TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಯಮಹಾ ಎಂಟಿ-15 ಹೊಸ ಬೈಕ್ ಎಂಜಿನ್ ಪರ್ಫಾಮೆನ್ಸ್ ಹೇಗಿರಲಿದೆ ಗೊತ್ತಾ?
ಯಮಹಾ ಸಂಸ್ಥೆಯು ಇದೇ ಫೆಬ್ರುವರಿ ಅಂತ್ಯಕ್ಕೆ ಹೊಸ ಮಾದರಿಯ ಎಂಟಿ-15 ಎನ್ನುವ ಪ್ರೀಮಿಯಂ ಬೈಕ್ ಉತ್ಪನ್ನ ಒಂದನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಬೈಕ್ ತಾಂತ್ರಿಕ ಅಂಶಗಳ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಸೋರಿಕೆಯಾಗಿವೆ.
ಪ್ರೀಮಿಯಂ ದ್ವಿಚಕ್ರ ವಾಹನಗಳಿಗೆ ಭಾರತದಲ್ಲಿ ವಿಶೇಷ ಬೇಡಿಕೆ ಸೃಷ್ಠಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಿರುವ ಯಮಹಾ ಸಂಸ್ಥೆಯು ಎಂಟಿ-15 ಬಿಡುಗಡೆ ಮಾಡುತ್ತಿದೆ. ಈಗಾಗಲೇ ಕೆಲವು ಯಮಹಾ ಡೀಲರ್ಸ್‌ಗಳು ಆಸಕ್ತ ಗ್ರಾಹಕರಿಂದ ರೂ.5 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಕೂಡಾ ಸ್ವಿಕರಿಸುತ್ತಿದ್ದು, ತಾಂತ್ರಿಕ ಅಂಶಗಳ ಮಾಹಿತಿ ಇರುವ ಕೈಪಿಡಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಟುತ್ತಿದೆ.
ಜಪಾನ್ ಸೇರಿದಂತೆ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಈಗಾಗಲೇ ಭಾರೀ ಜನಪ್ರಿಯತೆಯನ್ನು ಹೊಂದಿರುವ ಎಂಟಿ-15 ಬೈಕ್ ಮಾದರಿಯು 200 ಸಿಸಿ ಬೈಕ್ ವಿಭಾಗದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಬಿಡುಗಡೆಯ ಸಂಬಂಧ ವಿವಿಧ ಹಂತದ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.
ಸದ್ಯ ಮಾರುಕಟ್ಟೆಯಲ್ಲಿರುವ ಆರ್15 ವಿ3.0 ಬೈಕ್ ಆವೃತ್ತಿಯ ಮುಂದುವರಿದ ಭಾಗವಾಗಿರುವ ಎಂಟಿ-15 ಬೈಕ್ ಮಾದರಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದವಾಗಿದ್ದು, ಪ್ರೀಮಿಯಂ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶ ಪಡೆಯುವುದು ಖಚಿತವಾಗಿದೆ.
ವಿದೇಶಿ ಮಾರುಕಟ್ಟೆಗಳಲ್ಲಿ ಈಗಾಗಲೇ ಹಲವು ಬದಲಾವಣೆಗಳೊಂದಿಗೆ ಮರುಬಿಡುಗಡೆಯಾಗಿರುವ ಎಂಟಿ-15 ಬೈಕ್ ಮಾದರಿಯು, ಕಳೆದ ಅಕ್ಟೋಬರ್‌ನಲ್ಲಿ ಇಂಡೋನೇಷ್ಯಾ ಆಟೋ ಎಕ್ಸ್‌ಪೋದಲ್ಲೂ ಹೊಸ ಡಿಸೈನ್ ಪ್ರೇರಿತ ಎಂಟಿ-15 ಪ್ರದರ್ಶನಗೊಂಡು ಬೈಕ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿತ್ತು.
ಎಂಟಿ-15 ಬೈಕ್ ಮಾದರಿಯು ಯಮಹಾ ನಿರ್ಮಾಣದ ಮತ್ತೊಂದು ದುಬಾರಿ ಬೆಲೆಯ ಎಂಟಿ-9 ಬೈಕಿನ ಡಿಸೈನ್ ಹೋಲಿಕೆಯಿದ್ದು, ಪೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಹೊಸ ವಿನ್ಯಾಸಗಳನ್ನು ಪಡೆದುಕೊಳ್ಳಲಿದೆ.
ಎಂಜಿನ್ ಸಾಮರ್ಥ್ಯ
155.1-ಸಿಸಿ ಲಿಕ್ವಿಡ್ ಕೂಲ್ಡ್, ಫ್ಯೂಲ್ ಇಂಜೆಕ್ಷ್ಟೆಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರುವ ಎಂಟಿ-15 ಬೈಕ್‌ಗಳು 6-ಸ್ಪೀಡ್ ಗೇರ್‌ಬಾಕ್ಸ್ ಸಹಾಯದೊಂದಿಗೆ 19.3-ಬಿಎಚ್‌ಪಿ ಮತ್ತು 14.7-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಹೀಗಾಗಿ ಎಂಟಿ-15 ಬೈಕ್‌ಗಳು ಕಡಿಮೆ ಸಾಮರ್ಥ್ಯದ ಎಂಜಿನ್ ಸೌಲಭ್ಯವನ್ನು ಹೊಂದಿದ್ದರೂ ಸಹ ಪರ್ಫಾಮೆನ್ಸ್ ವಿಚಾರದಲ್ಲಿ 200ಸಿಸಿ ಬೈಕ್‌ಗಳನ್ನು ಸಹ ಹಿಂದಿಕ್ಕುವ ಗುಣಹೊಂದಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ವೆರಿಬಲ್ ವೆಲ್ವ್ ಆಕ್ಷನ್(ವಿವಿಎ) ಕಿಟ್ ಜೋಡಣೆ ಮಾಡಿರುವುದೇ ಇದಕ್ಕೆ ಪ್ರಮುಖ ಕಾರಣ.
ಹಾಗೆಯೇ ಹೊಸ ಬೈಕ್ ಮಾದರಿಯು 2,020-ಎಂಎಂ ಉದ್ದ, 800-ಎಂಎಂ ಅಗಲ, 1,070-ಎಂಎಂ ಎತ್ತರ, 1335ಎಂಎಂ ವೀಲ್ಹ್ ಬೆಸ್, 160ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಬೈಕ್ ಬರೋಬ್ಬರಿ 288 ಕೆ.ಜಿ ತೂಕ ಪಡೆದುಕೊಂಡಿದೆ ಎನ್ನಲಾಗಿದೆ.
MOST READ: ಬ್ರೇಕ್ ಫೇಲ್ ಆದಾಗ ಜೀವ ಉಳಿಸಿಕೊಳ್ಳಲು ಈ ಟಿಪ್ಸ್ ಖಂಡಿತ ನಿಮ್ಮ ಸಹಾಯಕ್ಕೆ ಬರುತ್ತೆ..!
ಇನ್ನು ಎಂಟಿ-15 ಬೈಕಿನ ಮುಂಭಾಗದಲ್ಲಿ ಅಪ್ ಸೈಡ್ ಡೌನ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೋಶಾರ್ಕ್ ಸಸ್ಪೆಷನ್ ಸೌಲಭ್ಯ ಹೊಂದಿದ್ದು, ಎರಡು ಚಕ್ರಗಳಲ್ಲೂ ಡಿಸ್ಕ್ ಬ್ರೇಕ್ ಜೊತೆಗೆ ಎಬಿಎಸ್(ಆ್ಯಂಟಿ ಬ್ರೇಕಿಂಗ್ ಸಿಸ್ಟಂ) ಸಹ ಸ್ಯಾಂಡರ್ಡ್ ಆಗಿ ದೊರಲಿದೆ.
ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಆರ್15 ಬೈಕಿಗೂ ಮತ್ತು ಎಂಟಿ-9 ಬೈಕಿಗೂ ಒಂದೇ ಮಾದರಿಯ ಚಾರ್ಸಿ ಬಳಕೆ ಮಾಡಿರುವ ಯಮಹಾ ಸಂಸ್ಥೆಯು ಪ್ರೀಮಿಯಂ ಬೈಕ್ ಮಾರಾಟದಲ್ಲಿ ಹೊಸ ಆಯ್ಕೆ ನೀಡುತ್ತಿದ್ದು, ಇದು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.
MOST READ: ಬದಲಾದ ತೆರಿಗೆ ನೀತಿ- ಸದ್ಯದಲ್ಲೇ ಹೊಸ ಬೈಕ್, ಸ್ಕೂಟರ್‌ಗಳು ಮತ್ತಷ್ಟು ದುಬಾರಿ..!
ಬಿಡುಗಡೆ ಯಾವಾಗ?
ಯಮಹಾ ಸಂಸ್ಥೆಯೇ ಎಂಟಿ-15 ಬಿಡುಗಡೆಯ ಬಗ್ಗೆ ಆಟೋ ಕಾರ್ ಸುದ್ದಿಸಂಸ್ಥೆಯ ಸಂದರ್ಶನವೊಂದರಲ್ಲಿ ಮಾಹಿತಿ ಹಂಚಿಕೊಂಡಿದ್ದು, 2019ರ ಮೊದಲ ತ್ರೈಮಾಸಿಕ ಅಂತ್ಯಕ್ಕೆ ಹೊಸ ಬೈಕ್ ಖರೀದಿಗೆ ಲಭ್ಯವಿವೆ ಎಂದಿದ್ದಾರೆ.
ಬೈಕಿನ ಬೆಲೆಗಳು(ಅಂದಾಜು)
ಆರ್15 ಬೈಕಿಗಿಂತಲೂ ಹೆಚ್ಚು ಪ್ರೀಮಿಯಂ ಗುಣಲಕ್ಷಣ ಹೊಂದಿರುವ ಎಂಟಿ-15 ಬೈಕ್‌ಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.1.35 ಲಕ್ಷದಿಂದ ರೂ. 1.40 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, 200ಸಿಸಿ ಸಾಮಾರ್ಥ್ಯದ ಇತರೆ ಬೈಕಿಗಳಿಂತಲೂ ಇದು ಹೆಚ್ಚಿನ ಸುರಕ್ಷತೆ ಪಡೆದುಕೊಳ್ಳಲಿದೆ.
ಈ ಮೂಲಕ 200ಸಿಸಿ ಸಗ್ಮೆಂಟ್ ವಿಭಾಗದಲ್ಲಿನ ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ ಮತ್ತು ಬಜಾಜ್ ಪಲ್ಸರ್ ಎನ್ಎಸ್ 200 ಬೈಕ್‌ಗಳಿಗೆ ತ್ರೀವ ಪೈಪೋಟಿ ನೀಡಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಬೈಕಿನ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿವೆ.
Source: IAB