Just In
Don't Miss!
- News
ಹುಣಸೋಡು ಜಿಲೆಟಿನ್ ಸ್ಪೋಟ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಯಾಗಲಿದೆ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್
ಜನಪ್ರಿಯ ಬೈಕ್ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಅಡ್ವೆಂಚರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇತ್ತೀಚೆಗೆ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಚೆನ್ನೈ ನಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಈ ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನಲ್ಲಿ ಯಾವುದೇ ಪ್ರಮುಖ ಬದಲಾವಣೆಗಳನ್ನು ಕಂಡುಬಂದಿಲ್ಲ. ಆದರೆ ಹೆಚ್ಚುವರಿ ಪ್ರೀಮಿಯಂ ಫೀಚರ್ ಗಳನ್ನು ಪಡೆಯಲಿದೆ. ಇತ್ತೀಚೆಗೆ ಬಿಡುಗಡೆಗೊಂಡ ರಾಯಲ್ ಎನ್‌ಫೀಲ್ಡ್ ಮಿಟಿಯೋರ್ 350 ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಎಂಬ ಹೊಸ ಫೀಚರ್ ಅನ್ನು ಪರಿಚಯಿಸಿದ್ದರು. ಇದೇ ಫೀಚರ್ ಅನ್ನು ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನಲ್ಲಿ ಅಳವಡಿಸಬಹುದು.

ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಬೈಕ್ ರೈಡಿಂಗ್ ವೇಳೆ ಸಾಕಷ್ಟು ಸಹಕಾರಿಯಾಗಲಿದೆ. ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆ ಒದಗಿಸಲಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಇದಲ್ಲದೆ ಮುಂದಿನ ವರ್ಷ ಹಿಮಾಲಯನ್ ಬೈಕಿನಲ್ಲಿ ಇನ್ನೂ ಕೆಲವು ಬದಲಾವಣೆಗಳನ್ನು ನಾವು ನಿರೀಕ್ಷಿಸುತ್ತೇವೆ. ಇದು ಸ್ಮಾರ್ಟ್‌ಫೋನ್‌ಗಳಿಗಾಗಿ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಅನ್ನು ನೀಡಬಹುದು, ಮತ್ತು ಸ್ಟೈಲಿಂಗ್ ಅನ್ನು ಹೆಚ್ಚಿಸಲು ಹೊಸ ಬಣ್ಣದ ಆಯ್ಕೆಗಳನ್ನು ನೋಡಬಹುದು ಎಂದು ನಿರೀಕ್ಷಿಸುತ್ತೇವೆ

ಉಳಿದಂತೆ ಯಾವುದೇ ಬದಲಾವಣೆಗಳಿರುವುದ್ದಿಲ್ಲ. ಪ್ರಸ್ತುತ ಮಾರಾಟವಾಗುತ್ತಿರುವ ಹಿಮಾಲಯನ್ ಬೈಕಿನಲ್ಲಿ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍ಗಳನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್‍ಯಾಕ್‍ನ ಮೇಲಿರುವ ರಾಕ್ ರೆಡ್ ಅಸೆಂಟ್‍ನೊಂದಿಗಿರುವ ಬ್ಲ್ಯಾಕ್ ಬಣ್ಣವನ್ನು ಹೊಂದಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್‍ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈಟ್‍ಗಳನ್ನು ಹೊಂದಿವೆ.

ಈ ಫೀಚರ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಆಫ್ ರೋಡ್ ಪ್ರಿಯರನ್ನು ಸೆಳೆದಿದೆ. ಈ ಸ್ವಿಚ್‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಮೇಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಬಹುದು.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇದರೊಂದಿಗೆ ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 23.9 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍ಗಳಿವೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಭಾರತದಲ್ಲಿ ಮುಂದಿನ ವರ್ಷ ಭಾರತದಲ್ಲಿ ಬಿಡುಗಡೆಯಾಗಲಿದೆ. ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.