ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಕವಾಸಕಿ ಇಂಡಿಯಾ ಮೋಟಾರ್‌ಸೈಕಲ್ ಕಂಪನಿಯು ಸದ್ದಿಲ್ಲದೇ ತನ್ನ ಹೊಸ ವಲ್ಕನ್ ಎಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. 2021ರ ಕವಾಸಕಿ ವಲ್ಕನ್ ಎಸ್ ಬೈಕಿನ ಬೆಲೆಯು ರೂ.5.79 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಹೊಸ ಕವಾಸಕಿ ವಲ್ಕನ್ ಎಸ್ ಬೈಕಿನ ಬೆಲೆಯು ಹಿಂದಿನ ಬಿಎಸ್-4 ಮಾದರಿಗಿಂತ ರೂ.30,000 ಹೆಚ್ಚಾಗಿದೆ. ಈ ಹೊಸ ಕವಾಸಕಿ ವಲ್ಕನ್ ಎಸ್ ಬೈಕ್ ಮೆಟಾಲಿಕ್ ಫ್ಲಾಟ್ ರಾ ಗ್ರೇಸ್ಟೋನ್ ಎಂಬ ಹೊಸ-ಹೊಸ ಡ್ಯುಯಲ್-ಟೋನ್ ಬಣ್ಣದಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಹೊಸ ವಲ್ಕನ್ ಎಸ್ ಬೈಕಿನ ಫ್ಯೂಯಲ್ ಟ್ಯಾಂಕ್ ಮತ್ತು ಅಲಾಯ್ ವ್ಹೀಲ್ ನಲ್ಲಿ ಕೆಂಪು ಎಕ್ಸಾಸ್ಟ್ ಗಳನ್ನು ಹೊಂದಿದೆ. ಇದು ಬೈಕಿನ ಲುಕ್ ಅನ್ನು ಮತ್ತಷ್ಟು ಆಕರ್ಷಕವಾಗಿಸಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ 649ಸಿಸಿ ಪ್ಯಾರೆಲಲ್ ಲಿಕ್ವಿಡ್-ಟ್ವಿನ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7500 ಆರ್‌ಪಿಎಂನಲ್ಲಿ 60 ಬಿಹೆಚ್‍ಪಿ ಪವರ್ ಮತ್ತು 7000 ಆರ್‌ಪಿಎಂನಲ್ಲಿ 62.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಕವಾಸಕಿ ಝಡ್650 ಮತ್ತು ನಿಂಝಾ 650 ಬೈಕಿನಲ್ಲಿರುವಂತಹ ಅದೇ ಮಾದರಿಯ ಫೀಚರ್ ಗಳನ್ನು ಹೊಸ ವಲ್ಕನ್ ಬೈಕಿನಲ್ಲಿ ಲಭ್ಯವಿದೆ. ಆದರೆ ಬ್ಲೂಟೂತ್ ಕನೆಕ್ಟಿಟ್ ಆಗಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಫೀಚರ್ ಈ ಹೊಸ ವಲ್ಕನ್ ಬೈಕಿನಲ್ಲಿ ಲಭ್ಯವಿಲ್ಲ.

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಹೊಸ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ ರೆಟ್ರೋ ವಿನ್ಯಾಸದ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಇದರೊಂದಿಗೆ ಬ್ಲ್ಯಾಕ್ ಕೌಲ್, ಎರಡು ತುದಿಗಳಲ್ಲಿ ದುಂಡಗಿನ ಆಕಾರದ ಫೆಂಡರ್‌ಗಳು ಮತ್ತು ಹಿಂಭಾಗದಲ್ಲಿ ಸೆಟ್ ಟರ್ನ್ ಸಿಗ್ನಲ್ ಇಂಡಿಕೇಟರ್ ಗಳನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಕವಾಸಕಿ ವಲ್ಕನ್ ಎಸ್ ಬೈಕ್ 1575 ಎಂಎಂ ಉದ್ದದ ವ್ಹೀಲ್ ಬೇಸ್ ಅನ್ನು ಹೊಂದಿದೆ. ಈ ಹೊಸ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ 130 ಎಂಎಂ ಪ್ರಿ-ಲೋಡ್ ಆಫ್-ಸೆಟ್ ಮಾದರಿಯ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಹೊಸ ಕವಾಸಕಿ ವಲ್ಕನ್ ಎಸ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡ್ಯುಯಲ್ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ 250 ಎಂಎಂ ಯುನಿಟ್ ಅನ್ನು ನೀಡಲಾಗಿದೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ 14-ಲೀಟರ್ ಫೇರ್ಡ್ ಫ್ಯೂಯಲ್ ಟ್ಯಾಂಕ್, ಅಪ್-ರೈಟ್ ಹ್ಯಾಂಡಲ್‌ಬಾರ್ ಮತ್ತು ಫಾರ್ವರ್ಡ್-ಸೆಟ್ ಫುಟ್‌ಪೆಗ್‌ಗಳನ್ನು ಹೊಂದಿವೆ. ಇನ್ನು ಈ ಬೈಕಿನಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಕವಾಸಕಿ ಕಂಪನಿಯು ತನ್ನ ಜನಪ್ರಿಯ ಮಾದರಿಗಳನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲಾಗುತ್ತಿದೆ. ಈ ಹೊಸ ಕವಾಸಕಿ ವಲ್ಕನ್ ಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ 750 ಮತ್ತು ಸ್ಟ್ರೀಟ್ ರಾಡ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Friday, August 28, 2020, 20:04 [IST]
English summary
2021 Kawasaki Vulcan S BS6 Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+