Just In
- 2 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 2 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 3 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 4 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರ್ಚ್ 15ಕ್ಕೆ ಬಿಡುಗಡೆಯಾಗಲಿರುವ ಯಮಹಾ ಎಂಟಿ-15 ಬೈಕ್ ಹೇಗಿರಲಿದೆ?
ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಎಂಟಿ-15 ಬೈಕ್ ಮಾದರಿಯನ್ನು ಯಮಹಾ ಸಂಸ್ಥೆಯು ಭಾರತದಲ್ಲೂ ಬಿಡುಗಡೆಗೊಳಿಸುತ್ತಿದ್ದು, ಕೆಲವು ಮೂಲಗಳ ಪ್ರಕಾರ ಹೊಸ ಎಂಟಿ-15 ಬೈಕ್ ಮಾದರಿಯು ಮುಂದಿನ ತಿಂಗಳು ಮಾರ್ಚ್ 15ರಂದೇ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಬಿಡುಗಡೆಯ ದಿನಾಂಕ ಸನಿಹವಾಗುತ್ತಿದ್ದಂತೆ ಹೊಸ ಬೈಕ್ ಎಂಜಿನ್ ಕಾರ್ಯಕ್ಷಮತೆ ಕುರಿತು ವಿವಿಧ ಸುತ್ತಿನ ಸ್ಪಾಟ್ ಟೆಸ್ಟಿಂಗ್ ನಡೆಸಲಾಗುತ್ತಿದೆ.
ಪ್ರೀಮಿಯಂ ದ್ವಿಚಕ್ರ ವಾಹನಗಳಿಗೆ ಭಾರತದಲ್ಲಿ ವಿಶೇಷ ಬೇಡಿಕೆ ಸೃಷ್ಠಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಯಮಹಾ ಸಂಸ್ಥೆಯು ಸಹ ಎಂಟಿ-15 ಬೈಕ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಕೆಲವು ಯಮಹಾ ಡೀಲರ್ಸ್ಗಳು ಆಸಕ್ತ ಗ್ರಾಹಕರಿಂದ ರೂ.5 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಕೂಡಾ ಸ್ವಿಕರಿಸುತ್ತಿದ್ದು, ಆರ್15 ವಿ3.0 ಬೈಕ್ ಆವೃತ್ತಿಯ ಮುಂದುವರಿದ ಭಾಗವಾಗಿರುವ ಎಂಟಿ-15 ಬೈಕ್ ಮಾದರಿಯು ಪರ್ಫಾಮೆನ್ಸ್ ಪ್ರಿಯರಿಗಾಗಿಯೇ ವಿಶೇಷವಾಗಿ ಸಿದ್ದವಾಗಿದೆ.
ವಿದೇಶಿ ಮಾರುಕಟ್ಟೆಗಳಲ್ಲಿ ಈಗಾಗಲೇ ಹಲವು ಬದಲಾವಣೆಗಳೊಂದಿಗೆ ಮರುಬಿಡುಗಡೆಯಾಗಿರುವ ಎಂಟಿ-15 ಬೈಕ್ ಮಾದರಿಯು, ಕಳೆದ ಅಕ್ಟೋಬರ್ನಲ್ಲಿ ನಡೆದ ಇಂಡೋನೇಷ್ಯಾ ಆಟೋ ಎಕ್ಸ್ಪೋದಲ್ಲೂ ಹೊಸ ಡಿಸೈನ್ ಪ್ರೇರಿತ ಎಂಟಿ-15 ಪ್ರದರ್ಶನಗೊಂಡು ಬೈಕ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿತ್ತು.
ಎಂಟಿ-15 ಬೈಕ್ ಮಾದರಿಯು ಯಮಹಾ ನಿರ್ಮಾಣದ ಮತ್ತೊಂದು ದುಬಾರಿ ಬೆಲೆಯ ಎಂಟಿ-9 ಬೈಕಿನ ಡಿಸೈನ್ ಹೋಲಿಕೆಯಿದ್ದು, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಹೊಸ ವಿನ್ಯಾಸಗಳನ್ನು ಪಡೆದುಕೊಳ್ಳಲಿದೆ.
ಎಂಜಿನ್ ಸಾಮರ್ಥ್ಯ
ಸೋರಿಕೆಯಾದ ಮಾಹಿತಿ ಪ್ರಕಾರ, 155.1-ಸಿಸಿ ಲಿಕ್ವಿಡ್ ಕೂಲ್ಡ್, ಫ್ಯೂಲ್ ಇಂಜೆಕ್ಷ್ಟೆಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರುವ ಎಂಟಿ-15 ಬೈಕ್ಗಳು 6-ಸ್ಪೀಡ್ ಗೇರ್ಬಾಕ್ಸ್ ಸಹಾಯದೊಂದಿಗೆ 19.3-ಬಿಎಚ್ಪಿ ಮತ್ತು 14.7-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಹೀಗಾಗಿ ಎಂಟಿ-15 ಬೈಕ್ಗಳು ಕಡಿಮೆ ಸಾಮರ್ಥ್ಯದ ಎಂಜಿನ್ ಸೌಲಭ್ಯವನ್ನು ಹೊಂದಿದ್ದರೂ ಸಹ ಪರ್ಫಾಮೆನ್ಸ್ ವಿಚಾರದಲ್ಲಿ 200ಸಿಸಿ ಬೈಕ್ಗಳನ್ನು ಸಹ ಹಿಂದಿಕ್ಕುವ ಗುಣಹೊಂದಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ವೆರಿಬಲ್ ವೆಲ್ವ್ ಆಕ್ಷನ್(ವಿವಿಎ) ಕಿಟ್ ಜೋಡಣೆ ಮಾಡಿರುವುದೇ ಇದಕ್ಕೆ ಪ್ರಮುಖ ಕಾರಣ.
ಹಾಗೆಯೇ ಹೊಸ ಬೈಕ್ ಮಾದರಿಯು 2,020-ಎಂಎಂ ಉದ್ದ, 800-ಎಂಎಂ ಅಗಲ, 1,070-ಎಂಎಂ ಎತ್ತರ, 1335ಎಂಎಂ ವೀಲ್ಹ್ ಬೆಸ್, 160ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಬೈಕ್ ಬರೋಬ್ಬರಿ 135 ಕೆ.ಜಿ ತೂಕ ಪಡೆದುಕೊಂಡಿದೆ ಎನ್ನಲಾಗಿದೆ.
ಇನ್ನು ಎಂಟಿ-15 ಬೈಕಿನ ಮುಂಭಾಗದಲ್ಲಿ ಅಪ್ ಸೈಡ್ ಡೌನ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೋಶಾರ್ಕ್ ಸಸ್ಪೆಷನ್ ಸೌಲಭ್ಯ ಹೊಂದಿದ್ದು, ಎರಡು ಚಕ್ರಗಳಲ್ಲೂ ಡಿಸ್ಕ್ ಬ್ರೇಕ್ ಜೊತೆಗೆ ಎಬಿಎಸ್(ಆ್ಯಂಟಿ ಬ್ರೇಕಿಂಗ್ ಸಿಸ್ಟಂ) ಸಹ ಸ್ಯಾಂಡರ್ಡ್ ಆಗಿ ದೊರಲಿದೆ.
ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಆರ್15 ಬೈಕಿಗೂ ಮತ್ತು ಎಂಟಿ-9 ಬೈಕಿಗೂ ಒಂದೇ ಮಾದರಿಯ ಚಾರ್ಸಿ ಬಳಕೆ ಮಾಡಿರುವ ಯಮಹಾ ಸಂಸ್ಥೆಯು ಪ್ರೀಮಿಯಂ ಬೈಕ್ ಮಾರಾಟದಲ್ಲಿ ಹೊಸ ಆಯ್ಕೆ ನೀಡುತ್ತಿದ್ದು, ಇದು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.
ಬೈಕಿನ ಬೆಲೆಗಳು(ಅಂದಾಜು)
ಆರ್15 ಬೈಕಿಗಿಂತಲೂ ಹೆಚ್ಚು ಪ್ರೀಮಿಯಂ ಗುಣಲಕ್ಷಣಗಳನ್ನು ಹೊಂದಿರುವ ಎಂಟಿ-15 ಬೈಕ್ಗಳು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ.1.20 ಲಕ್ಷದಿಂದ ರೂ. 1.40 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, 200ಸಿಸಿ ಸಾಮಾರ್ಥ್ಯದ ಇತರೆ ಬೈಕಿಗಳಿಂತಲೂ ಇದು ಹೆಚ್ಚಿನ ಸುರಕ್ಷತೆ ಪಡೆದುಕೊಳ್ಳಲಿದೆ.
ಈ ಮೂಲಕ 200ಸಿಸಿ ಸೆಗ್ಮೆಂಟ್ ವಿಭಾಗದಲ್ಲಿನ ಟಿವಿಎಸ್ ಅಪಾಚೆ ಆರ್ಟಿಆರ್ 200 4ವಿ ಮತ್ತು ಬಜಾಜ್ ಪಲ್ಸರ್ ಎನ್ಎಸ್ 200 ಬೈಕ್ಗಳಿಗೆ ತ್ರೀವ ಪೈಪೋಟಿ ನೀಡಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಬೈಕಿನ ಕುರಿತಾದ ಮತ್ತಷ್ಟು ತಾಂತ್ರಿಕ ಮಾಹಿತಿಗಳು ಲಭ್ಯವಾಗಲಿವೆ.