ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..

ಕ್ಲಾಸಿಕ್ ವಿನ್ಯಾಸದ ಮತ್ತು ಅಧಿಕ ಸಾಮರ್ಥ್ಯದ ಬೈಕ್‍ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿ, ಜನಪ್ರಿಯತೆಯನ್ನು ಪಡೆದುಕೊಂಡಿರುವ ರಾಯಲ್ ಎನ್‍ಫೀಲ್ಡ್ ಸಂಸ್ಥೆಯು ನವೆಂಬರ್ 14, 2019ರಂದು ತಮ್ಮ ಬಹುನಿರೀಕ್ಷಿತ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‍ಗಳನ್ನು ಬಿಡುಗಡೆಗೊಳಿಸಿತ್ತು.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಮಾರುಕಟ್ಟೆಗೆ ಬಂದು ಸುಮಾರು ಐದು ತಿಂಗಳುಗಳಲ್ಲಿ ರಾಯಲ್ ಎನ್‍ಫೀಲ್ಡ್ ಬೈಕ್‍ಗಳಲ್ಲಿ ಈ ಟ್ವಿನ್ ಬೈಕ್‍ಗಳು ಹೆಚ್ಚಿನ ಜನಪ್ರೀಯತೆಯನ್ನು ಪಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬುಕ್ಕಿಂಗ್‍ಗಳು ಬರುತ್ತಿವೆ. ಹೆಚ್ಚುತ್ತಿರುವ ಬೇಡಿಕೆಯ ಅನುಸಾರ ಈ ಬೈಕ್‍ಗಳನ್ನು ಹೊಸದಾಗಿ ಖರೀದಿಸುತ್ತಿರುವವರು ಬೈಕ್ ನಿಮ್ಮ ಕೈಗೆ ಸೇರಲು ಸುಮಾರು 4 ರಿಂದ ಕಾಯಲೇಬೇಕಾಗಿದೆ ಎಂದು ಚೆನ್ನೈನಲ್ಲಿನ ಡೀಲರ್‍‍ಗಳು ಮಾಹಿತಿ ನೀಡಿದ್ದಾರೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಬಿಡುಗಡೆಯಾದ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 2.50 ಲಕ್ಷ ಮತ್ತು ಕಾಂಟಿನೆಂಟಲ್ ಜಿಟಿ 650 ರೂ. 2.65 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಮಾರುಕಟ್ಟೆಯಲ್ಲಿ ಕವಾಸಕಿ ನಿಂಜಾ 300 ಬೈಕ್‍ಗಳಿಗಿಂತಲೂ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಕಡಿಮೆ ಬೆಲೆಯಲ್ಲಿ ಬಿಡುಗಡೆಗೊಂಡ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‍ಗಳನ್ನು ಖರೀದಿಸಲು ಇಚ್ಛಿಸುವ ಗ್ರಾಹಕರು, ಸಮೀಪದಲ್ಲಿರುವ ರಾಯಲ್ ಎನ್‍ಫೀಲ್ಡ್ ಡೀಲರ್‍‍ನ ಹತ್ತಿರ ರೂ.5000 ಮುಂಗಡ ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನಗಳ ಸರಣಿಯಲ್ಲಿ ಈ ಎರಡೂ ಬೈಕ್‍‍ಗಳು ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎರಡೂ ಬೈಕ್‍ಗಳು ಆಧುನಿಕ ಕ್ಲಾಸಿಕ್ ನೋಟವನ್ನು ಪಡೆದುಕೊಂಡಿದೆ. ಕಾಂಟಿನೆಂಟಲ್ ಜಿಟಿ 650 ಕೆಫ್ ರೇಸರ್ ವಿನ್ಯಾಸವನ್ನು ಆಧರಿಸಿದರೆ ಇನ್ನು ಇಂಟರ್‍‍ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಬೈಕ್‍ಗಳ ವಿನ್ಯಾಸ

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 60ರ ದಶಕದ ಇಂಟರ್‍‍ಸೆಪ್ಟರ್‍‍ನಿಂದ ಪ್ರೇರಣೆಯನ್ನು ಹೊಂದಿದ್ದು, ಬ್ರಿಟಿಷ್ ರೋಡ್‍ಸ್ಟರ್ ಮಾದರಿಯ ನೋಟವನ್ನು ಪಡೆದುಕೊಂಡಿದೆ. ಇನ್ನು ಇಂಟರ್‍‍‍ಸೆಪ್ಟರ್ 650 ಬೈಕ್ ಕ್ಲೀನ್-ಲೈನ್, ಕ್ಲಾಸಿಕ್ ಟಿಯರ್‍‍ಡ್ರಾಪ್ ಆಕಾರದ ಫ್ಯುಯಲ್ ಟ್ಯಾಂಕ್ ಮತ್ತು ಡೈಮಂಡ್-ಕ್ವಿಲ್ಟ್-ಪ್ಯಾಟರ್ನ್ಡ್ ಟ್ವಿನ್ ಸೀಟ್‍ಗಳನ್ನು ನೀಡಲಾಗಿದೆ.

ಕೇಫ್ ರೇಸರ್ ವಿನ್ಯಾಸವನ್ನು ಪಡೆದುಕೊಂಡಿರುವ ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ 1950ರ ದಶಕದಲ್ಲಿನ ಕೆಫ್‍ ರೇಸರ್ ವಿನ್ಯಾಸವನ್ನು ಆಧರಿಸಿದ್ದು, ಕೆತ್ತಲಾದ ಫ್ಯುಯಲ್ ಟ್ಯಾಂಕ್, ತೂಕದ ನಿಲುವು, ರಿಯರ್-ಫೂಟ್ ಪೆಗ್ಸ್ ಮತ್ತು ಹ್ಯಾಂಡಲ್‍ಬಾರ್‍‍ನ ಮೇಲೆ ಕ್ಲಿಪ್ ಅನ್ನು ಒದಗಿಸಲಾಗಿದೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಎಂಜಿನ್ ವೈಶಿಷ್ಟ್ಯತೆ

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳು ಹೊಸ 649ಸಿಸಿ ಏರ್ ಕೂಲ್ಡ್, ಪ್ಯಾರಲಲ್ ಟ್ವಿನ್ ಎಂಜಿನ್ ಸಹಾಯದಿಂದ 47ಬಿಹೆಚ್‍ಪಿ ಮತ್ತು 52ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಎರಡು ಬೈಕ್‍ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್ ಶಾಕ್ ಅಬ್ಸಾರ್ಬರ್ ಅನ್ನು ಒದಗಿಸಲಾಗಿದೆ. 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್ ಮತ್ತು ಪಿರೆಲ್ಲಿ ಪ್ಯಾಂಥಂ ಸ್ಪೋರ್ಟ್‍‍ಕಾಂಪ್ ಟೈ‍‍ರ್‍‍ಗಳನ್ನು ಅಳವಡಿಸಲಾಗಿದೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍‍ಗಳಲ್ಲಿ ಬೈಬ್ರೆ (ಬೈ ಬ್ರೆಂಬೊ) ಸಂಸ್ಥೆಯಿಂದ ಪಡೆದ 320ಎಂಎಂ ಮತ್ತು 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಬಣ್ಣಗಳು

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳು ವಿವಿಧ ಮತ್ತು ಆಕರ್ಷಕ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಇಂಟರ್‍‍ಸೆಪ್ಟರ್ 650 - ಮಾರ್ಕ್ ತ್ರೀ, ಗ್ಲಿಟ್ಟರ್ & ಡಸ್ಟ್, ಆರೆಂಜ್ ಕ್ರಶ್, ರ್‍ಯಾವಿಶಿಂಗ್ ರೆಡ್, ಸಿಲ್ವರ್ ಸ್ಪೆಕ್ಟ್ರಾ ಮತ್ತು ಬೇಕರ್ ಎಕ್ಸ್ಪ್ರೆಸ್ ಎಂಬ 7 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಹೆಚ್ಚಾದ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ..!

ಇನ್ನು ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ - ಬ್ಲಾಕ್ ಮ್ಯಾಜಿಕ್, ವೆಂಚುರ ಬ್ಲೂ, ಮಿಸ್ಟರ್ ಕ್ಲೀನ್, ಡಾ.ಮೈಹೆಂ ಮತ್ತು ಐಸ್ ಕ್ವೀನ್ ಎಂಬ 5 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

More from DriveSpark

Article Published On: Saturday, April 13, 2019, 8:30 [IST]
English summary
Royal Enfield Interceptor 650 & Continental GT 650 Bikes: Waiting periods get LONGER. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+