ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಎಕ್ಸ್-ಬ್ಲೇಡ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಂಡಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಸಿಂಗಲ್-ಡಿಸ್ಕ್ ಮತ್ತು ಡಬಲ್-ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರಲಿದೆ. ಬಿಎಸ್-6 ಹೋಂಡಾ ಎಕ್ಸ್-ಬ್ಲೇಡ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.05 ಲಕ್ಷಗಳಾಗಿದೆ. ಈ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕಿನ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಶೀಘ್ರದಲ್ಲೇ ಈ ಹೊಸ ಹೋಂಡಾ ಎಕ್ಸ್-ಬ್ಲೇಕ್ ಬೈಕಿನ ವಿತರಣೆಯನ್ನು ಕೂಡ ಪ್ರಾರಂಭಿಸಬಹುದು.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕಿನಲ್ಲಿ 160 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ನವೀಕರಿಸಿದ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 8000 ಆರ್‌ಪಿಎಂನಲ್ಲಿ 13.67 ಬಿಹೆಚ್‌ಪಿ ಮತ್ತು 5500 ಆರ್‌ಪಿಎಂನಲ್ಲಿ 14.7 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ಹೊಸ ಎಕ್ಸ್-ಬ್ಲೇಡ್ ಬೈಕಿನಲ್ಲಿರುವ ಎಂಜಿನ್ ಬ್ರಾಂಡ್‌ನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಹೊಂದಿದೆ. ಇದರಿಂದಾಗಿ ಈ ಬೈಕಿಗೆ ಸುಧಾರಿತ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ನೀಡುತ್ತದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಸ್ಪೆಂಕ್ಷನ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇನ್ನು ಈ ಎಕ್ಸ್-ಬ್ಲೇಡ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ನೋಡುವುದಾದರೆ, ಮುಂಭಾಗದಲ್ಲಿ 276 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಮತ್ತು 130 ಎಂಎಂ ಡ್ರಮ್ ಬ್ರೇಕ್ ಗಳ ಆಯ್ಕೆಯನ್ನು ನೀಡಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಇನ್ನು ಈ ಬೈಕಿನಲ್ಲಿ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಈ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೇಸ್ ಮಾದರಿಯು 146 ಕೆಜಿ ತೂಕವಿದ್ದರೆ, ಟಾಪ್ ಸ್ಪೆಕ್ ಮಾದರಿಯು 147 ಕೆಜಿ ತೂಕವನ್ನು ಹೊಂದಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ. ಈ ಬೈಕಿನಲ್ಲಿ ಹೊಸ ರೋಬೋಕಾಪ್ ವಿನ್ಯಾಸದ ಎಲ್ಇಡಿ ಹೆಡ್ ಲ್ಯಾಂಪ್, ಟೇಲ್ ಲ್ಯಾಂಪ್, ಡ್ಯುಯಲ್ ಎಕ್ಸಾಸ್ಟ್ ಗಳನ್ನು ಒಳಗೊಂಡಿದೆ. ರಿಫ್ರೆಶ್ ಬಾಡಿ ಗ್ರಾಫಿಕ್ಸ್, ಹೊಸ ಅಲಾಯ್ ವ್ಹೀಲ್ ಮತ್ತು ಸ್ಪ್ಲಿಟ್ ಗ್ರಾಬ್ ರೈಲ್ ಒಳಗೊಂಡಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಪರ್ಲ್ ಸ್ಪಾರ್ಟನ್ ರೆಡ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಮತ್ತು ಮ್ಯಾಟ್ ಮಾರ್ವೆಲ್ ಬ್ಲೂ ಮೆಟಾಲಿಕ್ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಹೊಸ ಹೊಂಡಾ ಎಕ್ಸ್-ಬ್ಲೇಡ್ ಪ್ರೀಮಿಯಂ ಬೈಕ್ ಆಗಿದೆ. ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಎಕ್ಸ್‌ಟ್ರಿಮ್ 160 ಆರ್, ಟಿವಿಎಸ್ ಅಪಾಚೆ ಆರ್‍‍ಟಿ‍ಆರ್ 160 4 ವಿ, ಸುಜುಕಿ ಜಿಕ್ಸರ್ 155 ಮತ್ತು ಬಜಾಜ್ ಪಲ್ಸರ್ ಎನ್ಎಸ್ 160 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
New Honda X-Blade BS6 Bike Launched In India. Read In Kannada.
Story first published: Tuesday, July 7, 2020, 19:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X