ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಬಿಎಸ್-6 ಜೆಸ್ಟ್ 110 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.58,460 ಗಳಾಗಿದೆ.

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್ ಅನ್ನು ಹಿಮಾಲಯನ್ ಹೈ ಸೀರೀಸ್ ಮತ್ತು ಮ್ಯಾಟ್ ಸೀರೀಸ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಿದೆ. ಹೊಸ ಟಿವಿಎಸ್ ಜೆಸ್ಟ್ ಸ್ಕೂಟರ್‌ನಲ್ಲಿ 110 ಸಿಸಿ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 7.8 ಬಿಹೆಚ್‍ಪಿ ಪವರ್ ಮತ್ತು 8.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜೆಸ್ಟ್ ತನ್ನ ಸೆಗೆಮೆಂಟ್ ನಲ್ಲಿ ಪವರ್ ಫುಲ್ ಸ್ಕೂಟರ್ ಅಲ್ಲ. ಆದರೆ ಈ ಸ್ಕೂಟರ್ ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರಲಿದೆ.

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಈ ಸ್ಕೂಟರ್ ಎಂಜಿನ್‌ಗೆ ಇಟಿ-ಫೈ(ಇಕೋಥ್ರಸ್ಟ್ ಇಂಧನ ಇಂಜೆಕ್ಷನ್) ತಂತ್ರಜ್ಞಾನವನ್ನು ನೀಡಲಾಗಿದೆ. ಇದರಿಂದ ಸುಗಮ ಸವಾರಿಗೆ ನೆರವಾಗುತ್ತದೆ. ಅಲ್ಲದೇ ಸ್ಕೂಟರ್ ಮೈಲೇಜ್ ಕೂಡ ಸುಧಾರಿಸುತ್ತದೆ.

MOST READ: ಹೊಸ ಮಹೀಂದ್ರಾ ಮೊಜೊ 300 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಈ ಹೊಸ ಟಿವಿಎಸ್ ಜೆಸ್ಟ್ ಸ್ಕೂಟರ್‌ನಲ್ಲಿ ಟ್ಯೂಬ್ ಲೆಸ್ ಟಯರ್, ಎಲ್ಇಡಿ ಟೈಲ್ ಲ್ಯಾಂಪ್, ಡೇಟೈಮ್ ರನ್ನಿಂಗ್ ಲ್ಯಾಂಪ್(ಡಿಆರ್‌ಎಲ್) ಮತ್ತು ಬೆಸ್ಟ್-ಇನ್-ಕ್ಲಾಸ್ ಅಂಡರ್-ಸೀಟ್ 19 ಲೀಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಹೊಸ ಜೆಸ್ಟ್ 110 ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಮೊನೊ-ಶಾಕ್‌ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಇನ್ನು ಹೊಸ ಟಿವಿಎಸ್ ಜೆಸ್ಟ್ ಸ್ಕೂಟರ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 110 ಎಂಎಂ ಡ್ರಮ್ ಬ್ರೇಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಿದ್ದಾರೆ. ಈ ಸ್ಕೂಟರ್‌ನಲ್ಲಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ನೀಡಲಾಗಿಲ್ಲ.

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಟಿ‍ವಿಎಸ್ ಮೋಟಾರ್ ಕಂಪನಿಗೆ ಸಂಬಂಧಿಸಿದ ಇತರ ಸುದ್ದಿ, ಇತ್ತೀಚೆಗೆ ಟಿವಿಎಸ್ ಕಂಪನಿಯು ಅಪಾಚೆ ಆರ್‌ಟಿಆರ್ 180 ಬೈಕಿನ ಬೆಲೆಯನ್ನು ಹೆಚ್ಚಿಸಿದೆ. ಬಿಎಸ್-6 ಟಿವಿಎಸ್ ಅಪಾಚೆ ಆರ್‌ಟಿಆರ್ 180 ಬೈಕಿನ ಬೆಲೆಯನ್ನು ರೂ.2,500 ರವರೆಗೆ ಹೆಚ್ಚಿಸಿದೆ. ಇದೀಗ ಬಿಎಸ್-6 ಟಿವಿಎಸ್ ಅಪಾಚೆ ಆರ್‌ಟಿಆರ್ 180 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1,03,950 ಗಳಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಭಾರತೀಯ ಮಾರುಕಟ್ಟೆಯಲ್ಲಿ ಟಿ‍ವಿಎಸ್ ಕಂಪನಿಯ ಅಪಾಚೆ ಸರಣಿಯ ಬೈಕ್‍‍ಗಳಿಗೆ ಬಜಾಜ್ ಆಟೊ ಕಂಪನಿಯ ಪಲ್ಸರ್ ಸರಣಿಯ ಬೈಕ್‍‍ಗಳು ಪ್ರಬಲ ಪೈಪೋಟಿಯನ್ನು ನೀಡುತ್ತವೆ. ಈ ಅಪಾಚೆ ಆರ್‌ಟಿಆರ್ 180 ಬೈಕಿನಲ್ಲಿ ಕಂಪನಿಯ ರೇಸ್ ಟ್ಯೂನ್ಡ್ ಫ್ಯೂಯಲ್ ಇಂಜೆಕ್ಷನ್ (ಆರ್‌ಟಿ-ಫೈ) ಸಿಸ್ಟಂ ಜೊತೆಗೆ ನವೀಕರಿಸಿದ 177.4 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಇನ್ನು ಬಿಡುಗಡೆಯಾದ ಹೊಸ ಜೆಸ್ಟ್ 110 ಸ್ಕೂಟರ್ ರೆಡ್, ಬ್ಲೂ, ಪರ್ಪಲ್, ಯೆಲ್ಲೊ ಮತ್ತು ಟರ್ಕಿಷ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ. ಈ ಹೊಸ ಟಿವಿಎಸ್ ಜೆಸ್ಟ್ 110 ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಪ್ಲೆಷರ್ ಪ್ಲಸ್‌ ಸ್ಕೂಟರಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
2020 TVS Zest 110 BS 6 launched in India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X