ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದರಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನ ವಿತರಣೆಯಲ್ಲಿ ಪ್ರಾರಂಭಿಸಲಾಗಿದೆ.

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಈ ಹೊಸ ಬಿಎಂಡಬ್ಲ್ಯು ಜಿ 310 ಬೈಕುಗಳು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಬಿಎಂಡಬ್ಲ್ಯು ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳಿಗಾಗಿ 1,000ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆದುಕೊಂಡಿದೆ. ಈ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯು ರೂ.2.45 ಲಕ್ಷಗಳಾದರೆ, ಜಿ 310 ಜಿಎಸ್ ಬೈಕಿನ ಬೆಲೆಯು ರೂ.2.85 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಈ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್‌ಲೈಟ್ ಪಡೆಯುತ್ತದೆ, ಇನ್ನು ಎಲ್‌ಇಡಿ ಡೇಟೈಮ್ ರನ್ನಿಂಗ್ ಜೊತೆ ಲೈಟ್ ಸ್ಟ್ರಿಪ್ ಅನ್ನು ಸಹ ಹೊಂದಿದೆ. ಈ ಬೈಕಿನಲ್ಲಿ ಜಿಎಸ್' ಅಕ್ಷರಗಳು ಈಗ ದೊಡ್ಡದಾಗಿದೆ ಮತ್ತು ಎಡಿವಿ ಶೈಲಿಯ ಬೀಕ್ ಅಪ್ ಫ್ರಂಟ್ 'ರ್ಯಾಲಿ' ಸ್ಟಿಕ್ಕರ್ ಅನ್ನು ಸಹ ಪಡೆಯುತ್ತದೆ.

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ದೊಡ್ಡ ಬಿಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಗಳಿಂದ ಹಲವಾರು ಫೀಚರ್ ಗಳನ್ನು ಎರವಲು ಪಡೆಯಲಾಗಿದೆ. ಇದರಲ್ಲಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಯ ವಿಂಡ್‌ಸ್ಕ್ರೀನ್ ಅನ್ನು ಹೊಂದಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಇನ್ನು ಹೊಸ ಜಿ 310 ಜಿಎಸ್ ಅನ್ನು ಹೊಂದಾಣಿಕೆ ಮಾಡಬಹುದಾದ ಕ್ಲಚ್ ಮತ್ತು ಹ್ಯಾಂಡ್‌ಬ್ರೇಕ್ ಲಿವರ್ ಅಳವಡಿಸಲಾಗಿದೆ. ನಾಲ್ಕು ಹೊಂದಾಣಿಕೆ ಮಟ್ಟಗಳಿವೆ. ಇದನ್ನು ಗ್ರಾಹಕರು ತಮಗೆ ಸಹಕಾರಿಯಾಗುವಂತೆ ಕಸ್ಟಮೈಸ್ ಮಾಡಬಹುದು.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಹೊಸ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್‌ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಬೈಕುಗಳು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಯುವಗ್ರಾಹಕರನ್ನು ಸೆಳೆಯಬಹುದು.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಎರಡು ಹೊಸ ಬೈಕುಗಳು ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ಹೊಸ ಜಿ 310 ಜಿಎಸ್ ಬೈಕಿನ ವಿತರಣೆ ಆರಂಭಿಸಿದ ಬಿಎಂಡಬ್ಲ್ಯು ಮೋಟೊರಾಡ್

ಹೊಸ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್ ಹಬ್ಬದ ಸೀಸನ್ ನಲ್ಲಿ ಉತ್ತಮವಾಗಿ ಮಾರಾಟವಾಗುವ ಸಾಧ್ಯತೆಗಳಿದೆ. ಹೊಸ ಬಿಎಂಡಬ್ಲ್ಯು ಜಿ 310 ಜಿಎಸ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ 390 ಅಡ್ವೆಂಚರ್ ಮತ್ತು ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Thursday, October 22, 2020, 12:19 [IST]
English summary
2020 BMW G 310 GS First Owner Takes Delivery In Mumbai. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+