ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೆಲೆಗಳಲ್ಲಿ ಭಾರೀ ಬದಲಾವಣೆ
ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ಹೊಸ ದಾಖಲೆಗೆ ಕಾರಣವಾಗಿರುವ ರಾಯಲ್ ಎನ್ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳ ಬೆಲೆಗಳನ್ನು ಏರಿಕೆ ಮಾಡಲಾಗುತ್ತಿದ್ದು, ಮೂಲಗಳ ಪ್ರಕಾರ ಹೊಸ ಬೈಕ್‌ಗಳ ಬೆಲೆಯಲ್ಲಿ ರೂ. 20 ಸಾವಿರ ಏರಿಕೆಯಾಗಬಹುದು ಎನ್ನಲಾಗುತ್ತಿದೆ.

ಕ್ಲಾಸಿಕ್ ವಿನ್ಯಾಸದ ಮತ್ತು ಅಧಿಕ ಏಂಜಿನ್ ಸಾಮರ್ಥ್ಯ ಬೈಕ್‍ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿ ಜನಪ್ರಿಯತೆಯನ್ನು ಪಡೆದುಕೊಂಡಿರುವ ರಾಯಲ್ ಎನ್‍ಫೀಲ್ಡ್ ಸಂಸ್ಥೆಯು ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್ ಮೂಲಕ ಮತ್ತೊಂದು ಹಂತದತ್ತ ಹೆಜ್ಜೆಯಿಡುತ್ತಿದ್ದು, ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೈಕ್‌ಗಳನ್ನು ಏರಿಕೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮುಂದಿನ ವಾರ ಎಷ್ಟು ಹೆಚ್ಚಳವಾಗಲಿದೆ ಎನ್ನುವ ಮಾಹಿತಿ ಹೊರಬಿಳಲಿದ್ದು, ಕನಿಷ್ಠ ರೂ.20 ಸಾವಿರ ಹೆಚ್ಚಳವಾಗುವ ಬಗ್ಗೆ ಸುಳಿವು ಸಿಕ್ಕಿದೆ.

ಬೆಲೆ ಹೆಚ್ಚಳದೊಂದಿಗೆ ಹೊಸ ಬೈಕ್‌ಗಳಲ್ಲಿ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಜೋಡಣೆ ಮಾಡಲು ನಿರ್ಧರಿಸಿರುವ ಆರ್‌ಇ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಇನ್ನಷ್ಟು ಹೊಸ ಬಣ್ಣಗಳ ಆಯ್ಕೆಯನ್ನು ನೀಡಲಿಯೆಂತೆ.

ಇನ್ನು ಇಂಟರ್‍ಸೆಪ್ಟರ್ 650 ಬೈಕ್ ಮಾದರಿಯು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 2.50 ಲಕ್ಷ ಮತ್ತು ಕಾಂಟಿನೆಂಟಲ್ ಜಿಟಿ 650 ರೂ. 2.65 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, 300ಸಿಸಿ ಸಾಮಾರ್ಥ್ಯದ ಕವಾಸಕಿ ನಿಂಜಾ 300 ಬೈಕ್‍ಗಳಿಗಿಂತಲೂ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ.

ರಾಯಲ್ ಎನ್ಫೀಲ್ಡ್ ಇಂಟರ್‍ಸೆಪ್ಟರ್ 650 ಬೈಕ್ ಆವೃತ್ತಿಯು 60ರ ದಶಕದ ಇಂಟರ್‍ಸೆಪ್ಟರ್‍ನಿಂದ ಪ್ರೇರಣೆಯನ್ನು ಹೊಂದಿದ್ದು, ಬ್ರಿಟಿಷ್ ರೋಡ್‍ಸ್ಟರ್ ಮಾದರಿಯ ನೋಟವನ್ನು ಪಡೆದುಕೊಂಡಿದ್ದು, ಕ್ಲೀನ್-ಲೈನ್, ಕ್ಲಾಸಿಕ್ ಟಿಯರ್‍ಡ್ರಾಪ್ ಆಕಾರದ ಫ್ಯುಯಲ್ ಟ್ಯಾಂಕ್ ಮತ್ತು ಡೈಮಂಡ್-ಕ್ವಿಲ್ಟ್-ಪ್ಯಾಟರ್ನ್ಡ್ ಟ್ವಿನ್ ಸೀಟ್‍ಗಳನ್ನು ನೀಡಲಾಗಿದೆ.

ಹಾಗೆಯೇ ಕೇಫ್ ರೇಸರ್ ವಿನ್ಯಾಸವನ್ನು ಪಡೆದುಕೊಂಡಿರುವ ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ 1950ರ ದಶಕದಲ್ಲಿನ ಕೆಫ್ ರೇಸರ್ ವಿನ್ಯಾಸವನ್ನು ಆಧರಿಸಿದ್ದು, ಕೆತ್ತಲಾದ ಫ್ಯುಯಲ್ ಟ್ಯಾಂಕ್, ತೂಕದ ನಿಲುವು, ರಿಯರ್-ಫೂಟ್ ಪೆಗ್ಸ್ ಮತ್ತು ಹ್ಯಾಂಡಲ್‍ಬಾರ್‍ನ ಮೇಲೆ ಕ್ಲಿಪ್ ಅನ್ನು ಒದಗಿಸಲಾಗಿದೆ.

ಎಂಜಿನ್ ವೈಶಿಷ್ಟ್ಯತೆ
ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳು ಹೊಸ 649ಸಿಸಿ ಏರ್ ಕೂಲ್ಡ್, ಪ್ಯಾರಲಲ್ ಟ್ವಿನ್ ಎಂಜಿನ್ ಸಹಾಯದಿಂದ 47-ಬಿಹೆಚ್‍ಪಿ ಮತ್ತು 52-ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
MOST READ: ಎರಡೂವರೆ ಟನ್ ತೂಕದ ಸ್ಕಾರ್ಪಿಯೋ ಕಾರನ್ನು ಸಲೀಸಾಗಿ ಎಳೆದ ಆರ್15 ಬೈಕ್..!

ಎರಡು ಬೈಕ್‍ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್ ಶಾಕ್ ಅಬ್ಸಾರ್ಬರ್ ಅನ್ನು ಒದಗಿಸಲಾಗಿದೆ. 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್ ಮತ್ತು ಪಿರೆಲ್ಲಿ ಪ್ಯಾಂಥಂ ಸ್ಪೋರ್ಟ್‍ಕಾಂಪ್ ಟೈರ್‍ಗಳನ್ನು ಅಳವಡಿಸಲಾಗಿದೆ.

ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಲ್ಲಿ ಬೈಬ್ರೆ (ಬೈ ಬ್ರೆಂಬೊ) ಸಂಸ್ಥೆಯಿಂದ ಪಡೆದ 320ಎಂಎಂ ಮತ್ತು 240ಎಂಎಂನ ಡಿಸ್ಕ್ ಬ್ರೇಕ್‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: 78 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದ ಕಾರು ಮಾಲೀಕನ ಕಥೆ ಹರೋಹರ

ಲಭ್ಯವಿರುವ ಬೈಕ್ ಬಣ್ಣಗಳು
650 ಟ್ವಿನ್ ಬೈಕ್‍ಗಳು ವಿವಿಧ ಮತ್ತು ಆಕರ್ಷಕ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಇಂಟರ್‍ಸೆಪ್ಟರ್ 650 - ಮಾರ್ಕ್ ತ್ರೀ, ಗ್ಲಿಟ್ಟರ್ & ಡಸ್ಟ್, ಆರೆಂಜ್ ಕ್ರಶ್, ರ್‍ಯಾವಿಶಿಂಗ್ ರೆಡ್, ಸಿಲ್ವರ್ ಸ್ಪೆಕ್ಟ್ರಾ ಮತ್ತು ಬೇಕರ್ ಎಕ್ಸ್ಪ್ರೆಸ್ ಎಂಬ 7 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಕಾಂಟಿನೆಂಟಲ್ ಜಿಟಿ 650 ಬೈಕ್ - ಬ್ಲಾಕ್ ಮ್ಯಾಜಿಕ್, ವೆಂಚುರ ಬ್ಲೂ, ಮಿಸ್ಟರ್ ಕ್ಲೀನ್, ಡಾ.ಮೈಹೆಂ ಮತ್ತು ಐಸ್ ಕ್ವೀನ್ ಎಂಬ 5 ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.


Click it and Unblock the Notifications