Just In
- 8 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 11 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 11 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 12 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಪ್ 10 ಸ್ಕೂಟರ್ ಮಾರಾಟದಲ್ಲಿ ಹೋಂಡಾ ಆಕ್ಟಿವಾ ಮತ್ತೆ ನಂ.1
ಭಾರತದಲ್ಲಿ ಮಾರಾಟವಾಗುವ ಸ್ಕೂಟರ್ಗಳ ಪಟ್ಟಿಯಲ್ಲಿ ಹೋಂಡಾ ನಿರ್ಮಾಣದ ಆಕ್ಟಿವಾ 5ಜಿ ಮಾದರಿಗೆ ಭಾರೀ ಬೇಡಿಕೆ ಕಂಡುಬರುತ್ತಿದ್ದು, ಏಪ್ರಿಲ್ ತಿಂಗಳ ಅವಧಿಯಲ್ಲಿನ ಸ್ಕೂಟರ್ ಮಾರಾಟ ಪಟ್ಟಿಯಲ್ಲಿ ಮತ್ತೊಮ್ಮೆ ನಂ.1 ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
2018ರ ಫೆಬ್ರುವರಿ ತಿಂಗಳಿನಲ್ಲಿ ಬಿಡುಗಡೆಯಾಗಿದ್ದ ಆಕ್ಟಿವಾ 5ಜಿ ಮಾದರಿಯು ವರ್ಷಾಂತ್ಯಕ್ಕೆ ಬರೋಬ್ಬರಿ 30,93,481 ಸ್ಕೂಟರ್ಗಳು ಮಾರಾಟಗೊಂಡಿದ್ದು, ಇದೀಗ 2019ರ ಹಣಕಾಸು ವರ್ಷದಲ್ಲೂ ಭಾರೀ ಪ್ರಮಾಣದ ಬೇಡಿಕೆ ಕಂಡುಬಂದಿದೆ. ಕಡಿಮೆ ಬೆಲೆ ಮತ್ತು ಉತ್ತಮ ತಾಂತ್ರಿಕ ಅಂಶಗಳನ್ನು ಹೊಂದಿರು ಆಕ್ಟಿವಾ 5ಜಿ ಸ್ಕೂಟರ್ ಮಾದರಿಯು ಏಪ್ರಿಲ್ ಅವಧಿಯಲ್ಲಿ 2,10,961 ಯುನಿಟ್ಗಳು ಮಾರಾಟಗೊಂಡಿದ್ದು, ಹೊಸ ಹಣಕಾಸು ವರ್ಷದ ಆರಂಭದಿಂದಲೇ ಉತ್ತಮ ಬೇಡಿಕೆ ಕಾಯ್ದುಕೊಂಡಿದೆ.
ಭಾರತದಲ್ಲಿ ಮೊದಲ ಬಾರಿಗೆ 2000ರಲ್ಲಿ ಮಾರುಕಟ್ಟೆ ಪ್ರವೇಶ ಪಡೆದಿದ್ದ ಆಕ್ಟಿವಾ ಸ್ಕೂಟರ್ ಮಾದರಿಯು ಕಾಲಕ್ಕೆ ತಕ್ಕಂತೆ ಹಲವು ಬದಲಾವಣೆ ಬದಲಾವಣೆ ಪಡೆದಿದ್ದಲ್ಲದೇ 3ಜಿ, 4ಜಿ, 5ಜಿ ಸರಣಿಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವಲ್ಲಿ ಯಶಸ್ವಿಯಾಗಿವೆ.
ಕೇವಲ ಸ್ಕೂಟರ್ ಅಷ್ಟೇ ಅಲ್ಲದೇ ದ್ವಿಚಕ್ರ ವಾಹನಗಳ ಮಾರಾಟ ವಿಭಾಗದಲ್ಲೂ ಅಗ್ರಸ್ಥಾನದಲ್ಲಿರುವ ಆಕ್ಟಿವಾ 5ಜಿ ಮಾದರಿಯು ಹೀರೋ ಸ್ಪೆಂಡರ್ ಹಿಂದಿಕ್ಕಿ ಹಲವು ಬಾರಿ ನಂ.1 ಸ್ಥಾನಕ್ಕೆರಿದ್ದು, ಸ್ಕೂಟರ್ ಮಾರಾಟದಲ್ಲಿ ಬರೋಬ್ಬರಿ ಶೇ. 52ರಷ್ಟು ಪಾಲುನ್ನು ತನ್ನದಾಗಿಸಿಕೊಂಡಿದೆ.
ಜನವರಿ ತಿಂಗಳಿನಲ್ಲಿ ಸುಮಾರು 4.60 ಲಕ್ಷ ಸ್ಕೂಟರ್ಗಳು ಮಾರಾಟಗೊಂಡಿದ್ದು, ಇದರಲ್ಲಿ 2,10,961 ಆಕ್ಟಿವಾ 5ಜಿ ಸ್ಕೂಟರ್ ಮಾರಾಟವಾಗಿದ್ದಲ್ಲಿ 2ನೇ ಸ್ಥಾನದಲ್ಲಿರುವ ಟಿವಿಎಸ್ ಜೂಪಿಟರ್( 54,984) ಮತ್ತು ಮೂರನೇ ಸ್ಥಾನದಲ್ಲಿರುವ ಸುಜುಕಿ ಆಕ್ಸೆಸ್(48,463) ಸ್ಕೂಟರ್ಗಳನ್ನು ಮಾರಾಟ ಮೂಲಕ ಹೋಂಡಾ ಸಂಸ್ಥೆಗೆ ತೀವ್ರ ಪೈಪೋಟಿ ನೀಡುವ ವಿಶ್ವಾಸದಲ್ಲಿವೆ.
ಇನ್ನು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಹೋಂಡಾ ಆಕ್ಟಿವಾ 5ಜಿ ಮಾದರಿಯು 109.19 ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 8-ಬಿಎಚ್ಪಿ ಮತ್ತು 9-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ಗೆ 60 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.
ಬಿಡುಗಡೆಗೆ ಸಜ್ಜಾದ ಆಕ್ಟಿವಾ 6ಜಿ..!
ಹೌದು, ಕೇಂದ್ರ ಸಾರಿಗೆ ಇಲಾಖೆಯು ಆಟೋ ಉದ್ಯಮದಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಹೊಸ ವಾಹನಗಳ ಎಂಜಿನ್ ಮತ್ತು ಸುರಕ್ಷಾ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆಂದಿಗಿಂತಲೂ ಹೊಸ ವೈಶಿಷ್ಟ್ಯತೆಗಳನ್ನು ನೀವು ನೋಡಬಹುದಾಗಿದೆ. ಈ ಹಿಂದೆ 2017ರ ಏಪ್ರಿಲ್ 1ರಿಂದ ಬಿಎಸ್-3 ಎಂಜಿನ್ ವಾಹನಗಳನ್ನು ನಿಷೇಧ ಮಾಡಿದ್ದ ಕೇಂದ್ರ ಸರ್ಕಾರವು ಬಿಎಸ್-4 ಮತ್ತು ಅದಕ್ಕೂ ಮೇಲ್ಪಟ್ಟ ವಾಹನಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಿತ್ತು.
ಇದೀಗ ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೊಸ ನಿಯಮವನ್ನು ಅನುಷ್ಠಾನ ತರಲು ಮುಂದಾಗುತ್ತಿರುವ ಕೇಂದ್ರ ಸಾರಿಗೆ ಇಲಾಖೆಯು ಏಪ್ರಿಲ್ 1, 2019ರಿಂದ ಅನ್ವಯವಾಗುವಂತೆ ಬಿಎಸ್-4 ಎಂಜಿನ್ಗಳನ್ನು ಸಹ ನಿಷೇಧಗೊಳಿಸಿ ಸುಧಾರಿತ ಮಾದರಿಯ ಬಿಎಸ್-6 ಎಂಜಿನ್ ಜಾರಿಗೆ ತರಲು ಸಜ್ಜಾಗುತ್ತಿದೆ. ಹೀಗಾಗಿ ಹೊಸ ನಿಯಮಗಳಿಗೆ ಅನುಗುಣವಾಗಿ ಆಟೋ ಉತ್ಪಾದನಾ ಸಂಸ್ಥೆಗಳು ಸಹ ಭವಿಷ್ಯದ ವಾಹನಗಳನ್ನು ಬಿಎಸ್-6 ಪ್ರೇರಣೆಯೊಂದಿಗೆ ಅಭಿವೃದ್ಧಿಗೊಳಿಸುತ್ತಿವೆ.
MOST READ: ಎರಡೂವರೆ ಟನ್ ತೂಕದ ಸ್ಕಾರ್ಪಿಯೋ ಕಾರನ್ನು ಸಲೀಸಾಗಿ ಎಳೆದ ಆರ್15 ಬೈಕ್..!
ಹೋಂಡಾ ಇಂಡಿಯಾ ಸಹ ಇದೇ ನಿಟ್ಟಿನಲ್ಲಿ ತನ್ನ ಜನಪ್ರಿಯ ಸ್ಕೂಟರ್ ಮಾದರಿಯಾದ ಆಕ್ಟಿವಾ ಮಾದರಿಗಳನ್ನು ಉನ್ನತಿಕರಣ ಮಾಡುತ್ತಿದ್ದು, ಮುಂಬರುವ 2020ರ ಆರಂಭದಲ್ಲಿ ಬಿಡುಗಡೆಯಾಗಲಿರುವ ಆಕ್ಟಿವಾ 6ಜಿ ಸ್ಕೂಟರ್ ಅನ್ನು ಬಿಎಸ್-6 ಪ್ರೇರಿತ ಫ್ಯೂಲ್ ಇಂಜೆಕ್ಷಡ್ ಎಂಜಿನ್ನೊಂದಿಗೆ ಬಿಡುಗಡೆಗಾಗಿ ಸಜ್ಜುಗೊಳಿಸಿದೆ.
ಇದರಿಂದ ಹೊಸ ಸ್ಕೂಟರ್ ಮೈಲೇಜ್ ಮತ್ತು ಎಂಜಿನ್ ಕಾರ್ಯಕ್ಷಮತೆ ಸಾಕಷ್ಟು ಸುಧಾರಣೆಯಾಗಿದ್ದು, ಮೂಲಗಳ ಪ್ರಕಾರ ಹೊಸ ಎಂಜಿನ್ ಜೋಡಣೆಯಿಂದಾಗಿ ಆಕ್ಟಿವಾ 6ಜಿ ಸ್ಕೂಟರ್ ಮೈಲೇಜ್ ಪ್ರಮಾಣವು ಆಕ್ಟಿವಾ 5ಜಿ ಸ್ಕೂಟರ್ ಮೈಲೇಜ್ಗಿಂತಲೂ ಶೇ.10ರಷ್ಟು ಹೆಚ್ಚಳವಾಗಲಿದೆ ಎನ್ನಲಾಗಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?
ಬೆಲೆ ಏರಿಕೆಯ ಬಿಸಿ..!
ಬಿಎಸ್ 4 ವಾಹನಗಳಿಂತಲೂ ಬಿಎಸ್ 6 ಎಂಜಿನ್ ಪ್ರೇರಿತ ವಾಹನಗಳ ಎಂಜಿನ್ ಮಾದರಿಯು ಹೆಚ್ಚಿನ ಗುಣಮಟ್ಟ ಪಡೆದುಕೊಂಡಿರಲಿದ್ದು, ಇದರಿಂದ ಸಹಜವಾಗಿಯೇ ಸ್ಕೂಟರ್ ಮತ್ತು ಬೈಕ್ ಬೆಲೆಯಲ್ಲಿ ರೂ. 8 ಸಾವಿರದಿಂದ ರೂ. 12 ಸಾವಿರ ಹೆಚ್ಚಳವಾದಲ್ಲಿ, ರೂ.5 ಲಕ್ಷಕ್ಕೆ ದೊರೆಯುತ್ತಿರುವ ಕಾರುಗಳು ಮುಂಬರುವ ದಿನಗಳಲ್ಲಿ ರೂ.6 ಲಕ್ಷದಿಂದ ರೂ. 7.50 ಲಕ್ಷಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.