ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಭಾರತದಲ್ಲಿ ವಾಯುಮಾಲಿನ್ಯವು ವಿಪರೀತವಾಗಿ ಹದಗೆಟ್ಟಿದ್ದು, ವಾಯುಮಾಲಿನ್ಯವನ್ನು ನಿಯಂತ್ರಿಸುವುದಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಯೋಜನೆಯ ಭಾಗವಾಗಿ ಬಿ‍ಎಸ್ 4 ಎಂಜಿನ್‍ ಹೊಂದಿರುವ ವಾಹನಗಳನ್ನು ಬಿ‍ಎಸ್ 6 ಎಂಜಿನ್‍‍ಗಳಿಗೆ ಅಪ್‍‍ಗ್ರೇಡ್‍‍ಗೊಳಿಸಲಾಗುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನವನ್ನು ನೀಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ರಿಜಿಸ್ಟ್ರೇಷನ್ ಶುಲ್ಕವನ್ನು ವಿಧಿಸಲಾಗುತ್ತಿಲ್ಲ. ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಫೇಮ್ 2 ಯೋಜನೆಯಡಿ ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಭಾರತದ ಮಾರುಕಟ್ಟೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಸೇರಿದಂತೆ ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಎಲೆಕ್ಟ್ರಿಕ್ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಹಲವು ಕಂಪನಿಗಳು ಪೈಪೋಟಿಯನ್ನು ನಡೆಸುತ್ತಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಈ ನಡುವೆ ಜಪಾನಿನ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್ಸ್ ಮುಂದಿನ ವರ್ಷ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಟೆಸ್ಟ್ ಮಾಡಲು ಬಯಸಿದೆ. ಅದಕ್ಕೂ ಮೊದಲು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ತನ್ನ ವಾಹನವನ್ನು ಮಾರ್ಕೆಟಿಂಗ್ ಮಾಡಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಈ ಬಗ್ಗೆ ಮಾತನಾಡಿದ ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸಟೋಶಿ ಉಚಿಡಾರವರು ನಾವು ಸರ್ಕಾರದ ನೀತಿಯನ್ನು ಗೌರವಿಸುತ್ತೇವೆ. ನಾವು ಕೆಲವು ಮೂಲಮಾದರಿಗಳನ್ನು ತಯಾರಿಸುತ್ತೇವೆ. ಸದ್ಯಕ್ಕೆ ಚಾರ್ಜಿಂಗ್ ಸಿಸ್ಟಂ, ಬ್ಯಾಟರಿ ಸ್ಟೇಷನ್ ಸೇರಿದಂತೆ ಇನ್ನಿತರ ಯಾವುದೇ ಮೂಲಸೌಕರ್ಯಗಳಿಲ್ಲ ಎಂದು ಹೇಳಿದರು.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಕಂಪನಿಯು ತನ್ನ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ನಂತರ, ದೇಶದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾದ ಸುಜುಕಿ ಕಂಪನಿಯ ಪಾಲುದಾರ ಸಂಸ್ಥೆಯಾದ ಮಾರುತಿ ಸುಜುಕಿಯಿಂದ ಮೂಲಸೌಕರ್ಯಗಳನ್ನು ಪಡೆಯಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ನಾವು ಮಾರುತಿ ಕಂಪನಿಯ ಪ್ರಮುಖ ತಂತ್ರಜ್ಞಾನವನ್ನು ಬಳಸಿಕೊಂಡು ಮಾರುತಿಯೊಂದಿಗೆ ಸಮನ್ವಯ ಸಾಧಿಸುತ್ತೇವೆ. ಟೆಕ್ನಾಲಜಿ ಮಾತ್ರವಲ್ಲದೆ ಅವರ ವೆಂಡರ್ ಹಾಗೂ ಎಲೆಕ್ಟ್ರಿಕ್ ಮೂಲಸೌಕರ್ಯ ಸಹ ಬಳಸಿಕೊಳ್ಳುತ್ತೇವೆ ಎಂದು 2019ರ ಇಐಸಿಎಂಎನಲ್ಲಿ ಭಾಗವಹಿಸಿರುವ ಸತೋಶಿ ಹೇಳಿದರು.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಬಜಾಜ್ ಆಟೋ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಯಲ್ಲಿ ಪ್ರದರ್ಶಿಸಿದ ಕೆಲವೇ ದಿನಗಳ ನಂತರ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ದ್ವಿಚಕ್ರ ವಾಹನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಹೀರೋ ಮೊಟೊಕಾರ್ಪ್, ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಅಥೆರ್ ಎನರ್ಜಿಯಲ್ಲಿ ಹೂಡಿಕೆ ಮಾಡಿದೆ.

MOST READ: ವಿಭಿನ್ನವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ - ಶೋರೂಂ ಸಿಬ್ಬಂದಿಗೆ ಸುಸ್ತೋ ಸುಸ್ತು..!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಪ್ರತಿ ಹೊಸ ಟೆಕ್ನಾಲಜಿಯಂತೆ ಎಲೆಕ್ಟ್ರಿಕ್ ವಾಹನಗಳನ್ನು ಜನಸಾಮಾನ್ಯರು ಒಪ್ಪಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಉಚಿಡಾ ಹೇಳಿದರು. ಭಾರತದಲ್ಲಿ ಮೊದಲ ಹಾಗೂ ಎರಡನೇ ತಲೆಮಾರಿನ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಯಶಸ್ವಿಯಾಗದಿರಬಹುದು ಎಂದು ಅವರು ಹೇಳಿದರು.

MOST READ: ಖಾಸಗಿ ವಿಮಾನ ಹೊಂದಿರುವ ಉದ್ಯಮಿಗಳಿವರು..!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಎಲೆಕ್ಟ್ರಿಕ್ ಸ್ಕೂಟರ್‍‍ಗಳು ತಕ್ಷಣವೇ ಯಶಸ್ವಿಯಾಗುತ್ತವೆ ಎಂಬುದು ಸರಿಯಲ್ಲ. ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ನಾವು ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ ಎಂದು ಹೇಳಿದರು. 2020ರ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ ಭಾರತದಲ್ಲಿ 50,000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮಾರಾಟವಾಗಿವೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಅವುಗಳಲ್ಲಿ 3,000 ವಾಹನಗಳನ್ನು ಮಾತ್ರ ಸಾಂಪ್ರದಾಯಿಕ ಮಾದರಿಯ ವಾಹನಗಳ ಪರ್ಫಾಮೆನ್ಸ್ ನೊಂದಿಗೆ ಹೋಲಿಸಬಹುದು. ಹದಗೆಡುತ್ತಿರುವ ವಾಯುಮಾಲಿನ್ಯ ಹಾಗೂ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲಿಯಂ ಆಮದಿನ ಕೊರತೆಯನ್ನು ಎದುರಿಸಲು ಸರ್ಕಾರವು ಆಟೋ ಮೊಬೈಲ್ ಉದ್ಯಮವನ್ನು ಎಲೆಕ್ಟ್ರಿಕರಣಗೊಳಿಸಲು ಬಯಸಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

2025ರ ವೇಳೆಗೆ 150 ಸಿಸಿಗಿಂತ ಕಡಿಮೆ ಎಂಜಿನ್ ಹೊಂದಿರುವ ಎಲ್ಲಾ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ದ್ವಿಚಕ್ರ ವಾಹನಗಳನ್ನು ನಿಷೇಧಿಸುವ ಯೋಜನೆಯನ್ನು ಸರ್ಕಾರವು ಹೊಂದಿದೆ. ವಾತಾವರಣದ ದೃಷ್ಟಿಯಿಂದ ಎಲೆಕ್ಟ್ರಿಕ್ ವಾಹನಗಳನ್ನು ಹೊಂದುವುದು ಅವಶ್ಯಕವಾದರೂ, ಕೆಲವು ಸಂಗತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಉಚಿಡಾರವರು ಹೇಳಿದರು.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಎಲೆಕ್ಟ್ರಿಕ್ ವಾಹನಗಳು ದೇಶದ ಪೆಟ್ರೋಲ್, ಡೀಸೆಲ್ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ. ಆದರೆ ಬ್ಯಾಟರಿಗಳನ್ನು ತಯಾರಿಸಲು ಬೇಕಾಗಿರುವ ಲಿಥಿಯಂ ಮೇಲಿನ ಅವಲಂಬನೆ ಹೆಚ್ಚಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ ಸುಜುಕಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು ಕಾಲಿಟ್ಟ ನಂತರ, ಈ ಸೀಮಿತ ಸಂಪನ್ಮೂಲದ ಬಳಕೆ ಹಾಗೂ ಬೆಲೆಗಳೆರಡೂ ಹೆಚ್ಚಾಗಲಿವೆ. ಚೀನಾ ದೇಶವು ವ್ಯಾಪಕವಾದ ಲಿಥಿಯಂ ನಿಕ್ಷೇಪಗಳನ್ನು ಹೊಂದಿರುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಲಿದೆ ಎಂದು ಅವರು ಹೇಳಿದರು.

Article Published On: Saturday, November 9, 2019, 12:50 [IST]
English summary
Suzuki electric bike testing in India to start next year introduction after infrastructure development - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+