ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

ಡುಕಾಟಿ ಕಂಪನಿಯು ತನ್ನ 2020ರ ಮಲ್ಟಿಸ್ಟ್ರಾಡಾ 950 ಅಡ್ವೆಂಚರ್-ಟೂರರ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದು ಖಚಿತವಾಗಿದೆ. ಈ ವರ್ಷದ ಕೊನೆಯಲ್ಲಿ ಈ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

2020ರ ಮಲ್ಟಿಸ್ಟ್ರಾಡಾ 950 ಬೈಕನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಕರೋನಾ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಈ ಕರೋನಾ ಭೀತಿಯಿಂದ ಭಾರತದಲ್ಲಿ 2020ರ ಮಲ್ಟಿಸ್ಟ್ರಾಡಾ 950 ಬೈಕಿನ ಬಿಡುಗಡೆಯನ್ನು ಮುಂದೂಡಲಾಗಿದೆ. ಡುಕಾಟಿ ಮಲ್ಟಿಸ್ಟ್ರಾಡಾ 950 ಹೆಚ್ಚು ಸಾಮರ್ಥ್ಯ ಹೊಂದಿರುವ ಬೈಕ್ ಆಗಿದ್ದು, ಈ ಬೈಕ್ ಅನ್ನು ಯಾವುದೇ ಹೆಚ್ಚಿನ ಒತ್ತಡವಿಲ್ಲದೇ ಚಲಾಯಿಸಬಹುದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

ಡುಕಾಟಿ ಇಂಡಿಯಾ ಮಲ್ಟಿಸ್ಟ್ರಾಡಾ 950 ಮತ್ತು 950 ಎಸ್ ಎಂಬ ಎರಡು ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೂಳಿಸಬಹುದು. 2020ರ ಈ ಅಡ್ವೆಂಚರ್-ಟೂರರ್ ಹಲವಾರು ಹೊಸ ಫೀಚರ್ಸ್ ಮತ್ತು ಎಲೆಕ್ಟ್ರಾನಿಕ್ ಸಿಸ್ಟಂಗಳೊಂದಿಗೆ ಬಿಡುಗಡೆಯಾಗಲಿದೆ.

MOST READ: ಬಿಡುಗಡೆಯಾಗಲಿದೆ ಎಪ್ರಿಲಿಯಾ ಆರ್‍ಎಸ್ 660 ಬೈಕ್

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

ಹೊಸ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್ ಅದೇ 937 ಸಿಸಿ ಎಲ್-ಟ್ವಿನ್ ಲಿಕ್ವಿಡ್-ಕೂಲ್ಡ್ ನವೀಕರಿಸಿದ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 111 ಬಿಹೆಚ್‍ಪಿ ಪವರ್ ಮತ್ತು 96 ಎನ್‍ಎಂ ಟಾರ್ಕ್ ಅನ್ನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಟ್ಯಾಂಡರ್ಡ್ ಕ್ವಿಕ್-ಶಿಫ್ಟರ್ ಜೋಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

2020ರ ಡುಕಾಟಿ ಮಲ್ಟಿಸ್ಟ್ರಾಡಾ ಡುಕಾಟಿ ಮಲ್ಟಿಸ್ಟ್ರಾಡಾ ಎಸ್ ಬೈಕಿನಲ್ಲಿ ಹೆಚ್ಚುವರಿಯಾಗಿ ಹಲವಾರು ನೂತನ ಫೀಚರ್ಸ್ ಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಸೆಮಿ-ಆಕ್ಟಿವ್ ಸಸ್ಪೆಂಷನ್ ಸೆಟಪ್, ಬೈ-ಡೈರಕ್ಷನ್ ಕ್ವಿಕ್-ಶಿಫ್ಟರ್ ಮತ್ತು ಬಾಷ್‌ನಿಂದ ಕಾರ್ನರಿಂಗ್ ಎಬಿಎಸ್ ಅನ್ನು ಹೊಂದಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

ಇನ್ನು ಈ ಬೈಕಿನಲ್ಲಿ ಸುತ್ತಲೂ ಎಲ್ಇಡಿ ಲೈಟಿಂಗ್, ಕಾರ್ನರಿಂಗ್ ಲ್ಯಾಂಪ್‌ ಮತ್ತು ಇನ್ಸ್ಟ್ರುಮೆಂಟ್ ಕನ್ಸೋಲ್‌ಗಾಗಿ ಐದು ಇಂಚಿನ ಬಣ್ಣಗಳಿಂದ ಕೂಡಿದ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

ಹೊಸ ಡುಕಾಟಿ ಮಲ್ಟಿಸ್ಟ್ರಾಡಾ 950 ನವೀಕರಿಸಿದ ಸ್ಟೈಲಿಂಗ್ ಮತ್ತು ವಿನ್ಯಾಸ ಅಂಶಗಳೊಂದಿಗೆ ಬಿಡುಗಡೆಯಾಗಲಿದೆ. ಹೊಸ ಮಲ್ಟಿಸ್ಟ್ರಾಡಾ 950 ಬೈಕ್ ಫೇರಿಂಗ್ ವಿನ್ಯಾಸವು ತನ್ನ ಬ್ರ್ಯಾಂಡ್ ನ ಮಲ್ಟಿಸ್ಟ್ರಾಡಾ 1260 ಮಾದರಿಗೆ ಹೋಲುತ್ತದೆ. ಟಾಪ್-ಸ್ಪೆಕ್ 950 ಎಸ್ ಮಾದರಿಯು ವೈರ್-ಸ್ಪೋಕ್ ವ್ಹೀಲ್ ಆಯ್ಕೆಯನ್ನು ಹೊಂದಿರುತ್ತದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

ಡುಕಾಟಿ ಮಲ್ಟಿಸ್ಟ್ರಾಡಾ 950 ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಎರಡನೇ ಮಾದರಿಯಾಗಿದೆ. ಅಲ್ಲದೇ ಡುಕಾಟಿ ಕಂಪನಿಯು ಇತ್ತೀಚೆಗೆ ತನ್ನ ಪಾನಿಗಲೆ ವಿ2 ಬೈಕಿನ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿತ್ತು. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್

ಹೊಸ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ವರ್ಸಿಸ್ 1000, ಸುಜುಕಿ ವಿ-ಸ್ಟ್ರೋಮ್ 1000 ಮತ್ತು ಟ್ರಯಂಫ್ ಟೈಗರ್ 900 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Friday, May 8, 2020, 9:53 [IST]
English summary
2020 Ducati Multistrada 950 India Launch Details Confirmed. Read in Kannada.
Read more on ಡುಕಾಟಿ ducati
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+