೊಂಡಿದೆ. ಕಾಂಟಿನೆಂಟಲ್ ಜಿಟಿ 650 ಕೆಫ್ ರೇಸರ್ ವಿನ್ಯಾಸವನ್ನು ಆಧರಿಸಿದರೆ ಇನ್ನು ಇಂಟರ್‍‍ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಬೈಕ್‍ಗಳ ವಿನ್ಯಾಸ

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 60ರ ದಶಕದ ಇಂಟರ್‍‍ಸೆಪ್ಟರ್‍‍ನಿಂದ ಪ್ರೇರಣೆಯನ್ನು ಹೊಂದಿದ್ದು, ಬ್ರಿಟಿಷ್ ರೋಡ್‍ಸ್ಟರ್ ಮಾದರಿಯ ನೋಟವನ್ನು ಪಡೆದುಕೊಂಡಿದೆ. ಇನ್ನು ಇಂಟರ್‍‍‍ಸೆಪ್ಟರ್ 650 ಬೈಕ್ ಕ್ಲೀನ್-ಲೈನ್, ಕ್ಲಾಸಿಕ್ ಟಿಯರ್‍‍ಡ್ರಾಪ್ ಆಕಾರದ ಫ್ಯುಯಲ್ ಟ್ಯಾಂಕ್ ಮತ್ತು ಡೈಮಂಡ್-ಕ್ವಿಲ್ಟ್-ಪ್ಯಾಟರ್ನ್ಡ್ ಟ್ವಿನ್ ಸೀಟ್‍ಗಳನ್ನು ನೀಡಲಾಗಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಕೇಫ್ ರೇಸರ್ ವಿನ್ಯಾಸವನ್ನು ಪಡೆದುಕೊಂಡಿರುವ ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ 1950ರ ದಶಕದಲ್ಲಿನ ಕೆಫ್‍ ರೇಸರ್ ವಿನ್ಯಾಸವನ್ನು ಆಧರಿಸಿದ್ದು, ಕೆತ್ತಲಾದ ಫ್ಯುಯಲ್ ಟ್ಯಾಂಕ್, ತೂಕದ ನಿಲುವು, ರಿಯರ್-ಫೂಟ್ ಪೆಗ್ಸ್ ಮತ್ತು ಹ್ಯಾಂಡಲ್‍ಬಾರ್‍‍ನ ಮೇಲೆ ಕ್ಲಿಪ್ ಅನ್ನು ಒದಗಿಸಲಾಗಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಎಂಜಿನ್ ವೈಶಿಷ್ಟ್ಯತೆ

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳು ಹೊಸ 649ಸಿಸಿ ಏರ್ ಕೂಲ್ಡ್, ಪ್ಯಾರಲಲ್ ಟ್ವಿನ್ ಎಂಜಿನ್ ಸಹಾಯದಿಂದ 47ಬಿಹೆಚ್‍ಪಿ ಮತ್ತು 52ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಎರಡು ಬೈಕ್‍ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್ ಶಾಕ್ ಅಬ್ಸಾರ್ಬರ್ ಅನ್ನು ಒದಗಿಸಲಾಗಿದೆ. 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್ ಮತ್ತು ಪಿರೆಲ್ಲಿ ಪ್ಯಾಂಥಂ ಸ್ಪೋರ್ಟ್‍‍ಕಾಂಪ್ ಟೈ‍‍ರ್‍‍ಗಳನ್ನು ಅಳವಡಿಸಲಾಗಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍‍ಗಳಲ್ಲಿ ಬೈಬ್ರೆ (ಬೈ ಬ್ರೆಂಬೊ) ಸಂಸ್ಥೆಯಿಂದ ಪಡೆದ 320ಎಂಎಂ ಮತ್ತು 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಬಣ್ಣಗಳು

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳು ವಿವಿಧ ಮತ್ತು ಆಕರ್ಷಕ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಇಂಟರ್‍‍ಸೆಪ್ಟರ್ 650 - ಮಾರ್ಕ್ ತ್ರೀ, ಗ್ಲಿಟ್ಟರ್ & ಡಸ್ಟ್, ಆರೆಂಜ್ ಕ್ರಶ್, ರ್‍ಯಾವಿಶಿಂಗ್ ರೆಡ್, ಸಿಲ್ವರ್ ಸ್ಪೆಕ್ಟ್ರಾ ಮತ್ತು ಬೇಕರ್ ಎಕ್ಸ್ಪ್ರೆಸ್ ಎಂಬ 7 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆ..

ಇನ್ನು ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ - ಬ್ಲಾಕ್ ಮ್ಯಾಜಿಕ್, ವೆಂಚುರ ಬ್ಲೂ, ಮಿಸ್ಟರ್ ಕ್ಲೀನ್, ಡಾ.ಮೈಹೆಂ ಮತ್ತು ಐಸ್ ಕ್ವೀನ್ ಎಂಬ 5 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

Most Read Articles

Kannada
English summary
Royal Enfield Interceptor 650 And Continental GT 650 Monthly Sales 2K Mark For The First Time. Read In Kannada
Story first published: Wednesday, May 22, 2019, 14:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X