ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಬೆನೆಲ್ಲಿ ಇಂಡಿಯಾ ಕಂಪನಿಯು ಬಿಎಸ್-6 ಇಂಪೀರಿಯಲ್ 400 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬೆನೆಲ್ಲಿ ಇಂಪೀರಿಯೇಲ್ 400 ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.99 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಹಿಂದಿನ ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಬೆಲೆಯನ್ನು ಹೊಸ ಮಾದರಿಗೆ ಹೋಲಿಸಿದರೆ ರೂ.20,000 ಗಳವರೆಗೆ ಹೆಚ್ಚಿಸಿದೆ. ಹೊಸ ಬೆನೆಲ್ಲಿ ಇಂಪೀರಿಯೇಲ್ 400 ಬೈಕಿನ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದೆ. ಈ ಹೊಸ ಬೆನೆಲ್ಲಿ ಇಂಪೀರಿಯೇಲ್ 400 ಬೈಕ್ ಗಾಗಿ ಆನ್‌ಲೈನ್ ಮೂಲಕ ಅಥವಾ ಭಾರತದಾದ್ಯಂತದ ಯಾವುದೇ ಬ್ರಾಂಡ್‌ನ ಡೀಲರ್ ಬಳಿ ತೆರಳಿ ರೂ.6,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಹೊಸ ಇಂಪೀರಿಯೇಲ್ 400 ಬೈಕಿನ ವಿತರಣೆಯನ್ನು ಮುಂದಿನ ತಿಂಗಳಲ್ಲಿ ಪ್ರಾರಂಭಿಸಬಹುದು.

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಹೊಸ ಬೆನೆಲ್ಲಿ ಇಂಪೀರಿಯಲ್ 400 ಬೈಕಿನಲ್ಲಿ ಅದೇ 374 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಈ ಎಂಜಿನ್ 6000 ಆರ್‌ಪಿಎಂನಲ್ಲಿ 20 ಬಿಹೆಚ್‌ಪಿ ಮತ್ತು 3500 ಆರ್‌ಪಿಎಂನಲ್ಲಿ 29 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿರುವುದನ್ನು ಹೊರತುಪಡಿಸಿದರೆ ಇತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹೊಸ ಇಂಪೀರಿಯಲ್ 400 ಬೈಕ್, ಮುಂಭಾಗದಲ್ಲಿ 19 ಇಂಚಿನ ಹಾಗೂ ಹಿಂಭಾಗದಲ್ಲಿ 18 ಇಂಚಿನ ಟಯರ್‌ಗಳನ್ನು ಹೊಂದಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಹೊಸ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಕ್ಲಾಸಿಕ್ ಲುಕ್ ಆನ್ನು ಹೊಂದಿದೆ. ಈ ಬೆನೆಲ್ಲಿ ಇಂಪೀರಿಯಲ್ 400 ಬೈಕ್ ಮುಂಭಾಗದಿಂದ ಆಕರ್ಷಕವಾಗಿ ಕಾಣುತ್ತದೆ. ಕ್ಲಾಸಿಕ್ ಲುಕ್ ಗಾಗಿ ದುಂಡಾಗಿರುವ ಹೆಡ್‌ಲ್ಯಾಂಪ್‌ಗಳನ್ನು ನೀಡಲಾಗಿದೆ. ಇದರ ಜೊತೆಗೆ ಈ ಬೈಕ್‌ನಲ್ಲಿ ಟ್ವಿನ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ ನೀಡಲಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಸಸ್ಪೆಂಷನ್ ಗಾಗಿ, ಈ ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ಬರ್ ಅಳವಡಿಸಲಾಗಿದೆ. ಸುರಕ್ಷತೆಗಾಗಿ, ಈ ಬೈಕಿನಲ್ಲಿ ಎಬಿಎಸ್ ಹೊಂದಿರುವ ಡ್ಯುಯಲ್ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಬಿಎಸ್-6 ಬೆನೆಲ್ಲಿ ಇಂಪೀರಿಯೇಲ್ 400 ಬೈಕಿನ ಹಿಂದಿನ ಮಾದರಿಯಂತೆ ಅದೇ ರೆಡ್, ಬ್ಲ್ಯಾಕ್ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಹೊಸ ಬಣ್ಣಗಳನ್ನು ಆಯ್ಕೆಯನ್ನು ನೀಡಲಾಗಿಲ್ಲ.

ಬಿಡುಗಡೆಯಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕ್

ಬೆನೆಲ್ಲಿ ಇಂಪೀರಿಯೇಲ್ 400 ಹಿಂದಿನ ಮಾದರಿಯು ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾದೆ. ಇಂಪೀರಿಯೇಲ್ 400 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಜಾವ ಬೈಕುಗಳಿಗೆ ಮತ್ತು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮಾದರಿಗೆ ನೇರ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Thursday, July 9, 2020, 18:53 [IST]
English summary
Benelli Imperiale 400 BS6 Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+