2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಟ್ರಯಂಫ್ ಕಂಪನಿಯು ತನ್ನ 2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕನ್ನು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕನ್ನು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.11.13 ಲಕ್ಷ ಬೆಲೆಯಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಈ ಬೈಕಿನ ಬೆಲೆಯನ್ನು ರೂ.20,000 ಗಳವರೆಗೆ ಹೆಚ್ಚಿಸಿದೆ. ಬೆಲೆ ಏರಿಕೆಯ ಬಳಿಕ, ಈ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.11.33 ಲಕ್ಷಗಳಾಗಿದೆ. ಈ ಹೊಸ ಮಿಡ್ ಸರಣಿಯ ಈ ಸ್ಪೋರ್ಟ್ಸ್ ಬೈಕ್ ರಿವೈಸ್ ಮಾಡಲಾದ ಡಿಸೈನ್ ಆಕ್ಸೆಸರೀಸ್, ಆಫ್ ರ್‍ಯಾಕ್ ಟೆಕ್ನಾಲಜಿ ಹಾಗೂ ಮಿಡ್ ಸರಣಿಯ ಬಿ‍ಎಸ್ 6 ಎಂಜಿನ್‍ ಅನ್ನು ಹೊಂದಿದೆ.

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಬಿ‍ಎಸ್ 6 ಎಂಜಿನ್ ಹೊಂದಿರುವ ಹೊಸ ಬೈಕ್, ಮಾರುಕಟ್ಟೆಯಲ್ಲಿರುವ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿಗಿಂತ ಹೆಚ್ಚು ರಗಡ್ ಲುಕ್ ಅನ್ನು ಹೊಂದಿದೆ. 2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್‍ಇ‍‍ಡಿ ಹೆಡ್‍‍ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿ‍ಆರ್‍ಎಲ್‍‍ಗಳನ್ನು ಹೊಂದಿವೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಟ್ರಯಂಫ್ ಕಂಪನಿಯು ಈ ಬೈಕಿನ ಬಾಡಿ ಪ್ಯಾನೆಲ್, ರೇರ್ ಸೀಟ್‍‍ಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳಿಂದ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ.

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಟ್ರಯಂಫ್ ಕಂಪನಿಯು ಈ ಬೈಕಿನ ಟಿ‍ಎಫ್‍‍ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ನಲ್ಲಿ ಹೊಸ ಗ್ರಾಫಿಕ್ಸ್ ಗಳನ್ನು ಅಳವಡಿಸಿದೆ. ಗ್ರಾಫಿಕ್ಸ್ ನಿಂದಾಗಿ ಈ ಬೈಕು ನೋಡಲು ಇನ್ನಷ್ಟು ಆಕರ್ಷಕವಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಈ ಹೊಸ ಬೈಕಿನಲ್ಲಿ ಬ್ಲೂಟೂತ್ ಸೇರಿದಂತೆ ಹಲವಾರು ಫೀಚರ್‍‍ಗಳಿವೆ. ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನಲ್ಲಿ 765 ಸಿಸಿಯ ಇನ್‍‍ಲೈನ್ ಎಂಜಿನ್ ಅಳವಡಿಸಲಾಗಿದೆ.

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಈ ಎಂಜಿನ್ 121 ಬಿ‍ಹೆಚ್‍‍ಪಿ ಪವರ್ ಹಾಗೂ 79 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಟ್ರಯಂಫ್ ಎಂಜಿನಿಯರ್‍‍ಗಳು ಈ ಬೈಕಿನಲ್ಲಿರುವ ರಿಸೆಷನ್ ಸೈಕಲ್ ಅನ್ನು 7%ನಷ್ಟು ಕಡಿಮೆಗೊಳಿಸಿದ್ದಾರೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಈ ಬೈಕ್ ಹೊಸದಾದ ಎಕ್ಸಾಸ್ಟ್ ಸಿಸ್ಟಂ ಅನ್ನು ಹೊಂದಿದೆ. ಮಾರುಕಟ್ಟೆಯಲ್ಲಿರುವ ಬಿಎಸ್ 4 ಬೈಕಿನಲ್ಲಿ ಅಪ್‍‍ಶಿಫ್ಟ್ ಇದ್ದರೆ, ಹೊಸ ಬೈಕಿನಲ್ಲಿ ಅಪ್ ಅಂಡ್ ಡೌನ್ ಕ್ವಿಕ್ ಶಿಫ್ಟರ್ ಅನ್ನು ಅಳವಡಿಸಲಾಗಿದೆ. ಟ್ರಯಂಫ್ ಕಂಪನಿಯ ಐಷಾರಾಮಿ ಬೈಕುಗಳಲ್ಲಿ ಹೊಸ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಕೂಡ ಒಂದಾಗಿದೆ.

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯನ್ನು ಹೆಚ್ಚಿಸಿದ ಟ್ರಯಂಫ್

ಟ್ರಯಂಫ್ ಆರ್‍ಎಸ್ ಬೈಕ್, ರಾಕೆಟ್ 3 ಬೈಕಿನ ನಂತರ ಟ್ರಯಂಫ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಿದ ಎರಡನೇ ಬೈಕ್ ಆಗಿದೆ. ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಕವಾಸಕಿ ಝಡ್900 ಮತ್ತು ಕೆಟಿಎಂ 790 ಡ್ಯೂಕ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2020 Triumph Street Triple RS Becomes Costlier In India Details. Read In Kannada.
Story first published: Monday, July 20, 2020, 10:29 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X