ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ದೇಶದ ವಿವಿಧ ರಾಜ್ಯಗಳಲ್ಲಿ ದಿನಂಪ್ರತಿ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಸಾರಿಗೆ ನಿಯಮಗಳ ಉಲ್ಲಂಘನೆ ಪ್ರಕರಣಗಳು ಕೂಡಾ ಹೆಚ್ಚುತ್ತಲೇ ಇವೆ. ಅದರಲ್ಲೂ ಹೆಲ್ಮೆಟ್ ಇಲ್ಲದ ಬೈಕ್ ಸವಾರಿಯು ಅತಿ ಹೆಚ್ಚು ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಇದೀಗ ಹೊಸ ನಿಯಮವೊಂದನ್ನು ಜಾರಿಗೆ ತರಲಾಗುತ್ತಿದೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಅಪಘಾತಗಳ ಸಂದರ್ಭದಲ್ಲಿ ಬೈಕ್ ಸವಾರರಿಗೆ ಸುರಕ್ಷತೆ ಸಿಗಲಿ ಎನ್ನುವ ಉದ್ದೇಶದಿಂದ ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡುವಂತೆ ದೇಶದ ಪ್ರತಿ ನಗರದಲ್ಲೂ ಸೂಕ್ತ ಕ್ರಮ ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು, ಹೆಲ್ಮೆಟ್ ಬಳಕೆ ಮಾಡದ ಸವಾರರನ್ನು ಹಿಡಿದು ದಂಡ ವಸೂಲಿ ಮಾಡುತ್ತಿದ್ದಾರೆ. ಆದರೂ ಕೂಡಾ ಹೆಲ್ಮೆಟ್ ಇಲ್ಲದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿರುವ ರಾಜ್ಯ ಸಾರಿಗೆ ಇಲಾಖೆಯು ನಿಯಮ ಉಲ್ಲಂಘಿಸುವ ಬೈಕ್ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಬಹುತೇಕ ಬೈಕ್ ಸವಾರರು ಸಾವಿರಾರು ರೂಪಾಯಿ ಕೊಟ್ಟು ಬೈಕ್ ಖರೀದಿ ಮಾಡಿದರೂ ಸಹ ಒಂದು ಉತ್ತಮವಾದ ಹೆಲ್ಮೆಟ್ ಖರೀದಿಸಲು ಹಿಂದೇಟು ಹಾಕುತ್ತಾರೆ. ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುವ ಅಗ್ಗದ ಬೆಲೆಯ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನ ಖರೀದಿಸುತ್ತಾರೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಆದ್ರೆ ಕಳೆಪೆ ಹೆಲ್ಮೆಟ್‌ಗಳು ಅಪಘಾತಗಳ ಸಂದರ್ಭದಲ್ಲಿ ಪ್ರಾಣ ಉಳಿಯುವ ಬದಲು ಪ್ರಾಣಕ್ಕೆ ಮತ್ತಷ್ಟು ಸಂಚಕಾರ ತರಲಿವೆ ಎಂಬುವುದು ಗೊತ್ತಿದ್ದರೂ ಸಹ ಅಗ್ಗದ ಬೆಲೆಯ ಹೆಲ್ಮೆಟ್‌ಗಳೇ ಹೆಚ್ಚು ಮಾರಾಟವಾಗುತ್ತಿದ್ದು, ಇಂತಹ ಪ್ರವೃತ್ತಿಯನ್ನು ತಪ್ಪಿಸಲು ಕರ್ನಾಟಕ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷಾ ಆಯುಕ್ತರು ಹೊಸ ರೂಲ್ಸ್ ಒಂದನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿದ್ದಾರೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರಿಗೆ ಡೀಲರ್ಸ್‌ಗಳೇ ಉಚಿತವಾಗಿ 2 ಉತ್ತಮ ಗುಣಮಟ್ಟದ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ವಿತರಣೆ ಮಾಡುವಂತೆ ಸೂಚನೆ ನೀಡಲಾಗಿದ್ದು, ನಿಯಮ ಪಾಲಿಸದ ಡೀಲರ್ಸ್ ವಿರುದ್ಧ ಸೂಕ್ತ ಕೈಗೊಳ್ಳುವುದಾಗಿ ಸೂಚನೆ ನೀಡಲಾಗಿದೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಹಾಗೆಯೇ ಹೆಲ್ಮೆಟ್ ಬಳಕೆ ಮಾಡದ ದ್ವಿಚಕ್ರ ವಾಹನ ಸವಾರರ ವಿರುದ್ದವು ಸೂಕ್ತ ಕ್ರಮ ಕೈಗೊಳ್ಳಲು ಪ್ರತ್ಯೇಕ ತಂಡ ರಚಿಸಿ ವಿಶೇಷ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದ್ದು, ಸಾರಿಗೆ ನಿಯಮಗಳನ್ನು ಉಲ್ಲಂಘನೆ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತಿದೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ನೆರೆ ರಾಜ್ಯ ತಮಿಳುನಾಡಿನಲ್ಲೂ ಸಹ ಈಗಾಗಲೇ ಬೈಕ್ ಖರೀದಿಸುವ ಗ್ರಾಹಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಣೆ ಮಾಡುವಂತೆ ಅಲ್ಲಿನ ಸಾರಿಗೆ ಮತ್ತು ಟ್ರಾಫಿಕ್ ಪೊಲೀಸ್ ಆಯುಕ್ತರು ಡೀಲರ್ಸ್‌ಗಳಿಗೆ ಸೂಚನೆ ನೀಡಿದ್ದು, ಹೆಲ್ಮೆಟ್ ಬಳಕೆ ಮಹತ್ವವನ್ನು ಅರಿಯಲು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಇನ್ನು ನಕಲಿ ಹೆಲ್ಮೆಟ್ ಬಳಸಬೇಡಿ ಎಂದು ಎಷ್ಟೇ ಮನವಿ ಮಾಡಿದ್ರು ಬಹುತೇಕ ಬೈಕ್ ಸವಾರರು ಮಾತ್ರ ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಗ್ಗದ ಬೆಲೆಗೆ ಲಭ್ಯವಿರುವ ಹೆಲ್ಮೆಟ್‌ಗಳನ್ನೇ ಬಳಕೆ ಮಾಡುತ್ತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಇದರಿಂದ ವಿಭಿನ್ನ ರೀತಿಯಲ್ಲಿ ಕಾರ್ಯಾಚರಣೆ ಕೈಗೊಂಡಿರುವ ದೆಹಲಿ ಪೊಲೀಸರು ನಕಲಿ ಹೆಲ್ಮೆಟ್ ಧರಿಸುವ ಬೈಕ್ ಸವಾರರಿಗೆ ಸ್ಥಳದಲ್ಲೇ ದಂಡ ವಿಧಿಸಿ ಐಎಸ್ಐನಿಂದ ಅನುಮೋದನೆಗೊಂಡಿರುವ ಹೆಲ್ಮೆಟ್‌ಗಳನ್ನು ವಿತರಣೆ ಮಾಡುತ್ತಿದ್ದು, ನಕಲಿ ಹೆಲ್ಮೆಟ್‌ಗಳನ್ನು ಸ್ಥಳದಲ್ಲೇ ಒಡೆದು ಹಾಕಿ ಕಳಪೆ ಹೆಲ್ಮೆಟ್ ಅಸಲಿಯತ್ತನ್ನು ಬಹಿರಂಗಗೊಳಿ ವಾಹನ ಸವಾರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಇದಲ್ಲದೇ ಮುಂದಿನ ಜೂನ್ 1ರಿಂದ ನೋಯ್ಡಾದಲ್ಲಿ 'ನೋ ಹೆಲ್ಮೆಟ್ ನೋ ಪೆಟ್ರೋಲ್' ಅಭಿಯಾನದಡಿ ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ಪೆಟ್ರೋಲ್ ಹಾಕದಿರಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದು, ಹೆಚ್ಚುತ್ತಿರುವ ರಸ್ತೆಗಳನ್ನು ತಡೆಯಲು ಅತ್ಯುತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ.

MOST READ: 78 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದ ಕಾರು ಮಾಲೀಕನ ಕಥೆ ಹರೋಹರ

ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!

ಒಟ್ಟಿನಲ್ಲಿ ಹೆಲ್ಮೆಟ್ ಬಳಕೆ ಬಗೆಗೆ ಸಾಕಷ್ಟುಅಭಿಯಾನಗಳನ್ನು ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಇದೀಗ ಉಚಿತವಾಗಿಯೇ ಹೆಲ್ಮೆಟ್ ನೀಡುತ್ತಿದ್ದು, ಇನ್ನಾದ್ರೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಪ್ರಾಣದ ಜೊತೆಗೆ ದಂಡವನ್ನು ಸಹ ಉಳಿಸಿಕೊಳ್ಳಬೇಕಿದೆ.

Source: ET Auto

Most Read Articles

Kannada
English summary
Two-wheeler Buyers In Karnataka Will Get 2 Helmets From Dealers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X